Home Posts tagged #v4newskarnataka (Page 188)

ಕಾಪುವಿನಲ್ಲಿ ಹಿರಿಯ ನಾಯಕ ಆಸ್ಕರ್ ಚೇತರಿಕೆಗಾಗಿ ವಿಶೇಷ ಪ್ರಾರ್ಥನೆ

  ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ಚೇತರಿಕೆಗಾಗಿ ಹಾರೈಸಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಕಾಪು ತಾಲೂಕಿನ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಪೊಲಿಪು ಜಾಮಿಯಾ ಮಸೀದಿ, ಉದ್ಯಾವರ

ಕಾಪು : ಗಾಯಗೊಂಡ ರಾಷ್ಟ್ರ ಪಕ್ಷಿಯನ್ನು ರಕ್ಷಿಸಿದ ಯುವಕರು

ಕಾಲಿಗೆ ಗಾಯಗೊಂಡು ತೀವ್ರ ಅಸ್ವಸ್ಥಗೊಂಡ ಗಂಡು ನವಿಲೊಂದನ್ನು ಕಾಪುವಿನ ಯುವಕರು ರಕ್ಷಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿ ಅರಣ್ಯಾಧಿಕಾರಿಯವರಿಗೆ ಒಪ್ಪಿಸಿದ ಘಟನೆ ನಡೆದಿದೆ. ಮೂಳೂರು ಬಳಿ ಕಾಲಿಗೆ ತೀವ್ರ ಗಾಯಗೊಂಡ ಸ್ಥಿತಿಯಲ್ಲಿದ್ದ ಗಂಡು ನವಿಲನ್ನು ಕಾಪುವಿನ ಪ್ರಶಾಂತ್ ಪೂಜಾರಿ ಹಾಗೂ ಶಿವಾನಂದ ಪೂಜಾರಿ ಅವರು ಗುರುವಾರ ರಾತ್ರಿ ತಮ್ಮ ಮನೆಗೆ ತಂದು ಆರೈಕೆ ಮಾಡಿದ್ದರು. ಆರೈಕೆಯೊಂದಿಗೆ ಚೇತರಿಕೆಗೊಂಡ ನವಿಲನ್ನು ಅರಣ್ಯ ಅಧಿಕಾರಿ ಮಂಜುನಾಥ್ ಅವರಿಗೆ

Srinivas University signed MOU with IST

Shrinivas University, Pandeshwar, Mangaluru, signed a Memorandum of Understanding (MOU) with Indian Society for Training and Development, Mangalore, with an objective of training the students in various soft skill aspects. Training at the college level helps students to succeed in their career and to have a competitive world. To excel in the corporate world the […]

ಜುಲೈ 26ರಂದು ಕದ್ರಿಯ ವೀರ ಯೋಧರ ಸ್ಮಾರಕದಲ್ಲಿ ಕಾರ್ಗಿಲ್ ವಿಜಯೋತ್ಸವ

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ನೇತ್ರಾವತಿ ವಲಯ ಮಂಗಳೂರು ಮತ್ತು ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ ವತಿಯಿಂದ ಜುಲೈ 26ರಂದು ಕಾರ್ಗಿಲ್ ವಿಜಯೋತ್ಸವ ನಗರದ ಕದ್ರಿಯ ಹುತಾತ್ಮ ಯೋಧರ ಸ್ಮಾರಕದಲ್ಲಿ ಜರುಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ದಯಾನಂದ ಕಟೀಲ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಜುಲೈ 26ರಂದು ಬೆಳಗ್ಗೆ 6:30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಕಾರ್ಗಿಲ್ ಕದನದಲ್ಲಿ ಅಪ್ರತಿಮ ಧೈರ್ಯ, ಸಾಹಸ,

ರಾಷ್ಟ್ರಭಕ್ತ ನಾಗರಿಕ ವೇದಿಕೆ ಸುರತ್ಕಲ್‍ನಿಂದ ಜು.26ರಂದು ಕಾರ್ಗಿಲ್ ವಿಜಯೋತ್ಸವ

ರಾಷ್ಟ್ರಭಕ್ತ ನಾಗರಿಕ ವೇದಿಕೆ ಸುರತ್ಕಲ್ ವತಿಯಿಂದ ಜುಲೈ 26ರಂದು ಕಾರ್ಗಿಲ್ ವಿಜಯೋತ್ಸವವನ್ನು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ ಹೇಳಿದರು. ಅವರು ಸುರತ್ಕಲ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಇಡ್ಯಾ ಶ್ರೀ ಮಹಾಲಿಂಗೇಶ್ವರದ ದೇವಸ್ಥಾನದ ಪ್ರಧಾನ ಅರ್ಚಕರು ಮತ್ತು ಅನುವಂಶಿಕ ಆಡಳಿತ ಮುಕ್ತೇಸರರಾದ ವೇದಮೂರ್ತಿ ಐ ರಮಾನಂದ ಭಟ್ ಅವರು ಉದ್ಘಾಟನೆ ಮಾಡಲಿದ್ದಾರೆ.

ಕ್ಯಾಂಪ್ಕೋದಿಂದ ಹಲಸಿನ ಹಣ್ಣಿನ ಚಾಕಲೇಟ್

ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಇದೀಗ ಹಲಸಿನ ಹಣ್ಣು ಬಳಸಿ ಚಾಕಲೇಟ್ ಉತ್ಪಾದಿಸುವ ಹೊಸ ಪ್ರಯತ್ನಕ್ಕೆ ಕೈಹಾಕಿದೆ. ಜಾಕ್‍ಪ್ರಟ್ ಎಕ್ಲೇರ್ಸ್ ಹೆಸರಿನಲ್ಲಿ ಈ ಚಾಕಲೇಟ್ ಮಾರುಕಟ್ಟೆಗೆ ಪ್ರವೇಶಿಸುತ್ತಿದ್ದು, ಹಣ್ಣಿನಿಂದ ತಯಾರಿಸಿದ ಚಾಕಲೇಟ್ ಉತ್ಪನ್ನ ಭಾರತದಲ್ಲಿ ಇದೇ ಮೊದಲ ಬಾರಿಗೆ ಮಾರುಕಟ್ಟೆಗೆ ಹೊರಬರುತ್ತಿದ್ದು, ಈ ಸಾಧನೆ ತೋರಿದ ಭಾರತದ ಮೊದಲ ಸಂಸ್ಥೆಯೆಂದೂ ಕ್ಯಾಂಪ್ಕೋ ಗುರುತಿಸಿಕೊಂಡಿದೆ.

ರಾಜ್ಯದಲ್ಲಿ ಒಳ್ಳೆಯ ಸರ್ಕಾರ ಕೊಡುವುದಕ್ಕೆ ಆಗಿಲ್ಲ: ಡಿ.ಕೆ. ಶಿವಕುಮಾರ್

ಮಂಗಳೂರು: ಈ ರಾಜ್ಯದಲ್ಲಿ ಒಳ್ಳೆ ಸರ್ಕಾರ ಕೊಡುವುದಕ್ಕೆ ಆಗಿಲ್ಲ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ಮಾಡುತ್ತಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಇದ್ರು ಒಳ್ಳೆ ಆಡಳಿತ ಕೊಡಲು ಆಗಿಲ್ಲ. ಈ ಸರ್ಕಾರಕ್ಕೆ ಗೌರವ ಎಲ್ಲಿದೆ. ಅವರಲ್ಲಿ ಎಷ್ಟೇ ಮುಖ್ಯಮಂತ್ರಿ ಚೇಂಜ್ ಆದ್ರು ಅವರ ಪಕ್ಷದ ಬಗ್ಗೆ ಮಾತಾಡಲ್ಲ ಎಂದು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಂಗಳೂರಿನಲ್ಲಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದರು. ಯಾವ ಅಧಿಕಾರಿಗಳು ಅವರ ಮಾತು

ಉಡುಪಿಯ ಪೆರ್ಣಂಕಿಲದಲ್ಲಿ ಬೋನಿಗೆ ಬಿದ್ದ ಚಿರತೆ

ಪೆರ್ಣಂಕಿಲದಲ್ಲಿ ಗ್ರಾಮಸ್ಥರನ್ನು ಬಹು ದಿನಗಳಿಂದ ಕಾಡುತ್ತಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಗ್ರಾಮದಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಚಿರತೆ ಕಳೆದ ರಾತ್ರಿ ಪೆರ್ಣಂಕಿಲದ ಗುಂಡುಪಾದೆ ಎಂಬಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದಿದೆ. ಚಿರತೆಯನ್ನು ಸೆರೆ ಹಿಡಿಯಲು ಗುಂಡುಪಾದೆಯ ಅಶೋಕ್ ನಾಯಕ್ ಎಂಬವರ ತೋಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇರಿಸಿದ್ದರು. ಕಳೆದ ರಾತ್ರಿ ಚಿರತೆ ಇದರೊಳಗೆ ಸೆರೆಯಾಗಿದೆ. ಇಂದು ಬೆಳಗ್ಗೆ

ಖಾಲಿಯಾಗುವ ಸಿಎಂ ಹುದ್ದೆಗೆ ದಲಿತ ನಾಯಕನನ್ನು ಆಯ್ಕೆ ಮಾಡಲಿ: ಸಿದ್ದರಾಮಯ್ಯ

ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿದೆ. ಬಿ.ಎಸ್.ಯಡಿಯೂರಪ್ಪ ಶೀಘ್ರ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಬಿಜೆಪಿಯಲ್ಲಿ ಖಾಲಿಯಾಗುವ ಸಿಎಂ ಹುದ್ದೆಗೆ ದಲಿತ ನಾಯಕನನ್ನು ಆಯ್ಕೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಸವಾಲು ಹಾಕಿದ್ದಾರೆ. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲು ಇತ್ತೀಚೆಗೆ ಕಾಂಗ್ರೆಸ್ ದಲಿತ ಸಿಎಂ ಅಭ್ಯರ್ಥಿಯನ್ನು