ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗೋಸಾಗಾಟ ನಡೆಯುತ್ತಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಈಸುಬು ಬ್ಯಾರಿ, ಮಹಮ್ಮದ್ ಮಸೂದ್, ಅಬ್ದುಲ್ ಸಮದ್ ಮತ್ತು ಭದ್ರ ಪೂಜಾರಿ ಬಂಧಿತರು. ಮೋವಾಡಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ
ಸುರತ್ಕಲ್‍ನ ಕುಳಾಯಿ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾಗಿರುವ ಘಟನೆ ನಡೆದಿದೆ. ಕೃತ್ಯ ಎಸಗಿ ಕಳ್ಳ ಓಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕುಳಾಯಿ ನಿವಾಸಿ ಬಾಲಕೃಷ್ಣ ಪುರೋಹಿತ್ ಅವರ ಮನೆಗೆ ಕಳ್ಳನೋರ್ವ ನುಗ್ಗಿ ಅವರ ಪತ್ನಿ ಸುಮತಿ ಬಾಲಕೃಷ್ಣ ಆಚಾರ್ಯ ಅವರ ಕುತ್ತಿಗೆಯಿಂದ ನಾಲ್ಕು ಪವನ್ ಚಿನ್ನದ ಕರಿಮಣಿಯನ್ನು ಸೆಳೆದು ಪರಾರಿಯಾದ ಘಟನೆ ನಡೆದಿದೆ.ಇಬ್ಬರು ಯುವಕರು ಮಧ್ಯಾಹ್ನ ಮನೆಗೆ ಆಗಮಿಸಿ
ಯುವ ಜನಾಂಗ ಮತ್ತೆ ಕೃಷಿಯತ್ತ ಮುಖ ಮಾಡಿದೆ ಅನ್ನೋದಕ್ಕೆ ಈ ಸ್ಟೋರಿಯೇ ಸಾಕ್ಷಿ ಹಡಿಲು ಬಿದ್ದಿರುವ ಭೂಮಿಯನ್ನು ಮತ್ತೆ ಹಸನಾಗಿಸಲು ಇಲ್ಲೊಂದು ಯುವಕರ ಗುಂಪು ಮುಂದಾಗಿದೆ. ಹೀಗೆ..ಭತ್ತದ ಪೈರು ಹಿಡ್ಕೊಂಡು ಗದ್ದೆಗಿಳಿದ ಯುವಕರು, ಉಡುಪಿಯ ಮೂಡುಪೆರಂಪಳ್ಳಿ ಶೀಂಭ್ರಾ ಎಂಬಲ್ಲಿನ ಯುವಕರು.ತನ್ನೂರಲ್ಲಿ ಬೇಸಾಯನೇ ಮಾಡದೇ ಹಡಿಲು ಬಿದ್ದಿದ್ದ ಭೂಮಿಯನ್ನ ಕೃಷಿ ಮಾಡಲು ಮುಂದಾಗಿರುವ ವಿದ್ಯಾವಂತ ಯುವಕರು. ಮೂಡು ಪೆರಂಪಳ್ಳಿಯ ಹಲವು ಎಕ್ರೆ ಕೃಷಿ ಭೂಮಿ ಬೇಸಾಯನೇ ಮಾಡದೇ
ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಸಮಯದಲ್ಲಿ ಅರ್ಕುಳಬೈಲ್‌ನಿಂದ ಹರಿದು ಹೋಗುವ ನೀರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸದೇ ಇರುವುದರಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆ ಆಗುವುದನ್ನ ಮನಗಂಡ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ನೀರು ಹರಿದು ಹೋಗುವ ಮೋರಿಗಳು ಮಣ್ಣಿನಿಂದ ತುಂಬಿದ ಕಾರಣ ಕೃಷಿ ಭೂಮಿಯಲ್ಲಿ ನೀರು ತುಂಬಿ ಕೃಷಿಗೆ ತೊಂದರೆ ಆಗಿರುವುದರಿಂದ ಅಧಿಕಾರಿಗಳೊಂದಿಗೆ ಭೇಟಿ ಕೊಟ್ಟರು. ಇನ್ನು ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೆ
ಕಡಬ: ಸರಕಾರಿ ಬಸ್ ಹಾಗೂ ಕಾರೊಂದರ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ ಬಳಿ ನಡೆದಿದೆ. ಸುಬ್ರಹ್ಮಣ್ಯದಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಹಾಸನದವರಿದ್ದ ಕಾರು ಕೈಕಂಬ ಬಳಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಹಾಸನದ ಚಾಲಕ ಪುಟ್ಟರಾಜು, ಜಯಂತಿ, ಲೀಲಾ ಎಂಬವರು ಸಣ್ಣ ಪುಟ್ಟ
ದೇಶದಾದ್ಯಂತ ಇಂದು ಮುಸ್ಲಿಮರು ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರಿನ ಉಳ್ಲಾಲದ ಕೇಂದ್ರ ಜುಮಾ ಮಸೀದಿಯಲ್ಲಿ ಈದ್ ನಮಾಝ್ ನಿರ್ವಹಿಸಿದರು. ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಹಸ್ತಲಾಘವ, ಆಲಿಂಗನ ಇಲ್ಲದೇ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
ಟೀಮ್ ಬಿ-ಹ್ಯೂಮನ್ ಹಾಗೂ ಮುಕ್ಕಚ್ಚೇರಿ ಫ್ರೆಂಡ್ಸ್ ಸರ್ಕಲ್ ಇದರ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಇದರ ಸಹಯೋಗದೊಂದಿಗೆ ಉಚಿತ ರಕ್ತದಾನ ಶಿಬಿರವು ಉಳ್ಳಾಲದ ಟಿಪ್ಪು ಸುಲ್ತಾನ್ ಕಾಲೇಜು ಅವರಣದಲ್ಲಿ ನಡೆಯಿತು. ಅವಿರತ ಬಿರುಗಾಳಿ ಹಾಗೂ ನಿರಂತರ ಸುರಿಯುತ್ತಿರುವ ಮಳೆಯ ನಡುವೆಯೂ ಸ್ಥಳೀಯ ಯುವಕರು ಅತ್ಯುತ್ಸಾಹದಿಂದ ಪಾಲ್ಗೊಂಡು ಸುಮಾರು 100 ಯುನಿಟ್‌ಗಳಷ್ಟು ರಕ್ತವನ್ನು ಈ ಕಾರ್ಯಕ್ರಮದ ಮೂಲಕ ಸಂಗ್ರಹಿಸಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಮೂಲಕ
ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದಲ್ಲಿ ಶೇಷಮ್ಮ ಎಂಬವರ ಸ್ವಾಧೀನದಲ್ಲಿರುವ ಜಾಗದಲ್ಲಿ ನೆಟ್ಟ ಗೇರು ಗಿಡಗಳನ್ನು ಅರಣ್ಯಾಧಿಕಾರಿ ಕಡಿದಿರುವುದಕ್ಕೆ ಸುಳ್ಯ ತಾಲೂಕಿನ ರೈತ ಸಂಘ ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ರೈತ ಸಂಘದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ಅವರು, ಸುಳ್ಯ ತಾಲೂಕು ತೋಡಿಕಾನ ಗ್ರಾಮದ ಶೇಷಮ್ಮ ಎಂಬವರ ಸ್ವಾಧೀನದಲ್ಲಿ ಸುಮಾರು ೫೦ ವರ್ಷಗಳಿಂದ ಇದ್ದ ಸ್ಥಳವಾಗಿರುತ್ತದೆ. ಈ ಸ್ಥಳದಲ್ಲಿ ಕಸಿ ಗೇರು ಗಿಡವನ್ನು
ನಳಿನ್ ಅವರ ಮಿಮಿಕ್ರಿ ಮಾಡುವ ಎಕ್ಸ್ಫರ್ಟ್‌ಗಳು ಇಲ್ಲಿ ಇದ್ದಾರ..: ಆಡಿಯೋ ಬಗ್ಗೆ ನಗುತ್ತಲೇ ವ್ಯಂಗ್ಯವಾಡಿದ ರಮಾನಾಥ್ ರೈ
ನಳಿನ್ ಕುಮಾರ್ ಕಟೀಲ್ ಅವ ರದ್ದು ಎನ್ನಲಾದ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಚಿವ ರಮಾನಾಥ್ ರೈ ಪ್ರತಿಕ್ರಿಯೆ ಕೊಟ್ಟಿದ್ದಾರೆ. ನೀವೆಲ್ಲಾ ಮಂಗಳೂರಿನವರು ಅಲ್ವಾ..? ನೀವು ನಳಿನ್ ಕುಮಾರ್ ಕಟೀಲ್ ಅವರ ಜೊತೆ ಮಾತನಾಡಿಲ್ವಾ,,? ಅವರ ಮಿಮಿಕ್ರಿ ಮಾಡುವ ಎಕ್ಸ್ಪರ್ಟ್‌ಗಳು ಇಲ್ಲಿ ಇದ್ದಾರ..? ಇದು ನಿಮ್ಮಗೆ ಅರ್ಥ ಆಗ್ತದೆ ಅಲ್ವಾ, ಪತ್ರಕರ್ತರಿಗೆ ಮರು ಪ್ರಶ್ನೆ ಕೇಳಿದ ರೈ, ಏನಿದ್ರೂ ಅವರ ನಗುವನ್ನು ಮಿಮಿಕ್ರಿ ಮಾಡೋದಕ್ಕೆ ಯಾರಿಂದಲೂ ಸಾಧ್ಯವಿಲ್ಲ .ಆಡಿಯೋ
ಜನಸಂಖ್ಯೆಯನ್ನು ದೇಶದ ಸಂಪನ್ಮೂಲ ಶಕ್ತಿಯಾಗಿ ಬಳಕೆ ಮಾಡಬೇಕಾದದ್ದು ಸರ್ಕಾರದ ಕೆಲಸ. ಆದರೆ ಸರ್ಕಾರವು ತನ್ನ ಆಡಳಿತ ವೈಫಲ್ಯವನ್ನು ಮರೆಮಾಚಲು ಜನಸಂಖ್ಯೆಯನ್ನು ಟಾರ್ಗೆಟ್ ಮಾಡಿರೋದು ದುರಂತ ಅಂತಾ ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು. ಈ ಕುರಿತು ಮಂಗಳೂರಲ್ಲಿ ಮಾತನಾಡಿದ ಅವರು, ಒಂದು ಸರ್ಕಾರವು ಆಡಳಿತ ಮಾಡೋ ಮೊದಲು ದೇಶದ ಜನಸಂಖ್ಯೆಯನ್ನು ಹೇಗೆ ಮಾನವ ಸಂಪನ್ಮೂಲ ಶಕ್ತಿಯಾಗಿ ಬಳಕೆ ಮಾಡಬೇಕೆಂಬುದನ್ನು ಅರಿಯಬೇಕು ಅಂದರು. ಮಂಗಳೂರಲ್ಲಿ ಅವತ್ತು ರಾಜ್ಯಮಟ್ಟದ


















