Home Posts tagged #v4newskarnataka (Page 180)

ಕೋವಿಡ್ ಹಿನ್ನಲೆ: ತಲಪಾಡಿ ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ

ಕರ್ನಾಟಕ ಕೇರಳ ಗಡಿಯಿಂದ ತಲಪಾಡಿ ಚೆಕ್‌ಪೋಸ್ಟ್ ಸೇರಿದಂತೆ 7 ಕಡೆಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ರು. ಜಿಲ್ಲೆಯ ಗಡಿ ಭಾಗವನ್ನು ಹೊಂದಿರುವ ಚೆಕ್ ಪೋಸ್ಟ್‌ಗಳಲ್ಲಿ ಪ್ರತೀ ದಿನ ಹೆಚ್ಚು ಜನರು ತಮ್ಮ ವೃತ್ತಿಯನ್ನರಸಿ ಮಂಗಳೂರು ನಗರಕ್ಕೆ ಬರುತ್ತಿದ್ದಾರೆ. ಇವರುಗಳ ಕೋವಿಡ್ ಆರ್.ಟಿ.ಪಿ.ಸಿ.ಆರ್

ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಿಂದ ರ್‍ಯಾಗಿಂಗ್ ಪ್ರಕರಣ 6ವಿದ್ಯಾರ್ಥಿಗಳ ಬಂಧನ

ಮಂಗಳೂರಿನ ಫಳ್ನೀರ್‌ನ ಖಾಸಗಿ ಕಾಲೇಜಿನಲ್ಲಿ ರ್‍ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿ, ಆರು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದಾರೆ. ಫಳ್ನೀರ್‌ನಲ್ಲಿರುವ ಖಾಸಗಿ ಕಾಲೇಜಿ ವಿದ್ಯಾರ್ಥಿಗಳಾದ ಶ್ರೀಲಾಲ್ , ಶಾಹಿದ್, ಅಮ್ಜದ್, ಜುರೈಜ್, ಹುಸೈನ್, ಲಿಮ್ಸ್, ಬಂಧಿತ ಆರೋಪಿಗಳಾಗಿದ್ದಾರೆ. ಜುಲೈ 14ರಂದು ರಾತ್ರಿ 8ಗಂಟೆಗೆ ನಗರದ ಹೋಟೆಲೊಂದರಲ್ಲಿ ರ್‍ಯಾಗಿಂಗ್‌ಗೆ ಒಳಗಾದ ಸಂತ್ರಸ್ತ ಮ್ಯಾನುಯಲ್ ಬಾಬು

ಕಡಬದ ಪೆರಾಬೆಯಲ್ಲಿ ಅನುಮಾನಸ್ಪದ ವ್ಯಕ್ತಿಯ ಬಂಧನ

ಕಡಬ ತಾಲೂಕಿನ ಪೆರಾಬೆ ಗ್ರಾಮದ ಮಾರ್ ಇವಾನಿಯೋಸ್ ಮಹಿಳಾ ಬಿಎಡ್ ಕಾಲೇಜಿನ ಕಟ್ಟಡದ ಹಿಂಬದಿಯಲಲ್ಲಿ ಮುಖಕ್ಕೆ ಬಟ್ಟೆಯನ್ನು ಕಟ್ಟಿ ವ್ಯಕ್ತಿಯ ಗುರುತು ಸಿಗದಂತೆ ಅಡಗಿ ಕುಳಿತುಕೊಂಡೊಬ್ಬನನ್ನು, ರಾತ್ರಿ ಗಸ್ತು ತಿರುಗುತ್ತಿದ್ದ ಕಡಬ ಠಾಣೆಯ ಸಹಾಯಕ ಉಪನರೀಕ್ಷಕರಾದ ಸುರೇಶ್ ಸಿಟಿಯವರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಶರತ್ (34) ಮರವೂರು, ಮಂಗಳೂರು ನಿವಾಸಿ ಎಂದು ಗುರುತಿಸಲಾಗಿದೆ. ಕಡಬ ಠಾಣೆಯ ಸಿಬ್ಬಂದಿಗಳು ಈ ಮಾರ್ಗವಾಗಿ ಗಸ್ತು ತಿರುಗುತ್ತಿದ್ದ

ಕುತ್ಲೂರು ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣಾ ಕಾರ್ಯಕ್ರಮ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಈ ಹಿಂದೆ ದ.ಕ. ಜಿಲ್ಲಾ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ ಬೆಳ್ತಂಗಡಿ ತಾಲೂಕಿನ ಕುತ್ಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಶನಿವಾರ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ನೋಟ್ ಬುಕ್ ವಿತರಿಸಿ ಮಾತನಾಡಿದ ಭಾರತೀಯ ರೆಡ್

ಬಕ್ರೀದ್ ಆಚರಣೆ ಹಿನ್ನೆಲೆ: ಮುಂಜಾಗ್ರತಾ ಕ್ರಮವಾಗಿ ಚೆಕ್ ಪೋಸ್ಟ್: ಪೊಲೀಸ್ ಕಮಿಷನರ್ ಶಶಿಕುಮಾರ್

ಜು.21ರಂದು ಆಚರಿಸುವ ಬಕ್ರೀದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮತ್ತು ಮುಂಜಾಗರೂಕತಾ ಕ್ರಮವಾಗಿ ಪೊಲೀಸ್ ಕಮೀಷನರ್ ವ್ಯಾಪ್ತಿಯಲ್ಲಿ 25ಕ್ಕೂ ಅಧಿಕ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಕಮಿಷನರೇಟ್ ವ್ಯಾಪ್ತಿಯ ಪ್ರತಿಯೊಂದು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲದೆ ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಗಡಿ ಭಾಗಗಳಲ್ಲಿ ಕೂಡಾ ಚೆಕ್ ಪೋಸ್ಟ್ ತೆರೆದು ಶಾಂತಿಯುತವಾಗಿ

ಉಚ್ಚಿಲ ಬಡಾ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೃತಕ ನೆರೆ: ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ

ಕಳೆದ ನಾಲ್ಕು ವರ್ಷಗಳಿಂದ ಉಚ್ಚಿಲ ಬಡ ಗ್ರಾ.ಪಂ. ವ್ಯಾಪ್ತಿಯ ಭಾರತ್ ನಗರದ ಹನ್ನೆರಡು ಮನೆಗಳಿರುವ ಪ್ರದೇಶ ಸುತ್ತಲೂ ಮಳೆ ನೀರು ನಿಂತು ಕೃತಕ ದ್ವೀಪ ನಿರ್ಮಾಣಗೊಂಡಿದ್ದರೂ ಈ ಭಾಗದ ಶಾಸಕರಾಗಲೀ ಗ್ರಾ.ಪಂ. ಆಗಲಿ ಸ್ಪಂದಿಸುತ್ತಿಲ್ಲ ಎಂಬುದಾಗಿ ಜನ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಇಲ್ಲಿಯ ಸಮಸ್ಯೆಯ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ದಿವ್ಯ ಎಂಬವರು, ಮಕ್ಕಳು, ಹಿರಿಯರು, ಅನಾರೋಗ್ಯ ಪೀಡಿತರು ವಾಸ ಮಾಡುವ ಬಡ ಎರ್ಮಾಳು ಭರತ್ ನಗರ ನಿವಾಸಿಗಳಾದ ನಾವು ಮಳೆ ಬಂದರೆ

ಮುಂಬೈಯಲ್ಲಿ ವರುಣನ ಆರ್ಭಟ: ರಸ್ತೆ, ರೈಲು ನಿಲ್ದಾಣಗಳಲ್ಲಿ ಪ್ರವಾಹ ಪರಿಸ್ಥಿತಿ

ಮುಂಬೈ: ಗುರುವಾರ ರಾತ್ರಿ ಮತ್ತು ಇಂದು ಬೆಳಗ್ಗೆ ಮುಂಬೈನ ಹಲವು ಏರಿಯಾಗಳಲ್ಲಿ ಸುರಿದ ಭಾರಿ ಮಳೆಗೆ ವಾಣಿಜ್ಯ ನಗರಿಯ ರಸ್ತೆಗಳಲ್ಲಿ ಪ್ರವಾಹ ಸೃಷ್ಟಿಯಾಗಿದ್ದು, ನಗರ ಸಾರಿಗೆ ಜತೆಗೆ ಸ್ಥಳೀಯ ರೈಲು ಕೂಡ ವಿಳಂಬವಾಗಿದೆ. ಗಾಂಧಿ ಮಾರ್ಕೆಟ್​ ಏರಿಯಾ, ಹಿಂದ್​ಮಟ ಜಂಕ್ಷನ್​ ಮತ್ತು ದಹಿಸರ್​ ಸಬ್​ವೇ ಸೇರಿದಂತೆ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಸಿಯಾನ್​, ಬಾಂದ್ರಾ, ಅಂಧೇರಿ ಮತ್ತು ಸ್ಯಾಂತಕ್ರುಸ್​ ಏರಿಯಾಗಳು ಸಹ ಜಲಾವೃತಗೊಂಡಿವೆ. ಮಾಧ್ಯಮಗಳಲ್ಲಿ

ದೇರೆಬೈಲ್‌ನ 23ನೇ ಪೂರ್ವ ವಾರ್ಡಿನ ಸಮಸ್ಯೆಗಳ ಬಗ್ಗೆ ಮೇಯರ್ ಪ್ರೇಮಾನಂದ ಶೆಟ್ಟಿ ಪರಿಶೀಲನೆ

ಮಂಗಳೂರು ಮಹಾನಗರ ಪಾಲಿಕೆಯ ದೇರೆಬೈಲ್‌ನ 23ನೇ ಪೂರ್ವ ವಾರ್ಡಿನ ಸಮಸ್ಯೆಗಳ ಬಗ್ಗೆ ಮೇಯರ್ ಪ್ರೇಮಾನಂದ ಶೆಟ್ಟಿ ಸೇರಿದಂತೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದರು. ಇನ್ನು ಲ್ಯಾಂಡ್ ಲಿಂಕ್‌ನ ಲೇಹೌಟ್‌ನಲ್ಲಿರುವ ಸಣ್ಣ ಉದ್ಯವನ ಹಾಗೂ ಡ್ರೈನೇಜ್ ಸಮಸ್ಯೆ ಮೇಯರ್ ಅವರು ಅಧಿಕಾರಿಗಳ ಜೊತೆಯಲ್ಲಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಮೇಯರ್ , ಪಾಲಿಕೆಯ ವಿಶೇಷ ಅನುದಾನ ಮುಖಾಂತರ ಪಾರ್ಕ್‌ನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಲಾಂಡ್ ಲಿಂಕ್ಸ್ ನಲ್ಲಿರುವ

ಮಳೆಯಿಂದ ಹಾನಿಯಾಗಿರುವ ಪ್ರದೇಶಕ್ಕೆ ಮೇಯರ್ ಪ್ರೇಮಾನಂದ್ ಶೆಟ್ಟಿ ಭೇಟಿ, ಪರಿಶೀಲನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಮಳೆ ಸುರಿದ ಪರಿಣಾಮ ಹಲವೆಡೆ ಹಾನಿ ಸಂಭವಿಸಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲೂ ಮಳೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ನಗರದ ದೇರೆಬೈಲ್‌ನಲ್ಲಿ ವಾರ್ಡಿನ ಆಕಾಶಭವನದಲ್ಲಿ ಗುಡ್ಡ ಕುಸಿತ ಪ್ರದೇಶಕ್ಕೆ ಮೇಯರ್ ಪ್ರೇಮಾನಂದ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.ಈ ವೇಳೆ ಮಾತನಾಡಿದ ಮೇಯರ್, ಪಾಲಿಕೆ ವ್ಯಾಪ್ತಿಯಲ್ಲಿ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಹಾನಿ ಸಂಭವಿಸಿದೆ.