ಹಾಲೆ ಮರದ ಎಲೆಯು ಸಾಮಾನ್ಯವಾಗಿ ದಪ್ಪವಾಗಿದ್ದು ಒಂದು ಗೊಂಚಲಿನಲ್ಲಿ 7 ರಿಂದ 9 ಪತ್ರಗಳಿರುತ್ತವೆ. ಎಲೆಗಳ ಅಗಲ ಒಂದರಿಂದ ಎರಡು ಇಂಚು ಇದ್ದು, ಉದ್ದ 6 ರಿಂದ 12ಇಂಚು ಇರುತ್ತದೆ. ಕಡು ಹಸಿರು ವರ್ಣದಿಂದ ಕೂಡಿದ್ದು ಮುರಿದಾಗ ಹಾಲು ಹೊರಸೂಸುತ್ತದೆ.ಹಾಲೆ ಮರದ ತೊಗಟೆ ಬೂದು ವರ್ಣದಿಂದ ಕೂಡಿದ್ದು, ದೊರಗಾಗಿದ್ದು ಕಲ್ಲಿನಿಂದ ಜಜ್ಜಿ ಹಾಳೆಗಳಂತೆ ತೆಗೆಯಲು ಬರುವುದು. ಈ
ಮೀನುಗಾರಿಕೆ ತೆರಳಿದ್ದ ನಾಡದೋಣಿಯ ಇಂಜಿನ್ ನಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ಬಂಡೆಗೆ ಬಡಿದು ದೋಣಿ ಮುಗುಚಿ ಬಿದ್ದು, ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿ ಜಿಲ್ಲೆಯ ಕಾಪು ಲೈಟ್ ಹೌಸ್ ಬಳಿ ನಡೆದಿದೆ. ಇಂದು ಬೆಳಗ್ಗೆ ಐದು ಮಂದಿ ಮೀನುಗಾರರು, ನಾಡದೋಣಿಯಲ್ಲಿ ಕಾಪುವಿನಿಂದ ಮೀನುಗಾರಿಕೆಗೆ ತೆರಳಿದ್ದರು. ಸಮುದ್ರದಲ್ಲಿ ದೋಣಿಯ ಇಂಜಿನ್ ತಾಂತ್ರಿಕ ದೋಷ ಉಂಟಾಗಿ, ಕಾಪು ಲೈಟ್ ಹೌಸ್ ತಲುಪುತ್ತಿದ್ದಂತೆ, ಬಂಡೆಗೆ ಬಡಿದಿದೆ. ಈ ವೇಳೆ ದೋಣಿ ಮಗುಚಿ
ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ, ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರ್ ಅವರ ಸ್ವಗ್ರಾಮ ಬೆಳ್ಳಾರೆಯ ನೆಟ್ಟಾರುವಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಬಿಲ್ಲವ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಸಲಾಯಿತು. ಈ ವೇಳೆ ಕುಟುಂಬಸ್ಥರಿಗೆ ಮಾತ್ರ ಅವಕಾಶ ನೀಡಲಾಗಿದೆ. ಪ್ರವೀಣ್ ಪತ್ನಿ, ತಂದೆ-ತಾಯಿ ಸೇರಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ತಂದೆಯೇ ಮಗನ ಚಿತೆಗೆ ಅಗ್ನಿ ಸ್ಪರ್ಶ ನೀಡುವ ಮೂಲಕ ಅಂತಿಮ ಸಂಸ್ಕಾರ ನಡೆಸಲಾಯಿತು.
ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಗೆ ಬಿಜೆಪಿ ಸರಕಾರದ ದುರಾಡಳಿತ ಹಾಗೂ ಮತೀಯವಾದಿ ನೀತಿಗಳೇ ನೇರ ಕಾರಣ. ಬಿಜೆಪಿ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಪೂರ್ತಿ ಕುಸಿದಿದ್ದು, ಕೋಮುವಾದಿ ಸಂಘಟನೆಗಳು ಅಂಕೆ ಮೀರಿ ವರ್ತಿಸುತ್ತಿವೆ. ಬೆಳ್ಳಾರೆಯಲ್ಲಿ ನಡೆದಿರುವ ಮಸೂದ್ ಹಾಗೂ ಪ್ರವೀಣ್ ನೆಟ್ಟಾರ್ ಕೊಲೆಗಳು ಮತೀಯ ಸಂಘರ್ಷ ಭುಗಿಳೇಲುವ ಭೀತಿಗೆ ಕಾರಣವಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ ಈಗಲಾದರು ಎಚ್ಚೆತ್ತುಕೊಂಡು ತಮ್ಮ ಪರಿವಾರವೂ ಸೇರಿದಂತೆ
ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಸದಸ್ಯ ಪ್ರವೀಣ್ ನೆಟ್ಟಾರ್‍ಅವರ ಕೊಲೆಗೆ ಸಂಬಂಧಿಸಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಬಿ.ಸಿ.ರೋಡ್ ಸುತ್ತಮುತ್ತ ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಿದಂತೆ ಹೆಚ್ಚಿನ ಅಂಗಡಿ ಮುಂಗಟ್ಟುಗಳು ಬುಧವಾರ ಬಂದ್ ಆದವು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಕಿಶೋರ್ ಪಲ್ಲಿಪ್ಪಾಡಿ, ನಿರಂತರವಾಗಿ
ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಗೆ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ಮೂವರ ತಂಡ ಈ ಕೃತ್ಯ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಹಿನ್ನಲೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ತನಿಖೆಗೆ ಐದು ವಿಶೇಷ ಪೋಲಿಸ್
ಪುತ್ತೂರು: ಪ್ರವೀಣ್ ನೆಟ್ಟಾರು ಅವರ ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಿಂದ ಅವರ ಬೆಳ್ಳಾರೆ ಮನೆಗೆ ಕೊಂಡು ಹೋಗುವ ಸಂದರ್ಭ ಪರಿಸ್ಥಿತಿ ಬಿಗಡಾಯಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪುತ್ತೂರು ಉಪವಿಭಾಗದ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಉಪವಿಭಾಗಾಧಿಕಾರಿ ಗಿರೀಶ್ ನಂದನ್ ಆದೇಶ ಹೊರಡಿಸಿದ್ದಾರೆ. ಪುತ್ತೂರು ನಗರ ಠಾಣಾ ವ್ಯಾಪ್ತಿಯ ಲಿನೆಟ್ ಜಂಕ್ಷನ್ ಬಳಿ ಬಸ್ಸೊಂದಕ್ಕೆ ಕಲ್ಲು ತೂರಾಟ ನಡೆಸಿರುವ ಘಟನೆ
ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರ ಮೃತ ದೇಹದ ಅಂತಿಮ ಯಾತ್ರೆಗೆ ಸಂಬಂಧಿಸಿ ಪುತ್ತೂರಿನಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದಾರೆ. ಪ್ರವೀಣ್ ನೆಟ್ಟಾರು ಅವರ ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಿಂದಲೇ ಮೆರವಣಿಗೆ ಮೂಲಕ ದರ್ಬೆ ವೃತ್ತಕ್ಕೆ ಕೊಂಡು ಹೋಗಿ ಅಲ್ಲಿಂದ ಬೆಳ್ಳಾರೆ ಪ್ರವೀಣ್ ಅವರ ಮನೆಗೆ ಕೊಂಡೊಯ್ಯಲಾಗುವುದು. ಮೆರವಣಿಗೆ ಸಂದರ್ಭ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಪುತ್ತೂರಿನ ಬೊಳುವಾರಿನ ವಿಶ್ವ ಕರ್ಮ ಸಭಾ ಭವನದ ಮುಂಭಾಗ ಸರ್ಕಾರಿ ಬಸ್ ಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡಸಿದ್ದಾರೆ. ಇದೀಗ ಪುತ್ತೂರಿನ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಎಲ್ಲಾ ಮಾರ್ಗಗಳಲ್ಲಿ ಬಸ್ ನ್ನು ಸಂಚಾರ ತಡೆ ಹಿಡಿಯಲಾಗಿದೆ. ದೂರದೂರುಗಳಿಗೆ ಸಂಚರಿಸುವ ಪ್ರಯಾಣಿಕರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಬಸ್ ಸಂಚಾರದ ಬಗ್ಗೆ ಯಾವುದೇ ರೀತಿಯ ಸ್ಪಷ್ಟ ಮಾಹಿತಿ ಇರಲಿಲ್ಲ. ಈ ನಡುವೆ ಜನವಶ್ಯಕವಾದ ಬಸ್’ಗಳು ಸಂಚಾರ



















