ಉಳ್ಳಾಲದಲ್ಲಿ ಯುವಕ ಮೇಲೆ ಹಲ್ಲೆಗೆ ಯತ್ನ ಆಗಿದೆ ಎಂಬ ಸುದ್ದಿಯಲ್ಲಿ ಸತ್ಯಾಂಶವಿಲ್ಲ. ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಪೊಲೀಸ್ ಕಮೀಷನರ್ ಶಶಿಕುಮಾರ್.ಎನ್. ಸ್ಪಷ್ಟನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಹಾಗೂ ಸುರತ್ಕಲ್‍ನಲ್ಲಿ ನಡೆದಿರುವ ಹತ್ಯೆ ಹಿನ್ನೆಲೆಯಲ್ಲಿ ಜಿಲ್ಲೆ ಇದೀಗ ಸೂಕ್ಷ್ಮ ಪ್ರದೇಶವಾಗಿ ಮಾರ್ಪಡಿಟ್ಟಿದೆ. ನಗರ ಹಾಗೂ
ಕರ್ನಾಟಕ ರಾಜ್ಯ ಸಂಘ ದಕ್ಷಿಣಕನ್ನಡ ಜಿಲ್ಲಾ ಯುವ ರೈತ ಘಟಕದ ವತಿಯಿಂದ ಕೊಕ್ಕಡ ಹೋಬಳಿ, ಕಣಿಯೂರು ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯ ಕಾನೂನು ಬಾಹಿರ ಚಟುವಟಿಕೆಯನ್ನು ಖಂಡಿಸಿ ನ್ಯಾಯಬದ್ಧವಾಗಿ ಕಾರ್ಯ ನಿರ್ವಹಿಸಲು ಬುದ್ಧಿವಾದ ಹೇಳಲಾಯಿತು. ಕಣಿಯೂರು ಗ್ರಾಮ, ಕೊಕ್ಕಡ ಹೋಬಳಿಯಲ್ಲಿ ರೈತ ಸಂಘದ ಯುವ ರೈತ ಘಟಕ ಮತ್ತು ಗ್ರಾಮಸ್ಥರು ಸಹ ರೈತರಿಗೆ ಆಗಿರುವ ಅನ್ಯಾಯದ ಕುರಿತು ಗ್ರಾಮ ಲೆಕ್ಕಾಧಿಕಾರಿಯನ್ನು ಪ್ರಶ್ನಿಸಲು ದನಿಗೂಡಿಸಿದರು. ಚರ್ಚಿಸುವ ಸಮಯದಲ್ಲಿ ಕೆಲವು
ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದಲ್ಲಿ ಜಲಸ್ಫೋಟದಿಂದ ಹಾನಿಯಾದ ಪ್ರದೇಶದಲ್ಲಿ ಪರಿಹಾರ ಕಾರ್ಯಾಚರಣೆ ಯಲ್ಲಿ SKSSF ವಿಖಾಯ ಕಾರ್ಯಕರ್ತರು ತೊಡಗಿದ್ದಾರೆ. ನೀರಿನಿಂದ ಮುಳುಗಿದ್ದ ಮನೆಗಳ ಸ್ವಚ್ಚತೆ, ಕರೆಂಟ್ ಲೈನ್ ದುರಸ್ತಿ , ರಾಷ್ಟ್ರೀಯ ಹೆದ್ದಾರಿಗೆ ಬಿದ್ದಿರುವ ಮರಗಳ ತೆರವು, ಇನ್ನಿತರ ಪರಿಹಾರ ಕಾರ್ಯಗಳನ್ನು ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅದ್ಯಕ್ಷರಾದ ಜಿ.ಕೆ ಹಮೀದ್, ಪಿ.ಡಿ.ಓ ಸರಿತಾ ಡಿಸೋಜ, ಗ್ರಾ. ಪಂ. ಸದಸ್ಯರಾದ ಎಸ್.ಕೆ ಹನೀಫ಼್,
ಸಂಪಾಜೆ, ಕಲ್ಲುಗುಂಡಿ ಮತ್ತು ಕೊಯನಾಡು ಭಾಗದಲ್ಲಿ ನಿರಂತರ ಎರಡನೇ ದಿನವೂ ರಾತ್ರಿ ವೇಳೆ ಮಹಾಮಳೆ ಮುಂದುವರಿದಿತ್ತು. ರಾತ್ರಿ ಸುರಿದ ಧಾರಾಕಾರ ಮಳೆಗೆ ಪಯಸ್ವಿನಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹದಿಂದಾಗಿ ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡು ವಾಹನಗಳ ಸಂಚಾರದಲ್ಲಿ ಅಡಚಣೆ ಉಂಟಾಗಿತ್ತು. ನದಿಪಾತ್ರದ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ನಿವಾಸಿಗಳು ರಾತ್ರೋರಾತ್ರಿ ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ. ಕೊಯನಾಡಿನಲ್ಲಿ ಕೂಡ ನಿರಂತರ ಮಳೆಯಿಂದ
ಭಾರೀ ಮಳೆಯಿಂದ ಹರಿಹರ ಪಲ್ಲತ್ತಡ್ಕದಲ್ಲಿ ರಾಶಿ ಬಿದ್ದ ಮರದ ದಿಮ್ಮಿಗಳನ್ನು ತೆರವು ಮಾಡುತ್ತಿದ್ದ ಕ್ರೇನ್ ಆಪರೇಟರ್ ಓರ್ವರು ಹೊಳೆಯ ಪಕ್ಕದಲ್ಲಿ ನಿಂತಿದ್ದ ವೇಳೆ ನೀರಿಗೆ ಬಿದ್ದಿದ್ದು, ಈ ವೇಳೆ ಯುವಕನೋರ್ವ ನದಿಗೆ ಹಾರಿ ಅವರನ್ನು ರಕ್ಷಿಸಿದ ಘಟನೆ ನಡೆದಿದೆ. ಪಂಜ ಸಮೀಪದ ಪಡ್ಪಿನಂಗಡಿ ನಿವಾಸಿ ಶರೀಫ್ ಎಂಬವರ ಕ್ರೇನ್ ಹಾಗೂ ಸ್ಥಳೀಯ ನಿವಾಸಿಯೋರ್ವರ ಜೆಸಿಬಿ ವಾಹನಗಳನ್ನು ತರಿಸಲಾಗಿತ್ತು. ಕಾರ್ಯಾಚರಣೆಯ ವೇಳೆ ಆಪರೇಟರ್ ಶರೀಫ್ ಕ್ರೇನ್ ನಿಂದ ಇಳಿದು ಹೊಳೆ
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸರಕಾರಿ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಮತ್ತು ಸಖಿ ಒನ್ ಸ್ಟಾಪ್ ಸೆಂಟರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸಂತ್ರಸ್ತ ಪರಿಹಾರ ಕಾರ್ಯಕ್ರಮ ಮತ್ತು ಕಾನೂನು ಅರಿವು ಕಾರ್ಯಾಗಾರ ಸರಕಾರಿ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಇಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ
ಸುಬ್ರಹ್ಮಣ್ಯದಲ್ಲಿ ದುರಂತ ಸಂಭವಿಸಿ ಮೃತಪಟ್ಟ ಮಕ್ಕಳ ಮನೆಗೆ ಉಸ್ತುವಾರಿ ಸಚಿವ ಸುನಿಲ್ ರವರು ಇಂದು ಭೇಟಿ ನೀಡಿದರು.ಮನೆಗಾಗಿ 95 ಸಾವಿರ ನೀಡಿದ್ದೇವೆ. ಇನ್ನು ಮನೆ ಕಟ್ಟುವುದಿದ್ರೆ 4 ಲಕ್ಷ ಕೊಡಲಾಗುವುದು, ಅಂಗಡಿಗಳಿಗೆ ನೀರು ನುಗ್ಗಿ ಹಾನಿ ಯಾಗಿದ್ರೆ ಹಣ ಕೊಡುವ ಪ್ರಾವಿಶನ್ ಇಲ್ಲ, ಆದ್ರೂ ಮುಖ್ಯ ಮಂತ್ರಿಗಳ ಗಮನಕ್ಕೆ ತಂದು ವಿಶೇಷ ಪ್ಯಾಕೇಜ್ ಘೋಷಣೆ ನೀಡಿ ಅಂಗಡಿಗಳಿಗೂ ಪರಿಹಾರ ನೀಡಲಿದ್ದೇವೆ ಎಂದು ಸುನಿಲ್ ಕುಮಾರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ
ಉಪ್ಪಿನಂಗಡಿ : ಅ 2 : ಕಾರು ಮತ್ತು ಬಸ್ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಮಂಗಳವಾರ ( ಅ .2) ಸಂಜೆ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕಡಬ ತಾಲೂಕಿನ ರಾಮಕುಂಜ ನಿವಾಸಿಗಳಾದ ಉಪನ್ಯಾಸಕ ಗೋವಿಂದರಾಜ್ ಶರ್ಮಾ(32) ಮತ್ತು ಓಂಕಾರ್ ಪ್ರಸಾದ್ (30) ಗಾಯಗೊಂಡವರು . ಅಪಘಾತವೂ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಕಾರು ಹಾಸನ ಜಿಲ್ಲೆಯ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಹೇರಲಾಗಿರುವ ರಾತ್ರಿ ನಿರ್ಬಂಧವನ್ನು ಇನ್ನೂ ಎರಡು ದಿನಗಳವರೆಗೆ ಮುಂದುವರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖಾ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಯ ಕೋರಿಕೆಯಂತೆ ನಿರ್ಬಂಧವನ್ನು ಆ.5ರ ಬೆಳಗ್ಗೆ 6 ಗಂಟೆವರೆಗೆ ಈ ನಿರ್ಬಂಧ ಜಾರಿಯಲ್ಲಿರಲಿದೆ.
ನಿನ್ನೆ ಸುರಿದ ಮಳೆಯಿಂದಾಗಿ ಹಾನಿಗೊಳಗಾದ ಸುಳ್ಯ ಹಾಗೂ ಕಡಬ ತಾಲೂಕುಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾತ್ರಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಮೃತಪಟ್ಟ ಸುಬ್ರಹ್ಮಣ್ಯ ಸಮೀಪದ ಪರ್ವತಮಿಖಿ ಘಟನಾ ಸ್ಥಳಕ್ಕೂ ಜಿಲ್ಲಾಧಿಕಾರಿ ಭೇಟಿ ನೀಡಿದರು. ಅಧಿಕಾರಿಗಳು, ಸ್ಥಳೀಯಾಡಳಿತ ಅಧಿಕಾರಿಗಕಳಿಂದ ಮಾಹಿತಿ ಪಡೆದರು. ಪುತ್ತೂರು ಎಸಿ ಗಿರೀಶ್ ನಂದನ್, ತಹಶೀಲ್ದಾರ್ ಅನಂತಶಂಕರ, ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ,




























