Home Posts tagged #v4newskarnataka (Page 172)

ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು : ಯು.ಟಿ. ಖಾದರ್ 

ಮಂಗಳೂರಿನ ಸುರತ್ಕಲ್‌ನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಆಗ್ರಹಿಸಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರೋಪಿಗಳಿಗೆ ಜಾಮೀನು ನೀಡಿದ ಹಿಂದೆ ಯಾರಿದ್ದಾರೆ..?

ಕಾಂಗ್ರೆಸ್‌ನಿಂದಾಗಿ ಬಿಜೆಪಿಯವರು ರಾಜ್ಯಭಾರ ಮಾಡುತ್ತಿದ್ದಾರೆ : ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ 

ಕಾಂಗ್ರೆಸ್‌ನಿಂದಾಗಿ ಸಿಟಿ ರವಿ ಸಹಿತ ಬಿಜೆಪಿಯವರು ರಾಜ್ಯಭಾರ ಮಾಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ದೇಗುಲ ಧ್ವಂಸ ಮಾಡಿದ್ದು ತಾಲಿಬಾನ್ ಕೃತ್ಯ, ಇದು ಸಂವಿಧಾನ ವಿರೋಧಿ ಅಂದರು. ದೇವರ ಹೆಸರಿನಲ್ಲಿ ರಾಜಕೀಯ ಮಾಡಿ ಆಡಳಿತಕ್ಕೇರಿದ್ದು ಬಿಜೆಪಿ. ಕಾಂಗ್ರೆಸ್ ಆಡಳಿತದಲ್ಲಿ ಇಂತಹ ಘಟನೆಗಳು ನಡೆದಿಲ್ಲ. ಸಾವಿನ

ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಂವಾದ ಕಾರ್ಯಕ್ರಮ

ಮಂಗಳೂರು ನಗರ ಪೊಲೀಸ್ ವತಿಯಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸಂವಾದ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಮಂಗಳೂರಿನ ಎಸ್.ಸಿ.ಡಿ.ಸಿಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಗರ ಪೊಲೀಸ್ ವತಿಯಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸಂವಾದ ಕಾರ್ಯಕ್ರಮವನ್ನ ನಡೆಸಲಾಯ್ತು. ಇನ್ನು ಕಾರ್ಯಕ್ರಮವನ್ನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು

ಕಡಬ ಠಾಣೆಯ ಪೋಲಿಸ್ ಸಿಬ್ಬಂದಿ ಶಿವರಾಜ್ ವಿರುದ್ಧ ಅತ್ಯಾಚಾರ ಆರೋಪ : ಕಡಬ ಠಾಣೆಗೆ ಮತ್ತು ನೀತಿ ತಂಡದಿಂದ ಮುಖ್ಯ ಮಂತ್ರಿಗಳಿಗೆ ದೂರು

ಕಡಬ :  ಈ ಹಿಂದೆ ನಡೆದ ಪ್ರಕರಣವೊಂದರಲ್ಲಿ ಸಂತ್ರಸ್ಥೆಯಾಗಿದ್ದ ಅಪ್ರಾಪ್ತೆ ಯುವತಿಯನ್ನು ತನ್ನಕಾಮದಾಟಕ್ಕೆ ಬಳಸಿಕೊಂಡಿದ್ದ ಕಡಬ ಠಾಣೆಯ ಪೋಲಿಸ್ ಸಿಬ್ಬಂದಿ ಶಿವರಾಜ್ ವಿರುದ್ದ ಕೊನೆಗೂ ದೂರು ನೀಡಲಾಗಿದೆ, ಯುವತಿಯೇ ತಂದೆ ದೂರು ನೀಡಿದ್ದು ತನ್ನ ಮಗಳನ್ನು ಬಲತ್ಕಾರ ಮಾಡಿ ಅತ್ಯಾಚಾರ ಎಸಗಿ ಇದೀಗ ಗರ್ಭವತಿಯಾಗಲು ಕಾರಣನಾಗಿದ್ದು, ಗರ್ಭಪಾತ ನಡೆಸುವ ಸಲುವಾಗಿ ಯುವತಿಯನ್ನು ಮಂಗಳೂರಿನಲ್ಲಿ ಅಜ್ಞಾತ ಸ್ಥಳದಲ್ಲಿರಿಸಿದ್ದಾನೆ, ಅಲ್ಲದೆ ಗರ್ಭಪಾತ ನಡೆಸಲು ಹಣವನ್ನು ಕೂಡ

ಕೇಂದ್ರದ ರೈತ ವಿರೋಧಿ ಮತ್ತು ಕಾರ್ಮಿಕ ವಿರೋಧಿ ನೀತಿಗೆ ಖಂಡನೆ: ಕುಂದಾಪುರದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಕುಂದಾಪುರ: ಕೊರೋನಾ ಮಹಾಮಾರಿಯಿಂದಾಗಿ ದೇಶದ ಆರ್ಥಿಕ ವ್ಯವಸ್ಥೆಯೇ ಸಂಪೂರ್ಣ ಹದಗೆಟ್ಟು ಹೋಗಿದೆ. ರೈತರು, ಕೂಲಿ ಕಾರ್ಮಿಕರು, ಜನಸಾಮಾನ್ಯರು ಪರದಾಟ ನಡೆಸುತ್ತಿರುವ ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಕೇಂದ್ರ ಸರ್ಕಾರ ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿ ತರುವ ಮೂಲಕ ರೈತರನ್ನು, ಕಾರ್ಮಿಕರನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡುತ್ತಿದೆ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಕೆ.ಶಂಕರ್ ಆರೋಪಿಸಿದರು. ಅವರು ಕೃಷಿ ಕಾಯ್ದೆ, ವಿದ್ಯುತ್ ಮಸೂದೆ, ಕಾರ್ಮಿಕರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸೆಲ್ಕೊ ಫೌಂಡೇಶನ್ ಸಹಯೋಗದೊಂದಿಗೆ ಶುದ್ಧ ಗಂಗಾ ಘಟಕಗಳಿಗೆ ಸೋಲಾರ್ ಇನ್ವರ್ಟರ್ ಅಳವಡಿಕೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸೆಲ್ಕೊ ಫೌಂಡೇಶನ್ ಸಹಯೋಗದೊಂದಿಗೆ ಶುದ್ಧ ಗಂಗಾ ಘಟಕಗಳಿಗೆ ಸೋಲಾರ್ ಇನ್ವರ್ಟರ್ ಅಳವಡಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸೆಲ್ಕೋ ಪೌಂಡೇಶನ್ ಸಿ ಇ ಒ ರವಾರಾದ ಡಾ. ಹರೀಶ್ ಹಂದೆ ತಿಳಿಸಿದರು. ಅವರು ಧರ್ಮಸ್ಥಳದಲ್ಲಿ ಮಾತನಾಡಿ ರಾಜ್ಯದಾದ್ಯಂತ ಕಡು ಬಡವರಿಗೆ ಅತೀ ಕಡಿಮೆ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರನ್ನು ಒದಗಿಸುತ್ತಿರುವ ಯೋಜನೆಯ ಈ ಮಹತ್ವಾಕಾಂಕ್ಷೆ ಕಾರ್ಯಕ್ರಮವನ್ನು ಗಮನಿಸಿ ಸೇಲ್ಕೊ

ವೆಲ್ಫೇರ್ ಅಸೋಸಿಯೇಷನ್ ರಾಣಿಪುರ ಸಂಘಟನೆ ಉದ್ಘಾಟನೆ

ಉಳ್ಳಾಲ: ವೆಲ್ಫೇರ್ ಅಸೋಸಿಯೇಷನ್ ರಾಣಿಪುರ ಇದರ ಉದ್ಘಾಟನಾ ಸಮಾರಂಭ ಮುನ್ನೂರು ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ನಡೆಯಿತು. ರಾಣಿಪುರ ಮೇರಿ ಚರ್ಚ್‌ನ ಧರ್ಮಗುರು ಜಯಪ್ರಕಾಶ್ ಡಿಸೋಜ ದೀಪ ಬೆಳಗಿಸಿ ವೆಲ್ಫೇರ್ ಅಸೋಸಿಯೇಷನ್ ರಾಣಿಪುರ ಸಂಸ್ಥೆಗೆ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು ಸೇವೆಯ ಮೂಲಕ ಸಮಾಜದ ಅಭ್ಯುದಯಕ್ಕೆ ಒಂದು ಸಂಘಟನೆ. ಸೇವೆಯ ಆರಂಭದದಿಂದಲೇ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡು ಸಮಾಜದ ಅವಕಾಶಗಳನ್ನು ಪೂರೈಸಲು ಸಂಘಟನೆ ಶ್ರಮಿಸಲಿ ಎಂದು

ನಂತೂರಿನ ಡಾ. ಎನ್‌ಎಸ್‌ಎಎಮ್ ಪಿಯು ಕಾಲೇಜಿನಲ್ಲಿ ಸಿಎ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನೆ

ಮಂಗಳೂರಿನ ನಂತೂರಿನಲ್ಲಿರುವ ಡಾ. ಎನ್‌ಎಸ್‌ಎಎಮ್ ಪಿಯು ಕಾಲೇಜಿನ ಕಾಮರ್ಸ್ ಅಸೋಸಿಯೇಶನ್ ವತಿಯಿಂದ ಸಿಎ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ದೇರಳಕಟ್ಟೆ ನಿಟ್ಟೆ ಯುನಿವರ್ಸಿಟಿಯ ಪ್ರೊ ವಯ್ಸ್ ಚಾನ್ಸಲರ್ ಡಾ. ಎಮ್.ಎಸ್. ಮೂಡಿತ್ತಾಯ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಬಳಿಕ ಮಾತನಾಡಿದ ಅವರು, ನಂತರ ಮಾತನಾಡಿದ ಅವರು, ಆನಂತರ ಕೆ.ವಿ. ಅಕಾಡೆಮಿ ಮಂಗಳೂರಿನ ಸಿ.ಎ ಕಿರಣ್ ವಸಂತ್ ಅವರು

ಮಂಗಳೂರಿಗೆ ಪ್ರವಾಸಿಗರ ದಂಡು ಆಗಮನ

ಕೊರೊನಾದ ಮೊದಲ ಮತ್ತು ಎರಡನೇ ಅಲೆಗಳ ಸಮಯದಲ್ಲಿ ಸ್ಥಗಿತಗೊಂಡಿದ್ದ ಪ್ರವಾಸೋದ್ಯಮಕ್ಕೆ ಇದೀಗ ಖಾಸಗಿ ವಿಮಾನಗಳ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ರವಿವಾರದಂದು ಪುಣೆಯಲ್ಲಿರುವ13 ಮಂದಿಯನ್ನು ಹೊಂದಿರುವ ಕುಟುಂಬವೊಂದು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿ ಜಿಲ್ಲೆಯ ವಿವಿಧ ಪ್ರವಾಸೋದ್ಯಮ ತಾಣಗಳಿಗೆ ಭೇಟಿ ನೀಡಿದ್ದಾರೆ. ಜೆಟ್ ಬಂದಿಳಿದಿದ್ದು, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಪ್ರವಾಸಿಗರನ್ನು ಸ್ವಾಗತಿಸಿದರು.

ಮಂಗಳೂರಲ್ಲಿ ಮಹಿಳೆಯ ಚಿನ್ನದ ಸರ ಎಳೆದು ದುಷ್ಕರ್ಮಿ ಪರಾರಿ

ಮಂಗಳೂರಿನ ಯೆಯ್ಯಾಡಿಯ ಬಾರೆಬೈಲ್‌ನಲ್ಲಿ ನಡೆದು ಹೋಗುತ್ತಿದ್ದ ವಿ೪ನ್ಯೂಸ್‌ನ ಪತ್ರಕರ್ತೆ ಕಾವ್ಯ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ದುಷ್ಕರ್ಮಿಯೋರ್ವ ಎಳೆದು ಪರಾರಿಯಾದ ಘಟನೆ ನಡೆದಿದೆ. ಶುಕ್ರವಾರ ರಾತ್ರಿ ವೇಳೆ ಕಚೇರಿಯಿಂದ ಮನೆಗೆ ತೆರಳುವಾಗ ಈ ಘಟನೆ ಸಂಭವಿಸಿದೆ. ದುಷ್ಕರ್ಮಿಯೋರ್ವ ಬೈಕ್‌ನಲ್ಲಿ ಆಗಮಿಸಿ, ಆಕೆಯ ಕುತ್ತಿಯಲ್ಲಿದ್ದ ಚಿನ್ನದ ಸರವನ್ನ ದೋಚಿ ಪರಾರಿಯಾಗಿದ್ದಾನೆ. ಸರವನ್ನು ಎಳೆಯುವ ಸಂದರ್ಭದಲ್ಲಿ ರಸ್ತೆಗೆ ಉರುಳಿ ಬಿದ್ದು