Home Posts tagged #v4newskarnataka (Page 43)

ಸಾಹಿತ್ಯ ಸಮ್ಮೇಳನದಲ್ಲಿ 16ಕ್ಕೂ ಅಧಿಕ ಕನ್ನಡ ಪುಸ್ತಕಗಳ ಲೋಕಾರ್ಪಣೆ

ಉಜಿರೆ, ಫೆ.4: ಸಾಹಿತ್ಯವು ಭಾಷೆ ಮತ್ತು ಅಕ್ಷರದ ಸಮ್ಮಿಶ್ರಣ. ಪತ್ರಕರ್ತರು ಮತ್ತು ಸಾಹಿತಿಗಳು ಸಮಾಜದ ಎರಡು ಕಣ್ಣುಗಳಿದ್ದಂತೆ. ಪತ್ರಕರ್ತರ ಗುರುತಿಸುವಿಕೆ ಒಂದು ದಿನಕ್ಕೆ ಮುಗಿದರೂ ಸಾಹಿತಿಗಳ ಗುರುತಿಸುವಿಕೆ ತುಂಬಾ ದಿನ ಇರುತ್ತದೆ ಎಂದು ಅಮರಸುಳ್ಯ ಅಧ್ಯಯನ ಕೇಂದ್ರ ಸುಳ್ಯದ ನಿರ್ದೇಶಕ ಡಾ. ಬಿ. ಪ್ರಭಾಕರ ಶಿಶಿಲ ಹೇಳಿದರು. ಇಲ್ಲಿನ ಶ್ರೀ ಕೃಷ್ಣಾನುಭವ

ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ‘ನಗೆಹಬ್ಬ’

ಉಜಿರೆ, ಫೆ.4: ಇಲ್ಲಿನ ಶ್ರೀ ಕೃಷ್ಣಾನುಭವ ಸಭಾಭವನದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೆಯ ದಿನವಾದ ಶನಿವಾರ ಖ್ಯಾತ ಹಾಸ್ಯ ಕಲಾವಿದ ಪಟ್ಟಾಭಿರಾಮ ಸುಳ್ಯ ಅವರು ನಡೆಸಿಕೊಟ್ಟ ನಗೆಹಬ್ಬ ಕಾರ್ಯಕ್ರಮವು ಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲಿಸಿತು. ತಮ್ಮ ಅದ್ಭುತವಾದ ಮಿಮಿಕ್ರಿ ಕಲೆಯ ಮೂಲಕ ಹಾಸ್ಯಲೋಕಕ್ಕೆ ಕರೆದೊಯ್ದರು. ದೈನಂದಿನ ಜೀವನದಲ್ಲಿ ಕೇಳಿಬರುವ ಸೈರನ್ ಸದ್ದು, ಆ್ಯಂಬುಲೆನ್ಸ್, ವಿಮಾನ

ಸಾಹಿತ್ಯ ವೇದಿಕೆಯಲ್ಲಿ ‘ಗಮಕ’ ವೈಭವ

ಉಜಿರೆ, ಫೆ.4: ಇಲ್ಲಿನ ಶ್ರೀ ಕೃಷ್ಣಾನುಭವ ಸಭಾಭವನದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೆಯ ದಿನವಾದ ಶನಿವಾರ ಗಮಕ ವಾಚನ ನಡೆಯಿತು. ಮಂಗಳೂರಿನಲ್ಲಿ ಗಮಕಕ್ಕೆ ಹೆಚ್ಚು ಮನ್ನಣೆ ನೀಡಿದ ಯಜ್ಞೇಶ್‌ ಎಸ್. ಸುರತ್ಕಲ್‌ ಅವರು ಗಮಕ ವಾಚನ ನಡೆಸಿದರು. ‘ಆದಿನಾಥನ ಪೂರ್ವವೃತ್ತಾಂತ’ದಿಂದ ಪ್ರಾರಂಭಗೊಂಡು ದುರ್ಯೋಧನ

ಮಂಗಳೂರು -ಜುವೆಲ್ಯರಿಶಾಪ್ ಕೊಲೆ ಪ್ರಕರಣ, ಶಂಕಿತ ಆರೋಪಿಯ ಸಿಸಿ ಕೆಮರಾ ಚಿತ್ರ ಬಹಿರಂಗ

ಮಂಗಳೂರು: ನಗರದ ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣದ ಶಂಕಿತ ಆರೋಪಿಯ ಸಿಸಿ ಕೆಮರಾ ಚಿತ್ರವನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ಕಪ್ಪು ಬಣ್ಣದ ಜರ್ಕಿನ್, ಜೀನ್ಸ್ ಪ್ಯಾಂಟ್ ಧರಿಸಿ, ಶೂ ಧರಿಸಿದ್ದು, ಹೆಗಲಿನಲ್ಲಿ ಬ್ಯಾಗ್ ಹಾಕಿಕೊಂಡಿದ್ದು, ಗುರುತು ಮರೆಮಾಚಲು ಕ್ಯಾಪ್, ಮಾಸ್ಕ್, ಕೂಲಿಂಗ್

ಕಂಬಳ ಕ್ರೀಡೆಯನ್ನು ರಾಜ್ಯದ ಪ್ರಮುಖ ಕ್ರೀಡೆಯಾನ್ನಾಗಿಸಲು ಜಿಲ್ಲಾಡಳಿತ ಸಿದ್ಧ : ಜಿಲ್ಲಾಧಿಕಾರಿ ರವಿಕುಮಾರ್ ಎಂ

ಜಿಲ್ಲೆಯ ರೈತಾಪಿ ಜನರ ಜನಪದ ಕಂಬಳ ಕ್ರೀಡೆಗೆ ಸರಕಾರದ ಸಂಪೂರ್ಣ ಸಹಕಾರವಿದ್ದು, ಕ್ರೀಡೆಯನ್ನು ಸರಕಾರದ ವತಿಯಿಂದ ನಡೆಸಲಾಗುತ್ತಿದ್ದು, ಕಂಬಳ ಕ್ರೀಡೆಯನ್ನು ರಾಜ್ಯದ ಪ್ರಮುಖ ಕ್ರೀಡೆಯನ್ನಾಗಿಸಲು ಜಿಲ್ಲಾಡಳಿತ ಸದಾ ಸಿದ್ಧ. ಶ್ರೀಘದಲ್ಲಿಯೇ ಕಂಬಳೋತ್ಸವಕ್ಕೆ ಸರಕಾರದಿಂದ 2ಕೋಟಿ ಅನುದಾನ ನಿಗಪಡಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಹೇಳಿದರು. ಅವರು ಇತಿಹಾಸ ಪ್ರಸಿದ್ದ ಐಕಳಬಾವ ಕಾಂತಾಬಾರೆ ಬೂದಬಾರೆ ಕಂಬಳದ ಸಭಾ ಕಾರ್ಯಕ್ರಮದಲ್ಲಿ

ಉಳ್ಳಾಲ : ಅವೈಜ್ಞಾನಿಕ ಸರ್ವೀಸ್ ರಸ್ತೆಯಿಂದ ತೊಂದರೆ, ಡಾಮಾರು ಹಾಕಲು ಬಂದ ವಾಹನವನ್ನು ತಡೆಗಟ್ಟಿ ಗ್ರಾಮಸ್ಥರಿಂದ ಆಕ್ರೋಶ

ಉಳ್ಳಾಲ: ಅವೈಜ್ಞಾನಿಕವಾದ ಸರ್ವಿಸ್ ರಸ್ತೆಯಿಂದ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ತಲಪಾಡಿ ಗ್ರಾಮದ ಕೆ.ಸಿ ರೋಡ್ ಹರಿಜನ ಕಾಲನಿ ನಿವಾಸಿಗಳು ರಸ್ತೆಯಲ್ಲೇ ಕುಳಿತು ಡಾಮಾರು ಹಾಕಲು ಬಂದ ವಾಹನವನ್ನು ತಡೆಗಟ್ಟಿ ಹಿಂದಕ್ಕೆ ಕಳುಹಿಸಿ ಪ್ರತಿಭಟಿಸಿರುವ ಘಟನೆ ನಡೆದಿದೆ. ರಾ.ಹೆ 66 ರ ಗುತ್ತಿಗೆ ವಹಿಸಿಕೊಂಡಿರುವ ನವಯುಗ ಸಂಸ್ಥೆ ಇತ್ತೀಚೆಗೆ ತಲಪಾಡಿಯ ಕೆ.ಸಿ ರೋಡ್ ಹರಿಜನ ಕಾಲನಿ ಸಂಪರ್ಕಿಸುವ ರಸ್ತೆಯ ಎದುರುಭಾಗದಲ್ಲಿ ಸರ್ವಿಸ್ ರಸ್ತೆಯನ್ನು

ರಾಜ್ಯದಲ್ಲಿ ಕನ್ನಡಕ್ಕೆ ಪ್ರಭುತ್ವ ದೊರಕಬೇಕು : ಹೇಮಾವತಿ ವೀ. ಹೆಗ್ಗಡೆ

ರಾಜ್ಯದಲ್ಲಿ ಕನ್ನಡ ಭಾಷೆಗೆ ಪ್ರಭುತ್ವ ದೊರಕಬೇಕು. ಇತರ ಭಾಷೆಗಳು ಕನ್ನಡದ ಮೇಲೆ ಸವಾರಿ ಮಾಡಬಾರದು. ಕನ್ನಡ ಮಾಧ್ಯಮ ಶಾಲೆಗಳನ್ನು ಬಲಪಡಿಸಿ ನಾಡು, ನುಡಿ ಮತ್ತು ಸಂಸ್ಕöತಿಗೆ ಕಾಯಕಲ್ಪ ನೀಡಿ ಸಂರಕ್ಷಣೆ ಮಾಡಬೇಕು ಎಂದು ಧರ್ಮಸ್ಥ¼ದ ಹೇಮಾವತಿ ವೀ. ಹೆಗ್ಗಡೆಯವರು ಹೇಳಿದರು. ಅವರು ಭಾನುವಾರ ಉಜಿರೆಯಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದದಲ್ಲಿ ಎಲ್ಲಾ ಚಟುವಟಿಕೆಗಳು ಕನ್ನಡದ ಮೂಲಕವೇ

ಫೆ.5 : ಕುದ್ರೋಳಿಯಲ್ಲಿ “ಶೂದ್ರ ಶಿವ” ನಾಟಕ

ಮಂಗಳೂರಿನ ರುದ್ರ ಥೇಟರ್ ಅರ್ಪಿಸುವ “ಶೂದ್ರಶಿವ” ಕನ್ನಡ ನಾಟಕ ಫೆ.5ರ ಭಾನುವಾರ ಸಂಜೆ 5.30ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಭಾಂಗಣದಲ್ಲಿ ಪ್ರದರ್ಶನಗೊಳ್ಳಲಿದೆ. ಖ್ಯಾತ ಯುವ ನಿರ್ದೇಶಕ ವಿದ್ದು ಉಚ್ಚಿಲ್ ಅವರ ಪರಿಕಲ್ಪನೆ ಹಾಗೂ ನಿರ್ದೇಶನದಲ್ಲಿ ಈ ನಾಟಕ ಸಿದ್ದಗೊಂಡಿದೆ. ಲೇಖಕ ಬಾಬು ಶಿವ ಪೂಜಾರಿ ಅವರ ‘ಶ್ರೀ ನಾರಾಯಣ ಗುರು ವಿಜಯ ದರ್ಶನ” ಪುಸ್ತಕವನ್ನು ಪ್ರೇರಣಾ ಪಠ್ಯವಾಗಿಟ್ಟುಕೊಂಡು ಜೊತೆಗೆ ನಾರಾಯಣ ಗುರುಗಳ

ಇಂದ್ರಾಳಿಯ ಹಯಗ್ರೀವ ನಗರದಲ್ಲಿ ಕಂಪನಿ ಸೆಕ್ರೆಟ್ರಿ ಸಹವರ್ತಿ ಕಛೇರಿ ಉದ್ಘಾಟನೆ

ಉಡುಪಿಯ ಪರಿಸರದಲ್ಲೇ ಕಂಪನಿ ಸೆಕ್ರೆಟರಿ ತರಬೇತಿ ಪಡೆಯಲು ಇಚ್ಛಿಸುವವರಿಗೆ ಮತ್ತು ಉಡುಪಿಯ ಎಲ್ಲಾ ತರಹದ ಉದ್ಯಮಿಗಳಿಗೆ ಸಲಹೆ ಹಾಗೂ ಅತ್ಯುತ್ತಮ ಸೇವೆಯನ್ನು ನೀಡಲು ಚೇತನ್ ನಾಯಕ್ & ಅಸೋಸಿಯೇಟ್ಸ್ ಮತ್ತು ಸಿ ಎಸ್ ಅಪರ್ಣ ಭಟ್ ರವರ ಸಹಭಾಗಿತ್ವದಲ್ಲಿ ಉಡುಪಿಯ ಇಂದ್ರಾಳಿಯಲ್ಲಿರುವ ಹಯಗ್ರೀವ ನಗರದಲ್ಲಿ ನೂತನ ಕಂಪನಿ ಸೆಕ್ರೆಟ್ರಿ ಸಹವರ್ತಿ ಕಛೇರಿಯನ್ನು ಉದ್ಘಾಟಿಸಲಾಯಿತು. ಈ ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ರವರು ನೂತನ

ಪುತ್ತೂರು : ಕಾರಿಗೆ ಢಿಕ್ಕಿಯಾದ ನಾಯಿ ಕಾರಿನ ಬಂಪರಿನೊಳಗೆ ಪ್ರತ್ಯಕ್ಷ

ಕಾರಿಗೆ ಡಿಕ್ಕಿಯಾದ ನಾಯಿ ಕಾರಿನ ಬಂಪರಿನೊಳಗೆ ಪ್ರತ್ಯಕ್ಷವಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ಎಂಬಲ್ಲಿ ನಡೆದಿದೆ.ಬಂಪರಿನೊಳಗೆ ಸಿಲುಕಿಕೊಂಡಿದ್ದ ಈ ನಾಯಿ ಸುಮಾರು 70 ಕಿಲೋಮೀಟರ್ ಸಾಗಿ ಯಾವುದೇ ಗಾಯಗಳಾಗದೆ ಆರಾಮವಾಗಿ ಬಂಪರ್ ಒಳಗಿನಿಂದ ಇಳಿದು ಹೋಗಿದೆ. ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ದಂಪತಿಗಳು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಪುತ್ತೂರಿಗೆ ವಾಪಾಸಾಗುತ್ತಿದ್ದ ದಾರಿ ಮಧ್ಯೆ ಬಳ್ಪ ಎಂಬಲ್ಲಿ ನಾಯೊಂದು ಕಾರಿಗೆ ಡಿಕ್ಕಿ