ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಬಳಿಯಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಮಧ್ಯೆ ಭಾರೀ ಪ್ರಮಾಣದಲ್ಲಿ ಬಿರುಕು ಉಂಟಾಗಿದ್ದು, ಮಾಣಿ-ಮೈಸೂರು ಸಂಪರ್ಕ ಕಡಿತಗೊಳ್ಳುವ ಆತಂಕ ಸೃಷ್ಠಿಯಾಗಿದೆ. ಕೊಡಗು ಜಿಲ್ಲೆಯ ಕೆಲವೆಡೆ ಧಾರಾಕಾರವಾಗಿ ಮಳೆ ಸುರಿದಿದೆ. ಸದ್ಯ ಮುಂಜಾಗರೂಕತೆಯ ಕ್ರಮವಾಗಿ ಈ ಹೆದ್ದಾರಿಯಲ್ಲಿ ಘನ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಮೂಡುಬಿದಿರೆ: ಮಹಾವೀರ ಕಾಲೇಜು ಬಳಿಯ ಕೀರ್ತಿನಗರದ ನಿವಾಸಿ ಅಲ್ಫೋನ್ಸ್ ( 68) ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.ಅಲ್ಫೋನ್ಸ್ ಅವರು ಕಳೆದ ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರೆನ್ನಲಾಗಿದೆ. ಮನೆಯವರು ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಬಾವಿಗೆ ಹಾರಿದ್ದು ಬೆಳಿಗ್ಗೆ ಹುಡುಕಾಡಿದಾಗ ಮೃತ ದೇಹ ಬಾವಿಯಲ್ಲಿ ಪತ್ತೆಯಾಗಿದೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ
ಮಂಗಳೂರಿನ ಜಿಲ್ಲಾ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಮಂಗಳೂರು ಜೈಲ್ ನಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿತ್ತು.ಇದೀಗ ದಕ್ಷಿಣ ಜಿಲ್ಲೆಯಲ್ಲಿ ಸರಣಿ ಹತ್ಯೆ ನಡೆದಿದೆ, ಮಸೂದ್, ಫಾಝಿಲ್, ಪ್ರವೀಣ್ ಹತ್ಯಾ ಅರೋಪಿಗಳನ್ನು ಬಂಧಿಸಿಲಾಗಿದೆ. ಬಂಧಿತರೆಲ್ಲಾ ಮಂಗಳೂರು ಜೈಲ್ ನಲ್ಲಿದ್ದಾರೆ ಈ ಹಿಂದೆ ಹಲವು ಘಟನೆಗಳು ಮಂಗಳೂರು ಜೈಲ್ ನಲ್ಲಿ ನಡೆದಿದ್ದು.ಇದೀಗ ಎಡಿಜಿಪಿ ಅಲೋಕ್ ಕುಮಾರ್ ಅವರು ಪೊಲೀಸ್ ಅಧಿಕಾರಿಗಳ
ಮದುವೆಯಾಗಿ ಐದು ದಶಕಗಳ ಕಾಲ ಜೊತೆಯಾಗಿ ಬಾಳಿ ಸಿಹಿ ಕಹಿ, ನೋವು ನಲಿವು ಸವಾಲುಗಳನ್ನು ಎದುರಿಸಿದ ದಂಪತಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಕಾಪುವಿನ ಬೆಳಪುವಿನಲ್ಲಿ ನಡೆದಿದೆ. ಬೆಳಪು ಗ್ರಾಮದ ಧೂಮಪ್ಪ ಶೆಟ್ಟಿ ಮನೆ ಕೃಷ್ಣ ಯಾನೆ ಕುಟ್ಟಿ ಶೆಟ್ಟಿ (80) ಮತ್ತು ಅವರ ಪತ್ನಿ ಮುಂಡ್ಕೂರು ಅಂಗಡಿಗುತ್ತು ರೇವತಿ ಕೆ. ಶೆಟ್ಟಿ (75) ಸಾವಿನಲ್ಲೂ ಒಂದಾದ ದಂಪತಿ.ಕೃಷ್ಣ ಯಾನೆ ಕುಟ್ಟಿ ಶೆಟ್ಟಿ ಅವರು ವಯೋ ಸಹಜ ಕಾರಣಗಳಿಂದಾಗಿ ಮಂಗಳವಾರ ಮುಂಜಾನೆ ಮೃತಪಟ್ಟಿದ್ದು ಮಕ್ಕಳು
ಮಂಗಳೂರು: ಕುಲಶೇಖರದ ಪರಿಸರದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ವೀರನಾರಾಯಣ ದೇವಸ್ಥಾನದ ಸುಮಾರು 8 ಕೋಟಿ ರೂ. ವೆಚ್ಚದಲ್ಲಿ ಸಮಗ್ರ ಜೀರ್ಣೋದ್ಧಾರದ ಕಾರ್ಯದ ಪ್ರಯುಕ್ತ ಇಂದು ಉತ್ತರಾರೋಹಣ ಕಾರ್ಯಕ್ರಮವು ಧಾರ್ಮಿಕ ವಿಧಿವಿಧಾನಗಳೊಂದಿಗೆ ದೇವಸ್ಥಾನದ ತಂತ್ರಿಗಳಾದ ವಾಮಂಜೂರು ಅನಂತ ಉಪಧ್ಯಾಯ ಅವರ ಮಾರ್ಗದರ್ಶನದಲ್ಲಿ ಪ್ರಧಾನ ಅರ್ಚಕ ಜನಾರ್ಧನ್ ಭಟ್ ಅವರ ಪೌರೋಹಿತ್ಯದಲ್ಲಿ ದಾರು ಶಿಲ್ಪಿ ಸುಂದರ್ ಆಚಾರ್ಯ ಕೋಟೆಕಾರು ಅವರು ಗರ್ಭಗುಡಿಯ ಮೇಲ್ಚಾವಡಿಯ ಮಾಡಿನ ಕೆಲಸ
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಾರು ಗ್ರಾಮದ ಮುಳ್ಳುಗುಡ್ಡೆ ಎಂಬಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತ ಕಿಶೋರ್ ಯಾನೆ ಕಿಚ್ಚು ಎಂಬಾತ ಇಂದು ತನ್ನ ಮೇಲೆ ಮೂರು ಜನ ವ್ಯಕ್ತಿಗಳು ತಲವಾರು ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ವದಂತಿ ಹಬ್ಬಿಸಿ ಈ ಪ್ರದೇಶದಲ್ಲಿ ಉದ್ವಿಗ್ನತೆ ಮತ್ತು ಆತಂಕ ಸೃಷ್ಟಿಸಲು ಕಾರಣನಾಗಿದ್ದು ಈತ ವದಂತಿ ಹರಡಿರುವುದರ ಹಿಂದೆ ನಿಗೂಢ ಉದ್ದೇಶಗಳು ಇರುವ ಸಾಧ್ಯತೆಗಳಿದ್ದು ಇದರ ಹಿಂದೆ ಈತನಿಗೆ ಕೆಲವರು ಪ್ರೇರೇಪಣೆ ನೀಡಿ ಪ್ರದೇಶದಲ್ಲಿ
An event was conducted to celebrate Paediatric Bone Marrow Transplantation facility and press meet by Kasturba Medical College and Hospital, Manipal today under division of Paediatric haematology and Oncology of Manipal Comprehensive Cancer care Centre. Dr Sharath Kumar Rao, Dean, Kasturba Medical College, Manipal released information pamphlets on paediatric bone marrow
ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಣಿಪಾಲದ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಭಾಗವಾಗಿರುವ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗವು ಮಕ್ಕಳ ಅಸ್ಥಿಮಜ್ಜೆ ಕಸಿ ಸೌಲಭ್ಯದ ಯಶಸ್ಸನ್ನು ಆಚರಿಸುವ ಕಾರ್ಯಕ್ರಮ ಮತ್ತು ಪತ್ರೀಕಾಘೋಷ್ಠಿಯನ್ನು ಇಂದು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ.ಶರತ್ ಕುಮಾರ್ ರಾವ್ ಅವರು ಮಕ್ಕಳ ಅಸ್ಥಿಮಜ್ಜೆ ಕಸಿ ಕ್ಲಿನಿಕ್ ನ ಮಾಹಿತಿ
ಕಾರ್ಕಳದ ಮಿಯಾರು ಗ್ರಾಮದಲ್ಲಿ ಜಾನ್ ಸಿಎನ್ ಎಸ್‍ಎಲ್ ಆಯಿಲ್ ಮತ್ತು ಶೆಲ್ ಘಟಕ ಪ್ರಾರಂಭಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಶೇಕ್ ಶಬ್ಬೀರ್ ಅವರು, ಕೈಗಾರಿಕಾ ಪ್ರದೇಶ ಸ್ಥಾಪಿಸಲು ಯೋಗ್ಯವಲ್ಲದ ಸ್ಥಳ ಇದಾಗಿದೆ. ಕೈಗಾರಿಕೆ ಪ್ರಾಂಗಾಣಕ್ಕೆ ಹೊಂದಿಕೊಂಡು ಸುಮಾರು 450 ಹೆಚ್ಚು ಬಡ ಕುಟುಂಬಗಳ ಗುಡಿಸಲುಗಳಿವೆ. ಕೂಗಳತೆಯ ದೂರದಲ್ಲಿ ಮುರಾಜಿ ದೇಸಾಯಿ ವಸತಿ
ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಆಗಸ್ಟ್ 2 ರಿಂದ ಆಗಸ್ಟ್ 9 ರವರೆಗೆ, 122 ನೇ ಭಜನಾ ಸಪ್ತಾಹ ಮಹೋತ್ಸವವು, ನಾಗರ ಪಂಚಮಿಯಂದು ಶುಭಾರಂಭಗೊಂಡು, ದ್ವಾದಶಿ ಪರ್ಯಂತ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ. ಊರ ಪರವೂರ ಭಜನಾ ಮಂಡಳಿಗಳಿಂದ ಅಹೋರಾತ್ರಿ 7 ದಿನಗಳ ಕಾಲ, ನಿರಂತರ ಭಜನೆ ಈ ಮಹೋತ್ಸವದಲ್ಲಿ ನಡೆಯಲಿದೆ. ಈ ಪ್ರಯುಕ್ತ ನಡೆದ ದೀಪ ಸ್ಥಾಪನಾ ಕಾರ್ಯಕ್ರಮ ವೈಭವದಿಂದ ನೆರವೇರಿತು. ಈ ಶುಭ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯರು,




























