Home Posts tagged #v4newskarnataka (Page 178)

ಇನ್ಸಿಪಿಯೆನ್ಸ್ ಕಿರುಚಿತ್ರದ ಟೀಸರ್ ಬಿಡುಗಡೆ

ಇನ್ಸಿಪಿಯೆನ್ಸ್ ಎಂಬ ಕಿರು ಚಿತ್ರದ ಟೀಸರ್‌ವು ಇಂದು ಹೈಆನ್‌ಫಿಲ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಲಿದೆ. ಇನ್ಸಿಪಿಯೆನ್ಸ್ ಕಿರು ಚಿತ್ರದಲ್ಲಿ ಹಿರಿಯ ನಟ ಲಕ್ಷ್ಮಣ್ ಮಲ್ಲೂರು, ಸಾಗರ್ ರೈ ನಟಿಸಿದ್ದು, ಪ್ರಿತೇಶ್ ಕುಮಾರ್ ನಿರ್ದೇಶಿಸಿದ್ದಾರೆ. ಸಿನೆಮಾದ ಸಿನಿಮೊಟಾಗ್ರಫಿ ಹಾಗೂ ಸಂಕಲನವನ್ನು ಅನುಶ್ಚಂದ್ರ ಯು. ಮಾಡಿರುತ್ತಾರೆ. ಪ್ರಸಾದ್ ಕೆ. ಶೆಟ್ಟಿ

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ನ್ಯೂಟ್ರೀಲೈಟ್ ಕಾರ್ಯಕ್ರಮ

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ಮಕ್ಕಳಲ್ಲಿ ಆರೋಗ್ಯ ಮತ್ತು ಪೋಷಕಾಂಶಯುಕ್ತ ಆಹಾರದ ಬಗ್ಗೆ ಅರಿವು ನೀಡುವ ಉದ್ದೇಶದಿಂದ ಜೂನ್ ತಿಂಗಳಲ್ಲಿ ನ್ಯೂಟ್ರೀಲೈಟ್ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರಗಿತು. ಈ ಪ್ರಯುಕ್ತ ಆಯೋಜಿಸಿರುವ ವಿವಿಧ ಪ್ರಾಯೋಗಿಕ ಚಟುವಟಿಕೆಗಳಲ್ಲಿ ಮಕ್ಕಳು ಅತ್ಯುತ್ಸಾಹದಿಂದ ಭಾಗವಹಿಸಿದರು. ಚಟುವಟಿಕೆಗಳಲ್ಲಿ ಭಾಗವಹಿಸಿದ ಮಕ್ಕಳ ಪ್ರಾತ್ಯಕ್ಷಿಕೆಗಳ ವಿಡಿಯೋವನ್ನು ಬಿಡುಗಡೆ ಮಾಡುವ ಮೂಲಕ ನ್ಯೂಟ್ರಿಲೈಟ್ 2021 ಸಮಾಪನಗೊಂಡಿತು. ಸಂಸ್ಥೆಯ

ನಿಡ್ಡೋಡಿಯಲ್ಲಿ ಸೀಫುಡ್ ಪಾರ್ಕ್ ನಿರ್ಮಾಣ ಕೈಬಿಡುವಂತೆ ಐವನ್ ಡಿಸೋಜಾ ಒತ್ತಾಯ

ಮೂಡುಬಿದಿರೆ: ಕೃಷಿ ಪ್ರಧಾನವಾದ ನಿಡ್ಡೋಡಿ ಪ್ರದೇಶದಲ್ಲಿ ಸೀಫುಡ್ ಪಾರ್ಕ್ ನಿರ್ಮಾಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರವು ರೈತರ ಹಿತದೃಷ್ಟಿಯನ್ನು ಮರೆತಿದೆ. ಪಾರ್ಕ್ ನಿರ್ಮಾಣದಿಂದಾಗಿ ಕೃಷಿ ಭೂಮಿ ಸಂಪೂರ್ಣ ಹಾನಿಯಾಗಲಿದೆ. ಪರಿಸರ ಕೆಡಿಸಿ ಅಭಿವೃದ್ಧಿ ನಡೆಸುವ ಬದಲು, ಪರಿಸರಕ್ಕೆ ಪೂರಕ ಅಭಿವೃದ್ಧಿ ನಡೆಸಬೇಕು. ನಿಡ್ಡೋಡಿಯಲ್ಲಿ ಸೀಫುಡ್ ಕಾರ್ಖಾನೆಯನ್ನು ಕೈಬಿಡುವಂತೆ ಸರ್ಕಾರಕ್ಕೆ ಪತ್ರ ಬರೆಯಲಿದ್ದು, ಉಸ್ತುವಾರಿ ಸಚಿವರಿಗೆ ಈ ಬಗ್ಗೆ ಒತ್ತಾಯಿಸುತ್ತೇನೆ ಎಂದು

ಕೋಳಿ ಮೊಟ್ಟೆಗೆ ಹೆಚ್ಚಿದ ಬೇಡಿಕೆ: ಮೊಟ್ಟೆ ದರದಲ್ಲೂ ಏರಿಕೆ

ಕೋಳಿ ಮೊಟ್ಟೆಗೆ ಬೇಡಿಕೆ ಹೆಚ್ಚಿದ್ದು, ಸರಬರಾಜಿನಲ್ಲಿ ಕೂಡ ಏರಿಕೆ ಕಂಡಿದೆ. ಮಾರುಕಟ್ಟೆಯಲ್ಲಿ ತಾಜಾ ಮೀನಿನ ಅಭಾವ ಹಾಗೂ ಬೆಲೆಯೂ ಗಗನಕ್ಕೆ ಏರಿರುವುದರಿಂದ ಮೊಟ್ಟೆಗೆ ಡಿಮ್ಯಾಂಡ್ ಸಿಕ್ಕಾಪಟ್ಟೆ ಇದೆ. ಏಪ್ರಿಲ್ ಅಂತ್ಯದಿಂದ ಮೊಟ್ಟೆ ದರದಲ್ಲಿ ಏರಿಕೆ ಕಾಣುತ್ತಿದ್ದು, ಇದೀಗ ಚಿಲ್ಲರೆ ಅಂಗಡಿಯಲ್ಲಿ 5ರೂ. ಇದ್ದ ದರ 6.50 ರಿಂದ 7 ರೂ. ತಲುಪಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಒಟ್ಟಿನಲ್ಲಿ ಲಾಕ್ ಡೌನ್ ಹಾಗೂ ಕಡಲ ಮೀನುಗಾರಿಕೆ ರಜೆಯ ಹಿನ್ನೆಲೆಯಲ್ಲಿ

ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಆಮ್ಲಜನಕ ಕಾನ್ಸಂಟ್ರೇಟರ್, ವಿಟಿಂ ಕಿಟ್ ಹಸ್ತಾಂತರ

ಪುತ್ತೂರು: ಬೆಂಗಳೂರಿನ ಭಟ್ ಬಯೋಟೆಕ್ ಹಾಗೂ ತಾಲೂಕಿನ ಶಾಂತಿಗೋಡು ಗ್ರಾಮದ ನವಚೇತನ ರಿಟೈರ್‌ಮೆಂಟ್ ಟೌನ್‌ಶಿಪ್ ವತಿಯಿಂದ ಇಲ್ಲಿಯ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಐದು ಆಮ್ಲಜನಕ ಕಾನ್ಸಂಟ್ರೇಟರ್ ಹಾಗೂ ಎರಡು ಸಾವಿರ ವಿಟಿಎಂ ಕಿಟ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು.ಸರಳ ಕಾರ್ಯಕ್ರಮದಲ್ಲಿ ಭಟ್ ಬಯೋಟೆಕ್ ಸಂಸ್ಥೆಯ ಡಾ.ಶ್ಯಾಮ್ ಭಟ್ ಶಾಸಕ ಸಂಜೀವ ಮಠಂದೂರು ಅವರಿಗೆ ಆಮ್ಲಜನಕ ಕಾನ್ಸಂಟ್ರೇಟರ್‌ನ್ನು ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಶಾಸಕ ಸಂಜೀವ ಮಠಂದೂರು,

ಪಡುಕೊಣಾಜೆಯಲ್ಲಿ ಚಿರತೆಯಿಂದ ರಕ್ಷಿಸಿಕೊಂಡ ಶ್ವಾನ

ಮೂಡುಬಿದಿರೆ ತಾಲೂಕಿನಲ್ಲಿ ಪಡುಕೊಣಾಜೆಯಲ್ಲಿ ಚಿರತೆಯೊಂದು ಮನೆಯಂಗಳಕ್ಕೆ ಆಗಮಿಸಿ ನಾಯಿಯೊಂದನ್ನು ಹಿಡಿದುಕೊಂಡು ಹೋದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಪಡುಕೊಣಾಜೆಯ ಸತೀಶ್ ಎಂಬವರ ಮನೆಯ ಬಳಿ ರಾತ್ರಿ ಅಡ್ಡಾಡುತ್ತಿದ್ದ ಚಿರತೆ ಮನೆಯಂಗಳದಲ್ಲಿ ಮಲಗಿದ್ದ ನಾಯಿಯನ್ನು ಎತ್ತಿಕೊಂಡು ಹೋಗಿದೆ. ಸ್ಥಳಕ್ಕೆ ಉಪವಲಯಾರಣ್ಯಾಧಿಕಾರಿ ಮಂಜುನಾಥ ಗಾಣಿಗ ಮತ್ತು ಸಿಬ್ಬಂದಿಗಳು ಭೇಟಿ ನೀಡಿದ್ದಾರೆ. ಶಿರ್ತಾಡಿ ಗ್ರಾ. ಪಂಚಾಯತ್ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಜತೆ ಮಾತುಕತೆ

ಬೆಲೆ ಏರಿಕೆಯ ಬಗ್ಗೆ ನೈಜ ಕಾರಣ ಜನತೆಗೆ ತಿಳಿಸಲಿ: ಮಾಜಿ ಸಚಿವ ಯು.ಟಿ. ಖಾದರ್ 

ಪೆಟ್ರೋಲ್ ,ಡೀಸೆಲ್ ಬೆಲೆ ಏರಿಕೆಯ ಬಗ್ಗೆ ನೈಜ ಕಾರಣವನ್ನು ಜನತೆಗೆ ತಿಳಿಸಲು ಬಿಜೆಪಿ ನೇತ್ರತ್ವದ ಕೇಂದ್ರ ಸರಕಾರ ಶ್ವೇತ ಪತ್ರ ಹೊರಡಿಸಲಿ.ಬೆಲೆ ನಿಯಂತ್ರಣಕ್ಕೆ ತಕ್ಷಣ ಸರ್ಕಾರ ಸೂಕ್ತ ಕ್ರಮಕ್ಕೆ ಮುಂದಾಗಲಿ ಎಂದು ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.ಅವರು ಮಂಗಳೂರಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ಇಂಧನದ ಬೆಲೆ ಏರಿಕೆಯ ಹಿಂದಿನ ಯುಪಿಎ ಸರಕಾರ ಪೆಟ್ರೋಲ್ ಕಂಪೆನಿಗಳಿಗೆ

ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪದ್ಮಶ್ರೀ ಪುರಸ್ಕೃತ ದಿ. ಮಿಲ್ಕಾ ಸಿಂಗ್‌ರ ಸ್ಮರಣೆ

ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪದ್ಮಶ್ರೀ ಪುರಸ್ಕೃತ ದಿವಂಗತ ಮಿಲ್ಕಾ ಸಿಂಗ್ ಅವರನ್ನು ಸ್ಮರಣೆ ಮಾಡುವ ಕಾರ್ಯಕ್ರಮವು ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.   ದಿವಂಗತ ಮಿಲ್ಕಾ ಸಿಂಗ್ ಅವರ ಭಾವಚಿತ್ರಕ್ಕೆ ಗಣ್ಯರು ಮಾಲಾರ್ಪಣೆ ಮಾಡಿ ಸಂತಾಪ ಸೂಚಿಸಿದರು. ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಮಾತನಾಡಿ, ಪದ್ಮಶ್ರೀ ಪುರಸ್ಕೃತ ದಿವಂಗತ ಮಿಲ್ಕಾ ಸಿಂಗ್ ಅವರು ಸ್ವಯಂ ಪ್ರಯತ್ನದ ಮೂಲಕ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ಧೀಮಂತ

ಭಟ್ಕಳದ ಜೆ.ಎಮ್.ಎಫ್.ಸಿ ನ್ಯಾಯಾಲಯ ಕಟ್ಟಡ ಅಗ್ನಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಜೆ.ಎಮ್.ಎಫ್.ಸಿ ನ್ಯಾಯಾಲಯ ಕಟ್ಟಡವು ಅಗ್ನಿಗಾಹುತಿಯಾಗಿದ್ದು, ನ್ಯಾಯಾಲಯದಲ್ಲಿದ್ದ ದಾಖಲೆಗಳು ಸಂಪೂರ್ಣ ಸುಟ್ಟು ಹೋಗಿದೆ. ಈ ಅವಘಡ ಬೆಳಿಗ್ಗಿನ ಜಾವಾ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದರು. ತಕ್ಷಣವೇ ಕಾರ್ಯಾಚರಣೆ ನಡೆಸಿ ಕೆಲವು ತಾಸುಗಳ ಸತತ ಪ್ರಯತ್ನದಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿರುವುದಾಗಿ ಅಗ್ನಿಶಾಮಕ ದಳ

ನಿಡ್ಡೋಡಿಯ ಪ್ರಸ್ತಾವಿತ ಸೀಫುಡ್ ಪಾರ್ಕ್‌ನಿಂದ ಪರಿಸರ ಮಾಲಿನ್ಯ ಖಂಡಿತ: ಅಭಯಚಂದ್ರ ಜೈನ್

ಮೂಡುಬಿದಿರೆ : ನಿಡ್ಡೋಡಿಯ ಪ್ರಸ್ತಾವಿತ ಸೀಫುಡ್ ಪಾರ್ಕ್‌ನಿಂದ ಪರಿಸರ ಮಾಲಿನ್ಯ ವ್ಯಾಪಕವಾಗಿ ಹರಡಲಿದೆ. ಜಲ ಸಂಪನ್ಮೂಲ ಕಲುಷಿತವಾಗಿ ಕೃಷಿ ಚಟುವಟಿಕೆಗಳಿಗೆ ಮಾರಕವಾಗಿ ಪರಿಣಮಿಸಲಿದೆ. ಇಂಥ ಯೋಜನೆ ನಿಡ್ಡೋಡಿಗೆ ತಕ್ಕುದಾಗಿಲ್ಲ’ ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಅಭಿಪ್ರಾಯಪಟ್ಟರು. ಮೂಡುಬಿದಿರೆ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ನಿಡ್ಡೋಡಿಗೆ ಸೀಫುಡ್ ಪಾರ್ಕ್ ಬೇಕೆಂಬುವವರು ಕಾರವಾರದಲ್ಲಿ ಹಲವಾರು ವರ್ಷಗಳ ಹಿಂದೆ