ಮಂಗಳೂರಿನ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆಯು ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಭ್ರಷ್ಟಾಚಾರ ನಿಗ್ರಹ ದಳ ಪಶ್ಚಿಮ ವಲಯದ ಎಸ್ ಪಿ. ಶ್ರೀ ಸೈಮನ್ ಸಿ.ಎ ಅವರು ಮಾತನಾಡಿ ನಿಜವಾದ ನಾಯಕತ್ವ ಎಂದರೆ ಮುನ್ನೆಲೆಯಲ್ಲಿ ಮುನ್ನಡೆಸುವುದಲ್ಲ. ದೊರೆತ ಅವಕಾಶವನ್ನು ವಿಶ್ಲೇಷಿಸಿ ಹಿಂಜರಿಯದೆ ಸವಾಲುಗಳನ್ನು ಎದುರಿಸುವುದು
ಕಡಬ,ಸವಣೂರು : ಮಾತೃಭೂಮಿ ಸಾವಯವ ಕೃಷಿ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ.) ಕಡಬ ,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ,ಅರಣ್ಯ ಇಲಾಖೆ ಪುತ್ತೂರು ,ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲ ಇದರ ವತಿಯಿಂದ ಸವಣೂರು ಯುವಕ ಮಂಡಲದ ಯುವ ಸಭಾಭವನದಲ್ಲಿ ಸಸಿ ಮತ್ತು ತರಕಾರಿ ಬೀಜ ವಿತರಣೆ ಹಾಗೂ ಕೃಷಿ ಅರಣ್ಯ ರೈತ ಸಹಾಯಧನದ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಾರ್ಯಪ್ಪ ಮಾತನಾಡಿ,
ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಕೆಸರುಡೊಂಜಿ ದಿನ ನೇಜಿ ನಡುವ ಸಂಭ್ರಮ ಮನೆಮಾತಾಗಿತ್ತು.ಮಕ್ಕಳಿಗೆ ಹಳ್ಳಿಯ ವಾತಾವರಣ ಕಲ್ಪಿಸಿಕೊಡಲಾಗಿತ್ತು.ಶಾಲಾ ಮಕ್ಕಳಿಗೆ ಕೃಷಿಯ ಬಗ್ಗೆ ಅರಿವು ಮೂಡಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಕಾರ್ಯಕ್ರಮವನ್ನು ರತ್ನಮಾನಸ ಇಲ್ಲಿನ ಮೇಲ್ವಿಚಾರಕರಾಗಿರುವ ಶ್ರೀ. ಯತೀಶ್ ಬಳಂಜ ಮಾತನಾಡುತ್ತಾ,ಪ್ರಕೃತಿಯ ವಿಸ್ಮಯ,ಅದರಿಂದಾಗುವ ಪ್ರಯೋಜನ,ಅದನ್ನು ಉಳಿಸುವ ಪ್ರಯತ್ನ ವಿದ್ಯಾರ್ಥಿಗಳು
ಮೂಡುಬಿದಿರೆ : ಇಟ್ಟಿಗೆ, ಮರಳು ಮತ್ತು ಸಿಮೆಂಟಿನಿಂದ ಪಕ್ಷವನ್ನು ಕಟ್ಟಲು ಸಾಧ್ಯವಿಲ್ಲ. ಉನ್ನತ ಮಟ್ಟದಲ್ಲಿ ಪಕ್ಷವನ್ನು ಕಟ್ಟಲು ಮತ್ತು ಮತ ಬ್ಯಾಂಕ್ ಪರಿವರ್ತನೆಯಾಗಬೇಕಾದರೆ ಜನ ಸ್ಪಂದನೆ ಅಗತ್ಯ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು. ಅವರು ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಮಾಜ ಮಂದಿರದಲ್ಲಿ ನಡೆದ ಪುತ್ತಿಗೆ ಜಿ.ಪಂ.ಕ್ಷೇತ್ರದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸರಕಾರಗಳು ಗ್ರಾ.ಪಂಗಳ ಮೂಲಕ 42 ವಿವಿಧ
ಮಳೆಯಿಂದ ಹಾನಿಗೊಳಗಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಉಪ್ಪುಕಳ ಗ್ರಾಮಕ್ಕೆ ಬಂದರು ಹಾಗೂ ಮೀನುಗಾರಿಕೆ ಸಚಿವ ಅಂಗಾರ ಭೇಟಿ ನೀಡಿದ್ದು, ಶೀಘ್ರದಲ್ಲೇ ಸೇತುವೆ ನಿರ್ಮಾಣದ ಭರವಸೆ ನೀಡಿದರು. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 124 ಸೇತುವೆಗಳು ನಿರ್ಮಾಣವಾಗಿವೆ. ವಿಶೇಷ ಪ್ರಾಶಸ್ತ್ಯ ನೀಡಿ ಗ್ರಾಮಗಳನ್ನು ಬೆಸೆಯುವ ಸಂಪರ್ಕ ಸೇತುವೆ ನಿರ್ಮಿಸಲಾಗುತ್ತದೆ. ಉಪ್ಪುಕಳದಲ್ಲೂ ಅತೀ ಶೀಘ್ರದಲ್ಲೇ ಸೇತುವೆ ರಚನೆಯಾಗಲಿದ್ದು, ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡಲಾಗುವುದು
ಕಾರ್ಕಳ : ಕಳೆದ ಮಾರ್ಚ್ ತಿಂಗಳಲ್ಲಿ ಕಾರ್ಕಳದಲ್ಲಿ ಬಹಳ ಅದ್ದೂರಿಯಾಗಿ ಕಾರ್ಕಳ ಉತ್ಸವ ಜರುಗಿದ್ದು. ಈ ಸಂದರ್ಭದಲ್ಲಿ ಕಾರ್ಕಳ ತಾಲೂಕಿನ ಮುಖ್ಯ ರಸ್ತೆಗಳು, ಚರಂಡಿ ಮೋರಿಗಳಿಗೆ ಕೋಟಿಗಟ್ಟಲೆ ರೂಪಾಯಿಗಳನ್ನು ಖರ್ಚು ಮಾಡಿ ಡಾಮರೀಕರ್ಣ ಮಾಡಲಾಗಿತ್ತು. ಇದೀಗ ಕಾರ್ಕಳದ ಮುಖ್ಯ ರಸ್ತೆಗಳಲ್ಲಿ ಒಳ ಚರಂಡಿಯ ತ್ಯಾಜ್ಯ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ಕಾರ್ಕಳ ಮುಖ್ಯ ರಸ್ತೆಯ ಡಾಮರು ಎದ್ದು ಹೊಂಡಗಳು ಬಿದ್ದು ಪಾದಾಚಾರಿಗಳಿಗೆ ಹಾಗೂ ವಾಹನ ಚಾಲಕರಿಗೆ ಹೋಗುವುದೇ ಒಂದು
ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ಇಲ್ಲಿನ ಬೈಪಾಸ್ ರಸ್ತೆಯ ಉರ್ಲಾಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.ಶುಂಠಿಕೊಪ್ಪದ ಚಂಗಪ್ಪ ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮೃತದೇಹವನ್ನು ಶ್ರೀ ಶರವು ಗಣೇಶ್ ಆಂಬ್ಯುಲೆನ್ಸ್ ನಲ್ಲಿ ಶುಂಠಿಕೊಪ್ಪಕ್ಕೆ ಕೊಂಡೊಯ್ಯುವಾಗ ಘಟನೆ ಸಂಭವಿಸಿದೆ. ಘಟನೆಯಲ್ಲಿ ಆಂಬ್ಯುಲೆನ್ಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಮೃತರ ಪತ್ನಿ ಲಲಿತಾ ಹಾಗೂ ಇನ್ನೋರ್ವ ಮಹಿಳೆ ಇನ್ನೊಂದು
• ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ವಿಚಾರ • ಮಂಗಳೂರಿನಲ್ಲಿ ಮಳೆ ಅನಾಹುತದ ನಡುವೆ ಹೆಚ್ಚಾದ ಕಡಲ್ಕೊರೆತ • ಮಂಗಳೂರಿನ ಬೈಕಂಪಾಡಿ, ಮೀನಕಳಿಯ ಭಾಗದಲ್ಲಿ ಕಡಲ್ಕೊರೆತ • ಕಡಲ್ಕೊರೆತದ ತೀವ್ರತೆಗೆ ಮೀನುಗಾರರ ಹರಾಜು ಕೇಂದ್ರ ಸಮುದ್ರ ಪಾಲು • ಭಾರೀ ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಹರಾಜು ಕೇಂದ್ರ • ಕಾಂಕ್ರೀಟ್ ರಸ್ತೆಯ ಅಡಿಭಾಗವನ್ನೇ ಕೊಚ್ಚಿಕೊಂಡು ಹೋಗಿರೋ ಅಲೆಗಳು • ಮತ್ತಷ್ಟು ಅಲೆಯ ಅಬ್ಬರ ಹೆಚ್ಚಾದ್ರೆ ಇಡೀ ಕಾಂಕ್ರೀಟ್ ರಸ್ತೆ
ನಾರಾಯಣ ಗುರು ನಿಗಮ ಹಾಗೂ ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭ ನಾರಾಯಣ ಗುರುಗಳ ಪಠ್ಯವನ್ನು ಕೈಬಿಟ್ಟ ವಿಚಾರ ಸೇರಿದಂತೆ ಹಲವಾರು ವಿಷಯಗಳ ಕುರಿತಂತೆ ಬಿಲ್ಲವ ಸಮುದಾಯವನ್ನು ರಾಜ್ಯ ಸರಕಾರ ನಿರ್ಲಕ್ಷಿಸುತ್ತಿದೆ. ಈ ಬಗ್ಗೆ ಸ್ಥಳೀಯ ಸಮುದಾಯದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್ ಅವರನ್ನು ಕೇಳಿದರೆ, ಸಿಎಂ ನಮ್ಮ ಮಾತು ಕೇಳುತ್ತಿಲ್ಲ ಎನ್ನುತ್ತಿದ್ದಾರೆ. ಹಾಗಿದ್ದರೆ ರಾಜೀನಾಮೆ ಕೊಟ್ಟು ಹೊರಬನ್ನಿ ಎಂದು ಅವರಿಗೆ . ಹೇಳಿದ್ದೇನೆ ಆದರೆ ಸ್ಪಂದನೆ
ಮಂಗಳೂರು ವಕೀಲರ ಸಂಘದ ವತಿಯಿಂದ ಮುಂಬರುವ ನ್ಯಾಯಾದೀಶರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಬಾವೀ ತಯಾರಿ ತರಬೇತಿ ಶಿಬಿರದ ಉದ್ಘಾಟನೆಯನ್ನು ದ. ಕ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ಶ್ರೀ. ರವೀಂದ್ರ ಎo. ಜೋಶಿ ಯವರು ದಿನಾಂಕ 8.7.2022ರಂದು ಉದ್ಘಾಟಿಸಿದರು. ಯುವ ನ್ಯಾಯವಾದಿಗಳು ಇಂತಹ ಕಾರ್ಯಕ್ರಮಗಳ ಉಪಯೋಗವನ್ನು ಪಡೆದು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ನುಡಿದರು. ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ




























