Home Posts tagged #v4newskarnataka (Page 169)

ಪುತ್ತೂರಿನ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಳದಲ್ಲಿ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ದೇವಸ್ಥಾನ ನಿರ್ಮಾಣವೆಂದರೆ ಇತಿಹಾಸ ಸೃಷ್ಟಿಸಿದಂತೆ. ಈ ಮಹಾಕಾರ್ಯ ಎಲ್ಲರಿಗೂ ಸಿಗುವುದಿಲ್ಲ. ಜೀವನದಲ್ಲಿ ಭಗವಂತ ಕೊಟ್ಟ ಅವಕಾಶದಲ್ಲಿ ಶ್ರದ್ಧೆಯಿಂದ ಭಾಗವಹಿಸಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.ಡಿ.21ರಿಂದ 28 ರವರೆಗೆ ನಡೆಯಲಿರುವ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ

ಒಮಿಕ್ರಾನ್ ಸೋಂಕಿನ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ವಹಿಸಲಿ : ಯು.ಟಿ. ಖಾದರ್

ಹೊಸ ತಳಿಯ ಒಮಿಕ್ರಾನ್ ಸೋಂಕಿನ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಅದನ್ನು ತಡೆಗಟ್ಟಲು ಶೀಘ್ರದಲ್ಲಿ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಮಾಜಿ ಸಚಿವ ಶಾಸಕ ಯು.ಟಿ.ಖಾದರ್ ಒತ್ತಾಯಿಸಿದರು. ಅವರು ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ವೈರಾಣುಗಳು ರೂಪಾಂತರಿಯಾಗಿ ಬದಲಾಗುತ್ತಾ ಇರುತ್ತದೆ. ಅದಕ್ಕೆ ಮುನ್ನೆಚ್ಚರಿಕೆಯಾಗಿ ರಾಜ್ಯ ಸರ್ಕಾರ ಎಲ್ಲಾ ತಯಾರಿಯನ್ನು ಮಾಡಿಕೊಳ್ಳಬೇಕು. ಜನರನ್ನು ಗೊಂದಲ ಸೃಷ್ಠಿಸುವ ಬದಲು

ಪುತ್ತೂರು: ಬನ್ನೂರಿನ ದೈವಸೇವಕಾರ್ಯದ ಮಧ್ಯಸ್ಥ ಭರತ್ ಭಂಡಾರಿ ವಿಧಿವಶ

ಪುತ್ತೂರು: ದೈವ ಸೇವಾಕಾರ್ಯದಲ್ಲಿ ಮಧ್ಯಸ್ಥರಾಗಿ ಸೇವೆ ಮಾಡುತ್ತಿದ್ದ ಬನ್ನೂರು ನಿವಾಸಿ ಭರತ್ ಭಂಡಾರಿ ಅನಾರೋಗ್ಯದಿಂದ ನ.29ರ ನಸುಕಿನ ಜಾವ ದೇರಳಕಟ್ಟೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಯಕ್ಷಗಾನ ಕಲಾವಿದ ಗಂಗಾಧರ ಭಂಡಾರಿಯವರ ಪುತ್ರ ಭರತ್ ಭಂಡಾರಿ ಅವರು ದೈವ ಸೇವಾ ಕಾರ್ಯದಲ್ಲಿ ಮಧ್ಯಸ್ಥರಾಗಿ ತೊಡಗಿಸಿಕೊಂಡು ಎಲ್ಲರಿಗೂ ಚಿರಪರಿಚಿತರಾಗಿದ್ದರು. ಇತ್ತೀಚೆಗೆ ಅವರು ಜಾಂಡೀಸ್ ಖಾಯಿಲೆಗೆ ತುತ್ತಾಗಿ ದೇರಳಕಟ್ಟೆ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಮೃತರು ತಂದೆ

ಶಿರ್ವ ನಡಿಬೆಟ್ಟು ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಂಪನ್ನ

ತುಳುನಾಡಿನ ಐತಿಹಾಸಿಕ ಹಿನ್ನೆಲೆಯಿರುವ 26 ನೇ ವರ್ಷದ ಸುಪ್ರಸಿದ್ಧ ಶಿರ್ವ ನಡಿಬೆಟ್ಟು ಸೂರ್ಯ – ಚಂದ್ರ ಜೋಡುಕರೆ ಕಂಬಳವು ಭಾನುವಾರ ಶಿರ್ವ ನಡಿಬೆಟ್ಟು ಕಂಬಳ ಗದ್ದೆಯಲ್ಲಿ ನೆರವೇರಿತು.ಶಿರ್ವ ನಡಿಬೆಟ್ಟು ಸೂರ್ಯ – ಚಂದ್ರ ಜೋಡುಕರೆ ಸಾಂಪ್ರದಾಯಿಕ ಕಂಬಳೊತ್ಸವವನ್ನು ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಎಲ್ಲೂರು ಗುತ್ತು ಪ್ರಫುಲ್ಲ ಶೆಟ್ಟಿಯವರು ಉದ್ಘಾಟಿಸಿದರು. ಬೆಳಿಗ್ಗೆ ಸಾಂಪ್ರದಾಯಿಕವಾಗಿ ನಡೆದ ಬಂಟ ಕೋಲದ ಬಳಿಕ

ಗ್ರಂಥಾಲಯದಲ್ಲೇ ತ್ಯಾಜ್ಯಗಳ ರಾಶಿ..

ಗ್ರಾಮದಲ್ಲಿ ಸಂಗ್ರಹಿಸಿದ ತ್ಯಾಜ್ಯಗಳನ್ನ ವಿಲೇವಾರಿ ಮಾಡೋ ಬದಲು ಗ್ರಾಮ ಪಂಚಾಯಿತಿನ ಗ್ರಂಥಾಲಯದಲ್ಲಿ ತುಂಬಿಸಿಟ್ಟಿದ್ದಾರೆ.ಇಲ್ಲಿ ಗ್ರಾಮಸ್ಥರು ಪುಸ್ತಕಗಳನ್ನು ದಿನಪತ್ರಿಕೆಗಳನ್ನ ಓದಬೇಕಾದರೆ ಈ ಕಸದ ರಾಶಿಗಳ ಮಧ್ಯೆ ಹಾಕಿರುವ ಟೇಬಲ್ ನಲ್ಲಿ ಮೂಗುಮುಚ್ಚಿಕೊಂಡು ಓದಬೇಕಾದ ಪರಿಸ್ಥಿತಿ ನಿರ್ಮಿಸಿದೆ. ಇದು ಅಂಬಲಪಾಡಿ ಗ್ರಾಮ ಪಂಚಯತ್ ವ್ಯಾಪ್ತಿಯ ಅವ್ಯವಸ್ಥೆ.   ಸ್ವಚ್ಚ ಭಾರತ ಯೋಜನೆಯಡಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡಬೇಕಾದ ಗ್ರಾಮ ಪಂಚಯತ್ ಅಧಿಕಾರಿಗಳು

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಜೈನಮಿಲನ್ ’ಸಂಮಿಲನ್ 2021

ಮೂಡುಬಿದಿರೆ: ಬೆಳ್ಳಿಹಬ್ಬ ಸಂಭ್ರಮದಲ್ಲಿರುವ ಭಾರತೀಯ ಜೈನ್ ಮಿಲನ್ ಮೂಡುಬಿದಿರೆ ಹಾಗೂ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಜಂಟಿ ಆಶ್ರಯದಲ್ಲಿ ’ಸಂಮಿಲನ್ ‘2021’ಕ್ರೀಡಾಕೂಟವು ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಕ್ಯಾಂಪಸ್‌ನಲ್ಲಿ ನಡೆಯಿತು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ವೀರಸಾಗರ ಸಭಾಂಗಣದಲ್ಲಿ ಸಂಮಿಲನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜೈನ ಸಮುದಾಯದವರು ಇಂದು ಸುಶಿಕ್ಷಿತರಾಗಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಶಿಕ್ಷಣ,

ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಎಕ್ಸಿಕ್ಯೂಟಿವ್ ಎಂಜಿನಿಯರ್ ಮನೆಗೆ ಎಸಿಬಿ ದಾಳಿ || KS Linge gowda

ಬೆಂಗಳೂರು, ನ.24: ಮಂಗಳೂರು ಸ್ಮಾರ್ಟ್ ಸಿಟಿ ಎಕ್ಸಿಕ್ಯುಟಿವ್ ಇಂಜಿನಿಯರ್ ಕೆ.ಎಸ್.ಲಿಂಗೇಗೌಡ ಸೇರಿದಂತೆ ರಾಜ್ಯದ 15 ಕಡೆಗಳಲ್ಲಿ ಏಕಕಾಲದಲ್ಲಿ ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳಿಗೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು ಕಡತ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಎಕ್ಸಿಕ್ಯೂಟಿವ್ ಎಂಜಿನಿಯರ್ ಕೆ.ಎಸ್ ಲಿಂಗೇಗೌಡ, ಮಂಡ್ಯ ಹೆಚ್.ಎಲ್.ಬಿ.ಸಿ ಎಕ್ಸಿಕ್ಯೂಟಿವ್ ಎಂಜಿನಿಯರ್ ಶ್ರೀನಿವಾಸ್ ಕೆ, ದೊಡ್ಡಬಳ್ಳಾಪುರ

ಸಂಸ್ಕಾರ ಭಾರತೀ ಆಶ್ರಯದಲ್ಲಿ ಕ್ರಾಂತಿಸೂರ್ಯ ಭಗತ್ ಸಿಂಹ ಯಕ್ಷಗಾನ

ಭಾರತದ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಪ್ರಯುಕ್ತ ಕಲೆ ಮತ್ತು ಸಾಹಿತ್ಯಕ್ಕಾಗಿ ಸಮರ್ಪಿತವಾದ ರಾಷ್ಟ್ರೀಯ ಸಂಘಟನೆಯಾದ ಮಂಗಳೂರು ಸಂಸ್ಕಾರ ಭಾರತೀಯ ಆಶ್ರಯದಲ್ಲಿ ನವೆಂಬರ್ 28 ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಪ್ರಸಿದ್ಧ ಭಾಗವತರಾದ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಕ್ರಾಂತಿಸೂರ್ಯ ಭಗತ ಸಿಂಹ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಪುರುಷೋತ್ತಮ ಕೆ. ಭಂಡಾರಿ ಅಡ್ಯಾರು ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ

ಖಾಸಗಿ ಟಿವಿ ವರದಿಗಾರನ ಮೇಲೆ ಹಲ್ಲೆ ಪ್ರಕರಣ : ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಖಾಸಗಿ ಟಿವಿ ವರದಿಗಾರನ ಮೇಲೆ ಹಲ್ಲೆ ನಡೆದಿದ್ದು ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಸರಕಾರ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಇನ್ನು ಮುಂದೆ ಇಂತಹ ಘಟನೆಗಳು ನಡೆದಲ್ಲಿ ಅದಕ್ಕೆ ಸರಕಾರವೇ ಹೊಣೆ ಹೊರಬೇಕು ಎಂಬುದು ನಮ್ಮ ಆಗ್ರಹ ಎಂದು ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್ ಕುಮಾರ್ ನಾಳ ಮತ್ತು ಸದಸ್ಯರು ಮಾನ್ಯ ಮುಖ್ಯ ಮಂತ್ರಿಗಳಿಗೆ

ಎಸ್‌ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ವಿಧಾನ ಪರಿಷತ್ ಕ್ಷೇತ್ರಕ್ಕೆ ಡಿಸೆಂಬರ್ 10 ರಂದು ನಡೆಯುವ ಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಎಸ್ ಡಿಪಿಐ ಪಕ್ಷದ ಅಭ್ಯರ್ಥಿಯಾಗಿ ರಾಜ್ಯ ಕಾರ್ಯದರ್ಶಿ, ಯುವ ನಾಯಕ ಶಾಫಿ ಬೆಳ್ಳಾರೆಯವರು ಇಂದು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳಲ್ಲಿ ಇರುವಂತಹ ಸಮಸ್ಯೆ ಪರಿಹಾರವೇ ನನ್ನ ಗುರಿ ಎಂದು ಹೇಳಿದರು.