Home Posts tagged #v4newskarnataka (Page 135)

ಉದ್ಘಾಟನೆಗೊಂಡು ಒಂದು ತಿಂಗಳ ಒಳಗೆ ಕೆಟ್ಟುಹೋದ ನೀರಿನ ಘಟಕ

ಕಾರ್ಕಳ: ಮುಖ್ಯ ಬಸ್ ನಿಲ್ದಾಣದಲ್ಲಿ ಸುಮಾರು ಎರಡು ವರ್ಷಗಳ ಹಿಂದೆ ಮಾನ್ಯ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಿಂದ ಪ್ರಯಾಣಿಕರಿಗೆ ಸುಮಾರು ಒಂದು ಲಕ್ಷ ರೂಪಾಯಿ ವೆಚ್ಚದಲ್ಲಿ ಕುಡಿಯುವ ಶುದ್ಧ ನೀರಿನ ಘಟಕದ ವ್ಯವಸ್ಥೆಯನ್ನು ಮಾಡಿರುತ್ತಾರೆ ಆದರೆ ಇದನ್ನ ಅಳವಡಿಸಿದ ಒಂದು ತಿಂಗಳ ಒಳಗೆ ಕೆಟ್ಟು ಹೋಗಿ ಇದು ಯಾರಿಗೂ ಬೇಡವಾದ ಘಟಕವಾಗಿದೆ. ಈ ನಿಟ್ಟಿನಲ್ಲಿ

ಮೂತ್ರ ಪಿಂಡದ ಕಸಿಗೆ ದಾನಿಗಳ ಸಹಾಯದ ನಿರೀಕ್ಷೆಯಲ್ಲಿ ಸಚಿನ್ ಕುಟುಂಬ

ಬಂಟ್ವಾಳದ ಗೋಳ್ತಮಜಲು ಗ್ರಾಮದ ಸಚಿನ್ ಕೊಟ್ಟಾರಿ ಅವರು ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ಕಳೆದ 5 ವರ್ಷಗಳಿಂದ ವಾರಕ್ಕೆ ಮೂರು ಬಾರಿ ಡಯಾಲಿಸಿಸ್‍ಗೆ ಒಳಗಾಗುತ್ತಿದ್ದಾರೆ. ವೈದ್ಯರ ಸಲಹೆಯಂತೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೂತ್ರ ಪಿಂಡದ ಕಸಿ ಮಾಡಲು ನೋಂದಾಯಿಸಿದ್ದು, ಇದೀಗ ಮೂತ್ರ ಪಿಂಡದ ಕಸಿ ಶಸ್ತ್ರಚಿಕಿತ್ಸೆಗೆ ಸುಮಾರು 15 ಲಕ್ಷ ರೂಪಾಯಿ ವೆಚ್ಚ ತಗುಲಲಿದೆ. ಸಚಿನ್ ಕೊಟ್ಟಾರಿ ಕುಟುಂಬ ಕಡು ಬಡವರಾಗಿದ್ದು, ಇದೀಗ ದಾನಿಗಳ ಸಹಾಯದ

ಕಾಪು : ಪೋಷಣ್ ಅಭಿಯಾನ-ಪೋಷಣ್ ಮಾಸಾಚರಣೆ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾಪು ಪುರಸಭೆ, ಡೇ ನಲ್ಮ್ ಯೋಜನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪು, ಶ್ರೀ ದೇವಿ ಸ್ಪೋರ್ಟ್ ಮತ್ತು ಕಲ್ಟರಲ್ ಕ್ಲಬ್ ಕಾಪು, ಅರಣ್ಯ ಇಲಾಖೆ ಪಡುಬಿದ್ರಿ ವಲಯ ಪ್ರಾಥಮಿಕ ಆರೋಗ್ಯ ಕೇಂದ್ರ ಕಾಪು ಹಾಗೂ ಆರೋಗ್ಯ ನಿರ್ವಹಣೆ ಮತ್ತು ಸಂಶೋಧನಾ ಸಂಸ್ಥೆ ಬೆಂಗಳೂರು, ಯುನಿಸೆಫ್ ಇವರ ಸಹಯೋಗದೊಂದಿಗೆ

ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಹಲ್ಲೆ ನಡೆಸಿ ಚಿನ್ನಾಭರಣ ಸುಲಿಗೆ ಪ್ರಕರಣ: ಮೂವರ ಬಂಧನ

ಮೂಡುಬಿದಿರೆ ತಾಲೂಕಿನ ಅಶ್ವಥಪುರದ ಬೇರಿಂಜೆ ಗುಡ್ಡ ಎಂಬಲ್ಲಿ ಒಂಟಿ ಮಹಿಳೆ ಕಮಲ ಅವರ ಮನೆಗೆ ಕಳೆದ 15 ದಿನಗಳ ಹಿಂದೆ ನುಗ್ಗಿ ಕುತ್ತಿಗೆ ಹಿಡಿದು ಚಿನ್ನಾಭರಣ ಕಳವು ಮಾಡಿದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಶ್ವತ್ಥಪುರದ ನಿವಾಸಿಗಳಾದ ದಿನೇಶ್ ಪೂಜಾರಿ, ಸುಕೇಶ್ ಪೂಜಾರಿ ಹಾಗೂ ಹರೀಶ್ ಪೂಜಾರಿ ಬಂಧಿತ ಆರೋಪಿಗಳು. ಅಂಗನವಾಡಿ ಸಹಾಯಕಿಯಾಗಿ ದುಡಿಯುತ್ತಿದ್ದ ಕಮಲ ಒಂಟಿಯಾಗಿ ವಾಸವಿದ್ದು. ಇದರ ಮಾಹಿತಿ ಇದ್ದ ಆರೋಪಿಗಳು ಕಳೆದ ತಿಂಗಳು 2 ಜನ

ಪುತ್ತೂರಿನಲ್ಲಿ ಸೆ.29, 30ರಂದು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಪುತ್ತೂರು:ಈ ಬಾರಿಯ ಪುತ್ತೂರು ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನ ಬಪ್ಪಳಿಗೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸೆ.29 ಹಾಗೂ 30 ರಂದು ನಡೆಯಲಿದ್ದು, “ಸಾಹಿತ್ಯ ಪರಿಷತ್ತಿನ ನಡಿಗೆ ಯುವಜನತೆಯ ಕಡೆಗೆ” ಎಂಬ ಘೊಷವಾಕ್ಯದೊಂದಿಗೆ ವಿಶೇಷವಾಗಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ತಿಳಿಸಿದ್ದಾರೆ. ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಬಾರಿ ಕಾರ್ಯಕ್ರಮದಲ್ಲಿ

ಸುರತ್ಕಲ್ ಟೋಲ್‍ಗೇಟ್ ಎತ್ತಂಗಡಿ ಆಗುವುದು ನಿಶ್ಚಿತ : ಪ್ರತಿಭಾ ಕುಳಾಯಿ

ಮಂಗಳೂರು: ಸುರತ್ಕಲ್ ಟೋಲ್‍ಗೇಟ್ ತೆರವಿಗೆ ಹಲವು ವರ್ಷಗಳಿಂದ ಪ್ರತಿಭಟನೆ, ಹೋರಾಟ ನಡೆಯುತ್ತಿದ್ದು, ನೂರಾರು ಸಮಾನಮನಸ್ಕ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳು ಜೊತೆ ಸೇರಿ ಸ್ಥಾಪಿಸಿರುವ ಟೋಲ್ ಗೇಟ್ ವಿರೋಧಿ ಸಮಿತಿ ನಡೆಸಿರುವ ಹೋರಾಟಕ್ಕೆ ಸದ್ಯದಲ್ಲೇ ಗೆಲುವು ಸಿಗಲಿದೆ. ಕೆಲವೇ ಸಮಯದಲ್ಲಿ ಟೋಲ್ ಅಲ್ಲಿಂದ ಎತ್ತಂಗಡಿ ಆಗುವುದು ನಿಶ್ಚಿತ. ಟೋಲ್ ಗೇಟ್ ನಲ್ಲಿ 31ಕ್ಕೂ ಹೆಚ್ಚು ಮಂದಿ ಯುವಕ-ಯುವತಿಯರು ಕೆಲಸ ಮಾಡುತ್ತಿದ್ದು ಟೋಲ್ ತೆರವುಗೊಂಡರೆ ಅವರ

ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ಭವನದ ಅಮೃತ ಮಹೋತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ ಸಮಾರಂಭ ಕಾರ್ಯಕ್ರಮ

ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ಭವನದ ಅಮೃತ ಮಹೋತ್ಸವ ದ ಉದ್ಘಾಟನಾ ಸಮಾರಂಭದ ಆಹ್ವಾನ ಪತ್ರಿಕೆ ಮತ್ತು ವಿಶ್ವ ಬಂಟರ ಮಾಹಿತಿ ಕೋಶದ ಮಾಹಿತಿ ಸಂಗ್ರಹ ಯೋಜನೆಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭ ಜರುಗಿತ್ತು. ಮಂಗಳೂರಲ್ಲಿ ಸೆ.23 ಮತ್ತು 24ರಂದು ನಡೆಯಲಿರುವ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ಭವನದ ಅಮೃತ ಮಹೋತ್ಸವ ದ ಉದ್ಘಾಟನಾ ಸಮಾರಂಭದ ಆಹ್ವಾನ ಪತ್ರಿಕೆ ಮತ್ತು

ಲಯನ್ಸ್ ಕ್ಲಬ್ ಮಂಗಳಾದೇವಿ, ಜೋನ್ ಸೋಶಿಯಲ್ : ಶಿಕ್ಷಕರ ದಿನಾಚರಣೆ

ಲಯನ್ಸ್ ಕ್ಲಬ್ ಮಂಗಳಾದೇವಿ ಮಂಗಳೂರು ಇದರ ಜೋನ್ ಸೋಶಿಯಲ್ ಹಾಗೂ ಶಿಕ್ಷಕರ ದಿನಾಚರಣೆಯನ್ನು ಕದ್ರಿಯ ಅಶೋಕ ಭವನ ಆಚರಿಸಲಾಯಿತು. ನಿವೃತ್ತ ಶಿಕ್ಷಕಿಯರಾದ ಶ್ರೀಮತಿ ಲೀಲಾವತಿ ಮತ್ತು ಹರಿಣಾಕ್ಷಿ ಟೀಚರ್ ಹಾಗೂ ಎಸೆಸೆಲ್ಸಿಯಲ್ಲಿ 99% ಅಂಕ ಗಳಿಸಿದ ಪ್ರಾಪ್ತಿ ಸಾಲಿಯಾನ್ ಇವರನ್ನು ಕ್ಲಬ್ ನ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಹಾಗೂ ದಾಸ್ ಪ್ರಮೋಷನ್ಸ್‍ನ ಮುಖ್ಯಸ್ಥರಾದ ಲಯನ್ ಅನಿಲ್ ದಾಸ್, ಜೆಡ್.ಸಿ ಸಂಜ್ಯೋತ್ ಶೇಖ GST.. CORD ..

ಸುರತ್ಕಲ್ ಟೋಲ್ ಗೇಟ್ ತೆರವಿನ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿದ ಖಾದರ್

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿರುವ ಅನಧಿಕೃತ ಟೋಲ್ ಗೇಟ್ ತೆರವುಗೊಳಿಸಲು ಆಗ್ರಹಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದು, ಟೋಲ್ ಗೇಟ್ ತೆರವಿಗೆ ಸರಕಾರ ತಕ್ಷಣ ಕ್ರಮ ಕೈಗೊಳ್ಳ ಬೇಕು’ ಎಂದು ವಿಧಾನ ಸಭೆ ವಿಪಕ್ಷ ಉಪ ನಾಯಕ ಯು.ಟಿ ಖಾದರ್ ಹೇಳಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಯು.ಟಿ ಖಾದರ್, ‘ಕಾನೂನು ಪ್ರಕಾರ 60 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಒಂದು ಟೋಲ್ ಗೇಟ್ ಇರಬೇಕು, ಆದರೆ,

ಉಚ್ಚಿಲ : ಅಪಘಾತದಲ್ಲಿ ಗಾಯಗೊಂಡಿದ್ದ ಬಾಲಕ ಮೃತ್ಯು

ಲಾರಿ ಡಿಕ್ಕಿಯಾಗಿ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ನಡೆದ ಅಪಘಾತದಲ್ಲಿ ಬೆಳಗಾವಿ ಮೂಲದ ಪ್ರಭಾಕರ್ ಶಂಕರ್ ಪೊದ್ದರವರು ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಅವರ ಮಗ ಸಮರ್ಥ್ ಪೊದ್ದಾ ಗುರುವಾರ ಬೆಳಿಗ್ಗೆ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಸು ನೀಗಿದಾನೆ. ಕಾಪು ಬಳಿಯ ಆನೆಗುಂದಿ ಸರಸ್ವತಿ ಪೀಠದಿಂದ ಗಣೇಶನ ಹಬ್ಬಕ್ಕೆ ರಜೆಯಲ್ಲಿ ಊರಿಗೆ ತೆರಳಿದ್ದ ಏಳನೇ ತರಗತಿಯ ಸಮರ್ಥ್, ಮಂಗಳವಾರ ಸಂಜೆ ಬೆಳಗಾವಿಯ ಹುಕ್ಕೇರಿ ಭಗವಾನ್ ಗಲ್ಲಿಯ