ಪುತ್ತೂರು: ಫೆಡರೇಶನ್ ಆಫ್ ಇಂಟರ್‌ನ್ಯಾಶನಲ್ ವಾಲಿಬಾಲ್ ಇವರ ಆಶ್ರಯದಲ್ಲಿ ಆ. 24ರಿಂದ ಸೆ. 2ರವರೆಗೆ ಇರಾನಿನ ತೆಹ್ರಾನ್‌ನಲ್ಲಿ 19 ವರ್ಷ ವಯೋಮಿತಿಯ ಹುಡುಗರ ವರ್ಲ್ಡ್ ವಾಲಿಬಾಲ್ ಚಾಂಪಿಯನ್‌ಶಿಪ್ ನಡೆಯಲಿದೆ. ಇದರಲ್ಲಿ ಭಾಗವಹಿಸುವ ಭಾರತೀಯ ತಂಡವನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಒಡಿಸ್ಸಾದ ಭುವನೇಶ್ವರದ ಕಿಟ್ಟ್ ಯುನಿವರ್ಸಿಟಿಯಲ್ಲಿ ಜುಲೈ 22 ಮತ್ತು 23ರಂದು
ಯಶವಂತಪುರ-ಮಂಗಳೂರು ನಡುವೆ ಹಗಲು ಸಂಚರಿಸುವ ರೈಲಿಗೆ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಗಳು ಸೇರ್ಪಡೆಗೊಂಡು ಸಂಚಾರ ಆರಂಭಿಸಲಿರುವ ಸೇವೆಗೆ ಜುಲೈ 11ರಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ಜಂಕ್ಷನ್ (ಪಡೀಲ್) ರೈಲು ನಿಲ್ದಾಣದಲ್ಲಿ ಚಾಲನೆ ಸಿಗಲಿದೆ.ಮಂಗಳೂರು ಜಂಕ್ಷನ್‌ನಿಂದ ಹೊರಡುವ ಯಶವಂತಪುರ ಮಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲಿನಲ್ಲಿ ಈ ವಿಸ್ಟಾ ಡೋಮ್ ಅಳವಡಿಕೆಯಾಗಲಿದೆ. ಈ ವಿಶೇಷ ಬೋಗಿಯು ಪಶ್ಚಿಮ ಘಟ್ಟದ ನಡುವೆ ಸಂಚರಿಸುವ ಸಂದರ್ಭ
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಉವ೯ ಮಾರುಕಟ್ಟೆಯನ್ನು ಮೂಡದಿಂದ ಪಾಲಿಕೆಗೆ ಹಸ್ತಾಂತರಗೊಳಿಸುವ ಕುರಿತು ಮೇಯರ್ ಪ್ರೇಮಾನಂದ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಾಲಿಕೆಯ ಸಮಿತಿ ಸಭಾಂಗಣದಲ್ಲಿ ಸಭೆ ಕರೆಯಲಾಗಿತ್ತು. ಮೂಡ ಕಛೇರಿಯಿಂದ ಈಗಾಗಲೇ ಉವ೯ ಮಾರುಕಟ್ಟೆಯಲ್ಲಿನ ಮೇಲಿನ ಮಹಡಿಗಳಲ್ಲಿರುವ ಕಛೇರಿ ಉಪಯೋಗಿತ ಕೆಲವೊಂದು ಅಂಗಡಿಗಳನ್ನು ಹರಾಜು ರೂಪದಲ್ಲಿ ನೀಡಲು ಹರಾಜು ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಈ ಹಿಂದೆ ಹಳೇ ಮಾರುಕಟ್ಟೆಯಲ್ಲಿ ವ್ಯಾಪಾರ
ಆರ್‌ಟಿಐ ಕಾರ್ಯಕರ್ತ ವಿನಾಯ ಬಾಳಿಗರವರ ಅಮಾನುಷ ಹತ್ಯೆ ನಡೆದು ಇಂದಿಗೆ 5 ವರುಷಗಳೇ ಸಂದರೂ ನೈಜ ಕೊಲೆ ಆರೋಪಿಗಳಿಗೆ ಇನ್ನೂ ಕೂಡ ಶಿಕ್ಷೆಯಾಗದಿರುವ ಹಿನ್ನೆಲೆಯಲ್ಲಿ ದುಃಖ ತೃಪ್ತ ಬಾಳಿಗಾ ಕುಟುಂಬ ಸದಸ್ಯರು ಮತ್ತು ಜಸ್ಟೀಸ್ ಫಾರ್ ವಿನಾಯಕ ಬಾಳಿಗ ಫೋರಂ, ಕಾನೂನು ಹೋರಾಟಗಾರರು ಸೇರಿಕೊಂಡು ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಅವರಲ್ಲಿ ತಮ್ಮ ಸಂಕಟವನ್ನು ವ್ಯಕ್ತಪಡಿಸಿದರು. ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಸಹಾಯ ಹಸ್ತ ಕಾರ್ಯಕ್ರಮದಲ್ಲಿ
ಬಂಟ್ವಾಳ: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಮೇರಮಜಲು ಗ್ರಾಮ ಪಂಚಾಯತಿ ಆಶ್ರಯದಲ್ಲಿ ಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸುವ ಕಾರ್ಯಕ್ರಮ ಶುಕ್ರವಾರ ಮೇರಮಜಲಿನ ಶ್ರಿ ರಾಜೇಶ್ವರೀ ಸಭಾಂಗಣದಲ್ಲಿ ನಡೆಯಿತು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಕಾರ್ಮಿಕರಿಗೆ ಕಿಟ್ ವಿತರಿಸಿ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರಕಾರ ಕೋವಿಡ್ ಸಂಕಷ್ಟ ಕಾಲದಲ್ಲಿ ಬಡ ಕಾರ್ಮಿಕರಿಗೆ ಆಹಾರದ ಕಿಟ್
ದಕ್ಷಿಣ ಕನ್ನಡ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ರೌಂಡ್ ಟೇಬಲ್ ಇಂಡಿಯಾ ಟ್ರಸ್ಟ್ ಮತ್ತು ಅಸೋಸಿಯೇಶನ್ ಆಫ್ 41 ಕ್ಲಬ್ಸ್ ಆಫ್ ಇಂಡಿಯಾ ವತಿಯಿಂದ ವನ್ ಮೋರ್ ಬ್ರೆತ್ ನೂತನ ಚಾರಿಟೇಬಲ್ ಕೋವಿಡ್ ವಾರ್ಡ್ ಉದ್ಘಾಟನೆಗೊಂಡಿತು. ರೌಂಡ್ ಟೇಬಲ್ ಇಂಡಿಯಾ ಟ್ರಸ್ಟ್ ಮತ್ತು ಅಸೋಸಿಯೇಶನ್ ಆಫ್ 41 ಕ್ಲಬ್ಸ್ ಆಫ್ ಇಂಡಿಯಾದ ವತಿಯಿಂದ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ವನ್ ಮೋರ್ ಬ್ರೆತ್ ನೂತನ ಚಾರಿಟೇಬಲ್ ಕೋವಿಡ್ ವಾರ್ಡ್ ಉದ್ಘಾಟನೆಗೊಂಡಿತು. ಶುಕ್ರವಾರದಂದು
ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಸಾಗರ ಮಾಲಾ ಯೋಜನೆ ಕರ್ನಾಟಕ ಕರಾವಳಿ ಜಿಲ್ಲೆಗಳ ಮೀನುಗಾರ ಸಮುದಾಯದಲ್ಲಿ ಆತಂಕವನ್ನು ಸೃಷ್ಟಿಸುತ್ತಿದೆ. ಮಂಗಳೂರು ಬೆಂಗರೆಯ ಪಲ್ಗುಣಿ ನದಿ ದಂಡೆಯಲ್ಲಿ ಸಾಗರ ಮಾಲಾ ಯೋಜನೆಯಡಿ ದೇಶೀಯ ಹಡಗುಗಳ ನಿಲುಗಡೆಗಾಗಿ ಕೋಸ್ಟಲ್ ಬರ್ತ್ ನೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದೆ. ಇದು ಸ್ಥಳೀಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಗೆ ಬಲವಾದ ಪೆಟ್ಟು ನೀಡುತ್ತದೆ, ದುಡಿಮೆಯ ಅವಕಾಶವನ್ನು ನಾಶಗೊಳಿಸುತ್ತದೆ. ಮೀನುಗಾರರ
ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಜೀವನಾವಶ್ಯಕ ವಸ್ತುಗಳ ವಿಪರೀತ ಬೆಲೆಯೇರಿಕೆಯನ್ನು ಖಂಡಿಸಿ CPIM ನೇತ್ರತ್ವದಲ್ಲಿ ಮಂಗಳೂರು ನಗರದಾದ್ಯಂತ ವಾರಾಚರಣೆ ನಡೆಯತ್ತಿದ್ದು, ಇಂದು ನಗರದ ಹ್ರದಯ ಭಾಗವಾದ ಹಂಪನಕಟ್ಟಾ ಪ್ರದೇಶದಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು.ಬೆಲೆಯೇರಿಕೆಗೆ ಕಾರಣವಾದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ತಪ್ಪು ಆರ್ಥಿಕ ನೀತಿಗಳ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಭರಿತರಾಗಿ ಘೋಷಣೆಗಳನ್ನು ಕೂಗುವ ಮೂಲಕ ಸರಕಾರದ ಕ್ರಮವನ್ನು
ಉಳ್ಳಾಲ: ಎರಡು ಮನೆಗಳಿಗೆ ಬಾಗಿಲು ಮುರಿದು ನುಗ್ಗಿದ ಕಳ್ಳರ ತಂಡ, ಮನೆಯೊಳಗಿದ್ದ ಸೊತ್ತುಗಳನ್ನು ಹಾನಿಗೈದು ಒಂದು ಮನೆಯಿಂದ ವಾಚ್ ಕಳವುಗೈದು ಪರಾರಿಯಾಗಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ ಮೂಕಾಂಬಿಕಾ ದೇವಸ್ಥಾನ ಬಳಿ ವೇಳೆ ನಡೆದಿದೆ. ವಿದೇಶದಲ್ಲಿ ನೆಲೆಸಿರುವ ಸುರೇಶ್ ಎಂಬವರಿಗೆ ಸೇರಿದ ಮನೆಯ ಬಾಗಿಲು ಒಡೆದು ಒಳನುಗ್ಗಿರುವ ಕಳ್ಳರು ಕಪಾಟು ಪುಡಿಗೈದು, ಮನೆಯೊಳಗಿನ ಸಾಮಗ್ರಿಗಳನ್ನು ಚೆಲ್ಲಾಪಿಲ್ಲಿಗೈದು ಹಣ ಹಾಗೂ ಒಡವೆಗಾಗಿ ಹುಡುಕಾಡಿ ಏನೂ ಸಿಗದೇ
ವಿಟ್ಲ : ಅಡುಗೆ ಅನಿಲ ದರ ಕೂಡಲೇ ಇಳಿಸುವಂತೆ ಒತ್ತಾಯಿಸಿ ಡಿ.ವೈ.ಎಫ್.ಐ ವಿಟ್ಲ ವಲಯ ಸಮಿತಿ ವತಿಯಿಂದ ವಿಟ್ಲ ನಾಡ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಸಿ.ಪಿ.ಐ.ಎಂ ಬಂಟ್ವಾಳ ತಾಲೂಕು ಕಾರ್ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿ ಕೋವಿಡ್ ಮಹಾಮಾರಿಯಿಂದ ಜನತೆ ಈಗಾಗಲೇ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಪೆಟ್ರೋಲ್ ಡೀಸೆಲ್ ಬೆಲೆ ಈಗಾಗಲೇ ಗಗನಕ್ಕೇರಿದ್ದು, ಅಲ್ಲದೇ ದಿನ ಬಳಕೆಯ ಎಲ್ಲಾ ಸಾಮಾಗ್ರಿಗಳ ಬೆಲೆ ಏರಿಕೆಯಾಗಿದೆ.