ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಹಿನ್ನಲೆಯಲ್ಲಿ ಕೊಣಾಜೆ ಮತ್ತು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿಭಾಗದಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕಾಸರಗೋಡಿನಿಂದ ಮಂಗಳೂರು ಪ್ರವೇಶಿಸುವ ಎಲ್ಲರ ನೆಗೆಟಿವ್ ವರದಿ ಕಡ್ಡಾಯ ಮಾಡುತ್ತಿದ್ದು, ಸ್ಥಳದಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆಗೆ ವ್ಯವಸ್ಥೆ ಮಾಡಿದ್ದು ತಲಪಾಡಿ ಗಡಿಭಾಗದಲ್ಲೂ ಕಟ್ಟು ನಿಟ್ಟಿನ
ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ ಉಳ್ಳಾಲ ಮತ್ತು ಸೋಮೇಶ್ವರದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿದ್ದು, ಸೋಮೇಶ್ವರ ಉಚ್ಚಿಲ ಬಟ್ಟಪ್ಪಾಡಿಯಲ್ಲಿ ಒಳರಸ್ತೆ ಸಮುದ್ರದ ಅಲೆಗಳ ಪಾಲಾದರೆ, ಉಳ್ಳಾಲ ಮತ್ತು ಸುತ್ತಮುತ್ತಲಿ ವ್ಯಾಪ್ತಿಯಲ್ಲಿ ಕಂಪೌಂಡ್ ಕುಸಿತ ಸೇರಿದಂತೆ ಸಣ್ಣಪುಟ್ಟ ಅವಘಡಗಳು ಸಂಭವಿಸಿದೆ. ಸೋಮೇಶ್ವರ ಬೀಚ್ ರಸ್ತೆ ಬಟ್ಟಪ್ಪಾಡಿ ಬಳಿ ಹಾನಿಗೀಡಾಗಿದ್ದು ಸಂಚಾರ ಅಸ್ತವ್ಯಸ್ತವಾಗಿದೆ. ಉಚ್ಚಿಲದಲ್ಲಿ ತಗ್ಗು ಪ್ರದೇಶ ಜಲಾವೃತಗೊಂಡಿದ್ದು
ಮೂಡುಬಿದಿರೆ : ವಿವಿಧ ಕೆಲಸ ಕಾರ್ಯಗಳ ಮೂಲಕ ಒಂದಲ್ಲ ಒಂದು ರೀತಿಯಲ್ಲಿ ಗಮನ ಸೆಳೆಯುತ್ತಿರುವ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮತ್ತು ಯುವಕರು ಕೃಷಿಯತ್ತ ಒಲವು ತೋರಿಸಬೇಕೆಂಬ ಉದ್ದೇಶದಿಂದ ಮಂಗಳವಾರದಂದು ಮೂಡುಬಿದಿರೆಯ ಜೈನ್ ಪೇಟೆಯ ಬಳಿ ಇರುವ ಆಸಿಸ್ ಪಿಂಟೋ ಗದ್ದೆಯಲ್ಲಿ ಕೋಣ ಮತ್ತು ಟಿಲ್ಲರ್‌ನಲ್ಲಿ ಉಳುವೆ ಮಾಡುವ ಮೂಲಕ ಯುವಕರಿಗೆ ಮಾದರಿಯಾದರು. ಬ್ಲಾಕ್ ಕಾಂಗ್ರೆಸ್ ಮತ್ತು ಕಿಸಾನ್ ಘಟಕದ ವತಿಯಿಂದ ಈ
ಕೊರೊನಾ ಪಾಸಿಟೀವ್ ಪ್ರಕರಣಗಳು ರಾಜ್ಯಲ್ಲಿ ಕೊಂಚ ಇಳಿಮುಖವಾಗುತ್ತಿರುವ ನಡುವೆಯೇ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲೂ ಪ್ರಯತ್ನಗಳು ಆರಂಭಗೊಂಡಿದೆ. ಒಂದು ವೇಳೆ ಶಾಲೆ ಪ್ರಾರಂಭವಾದಲ್ಲಿ ತನ್ನ ಮಗುವಿಗೆ ಹೇಗೆ ಶಿಕ್ಷಣ ನೀಡಲಿ ಎನ್ನುವ ತಳಮಳದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಬಡ ತಾಯಿಯೊಬ್ಬರಿದ್ದಾರೆ. ಈಕೆಯ ಮನೆ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ವಾಸಕ್ಕೆ ಯೋಗ್ಯವಲ್ಲದ ಸ್ಥಿತಿಗೆ ತಲುಪಿದೆ. ಕೂಲಿ-ನಾಲಿ ಮಾಡಿ ತನ್ನ ಅನಾರೋಗ್ಯ ಪೀಡಿತ ಮಗುವಿನೊಂದಿಗೆ
ಮಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ದುರ್ಬಲ ಆರ್ಥಿಕ ನೀತಿಯಿಂದಾಗಿ ದೇಶದ ಅರ್ಥ ವ್ಯವಸ್ಥೆ ಅಧಪತನದತ್ತ ಸಾಗುತ್ತಿದೆ. ತಪ್ಪು ಆರ್ಥಿಕ ನೀತಿಯಿಂದಾಗಿ ಅಕ್ರಮಗಳೇ ಬಿಜೆಪಿ ಸರಕಾರದ ನೀತಿಗಳಾಗುತ್ತಿವೆ. ಹಾಗಾಗಿ ಭ್ರಷ್ಟಾಚಾರ ಪ್ರಕರಣ ಹೊರಬರುತ್ತಿಲ್ಲ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು.ಅವರು ಇಂದು ಹಳೆ ಬಂದರು ಸಗಟು ಮಾರುಕಟ್ಟೆಯ ಗೋಳಿಕಟ್ಟೆ ವೃತ್ತದ ಬಳಿ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಪೆಟ್ರೋಲ್,
ಬೆಳ್ತಂಗಡಿ ಸಂಚಾರಿ ಪೊಲೀಸರ ಅವಾಂತರದಿಂದಾಗಿ ಸ್ಕೂಟರ್ ನಿಯಂತ್ರಣ ಕಳೆದುಕೊಂಡು ಸ್ಕಿಡ್ ಆಗಿ ಕಾರಿಗೆ ಢಿಕ್ಕಿಯಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ಸಂಚಾರ ಠಾಣಾ ವ್ಯಾಪ್ತಿಯ ಉಜಿರೆಯ ಸಿದ್ದವನ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಏಕಾ ಏಕಿ ವಾಹನಗಳನ್ನು ತಪಾಸಣೆ ಮಾಡಲು ನಿಲ್ಲಿಸಿದ್ದರಿಂದ ಸ್ಕೂಟರ್ ಹಠಾತ್ತನೆ ಬ್ರೇಕ್ ಹಾಕಿದಾಗ ಮಳೆಯಿಂದಾಗಿ ನಿಯಂತ್ರಣ ಕಳೆದುಕೊಂಡು ಸ್ಕೂಟರ್ ಸ್ಕಿಡ್ ಆಗಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವತಿಯಿಂದ ಬೃಹತ್ ವನ ಸಂವರ್ಧನಾ ಕಾರ್ಯಕ್ರಮ ಜರಗಿತು. ಶ್ರೀ ಕ್ಷೇತ್ರದಲ್ಲಿ ಪರಿಸರ ಸಂರಕ್ಷಣೆ ಸಂಬಂಧವಾಗಿ ಪ್ರಸ್ತಾಪಿತ ರಸ್ತೆಗಳ 14 ವಿವಿಧ ಕಡೆಗಳಲ್ಲಿ ಏಕಕಾಲದಲ್ಲಿ ವಿವಿಧ ಸಸ್ಯಗಳನ್ನು ನೆಡುವ ಬೃಹತ್ ವನ ಸಂವರ್ಧನಾ ಕಾರ್ಯಕ್ರಮವನ್ನು ಶ್ರೀ ದೇವಳದ ಆಡಳಿತ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ 14 ಕಡೆ ಏಕ ಕಾಲದಲ್ಲಿ ಗಿಡ ನೆಟ್ಟು ಎಲ್ಲಾ ಧಾರ್ಮಿಕ ಕೇಂದ್ರಗಳಿಗೆ ಮಾದರಿಯಾದ
ಕರ್ನಾಟಕ ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳಲ್ಲಿ ಉತ್ತಮ ಸೇವೆಯನ್ನು ಗುರುತಿಸಿ ಚಂದ್ರಹಾಸ್ ಆರ್ ಸಾಲ್ಯಾನ್ ಬೈಕಂಪಾಡಿ ಹಾಗೂ ನಿವೃತ್ತರಾದ ನೂತನ್ ಕುಮಾರ್ ಸಸಿಹಿತ್ಲು ಅವರು 2019ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಸೇರಿದಂತೆ ಪೊಲೀಸ್ ಅಧಿಕಾರಿಗಳು ಪದಕ ಪ್ರದಾನ ಮಾಡಿದರು. ಚಂದ್ರಹಾಸ್
ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು,ಜನರಲ್ಲಿ ದೇಶಪ್ರೇಮದ ಉನ್ಮಾದವನ್ನು ಸ್ರಷ್ಠಿಸಿ, ದೇಶದ ಅಮೂಲ್ಯ ಸಂಪತ್ತುಗಳನ್ನು ಕಾರ್ಪೋರೇಟ್ ಕಂಪೆನಿಗಳ ಕೈಗೊಪ್ಪಿಸಿದ ನರೇಂದ್ರ ಮೋದಿ ಸರಕಾರ ನಿಜಕ್ಕೂ ದೇಶದ್ರೋಹಿಯಾಗಿದೆ.ಇಂತಹ ಸರಕಾರ ಮುಂದುವರಿದಲ್ಲಿ ಭವ್ಯಭಾರತದ ಮೂಲಗುಣಗಳಾದ ಜಾತ್ಯಾತೀತತೆ,ಸೌಹಾರ್ದತೆ ಸಂಪೂರ್ಣ ನಾಶವಾಗಲಿದೆ. ಆದ್ದರಿಂದ ದೇಶವನ್ನು ರಕ್ಷಿಸುವ ಹೊಣೆ ದುಡಿಯುವ ವರ್ಗದ ಮೇಲಿದೆ.ಅವರಿಗೆ ಬೆಂಗಾವಲಾಗಿ ದೇಶದ ಯುವಜನತೆ ನಿಲ್ಲಬೇಕಾಗಿದೆ* ಎಂದು DYFI
ಮೂಡುಬಿದಿರೆ: ಮೀನು ಕೃಷಿಕರ ದಿನಾಚರಣೆ ಅಂಗವಾಗಿ ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಹಾಗೂ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ಇವುಗಳ ವತಿಯಿಂದ ಪಣಪಿಲ ಶ್ರೀ ರಾಜ್ ಕೊಟ್ಟಾರಿಬೆಟ್ಟು ಪಣಪಿಲ ಇಲ್ಲಿ ಮೀನು ಕೃಷಿ ಕುರಿತು ತರಬೇತಿ ಹಾಗೂ ಕ್ಷೇತ್ರೋತ್ಸವ ಮತ್ತು ಮಾರಾಟ ಕಾರ್ಯಕ್ರಮ ಶನಿವಾರ ನಡೆಯಿತು. ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ರಮೇಶ್ ಟಿ.ಜೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮೀನು ಕೃಷಿ


















