ಮಂಗಳೂರು : ರಾಜಕೀಯ ಹಗೆತನ ಮುಂದಿಟ್ಟುಕೊಂಡು ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ ಅವರ ನಿವಾಸದ ಮೇಲೆ ಬಿಜೆಪಿ ಸರ್ಕಾರದ ಸೂಚನೆಯಂತೆ ರಾಷ್ಟ್ರೀಯ ತನಿಖಾ ದಳ ( NIA ) ದಾಳಿ ನಡೆಸಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿಯ ನೇತೃತ್ವದಲ್ಲಿ
ಮಂಜೇಶ್ವರ: ಕರ್ನಾಟಕ ನಿವಾಸಿಯಾದ ಕೂಲಿ ಕಾರ್ಮಿಕನೊಬ್ಬನನ್ನು ರಸ್ತೆ ಬದಿಯಲ್ಲಿ ಗಾಯಗಳೊಂದಿಗೆ ರಕ್ತಸಿಕ್ತವಾದ ಸ್ಥಿತಿಯಲ್ಲಿ ಪತ್ತೆ ಹಚ್ಚಲಾಗಿದೆ. ಕರ್ನಾಟಕ ಬೆಳ್ಗಾಂ ನಿವಾಸಿ ಬಸಪ್ಪ ರಾಜು ಸಾವನ್ನಪ್ಪಿದ ದುರ್ದೈವಿ. ಮಂಜೇಶ್ವರ ಪಾವೂರು ಸೂಪಿ ನಗರ ರಸ್ತೆ ಬದಿಯಲ್ಲಿ ದಾರಿಹೋಕನೊಬ್ಬ ಈ ದೃಶ್ಯವನ್ನು ಕಂಡು ಮಾಹಿತಿ ನೀಡಿದ್ದಾನೆ.ಎರಡು ದಿವಸಕ್ಕೆ ಮೊದಲು ಸೂಪಿ ನಗರ ನಿವಾಸಿಯೊಬ್ಬರು ಮಂಗಳೂರಿನಿಂದ ತೋಟದ ಕೆಲಸಕ್ಕಾಗಿ ಬಸಪ್ಪ ರಾಜುನನ್ನು ಕರೆ ತಂದಿದ್ದರು. ತೋಟದ
54ನೇ ಮುದರಂಗಡಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ವಿರುದ್ಧ ಕ್ರಿಮಿನಲ್ ಪ್ರಕರಣ ಇದ್ದರೂ, ಮಾಸಿಕ ಸಭೆಯನ್ನು ಕರೆದು ಏಕಾಏಕಿ ರದ್ದುಗೊಳಿಸಿದ ಬಗ್ಗೆ ಕೆಲ ಸದಸ್ಯರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ಗ್ರಾಮ ಪಂಚಾಯತಿಗೆ ಬಂದ ಕೆಲ ಸದಸ್ಯರು ಈ ಬಗ್ಗೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮುತ್ತು ಅವರಲ್ಲಿ ಸಭೆ ರದ್ದು ಗೊಳಿಸಿದ ಬಗ್ಗೆ ಸೃಷ್ಟಿಕರಣ ಕೇಳಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಅಧ್ಯಕ್ಷ ಹಾಗೂ ಉಪಾಧ್ಯಕ್ಷರ
ಖಾಸಗಿ ವಿಶಾಲ್ ಬಸ್ಸಿನ ಟಯರ್ ಸ್ಫೋಟಗೊಂಡ ಪರಿಣಾಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನ ಕಾಲಿಗೆ ಗಂಭೀರ ಹೊಡೆತ ಬಿದ್ದ ಘಟನೆ ಇದೀಗ ಸಂಜೆ ಪಡುಬಿದ್ರಿ ಬಸ್ ತಂಗುದಾಣದಲ್ಲಿ ನಡೆದಿದೆ. ಗಾಯಾಗೊಂಡವರು ಪ್ರಯಾಣಿಕ ಧನರಾಜ್, ಕಾರ್ಕಳದಿಂದ ಮಂಗಳೂರು ಕಡೆಗೆ ಹೋಗಲು ಪಡುಬಿದ್ರಿ ಬಸ್ ತಂಗುದಾಣದಲ್ಲಿ ಬಂದು ನಿಲ್ಲುತ್ತಿದಂತೆ, ಬಸ್ಸಿನ ಬಲ ಬದಿಯ ಹಿಂದಿನ ಟಯರ್ ಬಾರೀ ಸದ್ದಿನೊಂದಿಗೆ ಸ್ಫೋಟಗೊಂಡಿದ್ದು, ಬಸ್ಸಿನ ಟಯರ್ ನ ಮೇಲ್ಭಾಗ ಪ್ಲಾಟ್ ಪಾರ್ಮ್ ಛಿಂದಿಯಾಗಿ
ವಿಟ್ಲ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಆಟೋ ರಿಕ್ಷಾ ಪಲ್ಟಿ ಹೊಡೆದು ಬಳಿಕ ಟೆಂಪೋ ಟ್ರಾವೆಲ್ಲರ್ ಗೆ ಡಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಮಧ್ಯೆರಾತ್ರಿ ಸಂಭವಿಸಿದೆ.ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಅಟೋ ರಿಕ್ಷಾ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟೆಂಪೋ ಟ್ರಾವೆಲರ್ ಬುಡೋಳಿ ವಿಸ್ಡಂ ಶಾಲೆಯ ಎದುರು ಅಪಘಾತ ಸಂಭವಿಸಿದೆ. ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಂಜೇಶ್ವರ ನಿವಾಸಿಗಳು ಇಬ್ಬರು ಗಂಭೀರ ಗಾಯಗೊಂಡಿದ್ದು,
ಮೂಡುಬಿದಿರೆ: ಆಳ್ವಾಸ್ ಆಂಗ್ಲಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿ ವಿರಾಟ್ ಕೃಷ್ಣ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಸೂಚನೆಯಂತೆ ಕಬ್,ಬುಲ್ ಬುಲ್,ಸ್ಕೌಟ್ಸ್, ಗೈಡ್ಸ್, ರೋವರ್ಸ್,ರೇಂಜರ್ಸ್ ವಿದ್ಯಾರ್ಥಿಗಳಿಗೆ ಆಜಾದಿ ಕಾ ಅಮೃತ್ ಮಹೋತ್ಸವ ಎಂಬ ಶೀರ್ಷಿಕೆಯಲ್ಲಿ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯ ಕಬ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಸೇವಾಭಾರತಿ (ರಿ.) ಬೆಳ್ತಂಗಡಿ ಮತ್ತು ದಿವ್ಯಾಂಗ ರಕ್ಷಣಾ ಸಮಿತಿ, ಕೊಡವೂರು ಇವರ ಜಂಟಿ ಸಹಯೋಗದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಸೆಪ್ಟೆಂಬರ್ 08, 2022 ರ ಗುರುವಾರದಂದು, ಉಡುಪಿಯ ದಿವ್ಯಾಂಗರಿಂದ ಉಡುಪಿ ಗಾಂಧಿ ಸರ್ಕಲ್‍ನಿಂದ ಪುರಭವನದ ವರೆಗೆ ಗಾಲಿಕುರ್ಚಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ದಿವ್ಯಾಂಗರು ತಮ್ಮ ವೀಲ್ ಚೇರ್ ಬಳಸಿ ವಿಭಿನ್ನವಾದ ಸ್ಟಂಟ್‍ಗಳನ್ನು ಮಾಡಿ ತಮ್ಮ ಸಾಮಥ್ರ್ಯವನ್ನು ಪ್ರದರ್ಶಿಸಿದರು. ಈ
ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸಿದ ನೀಟ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ರಾಘವೇಂದ್ರ ತಾಳಿಕೋಟಿ 646, ಸಾತ್ವಿಕ ಶ್ರೀಕಾಂತ್ ಹೆಗಡೆ 641, ಸೋಹನ್ ಎಸ್ ನೀಲಕರಿ 598, ಸುದೀಪ್ ಅಸಂಗಿಹಾಲ್ 552, ಹಾಸನದ ವಿಕಾಸ್ ಗೌಡ ಎಂ 608 ಅಂಕಗಳನ್ನು ಗಳಿಸಿದ್ದಾರೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಅತ್ಯಂತ ಅನುಭವಿ ಉಪನ್ಯಾಸಕರುಗಳೇ ಸೇರಿ ನಿರ್ಮಿಸಿರುವ ಕ್ರಿಯೇಟಿವ್ ಪದವಿ
ಶ್ರೀ ಸ್ಥಾನಿಕ ಬ್ರಾಹ್ಮಣ ಸಂಘ ಕುಂಜಿಬೆಟ್ಟು, ಉಡುಪಿ ಮತ್ತು ಚಿನ್ಮಯ ಮಿಷನ್ ಮಂಗಳೂರು ಇವರ ಜಂಟಿ ಸಹಯೋಗದಲ್ಲಿ ಸೆಪ್ಟೆಂಬರ್ ೧೧, ೨೦೨೨ ರಿಂದ ಸೆಪ್ಟೆಂಬರ್ ೧೭, ೨೦೨೨ ರ ತನಕ ಉಡುಪಿಯ ಕುಂಜಿಬೆಟ್ಟುವಿನ ಶಾರದಾ ಮಂಟಪದಲ್ಲಿ ಸುಂದರಕಾಂಡ ಈ ವಿಷಯದಲ್ಲಿ ಇಂಗ್ಲೀಷ್ ಭಾಷೆಯಲ್ಲಿ, ಚಿನ್ಮಯ ಮಿಷನ್ ಮಂಗಳೂರಿನ ಸ್ವಾಮಿ ಅಪರಾಜಿತಾನಂದ ಇವರಿಂದ ಸಂಜೆ ೦೬:೦೦ ರಿಂದ ೦೭:೩೦ ರ ವರೆಗೆ ಪ್ರವಚನ ನಡೆಯಲಿದೆ.
ಯಾವ ಮಗುವಿನಲ್ಲೂ ಬೇಧಭಾವ ಮಾಡದೆ ನಮ್ಮ ಮಗುವಿನಂತೆ ಪ್ರೀತಿ ತೋರಿಸಿ ಝೀರೋದಿಂದ ಹೀರೋ ಮಾಡುವ ಮಹತ್ತರ ಜವಾಬ್ಧಾರಿ ಪೂರ್ವ ಪ್ರಾಥಮಿಕ ಶಿಕ್ಷಕಿಯರ ಮೇಲಿದೆ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ವಂದನಾ ರೈ ಕಾರ್ಕಳ ಹೇಳಿದರು. ಅವರು ಬೆಳ್ಳಾರೆಯ ಜ್ಞಾನದೀಪ ಸಂಸ್ಥೆಯಲ್ಲಿ ಜೇಸಿಐ ಬೆಳ್ಳಾರೆಯ ಆಶ್ರಯದಲ್ಲಿ ನಡೆದ ಜೇಸಿ ಸಪ್ತಾಹದಲ್ಲಿ ದಿ. ಗಂಗಾಧರ ಬೆಳ್ಳಾರೆ ಸ್ಮರಣಾರ್ಥ ನಡೆದ ತರಬೇತಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ




























