Home Posts tagged #v4newskarnataka (Page 24)

ಮೂಡುಬಿದಿರೆ ಮೆಸ್ಕಾಂ ಬಳಿ ಅವೈಜ್ಞಾನಿಕ ವೃತ್ತ ತೆರವಿಗೆ ಆಗ್ರಹ

ಮೂಡುಬಿದಿರೆ-ವೇಣೂರು, ಮೂಡುಬಿದಿರೆ-ಬಿಸಿರೋಡನ್ನು ಸಂಧಿಸುವ ಮೆಸ್ಕಾಂ ಬಳಿ ರಾಜ್ಯ ಹೆದ್ದಾರಿಯಲ್ಲಿ ಪಿಡಬ್ಲ್ಯೂಡಿ ಇಲಾಖೆ ವತಿಯಿಂದ ನಿರ್ಮಾಣವಾಗುತ್ತಿರುವ ವೃತ್ತ ಅವೈಜ್ಞಾನಿಕ ರೀತಿಯಲ್ಲಿದೆ ಎಂದು ಆರೋಪಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿ ಸರ್ಕಲ್ ತೆರವುಗೊಳಿಸುವಂತೆ ಆಗ್ರಹಿಸಿದೆ. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ಶಾಸಕರ

ಉಜಿರೆ ಎಸ್.ಡಿ.ಎಂ.ಗೆ ಬೆಸ್ಟ್ ಜರ್ನಲಿಸಂ ಡಿಪಾರ್ಟ್‍ಮೆಂಟ್
ಅವಾರ್ಡ್

ಉಜಿರೆ, : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗವನ್ನು ಬೆಂಗಳೂರಿನ ದಿ ನ್ಯೂ ಇಂಡಿಯನ್ ಟೈಮ್ಸ್ಸಂ ಸ್ಥೆಯು ಕರ್ನಾಟಕದ ಅತ್ಯುತ್ತಮ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಎಂದು ಗುರುತಿಸಿ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಾರ್ಚ್ 6ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ವರ್ಣರಂಜಿತ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉಜಿರೆಯ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಡಾ.ಭಾಸ್ಕರ ಹೆಗಡೆ

ಅನಂತಾಡಿ ಗ್ರಾ.ಪಂ. ವ್ಯಾಪ್ತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ.

ಬಂಟ್ವಾಳ: ಅನಂತಾಡಿ ಗ್ರಾ.ಪಂ.ಬಿಜೆಪಿಯ ಬಲಿಷ್ಠ ಶಕ್ತಿಕೇಂದ್ರವಾಗಿದ್ದು, ಅದಕ್ಕೆ ಪೂರಕವಾಗಿ ಹೆಚ್ಚಿನ ಅನುದಾನಗಳ ಮೂಲಕ ಅಭಿವೃದ್ಧಿ ಕಾರ್ಯಗಳು ಅನುಷ್ಠಾನಗೊಂಡಿದೆ. ಜತೆಗೆ ಕೋಟ್ಯಂತರ ರೂಪಾಯಿ ಅನುದಾನ ನೇರವಾಗಿ ಫಲಾನುಭವಿಗಳ ಖಾತೆಗೆ ಬಂದಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹೇಳಿದರು. ಅವರು ಅನಂತಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು 1.50 ಕೋ.ರೂ.ಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ- ಶಿಲಾನ್ಯಾಸ ನೆರವೇರಿಸಿ ಬಳಿಕ ಮಂದಿರದಲ್ಲಿ

ಬೆಲೆ ಏರಿಕೆಯ ವಿರುದ್ಧ ಕಾಂಗ್ರೆಸ್‍ನಿಂದ ಪ್ರತಿಭಟನೆ : ಗ್ಯಾಸ್ ಸಿಲಿಂಡರ್ ಮತ್ತು ಕಟ್ಟಿಗೆಯ ಅಣುಕು ಶವ ಯಾತ್ರೆ

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆಲೆ ಏರಿಕೆ ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರದ ವೈಫಲ್ಯ ವನ್ನು ಖಂಡಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಮಂಗಳೂರು ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಯಿತಲ್ಲದೆ, ಗ್ಯಾಸ್ ಸಿಲಿಂಡರ್ ಮತ್ತು ಕಟ್ಟಿಗೆಯ ಅಣಕು ಶವ ಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ `ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಾದರೂ ಕೂಡ ಬಿಜೆಪಿಗರು ತಲೆ

ಮಾ.11ಕ್ಕೆ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ : ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಹೇಳಿಕೆ

ಪುತ್ತೂರು: ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿಯಿಂದ ಹಮ್ಮಿಕೊಂಡಿರುವ ಪ್ರಜಾ ಧ್ವನಿ ಯಾತ್ರೆ ಮಾ.11ರಂದು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸಂಚರಿಸಲಿದ್ದು, ಬೆಳಿಗ್ಗೆ ಉಪ್ಪಿನಂಗಡಿ, ವಿಟ್ಲ, ಮಧ್ಯಾಹ್ನ ಕುಂಬ್ರ ಜಂಕ್ಷನ್ ಸಂಜೆ ಪುತ್ತೂರು ಕಿಲ್ಲೆ ಮೈದಾನದಲ್ಲಿ ಸಮಾವೇಶಗೊಳ್ಳಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಅವರು ಹೇಳಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ಬೇರೆ ಬೇರೆ ಆಶ್ವಾಸನೆಗಳಿಂದ ಕೋಮು ಭಾವನೆ

ಮೂಲಭೂತ ಸೌಕರ್ಯ ವಂಚಿತ ಮಲೆಕುಡಿಯ ಆದಿವಾಸಿಗಳು : ನಾವೂರ್ ಮತ್ತು ಕುತ್ಲೂರಿಗೆ ಯುವ ರೈತ ಘಟಕ ತಂಡ ಭೇಟಿ

ಕುದುರೆಮುಖ ರಾಷ್ಟ್ರೀಯ ಅರಣ್ಯ ಮೀಸಲು ಪ್ರದೇಶದಲ್ಲಿನ ಮಲೆಕುಡಿಯ ಆದಿವಾಸಿಗಳು 100 ವರ್ಷಕ್ಕೂ ಹೆಚ್ಚು, ಈ ಕಾಡಿನಲ್ಲಿ ಪ್ರಸ್ತುತ ಜೀವನ ಪರಿಸ್ಥಿತಿಯನ್ನು ತಿಳಿಯಲು ಅನ್ವೇಷಣೆಗಾಗಿ ಬೆಳ್ತಂಗಡಿ ತಾಲೂಕಿನ ಮಲೆಕುಡಿಯ ಬುಡಕಟ್ಟು ಗ್ರಾಮ ನಾವೂರ್ ಮತ್ತು ಕುತ್ಲೂರಿಗೆ ಯುವ ರೈತ ಘಟಕ ತಂಡ ಭೇಟಿ ನೀಡಿತ್ತು. ಮಲಿಕುಡಿಯ ಆದಿವಾಸಿಗಳು ಈ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ. ಸರ್ಕಾರ ಮತ್ತು ಜಿಲ್ಲಾಡಳಿತವು ಅವರ ಮೂಲಭೂತ ಹಕ್ಕುಗಳಾದ ವಿದ್ಯುತ್, ನೀರಾವರಿ

ಕಾಂಗ್ರೆಸ್ ಹೇಳಿಕೆಗೆ ಶಾಸಕ ಹರೀಶ್ ಪೂಂಜಾ ತಿರುಗೇಟು

ಚುನಾವಣೆ ಬಂದಾಗ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಮಾಡುತ್ತಾರೆ ಎಂದು ಹೇಳಿದ ಕಾಂಗ್ರೆಸ್ ನಾಯಕರಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅವರು ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.ಕಳೆದ ನಾಲ್ಕೂವರೆ ವರ್ಷದ ಹಿಂದೆ ಇಲ್ಲಿನ ನಾಯಕರೊಬ್ಬರು ತಾಲೂಕಿನ ಹಲವಾರು ಕಡೆ ತೆಂಗಿನ ಕಾಯಿ ಒಡೆದು ಜನರನ್ನು ಮರುಳು ಮಾಡಿದ ಹಾಗೆ ನಾವು ಮಾಡಲಿಲ್ಲ. ಇಡೀ ತಾಲೂಕಿನಲ್ಲಿ ಅಭಿವೃದ್ದಿ ಮಾಡುವ ಮೂಲಕ ನಮ್ಮ ಪ್ರಣಾಳಿಕೆಯಲ್ಲಿ ಏನು ಹೇಳಿದ್ದೇವೆಯೋ ಅದನ್ನು ಚಾಚೂ ತಪ್ಪದೇ

ವಿಶ್ವ ಮೂತ್ರಪಿಂಡ ದಿನದ ಅಂಗವಾಗಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಜಾಗೃತಿ ಹಾಗೂ ಶಿಕ್ಷಣ ಕಾರ್ಯಕ್ರಮ

ವಿಶ್ವ ಮೂತ್ರಪಿಂಡ ದಿನದ ಅಂಗವಾಗಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಮೂತ್ರಪಿಂಡ ಆರೋಗ್ಯದ ಕುರಿತು ಜಾಗೃತಿ ಹಾಗೂ ಶಿಕ್ಷಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇಂದು ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿದ್ದ ಡಾ ಪದ್ಮರಾಜ ಹೆಗ್ಡೆ , ಡೀನ್-ಕೆ ಎಂ ಸಿ ಮಣಿಪಾಲ ಇವರು ವಿಶೇಷ ಮೂತ್ರಪಿಂಡ ಹೆಲ್ತ್ ಚೆಕ್ ಪ್ಯಾಕೇಜ್ ಗಳನ್ನು ಬಿಡುಗಡೆ ಮಾಡಿದರು. ಗೌರವ ಅಥಿತಿಯಾಗಿದ್ದ ಡಾ ಜಿ ಅರುಣ್ ಮಯ್ಯ , ಡೀನ್- ಮಣಿಪಾಲ್ ಕಾಲೇಜು ಆಫ್

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ಸಾಧಕ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮ

ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಸಾಧಕ ಮಹಿಳೆ ಯರಿಗೆ ಸನ್ಮಾನ ಮತ್ತು ಸಂವಾದ ಕಾರ್ಯಕ್ರಮವನ್ನು ಬುಧವಾರ ಉಡುಪಿ ಶಾಖೆಯಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಶಿಶು ಅಭಿವೃದ್ಧಿ ಜಿಲ್ಲಾ ಯೋಜನಾ ಅಧಿಕಾರಿ ಶ್ರೀಮತಿ ವೀಣಾ ಮಹಿಳಾ ದಿನಾಚರಣೆ ಎಂಬುದು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರಬಾರದು, ಮಹಿಳೆಯರಿಗೆ ಸಿಗಬೇಕಾದ ಸಮಾನ ಗೌರವ, ಪ್ರತಿದಿನವೂ

ಮಹಿಳೆಯರೇ ಸವ್ಯಸಾಚಿಗಳು : ಡಾ|| ಚೂಂತಾರು

ದಕ್ಷಿಣಕನ್ನಡ ಜಿಲ್ಲಾ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಪಡೆಯ ವತಿಯಿಂದ ಹಾಗೂ ಮಾಂಡೊವಿ ಮೋಟರ್ಸ್ ಹಂಪನಕಟ್ಟೆ ಇವರ ಸಹಯೋಗದೊಂದಿಗೆ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮೂರು ಮಂದಿ ಮಹಿಳಾ ಗೃಹರಕ್ಷಕಿಯರಿಗೆ ಹಾಗೂ ಇಬ್ಬರು ಪೌರಕಾರ್ಮಿಕರಿಗೆ ದಿನಾಂಕ : 08-03-2023ನೇ ಬುಧವಾರದಂದು ಮಾಂಡೊವಿ ಮೋಟರ್ಸ್ ಹಂಪನಕಟ್ಟೆಯಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ದ.ಕಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್