Home Posts tagged #v4newskarnataka (Page 142)

ಶಾಸಕ ಡಾ. ವೈ ಭರತ್ ಶೆಟ್ಟಿ ಅವರಿಂದ ಕುಳಾಯಿ ಜಂಕ್ಷನ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಳಾಯಿ ಜಂಕ್ಷನ್ ಅಭಿವೃದ್ಧಿ ಕಾಮಗಾರಿಗೆ ಶಾಸಕರಾದ ಡಾ.ಭರತ್ ಶೆಟ್ಟಿಯವರು ಗುದ್ದಲಿಪೂಜೆಗೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಭರತ್ ಶೆಟ್ಟಿಯವರು ಕುಳಾಯಿ ಹೆದ್ದಾರಿ ವಿದ್ಯಾನಗರ ರಸ್ತೆ ನಡುವೆ ಜಂಕ್ಷನ್ ಅಭಿವೃದ್ಧಿಯಾಗಲಿದ್ದು, ಅಪಘಾತ ರಹಿತ ವಲಯವನ್ನಾಗಿ ಮಾಡಲು ಯೋಜನೆ

ರಿಕ್ಷಾ ಚಲಾಯಿಸಿ ಹಾನಿಯಾದ ಮನೆಯನ್ನು ವೀಕ್ಷಿಸಿದ ಶಾಸಕ ಯು.ಟಿ. ಖಾದರ್

ಮಳೆಯಿಂದ ಹಾನಿಯಾದ ಪಜೀರು ಪಾನೇಲ ಎಂಬಲ್ಲಿ ಮಿಂಗಲ್ ವೇಗಸ್ ಎಂಬುವರ ಮನೆಯ ವೀಕ್ಷಣೆಗೆ ತೆರಳಿದ್ದ ಸಂದರ್ಭ ಶಾಸಕರು, ವಾರ್ಡಿನ ಸದಸ್ಯರೊಬ್ಬರ ರಿಕ್ಷಾವನ್ನು ಚಲಾಯಿಸಿ ಮನೆಯನ್ನು ವೀಕ್ಷಿಸಿದ್ದಾರೆ. ಇವರ ಜೊತೆಗೆ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷಪ್ರಶಾಂತ್ ಕಾಜವ, ಯೂಸುಫ್ ಪಾನೇಲ, ರೊನಾಲ್ಡ್ ರಿಕ್ಷಾದಲ್ಲಿ ಪ್ರಯಾಣಿಕರಾಗಿದ್ದರು.

ಎಡಿಜಿಪಿ ಅಲೋಕ್ ಕುಮಾರ್ ಬೆಳ್ಳಾರೆ ತುರ್ತು ಸಭೆ

ಬೆಳ್ಳಾರೆ:ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಬೆಳ್ಳಾರೆ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಪೊಲೀಸ್ ಅಧಿಕಾರಿಗಳ ತುರ್ತು ಸಭೆ ನಡೆಯುತ್ತಿದೆ. ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ 6 ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಎನ್.ಐ.ಎ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿರುವುದಾಗಿ ತಿಳಿದುಬಂದಿದೆ.

ಮೂಡುಬಿದಿರೆ : ಸ್ತನ್ಯಪಾನದ ಮಹತ್ವದ ಬಗ್ಗೆ ಜಾಗೃತಿ

ಮೂಡುಬಿದಿರೆ: ವಿಶ್ವ ಸ್ತನ್ಯಪಾನ ಸಪ್ತಾಹದಂಗವಾಗಿ ದ.ಕ.ಜಿ.ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ಇನ್ನರ್‍ವೀಲ್ ಕ್ಲಬ್ ಮೂಡುಜದಿರೆ ಮತ್ತು ಸಮುದಾಯ ಆರೋಗ್ಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಆರೋಗ್ಯವಂತ ಶಿಶುಗಳ ಪ್ರದರ್ಶನ ಮತ್ತು ಸ್ತನ್ಯಪಾನದ ಮಹತ್ವದ ಬಗ್ಗೆ ಜಾಗೃತಿ ಕಾರ್ಯಕ್ರಮವು ಸಮಾಜ ಮಂದಿರದಲ್ಲಿ ನಡೆಯಿತು. ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆಡಳತ ವೈದ್ಯಾಧಿಕಾರಿ ಡಾ.ಚಿತ್ರಾ ಕಾರ್ಯಕ್ರಮವನ್ನು ಉದ್ಘಾಟಿಸಿ,

ಕುಂದಾಪುರ : ಸೌಪರ್ಣಿಕ ನದಿಯ ನೀರಿನ ಮಟ್ಟ ಹೆಚ್ಚಳ

ಕುಂದಾಪುರ: ಎರಡು ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಭಾರಿ ಮಳೆಯಿಂದ ಸೌಪರ್ಣಿಕ ನದಿ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನದಿಯ ಸಮೀಪದಲ್ಲಿರುವ ಊರುಗಳಾದ ಸಾಲ್ಬುಡ-ನಾವುಂದ ಬಡಾಕೆರೆ, ಮರವಂತೆ, ಚಿಕ್ಕಳ್ಳಿ, ಪಡುಕೋಣೆ, ಅರೆಹೊಳೆ ಮುಂತಾದ ಪ್ರದೇಶಗಳು ಮುಳುಗಡೆ ಭೀತಿಯಲ್ಲಿದೆ. ಅಲ್ಲದೆ ಸಾವಿರಾರು ಎಕರೆ ಕೃಷಿ ಭೂಮಿಗಳು ನೆರೆಯಿಂದ ಸಂಪೂರ್ಣ ಜಲಾವೃತವಾಗಿದೆ. ಕುಡಿಯುವ ನೀರಿಗೆ ಜನರ ಆಹಾಕಾರ ಉಂಟಾಗಿದೆ. ನೆರೆ ನೀರು ಜೊತೆ ಕೆಲವೊಂದು ಹಾವುಗಳು

ಆಯತಪ್ಪಿ ನದಿಗೆ ಬಿದ್ದ ವಿದ್ಯಾರ್ಥಿನಿಗೆ ಶೋಧ

ಬೈಂದೂರು : ಸೋಮವಾರ ಸಂಜೆ ಶಾಲೆಯಿಂದ ಮನೆಗೆ ವಾಪಾಸ್ಸಾಗುವಾಗ ಕಾಲುಸಂಕದಿಂದ ಆಕಸ್ಮಿಕ ಕಾಲು ಜಾರಿ ಹರಿಯುವ ನದಿಗೆ ಬಿದ್ದು ನಾಪತ್ತೆದ ಬೈಂದೂರು ತಾಲೂಕು ಕಾಲ್ತೋಡು ಗ್ರಾಮದ ಚಪ್ಪರಿಕೆ ಸರಕಾರಿ ಹಿ.ಪ್ರಾ.ಶಾಲೆಯ ಎರಡನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ ಮೃತದೇಹ ಮಂಗಳವಾರ ಸಂಜೆ 6 ಗಂಟೆ ತನಕ ಪತ್ತೆಯಾಗಿಲ್ಲ. ಸನ್ನಿಧಿ ಮೃತದೇಹ ಪತ್ತೆಗೆ ಅಗ್ನಿಶಾಮಕ ದಳ, ಪೊಲೀಸರು, ಸ್ಥಳೀಯರು, ಈಜುಪಟುಗಳು ಹಾಗೂ ಮುಳುಗು ತಜ್ಞರು ನಿರಂತರವಾಗಿ ಶೋಧ ಕಾರ್ಯದಲ್ಲಿ

‘ಹರ್ ಘರ್ ತಿರಂಗಾ’ ಅಭಿಯಾನ : ಉಡುಪಿ ಶಾಸಕ ಕೆ.ರಘುಪತಿ ಭಟ್ ಚಾಲನೆ

ದೇಶದ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ’ಯ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ‘ಹರ್ ಘರ್ ತಿರಂಗಾ’ ಅಭಿಯಾನದಡಿ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಅರಳಿಸುವ ನಿಟ್ಟಿನಲ್ಲಿ ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಪ್ರಮುಖರಾದ ಎ.ಪುಂಡಲೀಕ ಕಾಮತ್ ರವರಿಗೆ ಉಡುಪಿ ಶಾಸಕ ಕೆ.ರಘುಪತಿ ಭಟ್ ರಾಷ್ಟ್ರ ಧ್ವಜವನ್ನು ಹಸ್ತಾಂತರಿಸಿ ಆಗಸ್ಟ್ 13ರ ಮುಂಜಾನೆಯಿಂದ ಆಗಸ್ಟ್ 15ರ ಸಂಜೆಯ ತನಕ ದೇವಸ್ಥಾನ, ಸಂಘ-ಸಂಸ್ಥೆಗಳು

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ

ಮಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಬಸವರಾಜ ಬೊಮ್ಮಾಯಿಯವರು ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ರಾಜ್ಯಕ್ಕೆ ಬಿಜೆಪಿಯ ಮೂರನೇ ಮುಖ್ಯಮಂತ್ರಿ ಬರಲಿದ್ದಾರೆ ಎಂಬ ಕಾಂಗ್ರೆಸ್ ಟ್ವೀಟ್‍ನ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಮುಂದಿನ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ, ಹಿರಿಯರಾದ ಯಡಿಯೂರಪ್ಪನವರ

ಲೇಡಿಗೋಶನ್ ಆಸ್ಪತ್ರೆಯಲ್ಲಿ ‘ಆಟಿ – ಆಹಾರ-ಆರೋಗ್ಯ-ಉತ್ಸವ’

ಸರಕಾರಿ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಇಲ್ಲಿ ಆಟಿ-ಆಹಾರ–ಆರೋಗ್ಯ ಎನ್ನುವ ಶಿರೋನಾಮೆಯಡಿಯಲ್ಲಿ ವಿನೂತನವಾದ ಕಾರ್ಯಕ್ರಮ ವನ್ನು ಆಯೋಜಿಸಲಾಗಿತ್ತು. ಆಟಿ ತಿಂಗಳಲ್ಲಿ ಪೌಷ್ಟಿಕ ಆಹಾರದ ಅಗತ್ಯತೆಯ ಬಗ್ಗೆ ಬೆಳಕನ್ನು ಚೆಲ್ಲುತ್ತಾ ಗರ್ಭಿಣಿ ಮಹಿಳೆಯರ ಮತ್ತು ಗರ್ಭಸ್ಥ ಶಿಶುವಿನ ಮೇಲಣ ಪರಿಣಾಮವನ್ನು ಮನಮುಟ್ಟಿಸುವ ರೀತಿಯ ಸಾರ್ವಜನಿಕ ಸದುದ್ದೇಶದ ಪ್ರಯತ್ನ ಇದಾಗಿತ್ತು. ಆಟಿ ತಿಂಗಳ ಹಾಗೂ ತುಳುನಾಡಿನ ಸಂಪ್ರದಾಯಗಳನ್ನು ಅಳವಡಿಸಿಕೊಂಡು ಕಲ್ಪವೃಕ್ಷಕ್ಕೆ

ಮೂಡುಬಿದಿರೆಯಲ್ಲಿ : ಜಾನುವಾರು ಅಕ್ರಮ ಸಾಗಾಟ

ಮೂಡುಬಿದಿರೆ: ವಾಹನವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ದನಗಳನ್ನು ಮತ್ತು ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಮಂಗಳವಾರ ವಿದ್ಯಾಗಿರಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮ ದನ ಸಾಗಾಟ ವನ್ನು ತಡೆದಿದ್ದಾರೆ. ತೋಡಾರಿನ ಅದ್ದಕ್ಕ ಎಂಬವರಿಗೆ ದನಗಳನ್ನು ನೀಡಲು ಕೊಂಡೋಯ್ಯಲಾಗುತ್ತಿತ್ತೆಂದು ಹೇಳಲಾಗಿದೆ.