ನಾಳೆ ರಾಜ್ಯದ ಮುಖ್ಯಮಂತ್ರಿ ಶ್ರೀ. ಪಿಣರಾಯಿ ವಿಜಯನ್ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ನಾಳೆಯಿಂದ ಮನೆ, ಜಮೀನು ಇಲ್ಲದ 174 ಕುಟುಂಬಗಳು ಸ್ವಂತ ಮನೆ ಹೊಂದಲಿದ್ದು, ಇವರಿಗೆ ಸ್ವಂತ ಮನೆ ಕನಸಾಗಿತ್ತು. ಈ ವಸತಿ ಸಮುಚ್ಚಯಗಳು ಕಣ್ಣೂರು ಜಿಲ್ಲೆಯ ಕದಂಪುರ್, ಕೊಲ್ಲಂ ಜಿಲ್ಲೆಯ ಪುನಲೂರ್, ಕೊಟ್ಟಾಯಂ ಜಿಲ್ಲೆಯ ವಿಜಯಪುರಂ ಮತ್ತು ಇಡುಕ್ಕಿ ಜಿಲ್ಲೆಯ
ಕುಂದಾಪುರ: ರಜೆಯ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಜನ ಸಾಗರವೆ ಹರಿದು ಬಂದಿದೆ. ಆಡಳಿತ ಮಂಡಳಿ ಸದಸ್ಯರಾದ ಗೋಪಾಲಕೃಷ್ಣ ನಾಡ ಮಾತನಾಡಿ, ನಿರಂತರವಾಗಿ ಸರಕಾರಿ ರಜೆ ಇದಿದ್ದರಿಂದ ಕಳೆದ ಮೂರು ದಿನಗಳಲ್ಲಿ 25,000 ಕ್ಕೂ ಅಧಿಕ ಜನರು ಭೇಟಿ ನೀಡಿದ್ದು ಶ್ರೀ ಕ್ಷೇತ್ರದಲ್ಲಿ ಭಕ್ತ ಸಮೂಹವೆ ಕಂಡು ಬಂದಿದೆ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತುಕೊಂಡು ದೇವಿಯ ದರ್ಶನವನ್ನು ಪಡೆದರು. ಶಾಲಾ ಮಕ್ಕಳಿಗೆ
ಈ ಬಾರಿಯ ವಿಧಾನಸಭೆ ಚುನಾವಣೆಗೆ ನಾನು ಯಾವುದೇ ಕ್ಷೇತ್ರದಿಂದಲೂ ಟಿಕೇಟ್ ಆಕಾಂಕ್ಷಿಯಾಗಿರುವುದಿಲ್ಲ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್.ಗಣೇಶ್ ಕಾರ್ಣಿಕ್ ಅವರು ತಿಳಿಸಿದ್ದಾರೆ. ಬಿಜೆಪಿಯ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಗಣೇಶ್ ಕಾರ್ಣಿಕ್ ಅವರ ಹೆಸರು ಇದೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಸುದ್ಧಿಗೆ ಅವರು ಪತ್ರಿಕ್ರಿಯಿಸಿ ನಾನು ಯಾವುದೇ ಕ್ಷೇತ್ರದಿಂದಲೂ ಟಿಕೆಟ್ ಆಕಾಂಕ್ಷಿಯಾಗಿರುವುದಿಲ್ಲ ಎಂದು ಸ್ವಷ್ಟಪಡಿಸಿದರು
ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಎಲ್ಲಾ ವಾರ್ಡಿನಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು ತಕ್ಷಣ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ ವಿಪಕ್ಷ ಸದಸ್ಯರು ಪುರಸಭೆಯಲ್ಲಿ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನು ನೀಡಿ ಮುಖ್ಯಾಧಿಕಾರಿಯವರನ್ನು ಆಗ್ರಹಿಸಿದರು, ವಾರ್ಡ್ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆಯನ್ನು ಗುರುತಿಸಿ ಸಮರ್ಪಕ ವಿತರಣೆಗೆ ಕ್ರಮ ಜರುಗಿಸಲಾಗುವುದು ಮತ್ತು ಅಗತ್ಯವಿರು ಸ್ಥಳಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಭರವಸೆಯನ್ನು
ವಿಶ್ವ ಆರೋಗ್ಯ ದಿನಾಚರಣೆಯ ಪ್ರಯುಕ್ತ ಏಪ್ರಿಲ್ 6 ರ ಗುರುವಾರದಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಮತ್ತು ಅರಿವು ಮೂಡಿಸುವ ಶಿಲ್ಪ ಅನಾವರಣ ಮತ್ತು ಉಚಿತ ಆರೋಗ್ಯ ತಪಾಸಣೆ ಜರುಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಸರ್ವಲೆನ್ಸ್ ಆಫೀಸರ್ ಡಾ. ನಾಗರತ್ನ ಅವರು, “ಪ್ರತಿ ವರ್ಷ ಏಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನವನ್ನಾಗಿ ವಿಶ್ವಾದ್ಯಂತ ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಸಾರ್ವಜನಿಕರಲ್ಲಿ ಉತ್ತಮ ಆರೋಗ್ಯದ
ಮರೋಡಿ ಗ್ರಾಮದ ಮಾಜಿ ಪಂಚಾಯತ್ ಉಪಾಧ್ಯಕ್ಷರು ಬಿಜೆಪಿಯ ಮುಖಂಡರು ರವಿರಾಜ್ ಬಲ್ಲಾಳ್ ಬಿಜೆಪಿಯ ದುರಡಳಿತಕ್ಕೆ ಬೇಸತ್ತು ಬೆಳ್ತಂಗಡಿಯ ಯುವ ನಾಯಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃದಲ್ಲಿ ನಾರಾವಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ.ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು ಈ ಸಂದರ್ಭದಲ್ಲಿ ನಾರವಿ ಗ್ರಾಮದ ಪಕ್ಷದ ಪ್ರಮುಖರು ,ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಾವಿತ್ರಿ ಸತ್ಯವಾನ್ ಟ್ರಸ್ಟ್ ಅಧ್ಯಕ್ಷೆ ಡಾ.ಮಮತಾ ಹೆಗ್ಡೆ ಅವರು ಹೊಸ ದಿಲ್ಲಿಯಲ್ಲಿ ಕೇಂದ್ರ ಬಿಜೆಪಿ ಕಚೇರಿಗೆ ಭೇಟಿ ನೀಡಿ ಹಿರಿಯ ನಾಯಕರನ್ನು ಭೇಟಿ ಮಾಡಿದರು. ಇದೇ ವೇಳೆ ಅವರು ಬಿಜೆಪಿ ಕಚೇರಿಯಲ್ಲಿ ನಡೆದ ಬಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾದರು. ಕಾರ್ಕಳ ಕ್ಷೇತ್ರದಲ್ಲಿ ಸಾಮಾಜಿಕ, ಶೈಕ್ಷಣಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಡಾ.ಮಮತಾ ಹೆಗ್ಡೆ ಅವರು ಚುನಾವಣಾ
ಮೂಲಭೂತ ಸೌಕರ್ಯ ವಂಚಿತ ಮೀನು ಮಾರುಕಟ್ಟೆ, ತಾತ್ಕಾಲಿಕ ಮಾರುಕಟ್ಟೆಯೊಳಗಡೆ ತೆರೆದ ಚರಂಡಿ, ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮಾರುಕಟ್ಟೆ, ಸಮರ್ಪಕ ನಿರ್ವಹಣೆ ಇಲ್ಲದೆ ಸೊರಗುತ್ತಿರುವ ಮಾರುಕಟ್ಟೆ, ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಮೀನು ವ್ಯಾಪಾರ ಮಹಿಳೆಯರ ಅಳಲು ಇದು ಸುರತ್ಕಲ್ ಮೀನು ವ್ಯಾಪಾರ ಮಾರುಕಟ್ಟೆಯ ದುಸ್ಥಿತಿ. ಕಳೆದ ನಾಲ್ಕು ವರ್ಷದಿಂದ ಅಲ್ಲಿನ ಮೀನುಗಾರಿಗೆ ತಾತ್ಕಾಲಿಕ ಮಾರುಕಟ್ಟೆಯ ವ್ಯವಸ್ಥೆಯನ್ನು ರೂಪಿಸಿದ್ದರು. ಆದರೆ ವರ್ಷ ನಾಲ್ಕು ಕಳೆದರೂ,
ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಹಳೆ ಮೊಳಗಿಸಿರುವ ಕಾಂಗ್ರೆಸ್, ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ .ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಇಂದು 42 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.ಉಡುಪಿ ವಿಧಾನ ಸಭೆ ಕ್ಷೇತ್ರದಲ್ಲಿ ಪ್ರಸಾದ್ ರಾಜ್ ಕಾಂಚಾನ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ನಿರೀಕ್ಷೆಯಂತೆ ಮೊಗವೀರರಿಗೆ ಕಾಂಗ್ರೆಸ್ ಮಣೆ ಹಾಕಿದೆ.ಪ್ರಸಾದ್ ರಾಜ್ ಈಗಾಗಲೇ ಪಕ್ಷದ ಪ್ರಚಾರ
ಮಂಗಳೂರು: ನಗರದ ಉರ್ವಸ್ಟೋರ್‌ನಲ್ಲಿರುವ ಸ್ವಸ್ತಿಕ ನ್ಯಾಷನಲ್ ಸ್ಕೂಲ್‌ನ ಭಾಷಾ ಸಂಘದ ಸಹಯೋಗದಲ್ಲಿ ಸ್ವಸ್ತಿಕದಲ್ಲಿ ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಕವಿ, ಸಾಹಿತಿ, ಪತ್ರಕರ್ತ ಶ್ರೀನಿವಾಸ ಜೋಕಟ್ಟೆಯವರ 40ನೇ ಕೃತಿ ಲೇಖನಗಳ ಸಂಕಲನ ‘ದೇವರುಗಳ ನ್ಯಾಯಾಲಯ ಮತ್ತು ಸ್ಮಶಾನದಲ್ಲಿ ನೃತ್ಯ’ ಹಾಗೂ 41ನೇ ಕೃತಿ ಲೇಖನಗಳ ಸಂಕಲನ ‘ಎಲ್ಲಿಗೋ ಪಯಣ ಯಾವುದೋ ದಾರಿ’ ಬಿಡುಗಡೆಗೊಂಡಿತು. ‘ದೇವರುಗಳ ನ್ಯಾಯಾಲಯ ಮತ್ತು ಸ್ಮಶಾನದಲ್ಲಿ ನೃತ್ಯ’ ಕೃತಿಯನ್ನು ಬಿಡುಗಡೆಗೊಳಿಸಿದ ಹಿರಿಯ



























