Home Posts tagged #v4newskarnataka (Page 62)

ರಸ್ತೆ ಗುಂಡಿ, ಚರಂಡಿ ಅಭಿವೃದ್ಧಿ ಮಾಡುವ ಯೋಗ್ಯತೆ ಇಲ್ಲ : ನಳಿನ್ ವಿರುದ್ಧ ಮಾಜಿ ಸಚಿವ ಯು.ಟಿ.ಖಾದರ್ ವಾಗ್ದಾಳಿ

ರಸ್ತೆ ಗುಂಡಿ, ಚರಂಡಿ ಅಭಿವೃದ್ಧಿ ಮಾಡುವ ಯೋಗ್ಯತೆ, ಅರ್ಹತೆ ಇಲ್ಲದವರು, ಭಾವನಾತ್ಮಕ ವಿಚಾರದ ಮೂಲಕವೇ ರಾಜಕಾರಣ ಮಾಡುತ್ತಿದ್ದಾರೆ ಎಂದು ನಳಿನ್ ವಿರುದ್ಧ ಮಾಜಿ ಸಚಿವ ಹಾಗೂ ಶಾಸಕ ಯು.ಟಿ.ಖಾದರ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆ ಗುಂಡಿ, ಚರಂಡಿ ಅಭಿವೃದ್ಧಿ ಮಾಡುವ ಯೋಗ್ಯತೆ

ಪತ್ರಕರ್ತರಲ್ಲಿ ಹೋರಾಟದ ಮನೋಭಾವ ಇರಬೇಕು : ಓಶಿಯನ್ ಪರ್ಲ್ ಹೋಟೆಲ್‍ ಉಪಾಧ್ಯಕ್ಷ ಗಿರೀಶ್

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮ್ಮೇಳನದಲ್ಲಿ ಕರಾವಳಿ ಅಭಿವೃದ್ಧಿ ಮತ್ತು ಪತ್ರಿಕೋದ್ಯಮದ ಬಗ್ಗೆ ವಿಚಾರಗೋಷ್ಟಿ ನಡೆಯಿತು. ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಪತ್ರಕರ್ತರ ಜಿಲ್ಲಾ ಸಮ್ಮೇಳನದಲ್ಲಿ ವಿಚಾರಗೋಷ್ಟಿ ನಡೆಯಿತು. ಹಿರಿಯ ಪತ್ರಕರ್ತರಾದ ಅನಿಲ್ ಶಾಸ್ತ್ರಿ ಅವರು ವಿಷಯ ಮಂಡಿಸಿದರು. ಓಶಿಯನ್ ಪರ್ಲ್ ಹೋಟೆಲ್‍ನ ಉಪಾಧ್ಯಕ್ಷರಾದ ಗಿರೀಶ್ ಅವರು ಕರಾವಳಿ ಅಭಿವೃದ್ಧಿ ಮತ್ತು ಪತ್ರಿಕೋದ್ಯಮದ ಬಗ್ಗೆ ಮಾತನಾಡಿ,

ಅಡಿಕೆಗೆ ಭವಿಷ್ಯವಿಲ್ಲ ಗೃಹ ಸಚಿವರ ಹೇಳಿಕೆಗೆ ಖಂಡನೆ : ಮಾಜಿ ಶಾಸಕ ವಸಂತ ಬಂಗೇರಾ ವಾಗ್ದಾಳಿ

ಅಡಿಕೆಯ ಬಗ್ಗೆ ಹಗುರವಾಗಿ ಮಾತನಾಡಿದ ಗೃಹ ಸಚಿವರ ವಿರುದ್ಧ ಗರಂ ಆದ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಅವರು ಅವರ ಮಾತು ಖಂಡನಾರ್ಹ ಎಂದು ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿ ಗೃಹ ಸಚಿವರು ಆ ರೀತಿ ಹೇಳಬಾರದಿತ್ತು ಅಡಿಕೆ ಬೆಳೆಗಾರರ ಬಗ್ಗೆ ಕೀಳಾಗಿ ಮಾತನಾಡಬಾರದು ಅಡಿಕೆ ಬೆಳೆಗಾರರು ಹೆದರುವಂಥ ಅವಶ್ಯಕತೆ ಇಲ್ಲ ಅಡಿಕೆಗೆ ಬೆಲೆ ಯಾವತ್ತೂ ಕಡಿಮೆಯಾಗುವುದಿಲ್ಲ ಎಂದು ಅಡಿಕೆ ಬೆಳೆಗಾರರಿಗೆ ಧೈರ್ಯ ಹೇಳಿದರು ಈ ಸಂದರ್ಭದಲ್ಲಿ ಮಾಜಿ ಸಚಿವ

ವಿಟ್ಲ : ಬಾಲಕಿಗೆ ಬೈಕ್ ಢಿಕ್ಕಿ ಗಂಭೀರ ಗಾಯ

ವಿಟ್ಲ: ರಸ್ತೆ ಬದಿ ನಿಂತಿದ್ದ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಒಕ್ಕೆತ್ತೂರು ಎಂಬಲ್ಲಿ ಸಂಭವಿಸಿದೆ. ವಿಟ್ಲ ಒಕ್ಕೆತ್ತೂರು ನಿವಾಸಿ ಬಶೀರ್ ಅವರ ಪುತ್ರಿ ಫಾತಿಮತ್ ನಿದಾ ಗಾಯಗೊಂಡ ವಿದ್ಯಾರ್ಥಿನಿಯಾಗಿದ್ದು, ಈಕೆ ವಿಟ್ಲ ಸರಕಾರಿ ಮಾದರಿ ಶಾಲೆಯ 5ನೇ ತರಗತಿ ವಿದ್ಯಾರ್ಥಿಯಾಗಿದ್ದು, ಶಾಲೆಗೆ ಹೋಗಲು ಒಕ್ಕೆತ್ತೂರಿನಲ್ಲಿ ಆಟೋ ರಿಕ್ಷಾಕ್ಕೆ ಕಾಯುತ್ತಿದ್ದಾಗ ವಿಟ್ಲ ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದು

ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿ 2023

ತುಳು ವಿದ್ವಾಂಸ, ಸಂಶೋಧಕ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ಇವರಿಗೆ 2022-23 ಸಾಲಿನ ಬೈಕಾಡಿ ಜನಾರ್ದನ ಆಚಾರ್ ಪ್ರಶಸ್ತಿಯನ್ನು ತುಳು ಸಾಹಿತ್ಯ ಕ್ಷೇತ್ರಕ್ಕೆ ಅಗಾಧ ಕೊಡುಗೆ ನೀಡಿದ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ಇವರು ಸ್ವೀಕರಿಸಲಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 05, ಜನವರಿ 2023ರಂದು ಕೆನರಾ ಪ್ರೌಢಶಾಲೆ ಡೊಂಗರಕೇರಿಯ ಭುವನೇಂದ್ರ ಸಭಾಂಗಣದಲ್ಲಿ ಸಂಜೆ ಸರಿಯಾಗಿ 4:30ಕ್ಕೆ ಜರುಗಲಿದೆ. ಉತ್ತಮ ಶಿಕ್ಷಕ, ಅಪ್ರತಿಮ ವಾಗ್ಮಿ ಹಾಗೂ ಅನೇಕ

ಹಾಲಾಡಿಯಲ್ಲಿ ಅಪರೂಪದ ಶಾಸನ ಶೋಧ

ಉಡುಪಿ ಜಿಲ್ಲೆ, ಕುಂದಾಪುರ ತಾಲೂಕು 76 ಹಾಲಾಡಿಯ ಹುಯ್ಯಾರುವಿನಲ್ಲಿ ಅತಿ ವಿರಳ ಎನ್ನಬಹುದಾದ ಶಾಸನ ಪತ್ತೆಯಾಗಿದೆ. ಹುಯ್ಯಾರು ಪಟೇಲ್ ದಿ.ಹಿರಿಯಣ್ಣ ಶೆಟ್ಟಿ ಕುಟುಂಬಿಕರ ಜಾಗದಲ್ಲಿ ಈ ಶಾಸನವಿದೆ. ಸುಮಾರು 10 ಅಡಿ ಎತ್ತರ, ೫ ಅಡಿ ಅಗಲ ಮತ್ತು ೩.೫ ಇಂಚು ದಪ್ಪ ಗ್ರಾನೈಟ್ ಶಿಲೆಯಲ್ಲಿ ಶಾಸನವನ್ನು ರಚಿಸಲಾಗಿದೆ. ಆಯತಾಕಾರದ ರಚನೆಯನ್ನು ಹೊಂದಿರುವ ಇದರ ಮೇಲ್ಭಾಗವನ್ನು ಕೋನಾಕೃತಿಯಲ್ಲಿ ವಿನ್ಯಾಸ ಮಾಡಲಾಗಿದೆ. ಶಾಸನವನ್ನು ಎರಡು ಪಟ್ಟಿಕೆಗಳನ್ನಾಗಿ

ಶಿರಾಡಿ ಘಾಟ್‌ ಸುರಂಗ ಮಾರ್ಗಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ

ಶಿರಾಡಿ ಘಾಟ್‌ನಲ್ಲಿ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಂಸದ ನಳೀನ್‌ ಕುಮಾರ್ ಕಟೀಲ್‌ ಟ್ವಿಟ್ ಮಾಡಿದ್ದು ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾರನಹಳ್ಳಿ-ಅಡ್ಡಹೊಳೆ(ಶಿರಾಡಿ ಘಾಟ್) ಭಾಗದ ಚತುಷ್ಪತ ರಸ್ತೆ ಕಾಮಗಾರಿಗೆ 1976 ಕೋಟಿ ರೂ.ಮೊತ್ತದ ಬಿಡ್ ಆಹ್ವಾನಿಸಿದೆ. ಶಿರಾಡಿ ಘಾಟ್‌ನಲ್ಲಿ 15,000 ಕೋಟಿ ಮೊತ್ತದ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಆದೇಶಿಸಿದೆ ಅಂತ

ಯಡ್ತೆರೆ ಮಂಜಯ್ಯ ಶೆಟ್ಟರ ಕನಸಿನ ಕೂಸು ನೆಂಪು ಪಬ್ಲಿಕ್ ಸ್ಕೂಲ್ :ವಜ್ರ ಸಂಗಮದ ಉದ್ಘಾಟನಾ ಕಾರ್ಯಕ್ರಮ

ಬೈಂದೂರು: ಗ್ರಾಮೀಣ ಭಾಗಗಳ ಅಭಿವೃದ್ಧಿಯ ಬಗ್ಗೆ ಕನಸು ಕನಸು ಕಂಡು ನನಸು ಮಾಡಲು ಹೊರಟಿದ್ದ ಯಡ್ತೆರೆ ಮಂಜುಯ್ಯ ಶೆಟ್ಟಿ ಕರಾವಳಿಯ ಧೀಮಂತ ನಾಯಕ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು.ವಂಡ್ಸೆ ಸಮೀಪದ ನೆಂಪುವಿನ ಮಲ್ನಾಡ್ ಸ್ಲೂಲ್, ಕರ್ನಾಟಕ ಪಬ್ಲಿಕ್ ಸ್ಕೂಲ್‍ನ ವಜ್ರ ಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಂಡ್ಸೆ ಪಿರ್ಕಾ ಎನ್ನುವುದು ಉಡುಪಿ ಜಿಲ್ಲೆಯಲ್ಲಿಯೇ ಅತೀ ದೊಡ್ಡ ಪಿರ್ಕಾ ಆಗಿದೆ. ನಿಜವಾಗಿ ವಂಡ್ಸೆ ಪಿರ್ಕಾ

ಜ.6 ಮತ್ತು 7ರಂದು ಕೇರಳ ಸಾಹಿತ್ಯ ಬಹುಭಾಷಾ ಸಮ್ಮೇಳನ

ಮಂಜೇಶ್ವರ: ಮಂಜೇಶ್ವರ ದ ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕದಲ್ಲಿ ಜನವರಿ 6 ಮತ್ತು 7ರಂದು ನಡೆಯಲಿರುವ ಕೇರಳ ಸಾಹಿತ್ಯ ಬಹುಭಾಷಾ ಸಮ್ಮೇಳನದ ಭಾಗವಾಗಿರುವ ಚಿತ್ರಪ್ರದರ್ಶನದ ಸಿದ್ಧತೆಗಳು ಪ್ರಗತಿಯಲ್ಲಿದೆ. ಕಾಸರಗೋಡಿನ ಮಾನವ ಸ್ವಭಾವ, ಸಾಂಸ್ಕೃತಿಕ ಇತಿಹಾಸ ಮತ್ತು ಭೌಗೋಳಿಕತೆಯನ್ನು ಮರುಶೋಧಿಸುವ ಚಿತ್ರಗಳನ್ನು ರಚಿಸಲಾಗುತ್ತಿದೆ.ಕಲೆ, ಜೀವನ, ಭಾಷೆ, ಕಲ್ಪನೆ, ಪ್ರಕೃತಿ ಗಳ ಬಗ್ಗೆ ಹಾಗೂ ಗಡಿನಾಡಿನ ಗ್ರಾಮಗಳಲ್ಲಿರು ಕಟ್ಟಡಗಳ ಚಿತ್ರಗಳು ಕೂಡಾ ಪುದರ್ಶನಕ್ಕೆ

ಕೋವಿಡ್ ನಿಂದ ಆರಂಭವಾದ ಹಾಡು ನೀ ಹಾಡು ಪಯಣ

ಕೋವಿಡ್, ಜಗತ್ತನ್ನೇ ತನ್ನ ಕಪಿ ಮುಷ್ಟಿಯಲ್ಲಿ ಕಟ್ಟಿ ಹಾಕಿದ್ದ ಸಂದರ್ಭ ಅದು. ಆ ಸಂದರ್ಭದಲ್ಲಿ ಒಂದು ಹೊಸ ಚಿಂತನೆಯೊಂದಿಗೆ ನಮ್ಮ ಊರಿನ ಗಾನ ಕೋಗಿಲೆಗಳಿಗೆ ಚೈತನ್ಯವಾಗಿ ರೂಪುಗೊಂಡದ್ದೇ ಉಡುಪಿ ಶೈನಿಂಗ್ ಸ್ಟಾರ್ ವೇದಿಕೆ. ಅಂದು ಮಣಿಪಾಲ ಮಹಿಳಾ ಸಮಾಜ ಎಂಬ ಮಹಾನ್ ಶಕ್ತಿಗಳಿಂದ ನಿರ್ಮಾಣ ಗೊಂಡ ಉಡುಪಿ ಶೈನಿಂಗ್ ಸ್ಟಾರ್ ಎಂಬ ವೇದಿಕೆ ಮುಂದೊಂದು ದಿನ ಇಡೀ ಕರಾವಳಿಯೇ ಮೆಚ್ಚುವಂಥ ತುಳುನಾಡಿನಾದ್ಯಂತ ಸದ್ದನ್ನ ಮಾಡುತ್ತಿರುವ ಹಾಡು ನೀ ಹಾಡು ಕಾರ್ಯಕ್ರಮಕ್ಕೆ