ಮಂಗಳೂರು ಮಹಾನಗರ ಪಾಲಿಕೆಯ ಅವ್ಯವಸ್ಥೆ ವಿರುದ್ಧ ಸಾಮಾಜಿಕ ಹೋರಾಟಗಾರ ಜೆರಾರ್ಡ್ ಟವರ್ಸ್ ಹಾಗೂ ಸ್ಥಳೀಯರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ರಸ್ತೆಯಲ್ಲಿದ್ದ ಜಲ್ಲಿಕಲ್ಲುಗಳನ್ನ ಗುಡಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರಿನ ಕದ್ರಿಯ ಸರ್ಕಲ್ ನಲ್ಲಿ ಆಗೆದ ರಸ್ತೆ ದುರಸ್ತಿ ಮಾಡದೇ ಸ್ಥಳೀಯರಿಗೆಹಾಗೂ ಸಮೀಪ ರಿಕ್ಷಾ ಚಾಲಕರಿಗೆ ಸಮಸ್ಯೆ
ಉಜಿರೆ: ಜೀವನದಲ್ಲಿ ಅವಕಾಶಗಳು ಎಲ್ಲರನ್ನೂ ಕೈಬೀಸಿ ಕರೆಯುವುದಿಲ್ಲ. ಸಿಕ್ಕ ಅವಕಾಶಗಳನ್ನು ಕಳೆದುಕೊಳ್ಳದೆ ಉತ್ತಮ ರೀತಿಯಲ್ಲಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಟ್ರಸ್ಟಿ ವಿವೇಕ್ ಆಳ್ವಾ ಹೇಳಿದರು.ಉಜಿರೆಯ ಬಿ.ಎನ್.ವೈ.ಎಸ್ ಮೆಡಿಕಲ್ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ‘ಬಿ- ವೋಕ್ ಅಪೇಕ್ಸ್
ಉಜಿರೆ, ಆಗಸ್ಟ್ 15: ವಿಶ್ವಮಾನವತೆಯ ತತ್ವಕ್ಕನುಗುಣವಾಗಿ ಮುಂದಿನ 25 ವರ್ಷಗಳ ಅವಧಿಯಲ್ಲಿ ಭಾರತದ ರಚನಾತ್ಮಕ ಬೆಳವಣಿಗೆಗಾಗಿ ಯೋಜಿಸಿ ಶ್ರಮಿಸುವುದರ ಕಡೆಗೆ ಯುವಸಮೂಹ ಆಲೋಚಿಸಬೇಕು ಎಂದು ರಾಜ್ಯಸಭೆ ಸದಸ್ಯ, ಆಜಾದಿ ಕಾ ಅಮೃತ ಮಹೋತ್ಸವ ರಾಷ್ಟ್ರೀಯ ಸಮಿತಿ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಅಭಿಪ್ರಾಯಪಟ್ಟರು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದ ಮಧ್ಯೆ ಉಜಿರೆಯ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ
ಮಂಗಳೂರು ಲೇಡೀಸ್ ಬ್ಯೂಟಿ ಅಸೋಸಿಯೇಶನ್ ನ ತಿಂಗಳ ಸಭೆಯು ಉರ್ವಸ್ಟೋರ್ ತುಳುಭವನದಲ್ಲಿ ನಡೆಯಿತು .ಈ ಸಭೆಯಲ್ಲಿ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಅಧ್ಯಕ್ಷರಾದಂತಹ ಕತ್ತಲ್ ಸಾರ್ ಎಪ್ಪತ್ತೈದನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮದ ಕುರಿತು ಹಿತನುಡಿಗಳನ್ನಾಡಿದರು . ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದಂತಹ ಬಬಿತಾ ಯು ಶೆಟ್ಟಿ , ಕಾರ್ಯದರ್ಶಿ ಫರ್ಜಾನಾ , ಉಪಾಧ್ಯಕ್ಷರು ಸುಲತಾ ಸುರತ್ಕಲ್, ಕೋಶಾಧಿಕಾರಿ ಝೀನಾ ಉಪಸ್ಥಿತರಿದ್ದರು . 18ರಿಂದ 40
ಶಾಲೆಯಲ್ಲಿ ಪಾಠ ಪ್ರವಚನ ನಡೆಯುತ್ತಿರುವ ಶಾಲಾ ವೇಳೆಯಲ್ಲಿ ಮೈದಾನವನ್ನು ಇತರೆ ಯಾವುದೇ ಕಾರ್ಯಕ್ರಮಗಳಿಗೆ ನೀಡದಂತೆ ತಿಳಿಸಲು ಹೋದ ಗ್ರಾಮಸ್ಥರು ಹಾಗೂ ಹಳೆ ವಿದ್ಯಾರ್ಥಿಗಳಲ್ಲಿ ಕಾಲೇಜಿಗೂ ಮೈದಾನಕ್ಕೂ ಯಾವುದೇ ಸಂಬಂಧವಿಲ್ಲ ಎನ್ನುವ ಮೂಲಕ ಪ್ರಾಂಶುಪಾಲರು ಕರ್ತವ್ಯ ಮರೆತು ವರ್ತಿಸಿದ್ದಾರೆ ಎಂದು ಆಕ್ರೋಶಿತರಾದ ಅವರು ಪೊಲೀಸ್ ಠಾಣಾ ಮೆಟ್ಟಲೇರಿದ್ದಾರೆ. ಈ ಬಗ್ಗೆ ಮಾತನಾಡಿದ ಹಳೆವಿದ್ಯಾರ್ಥಿಯೂ ಪಡುಬಿದ್ರಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷರಾದ ವೈ. ಸುಕುಮಾರ್, ಮಕ್ಕಳ
ಉಳ್ಳಾಲ: ಸಂಚಾರಿ ಠಾಣಾ ಎಎಸ್ ಐ ಸಿಟಿ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿರುವ ಘಟನೆ ತಲಪಾಡಿಯಲ್ಲಿ ನಡೆದಿದ್ದು, ಕೃತ್ಯ ಖಂಡಿಸಿ ಬಸ್ ಸಿಬ್ಬಂದಿ ತಲಪಾಡಿ- ಸ್ಟೇಟ್ ಬ್ಯಾಂಕ್ ಚಲಿಸುವ ಬಸ್ ಬಂದ್ ನಡೆಸಿ ಪ್ರತಿಭಟನೆ ನಡೆಸಿದ್ರು.ಉಷಾ ಹೆಸರಿನ ಸಿಟಿ ಬಸ್ ನಿರ್ವಾಹಕ ರಾಜು ಎಂಬಾತನನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜೆಪ್ಪು ಸಂಚಾರಿ ಠಾಣೆಯ ಎಎಸ್ ಐ ಆಲ್ಬರ್ಟ್ ಲಸ್ರಾದೊ ಇಂದು ಬೆಳಿಗ್ಗೆ ತಲಪಾಡಿ ಬಳಿ ಸಿಟಿ ಬಸ್ಸುಗಳ ವಿರುದ್ಧ ಕೇಸುಗಳನ್ನು
ಬಂಟ್ವಾಳ: ಸ್ವಾತಂತ್ರ್ಯ ಅಮೃತಮಹೋತ್ಸವದ ಪ್ರಯುಕ್ತ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಮೃತ ಶೋಭಾಯಾತ್ರೆ ನಡೆಸಿ ಗಮನ ಸೆಳೆದರು. ಶ್ರೀರಾಮ ವಿದ್ಯಾಕೇಂದ್ರದ ಮೈದಾನದಲ್ಲಿ ಶಾಸಕ ರಾಜೇಶ್ ನಾೈಕ್ ಅವರು ಧ್ವಜಾರೋಹಣ ನೆರವೇರಿಸಿದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಅವರು ಶೋಭಾಯಾತ್ರೆಗೆ ಚಾಲನೆ ನೀಡಿದರು. ವಿದ್ಯಾಕೇಂದ್ರದ ಅಧ್ಯಕ್ಷ ಬಿ. ನಾರಾಯಣ ಸೋಮಯಾಜಿ
ದೇಶದ 75 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ” ಆಜಾದಿ ಕಾ ಅಮೃತ ಮಹೋತ್ಸವ” ವನ್ನು ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸುವ ಸಲುವಾಗಿ ಮಂಗಳೂರು ಮಹಾ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮಂಗಳೂರು ಮಹಾನಗರ ಪಾಲಿಕಾ ಅಧೀನದ ತುಂಬೆ ಅಣೆಕಟ್ಟನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಸಾರ್ವಜನಿಕರು ಅಗಸ್ಟ್ 13 ರಿಂದ ಅಗಸ್ಟ್ 15 ರವರೆಗೆ ಬಂಟವಾಳ ಬಂಟರ ಭವನದ ಕೆಳಅಂತಸ್ತಿನಿಂದ ಸಂಜೆ 6.00 ರಿಂದ 9.00 ರವರೆಗೆ ವೀಕ್ಷಣೆ ಮಾಡಬಹುದು ಎಂದು
ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ವಿಶಾಲನಗರ ಬಳಿ ಅಕ್ರಮವಾಗಿ ಅಕೇಶಿಯಾ ಮರ ಸಾಗಟ ಮಾಡುತ್ತಿದ್ದ ವಾಹನ ಹಾಗೂ ಆರೋಪಿಯನ್ನು ಮಂಗಳೂರು ಅರಣ್ಯ ಸಂಚಾರಿದಳದ ಸಿಬ್ಬಂದಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ವಶ ಪಡಿಸಿಕೊಂಡಿರುವ ವಾಹನ ಹಾಗೂ ಸ್ವತ್ತುಗಳ ಮೌಲ್ಯ ಸುಮಾರು 19 ಲಕ್ಷ ರೂಪಾಯಿಗಳಾಗಿರಬಹುದೆಂದು ಅಂದಾಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒರ್ವನನ್ನು ವಶಕ್ಕೆ ಪಡೆದುಕೊಂಡಿದ್ದು ತನಿಖೆ ನ ನಡೆಸಲಾಗುತ್ತಿದೆ.ಸಂಚಾರಿದಳದ ಉಪ ಅರಣ್ಯ
ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾರವರ 25ನೇ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ತಾ.20-08-2022ರಂದು ಶನಿವಾರ ಬೆಳಿಗ್ಗೆ 9.30ಕ್ಕೆ ನಗರದ ಮಿಲಾಗ್ರಿಸ್ ಕಾಲೇಜ್ ನಲ್ಲಿ ದ.ಕ.ಜಿಲ್ಲಾ ಮಟ್ಟದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಪತ್ರಿಕಾಹೇಳಿಕೆಯೊಂದರಲ್ಲಿ ತಿಳಿಸಿದೆ. ಸಹಾನುಭೂತಿ ಮತ್ತು ಆಧ್ಯಾತ್ಮಿಕತೆ’ ಎಂಬ ವಿಷಯದ ಮೇಲೆ ನಡೆಯುವ ಚಿತ್ರಕಲಾ ಸ್ಪರ್ಧೆಯನ್ನು ಹೈಸ್ಕೂಲ್,




























