ಪೊಲೀಸರ ಮೇಲೆ ಲೋಕಾಯುಕ್ತಕ್ಕೆ ದೂರು ನೀಡಿ ಭ್ರಷ್ಟಾಚಾರ ಆರೋಪ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆ ಮತ್ತು ನಿಖರ, ಪ್ರಾಮಾಣಿಕ ಮಾಹಿತಿಯೊಂದಿಗೆ ದೂರು ನೀಡಿದಲ್ಲಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆಲೋಕ್ ಕುಮಾರ್ ಹೇಳಿದ್ದಾರೆ.ಮಂಗಳೂರು ಪೊಲೀಸ್ ಆಯುಕ್ತರ ವಿರುದ್ಧ
ಗ್ರಾಮದಲ್ಲಿ ಸೌಹಾರ್ಧಯುತ ವಾತಾವರಣದೊಂದಿಗೆ ನಮ್ಮ ಸಂಸ್ಕøತಿ, ಆಚಾರ ವಿಚಾರಗಳನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ ನಿಟ್ಟಿನಲ್ಲಿ ಗ್ರಾಮೋತ್ಸವಗಳು ಪೂರಕವಾಗಿದ್ದು, ಬೆಳ್ಮ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಎಲ್ಲ ಸಂಘ ಸಂಸ್ಥೆಗಳು, ಎಲ್ಲಾ ಧರ್ಮದ ಸಂಘಟನೆಗಳನ್ನು, ಪಕ್ಷದ ಮುಖಂಡರನ್ನು ಒಟ್ಟು ಸೇರಿಸಿ ಐದು ದಿನಗಳ ಕಾಲ ನಡೆಸುವ ಬೆಳ್ಮ ಉತ್ಸವ ಕಾರ್ಯಕ್ರಮ ಇತರ ಗ್ರಾಮಗಳಿಗೆ ಮಾದರಿ ಕಾರ್ಯಕ್ರಮವಾಗಲಿದೆ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಯು.ಟಿ. ಖಾದರ್
ಇಕ್ಕಟ್ಟಾದ ಕಟಪಾಡಿ ಪೇಟೆಭಾಗದಲ್ಲಿ ಹೆದ್ದಾರಿ ದುರಸ್ಥಿ ಕಾರ್ಯ ಹಗಲಲ್ಲೇ ನಡೆಸಿದ್ದರ ಪರಿಣಾಮ ಮೈಲುದ್ಧ ವಾಹನಗಳು ಬ್ಲಾಕ್ ಆಗಿ ಪ್ರಯಾಣಿಕರು ಸಂಕಷ್ಟ ಅನುಭವಿಸುವಂತ್ತಾಗಿದೆ. ಬ್ಲಾಕ್‍ನಲ್ಲಿ ಅಗ್ನಿಶಾಮಕ ವಾಹನ ಕೂಡಾ ಸಿಲುಕಿಕೊಂಡಿತ್ತು. ಈ ದಿನ ಬಹಳಷ್ಟು ಕಾರ್ಯಕ್ರಮಗಳು ಇದ್ದು ವಾಹನ ದಟ್ಟಣೆ ಅತಿಯಾಗಿದ್ದು ಹೆದ್ದಾರಿ ಇಲಾಖಾ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ್ದಾರೆ. ಕಟಪಾಡಿ ಪೇಟೆಯಲ್ಲಿ ಅಂಡರ್ ಪಾಸ್ ಬೇಡಿಕೆ ಇದ್ದರೂ ಜನಪ್ರತಿನಿಧಿಗಳ
ಮರೋಳಿಯ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ, ಜನ್ಮಭೂಮಿ ಫೌಂಡೇಶನ್ ಮಂಗಳೂರು ವತಿಯಿಂದ ಫೆ.11ರಂದು ಶ್ರೀ ಸೂರ್ಯನಾರಾಯಣ ಸನ್ನಿಧಿಯಲ್ಲಿ ಸಪ್ತಗಿರಿವಾಸಿಯಾದ ಶ್ರೀನಿವಾಸ ಮತ್ತು ಪದ್ಮಾವತಿಯ ಕಲ್ಯಾಣೋತ್ಸವದ ಪುಣ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಗಣೇಶ್ ಶೆಟ್ಟಿ ಜಪ್ಪು ಗುಡ್ಡೆಗುತ್ತು ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಫೆ.11ರಂದು ಸಂಜೆ 4 ಗಂಟೆಗೆ ಬ್ರಹ್ಮಶ್ರೀ ಕೆ.ಯು ನೀಲೇಶ್ವರ
ಪುತ್ತೂರು : ಅಮಿತ್ ಶಾ ಫೆ.11 ರಂದು ಪುತ್ತೂರಿಗೆ ಆಗಮಿಸಿ ಕ್ಯಾಂಪ್ಕೊ ಸುವರ್ಣ ಮಹೋತ್ಸವ ಉದ್ಘಾಟನೆ ಹಾಗೂ ಸಮಾವೇಶ ನಡೆಯಲಿರುವ ಹಿನ್ನಲೆಯಲ್ಲಿ ಕಾರ್ಯಕ್ರಮದ ಯಶಸ್ವಿಗಾಗಿ ಪುತ್ತೂರು ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಗುರುವಾರ ಪ್ರಾರ್ಥನೆ ಸಲ್ಲಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್.ಭಟ್ ಪ್ರಾರ್ಥನೆ ಸಲ್ಲಿಸಿದರು. ಕಾರ್ಯಕ್ರಮದ ಸಂದರ್ಭದಲ್ಲಿ ಹಾಗೂ ಬರುವವರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಅನುಗ್ರಹಿಸಲು
ಅಡುಗೆ ಅನಿಲ ಸೋರಿಕೆಯಾಗಿದೆ ಎಂಬ ಗುಮಾನಿಯ ಮೇರೆಗೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿದ ಘಟನೆ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಆಗಮಿಸಿದ್ದ ಗ್ಯಾಸ್ ಟ್ಯಾಂಕರನ್ನು ಹೊತ್ತ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆಯಾಗುತ್ತಿದೆ ಎಂಬ ಗುಮಾನಿ ಎದ್ದಿದ್ದು, ಪೂರಕವೆಂಬಂತೆ ಪರಿಸರದಲ್ಲಿ ಗ್ಯಾಸ್ ವಾಸನೆ ಬಂದಿತ್ತೆನ್ನಲಾಗಿದೆ. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ
ನಗರದ ಅಲೋಶಿಯಸ್ ಐಟಿಐ ಕಾಲೇಜಿನ ರಸ್ತೆಯಲ್ಲಿ ಮರಳು ಸಾಗಾಟ ಲಾರಿಯಿಂದ ಮರಳು ರಸ್ತೆಗೆ ಚೆಲ್ಲಿದ್ದು ಇದರಿಂದ ದ್ವಿಚಕ್ರ ವಾಹನದಲ್ಲಿ ಚಲಿಸುವ ಸವಾರರು ಅಪಘಾತಕ್ಕೊಳಗಾಗುತ್ತಿದ್ದರು. ಇದನ್ನು ಗಮನಿಸಿದ ಅಲೋಶಿಯಸ್ ಕಾಲೇಜಿನ ಐಟಿಐ ವಿದ್ಯಾರ್ಥಿಗಳು ರಸ್ತೆಗೆ ಚೆಲ್ಲಿದ್ದ ಮರಳನ್ನು ತೆರವು ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ವಿದ್ಯಾರ್ಥಿಗಳ ಸೇವಾ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಮಂಗಳೂರು: ಪ್ರತಿಷ್ಠಿತ ದೀಪಾ ಕಂಫರ್ಟ್ ಮಾಲಕಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಉಪಾಧ್ಯಕ್ಷರಾದ ಊರ್ಮಿಳಾ ರಮೇಶ್ ಅವರ ಮಾತೃಶ್ರೀ ರಾಧಾ ಡಿ. ಅಮೀನ್(93) ಗುರುವಾರ ಮಂಗಳೂರು ಗಾಂಧಿನಗರದ ನಿವಾಸದಲ್ಲಿ ನಿಧನರಾದರು. ಅವರು ಪುತ್ರ, ಪುತ್ರಿ ಸೇರಿ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ವಿಧಿ ಗಾಂಧಿನಗರದ ನಿವಾಸದಲ್ಲಿ ಇಂದು ಸಂಜೆ 4ಗಂಟೆಗೆ ನೆರವೇರಲಿದೆ
ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಪಡಿತರ ವರ್ತಕರು ಮಂಜೇಶ್ವರಂ ತಾಲೂಕು ಕಚೇರಿಯಲ್ಲಿ ಧರಣಿ ನಡೆಸಿದರು.ಇ-ಪೆÇೀಸ್ ಮಿಷನ್ ಸರಿಯಾಗಿ ಕೆಲಸ ಮಾಡಲು ವ್ಯವಸ್ಥೆ ಕಲ್ಪಿಸಬೇಕು, ಪಡಿತರ ವರ್ತಕರು ಇ- ಪೋಸ್ ಮಿಷನ್ ಗೆ ಅಡ್ಡಿ ಮಾಡುತ್ತಿದ್ದಾರೆ ಎಂದು ಕೇರಳ ವಿಧಾನಸಭೆಯಲ್ಲಿ ಸಚಿವರ ದಿಕ್ಕು ತಪ್ಪಿಸುವ ಹೇಳಿಕೆ ಹಿಂಪಡೆಯಬೇಕು, ಪಡಿತರ ವರ್ತಕರ ವೇತನ ಪರಿಷ್ಕರಣೆ ಮಾಡಬೇಕು, ಸುಪ್ರೀಂ ಕೋರ್ಟ್ ತೀರ್ಪಿನ ಹೊರತಾಗಿಯೂ ಕಮಿಷನ್ ನೀಡದೆ ಕಿಟ್ ಕಮಿಷನ್ ವಿಳಂಬ ಮಾಡುವುದನ್ನು
ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ರಥಬೀದಿಯಲ್ಲಿದ್ದ ಬೃಹತ್ ಗಾತ್ರದ ಅರಳಿ ಮರ(ಅಶ್ವತ್ಥ)ವೊಂದು ಗುರುವಾರ ಬೆಳೆಗ್ಗೆ ಧರೆಗುರುಳಿದ್ದು, ಮರ ವಿದ್ಯುತ್ ತಂತಿಯ ಮೇಲೆ ಬಿದ್ದು 5-6 ವಿದ್ಯುತ್ ಕಂಬಗಳು ಧರೆಗುರುಳಿರುವ ಜತೆಗೆ ರಸ್ತೆಗೆ ಬಿದ್ದ ಪರಿಣಾಮ ಕೆಲವೊತ್ತು ಸಂಚಾರ ವ್ಯತ್ಯಯ ಉಂಟಾಯಿತು. ಬೆಳ್ಳಗ್ಗಿನ ಹೊತ್ತು ಜನಸಂಚಾರ ಹಾಗೂ ವಾಹನ ಸಂಚಾರ ಹೆಚ್ಚಿರುವ ಸಮಯವಾದರೂ, ದೇವರ ಪವಾಡದ ರೀತಿಯಲ್ಲಿ ಯಾವುದೇ ಜೀವಹಾನಿ ಉಂಟಾಗಿಲ್ಲ. ಕಳೆದೆರಡು ದಿನಗಳಲ್ಲಿ



























