Home Posts tagged #v4newskarnataka (Page 176)

ರಾಷ್ಟ್ರಭಕ್ತ ನಾಗರಿಕ ವೇದಿಕೆ ಸುರತ್ಕಲ್‍ನಿಂದ ಜು.26ರಂದು ಕಾರ್ಗಿಲ್ ವಿಜಯೋತ್ಸವ

ರಾಷ್ಟ್ರಭಕ್ತ ನಾಗರಿಕ ವೇದಿಕೆ ಸುರತ್ಕಲ್ ವತಿಯಿಂದ ಜುಲೈ 26ರಂದು ಕಾರ್ಗಿಲ್ ವಿಜಯೋತ್ಸವವನ್ನು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ ಹೇಳಿದರು. ಅವರು ಸುರತ್ಕಲ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಇಡ್ಯಾ ಶ್ರೀ ಮಹಾಲಿಂಗೇಶ್ವರದ ದೇವಸ್ಥಾನದ ಪ್ರಧಾನ ಅರ್ಚಕರು ಮತ್ತು

ಕ್ಯಾಂಪ್ಕೋದಿಂದ ಹಲಸಿನ ಹಣ್ಣಿನ ಚಾಕಲೇಟ್

ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಇದೀಗ ಹಲಸಿನ ಹಣ್ಣು ಬಳಸಿ ಚಾಕಲೇಟ್ ಉತ್ಪಾದಿಸುವ ಹೊಸ ಪ್ರಯತ್ನಕ್ಕೆ ಕೈಹಾಕಿದೆ. ಜಾಕ್‍ಪ್ರಟ್ ಎಕ್ಲೇರ್ಸ್ ಹೆಸರಿನಲ್ಲಿ ಈ ಚಾಕಲೇಟ್ ಮಾರುಕಟ್ಟೆಗೆ ಪ್ರವೇಶಿಸುತ್ತಿದ್ದು, ಹಣ್ಣಿನಿಂದ ತಯಾರಿಸಿದ ಚಾಕಲೇಟ್ ಉತ್ಪನ್ನ ಭಾರತದಲ್ಲಿ ಇದೇ ಮೊದಲ ಬಾರಿಗೆ ಮಾರುಕಟ್ಟೆಗೆ ಹೊರಬರುತ್ತಿದ್ದು, ಈ ಸಾಧನೆ ತೋರಿದ ಭಾರತದ ಮೊದಲ ಸಂಸ್ಥೆಯೆಂದೂ ಕ್ಯಾಂಪ್ಕೋ ಗುರುತಿಸಿಕೊಂಡಿದೆ.

ರಾಜ್ಯದಲ್ಲಿ ಒಳ್ಳೆಯ ಸರ್ಕಾರ ಕೊಡುವುದಕ್ಕೆ ಆಗಿಲ್ಲ: ಡಿ.ಕೆ. ಶಿವಕುಮಾರ್

ಮಂಗಳೂರು: ಈ ರಾಜ್ಯದಲ್ಲಿ ಒಳ್ಳೆ ಸರ್ಕಾರ ಕೊಡುವುದಕ್ಕೆ ಆಗಿಲ್ಲ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ಮಾಡುತ್ತಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಇದ್ರು ಒಳ್ಳೆ ಆಡಳಿತ ಕೊಡಲು ಆಗಿಲ್ಲ. ಈ ಸರ್ಕಾರಕ್ಕೆ ಗೌರವ ಎಲ್ಲಿದೆ. ಅವರಲ್ಲಿ ಎಷ್ಟೇ ಮುಖ್ಯಮಂತ್ರಿ ಚೇಂಜ್ ಆದ್ರು ಅವರ ಪಕ್ಷದ ಬಗ್ಗೆ ಮಾತಾಡಲ್ಲ ಎಂದು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಂಗಳೂರಿನಲ್ಲಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದರು. ಯಾವ ಅಧಿಕಾರಿಗಳು ಅವರ ಮಾತು

ಉಡುಪಿಯ ಪೆರ್ಣಂಕಿಲದಲ್ಲಿ ಬೋನಿಗೆ ಬಿದ್ದ ಚಿರತೆ

ಪೆರ್ಣಂಕಿಲದಲ್ಲಿ ಗ್ರಾಮಸ್ಥರನ್ನು ಬಹು ದಿನಗಳಿಂದ ಕಾಡುತ್ತಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಗ್ರಾಮದಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಚಿರತೆ ಕಳೆದ ರಾತ್ರಿ ಪೆರ್ಣಂಕಿಲದ ಗುಂಡುಪಾದೆ ಎಂಬಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದಿದೆ. ಚಿರತೆಯನ್ನು ಸೆರೆ ಹಿಡಿಯಲು ಗುಂಡುಪಾದೆಯ ಅಶೋಕ್ ನಾಯಕ್ ಎಂಬವರ ತೋಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇರಿಸಿದ್ದರು. ಕಳೆದ ರಾತ್ರಿ ಚಿರತೆ ಇದರೊಳಗೆ ಸೆರೆಯಾಗಿದೆ. ಇಂದು ಬೆಳಗ್ಗೆ

ಖಾಲಿಯಾಗುವ ಸಿಎಂ ಹುದ್ದೆಗೆ ದಲಿತ ನಾಯಕನನ್ನು ಆಯ್ಕೆ ಮಾಡಲಿ: ಸಿದ್ದರಾಮಯ್ಯ

ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿದೆ. ಬಿ.ಎಸ್.ಯಡಿಯೂರಪ್ಪ ಶೀಘ್ರ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಬಿಜೆಪಿಯಲ್ಲಿ ಖಾಲಿಯಾಗುವ ಸಿಎಂ ಹುದ್ದೆಗೆ ದಲಿತ ನಾಯಕನನ್ನು ಆಯ್ಕೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಸವಾಲು ಹಾಕಿದ್ದಾರೆ. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲು ಇತ್ತೀಚೆಗೆ ಕಾಂಗ್ರೆಸ್ ದಲಿತ ಸಿಎಂ ಅಭ್ಯರ್ಥಿಯನ್ನು

ಶಾಲಾ ಮಕ್ಕಳಿಗೆ ವಿತರಿಸಲಾದ ಅಡುಗೆ ಎಣ್ಣೆ ಮಾರಾಟ ಆರೋಪ: ಬೈಂದೂರು ತಹಶೀಲ್ದಾರ್ ಸ್ಥಳಕ್ಕೆ ಭೇಟಿ, ಪರಿಶೀಲನೆ

ಕುಂದಾಪುರ: ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಶಾಲಾ ಮಕ್ಕಳಿಗೆ ವಿತರಿಸಲಾದ ಅಡುಗೆ ಎಣ್ಣೆ ಅಂಗಡಿಯೊಂದರಲ್ಲಿ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದ ಹಿನ್ನೆಲೆ ಬೈಂದೂರು ತಹಸೀಲ್ದಾರ್ ಶೋಭಾಲಕ್ಷ್ಮೀ ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಲಾಕ್ ಡೌನ್ ಹಿನ್ನೆಲೆ ಶಾಲಾ ಮಕ್ಕಳಿಗೆ ವಿತರಿಸುವ ಅಡುಗೆ ಎಣ್ಣೆ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತೆಗ್ಗರ್ಸೆ ಅಂಗಡಿಯೊಂದರಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಗ್ರಾಹಕರೋರ್ವರು

ನರಗುಂದ ನವಲಗುಂದ ರೈತ ಬಂಡಾಯದ ಸ್ಮರಣೆ : ರೈತ ಸಮಾವೇಶ

ನರಗುಂದ ನವಲಗುಂದ ರೈತ ಬಂಡಾಯದ 41 ನೇ ವರ್ಷಾಚರಣೆ ಹಾಗೂ ರೈತ ಹುತಾತ್ಮರ ದಿನಾಚಣೆ ಹಾಗೂ ರೈತ ಸಮಾವೇಶ ಗದಗ ಜಿಲ್ಲೆಯ ನರಗುಂದದಲ್ಲಿ ನಡೆಯಿತು. ಇಲ್ಲಿನ ರೈತ ಸಂಪರ್ಕ ಕೇಂದ್ರದ ಸಮೀಪ , ರೈತ ನಾಯಕ ದಿವಂಗತ ಬಾಬಾ ಗೌಡ ಪಾಟೀಲ್ ವೇದಿಕೆಯಲ್ಲಿ ಸಮಾವೇಶ ನಡೆಯಿತು. ಸಮಾವೇಶಕ್ಕಿಂತ ಮೊದಲು ಹುತಾತ್ಮ ರೈತ ಹೋರಾಟಗಾರರ ಪ್ರತಿಮೆಗೆ ರೈತ ಮುಖಂಡರು ಗೌರವ ಸಲ್ಲಿಸಿದರು. ಬಳಿಕ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ರೈತ ಸಮಾವೇಶ ನಡೆಯಿತು. ಸಮಾವೇಶದಲ್ಲಿ ದಿಲ್ಲಿ ರೈತ ಹೋರಾಟದ

ಚೀನಾದಲ್ಲಿ ಧಾರಕಾರ ಮಳೆ: 12 ಮಂದಿ ಸಾವು, ಒಂದು ಲಕ್ಷಕ್ಕೂ ಹೆಚ್ಚು ಮಂದಿಯ ಸ್ಥಳಾಂತರ

ಚೀನಾದಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದ ಇದುವರೆಗೂ 12 ಮಂದಿ ಸಾವನ್ನಪ್ಪಿದ್ದು, ಒಂದು ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಹೆನ್ನಾನ್ ಪ್ರಾಂತ್ಯದ ಝೆಂಗ್ಜು ಪ್ರದೇಶದಲ್ಲಿ ಕೇವಲ ಒಂದು ಗಂಟೆಯ ಅವಧಿಯಲ್ಲಿ 201.9 ಮಿ,ಮೀ ಮಳೆಯಾಗಿದೆ. ಝೆಂಗ್ಜು ಪ್ರದೇಶದ ತಗ್ಗುಪ್ರದೇಶಗಳಿಗೆ ನೀರು ಹರಿಯುತ್ತಿದ್ದು, ನೂರಾರು ಮನೆ ಮಠಗಳು ನಾಶವಾಗಿವೆ. ಇದುವರೆಗೂ 12 ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದು, ಮುಂಜಾಗೃತಾ

ವಿಶಾಲ ಗಾಣಿಗ ಕೊಲೆಗೆ ದುಬೈನಲ್ಲಿ ಸ್ಕೆಚ್:ಹಣದ ಪಾರ್ಸೆಲ್ ಕಳುಹಿಸಿ ಕೊಲೆ ಮಾಡಿಸಿದ ಪತಿ

ಉಡುಪಿ : ಕರಾವಳಿಯನ್ನೇ ಬೆಚ್ಚಿಬೀಳಿಸಿದ್ದ ವಿಶಾಲ ಗಾಣಿಗ ಕೊಲೆ ಪ್ರಕರಣವನ್ನು ಒಂದೇ ವಾರದಲ್ಲಿ ಬೇಧಿಸುವಲ್ಲಿ ಉಡುಪಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಪತ್ನಿಯ ಜೊತೆಯಲ್ಲಿದ್ದಾಗಲೇ ಪತಿ ರಾಮಕೃಷ್ಣ ವಿಶಾಲ ಗಾಣಿಗ ಹತ್ಯೆಗೆ ಸುಫಾರಿ ಕೊಟ್ಟಿದ್ದ. ಅಲ್ಲದೇ ಮನೆಗೆ ಹಣದ ಪಾರ್ಸೆಲ್ ಕಳುಹಿಸಿ ಪತ್ನಿಯನ್ನು ಕೊಂದು ಮುಗಿಸಿದ್ದಾನೆ. ಉಡುಪಿ ಜಿಲ್ಲೆಯ ಉಪ್ಪಿನಕೋಟೆಯಲ್ಲಿರುವ ಅಪಾರ್ಟ್‍ಮೆಂಟ್ ನಲ್ಲಿ ಜುಲೈ 12ರಂದು ಕೊಲೆಯಾಗಿದ್ದ ವಿಶಾಲ ಗಾಣಿಗ ಕೊಲೆಯನ್ನು ಪತಿಯೇ