Home Posts tagged #v4newskarnataka (Page 64)

ಅವಾಸ್ತವಿಕ, ಅವೈಜ್ಞಾನಿಕ, ಅಂವಿಧಾನಿಕವಾಗಿರುವ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ತಿರಸ್ಕರಿಸಬೇಕು: ಸಂಕಲ್ಪ ಸಮಾವೇಶ ಆಗ್ರಹ

ಬೆಂಗಳೂರು: ಪರಿಶಿಷ್ಟರ ಒಳಮೀಸಲಾತಿ ಕುರಿತು ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ನೀಡಿರುವ ವರದಿ ಅವಾಸ್ತವಿಕ, ಅವೈಜ್ಞಾನಿಕ, ಅಂವಿಧಾನಿಕವಾಗಿದ್ದು, ಈ ವರದಿಯನ್ನು ತಿರಸ್ಕರಿಸುವಂತೆ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಆಗ್ರಹಿಸಿದೆ. ನಗರದ ಮೆಜೆಸ್ಟಿಕ್‌ ನ ಕೆ.ಆರ್.ಎಸ್ ನಿಲ್ದಾಣದಿಂದ ಬೃಹತ್‌ ಜಾತಾ ಮೂಲಕ ಫ್ರೀಡಂ ಪಾರ್ಕ್ ನಲ್ಲಿ ಸೇರಿದ ಒಕ್ಕೂಟದ ಸದಸ್ಯರು,

ಎಸೆಸೆಲ್ಸಿ ಮಕ್ಕಳಿಗಾಗಿ ವಿದ್ಯಾರ್ಥಿ ಸ್ನೇಹಿ ಎಸೆಸೆಲ್ಸಿ ಉತ್ತೀರ್ಣ ಪ್ಯಾಕೇಜ್

ದಕ್ಷಿಣ ಕನ್ನಡ ಜಿಲ್ಲೆಯ 4 ಶಾಲೆಗಳ 30 ಪರಿಣಿತ ವಿಷಯ ಶಿಕ್ಷಕರಿಂದ ಸಿದ್ಧಪಡಿಸಲಾದ ವಿದ್ಯಾರ್ಥಿ ಸ್ನೇಹಿ ಎಸ್‍ಎಸ್‍ಎಸ್‍ಎಲ್ ಉತ್ತೀರ್ಣ ಪ್ಯಾಕೇಜ್‍ನ ಬಿಡುಗಡೆ ಕಾರ್ಯಕ್ರಮ ನಡೆಯಿತು. ನಗರದ ಪ್ರೆಸ್‍ಕ್ಲಬ್‍ನಲ್ಲಿ ಡಿಡಿಪಿಐ ಸುಧಾಕರ್ ಅವರು ಎಸ್‍ಎಸ್‍ಎಸ್‍ಎಲ್ ಉತ್ತೀರ್ಣ ಪ್ಯಾಕೇಜ್‍ನ್ನು ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು,

ಸರಕಾರಿ ವ್ಯವಸ್ಥೆಯ ದುರುಪಯೋಗ : ಸಿಬ್ಬಂದಿ ಮೇಲೆ ಅಧಿಕಾರಿಯಿಂದ ದೂರು

ಪುತ್ತೂರು: ಖಾಸಗಿ ವಿಚಾರಕ್ಕಾಗಿ ಇಲಾಖೆಯ ಲೆಟರ್ ಹೆಡ್, ಸೀಲ್ ಮತ್ತು ಸಹಿಯನ್ನು ದುರುಪಯೋಗ ಪಡಿಸಿಕೊಂಡಿರುವುದಾಗಿ ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಕಾರ್ಯನಿರ್ವಹಣಾಧಿಕಾರಿಯೊಬ್ಬರು ಕಚೇರಿ ಸಿಬ್ಬಂದಿಗೆ ಆರೋಪಿಸಿ, ದೂರು ನೀಡಿದ್ದಾರೆ. ತಾಲೂಕು ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ನೀಡಿದ ದೂರಿನಲ್ಲಿ ತಿಳಿಸಿರುವಂತೆ, ಸಿಬ್ಬಂದಿ ಶಿವಾನಂದ ತನ್ನ ವೈಯುಕ್ತಿಕ ಮತ್ತು ಸ್ವಹಿತಾಸಕ್ತಿಗಾಗಿ ಸರಕಾರಿ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡಿದ್ದನು ಎಂದು

ವೈದ್ಯಲೋಕ ಕೈಬಿಟ್ಟ ಪ್ರಕರಣ : ಹರಕೆ ಹೇಳಿದ ಒಂದೇ ವಾರದಲ್ಲಿ ನಡೆಯಿತು ಪವಾಡ..!!!

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಗೌರಿನಿಲಯ ನಿವಾಸಿ 48 ವರ್ಷದ ವಾಸುದೇವಾ ನಾಯಕ್ ಅವರು ವ್ಯಾವಹಾರವನ್ನು ಮಾಡುತ್ತಿದ್ದರು ಇವರಿಗೆ ಆರೋಗ್ಯದಲ್ಲಿ ಎಲ್ಲವೂ ಸರಿಯಿತ್ತು ಆದ್ರೆ ಇವರಿಗೆ ಏಕಾಏಕಿ ಹೃದಯ ಸಂಬಂದ ಸಮಸ್ಯೆಯಿಂದ ಬಳಳುತ್ತಿದ್ದು ಕಳೆದ ನವೆಂಬರ್ 18 ರಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪ್ರಾರಂಭವಾಗುತ್ತು ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಮಾಡಲಾಗಿತ್ತು ಈ ಚಿಕಿತ್ಸೆ ನಡೆದ ನಂತರ ವಾಸು ಅವರಿಗೆ ಮಾತನಾಡಲು

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ, ಚಾಲಕನಿಗೆ ಗಾಯ

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕದಲ್ಲಿರುವ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿ ಹೊಡೆದಿರುವ ಘಟನೆ ರಾ.ಹೆ66 ರ ಕೋಟೆಕಾರು ಬೀರಿ ಸಮೀಪ ನಿನ್ನೆ ತಡರಾತ್ರಿ ವೇಳೆ ನಡೆದಿದೆ. ಸ್ಥಳೀಯ ಯುವಕರ ತಂಡ ತಕ್ಷಣ ಕಾರು ಚಾಲಕನನ್ನು ಹೊರಗೆಳೆದು ರಕ್ಷಿಸಿ ಮಾನವೀಯತೆ ಮೆರೆದಿರುವ ವೀಡಿಯೋ ವೈರಲ್ ಆಗಿದೆ. ಹಳೆಯಂಗಡಿ ನಿವಾಸಿ ನೌಫಾಲ್ ಗಾಯಗೊಂಡವರು. ತಲಪಾಡಿ ಕಡೆಯಿಂದ ಹಳೆಯಂಗಡಿಯತ್ತ ತೆರಳುವ ವೇಳೆ ಕಾರು ನಿಯಂತ್ರಣ ಕಳೆದು ರಾ.ಹೆ. ಬಳಿಯ ವಿಭಜಕ

ಹಿರಿಯ ಸಾಹಿತಿ, ಲೇಖಕಿ ಡಾ ಸಾರಾ ಅಬೂಬಕರ್ ನಿಧನ

ಮಂಗಳೂರು: ಹಿರಿಯ ಸಾಹಿತಿ, ಲೇಖಕಿ ಡಾ ಸಾರಾ ಅಬೂಬಕರ್ (87) ಇಂದು ನಿಧನರಾಗಿದ್ದಾರೆ. ಕೆಲವು ಸಮಯಗಳಿಂದ ವಯೋಸಜಹ ಖಾಯಿಲೆಯಿಂದ ಬಳಲುತ್ತಿದ್ದ ಅವರು ಮಂಗಳೂರಿನ ಲೇಡಿ ಹಿಲ್ ಬಳಿಯಿರುವ ತಮ್ಮ ನಿವಾಸದಲ್ಲಿ ವಾಸವಿದ್ದರು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ. ಮೂಲತಃ ಕಾಸರಗೋಡಿನ ಚಂದ್ರಗಿರಿ ತೀರದವರಾದ ಸಾರಾ ವಿವಾಹವಾದ ಬಳಿಕ ಮಂಗಳೂರಿನಲ್ಲಿ ವಾಸವಿದ್ದರು. ಅಜ್ಜಿ ಹೇಳುತ್ತಿದ್ದ ಕಥೆಗಳಿಂದ ಆಕರ್ಷಿತರಾಗಿ ಸಾಹಿತ್ಯದಲ್ಲಿ ಏನಾದರೂ ಸಾಧಿಸಬೇಕೆಂಬ ಆಶಯ

ಬ್ರಹ್ಮಮೊಗೇರ್ ಯಕ್ಷಗಾನ ಬಯಲಾಟ, ಧಾರ್ಮಿಕ ಸಭಾ ಕಾರ್ಯಕ್ರಮ

ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ಬ್ರಹ್ಮಮೊಗೇರ ಆರಾಧನಾ ಟ್ರಸ್ಟ್‍ನ ವತಿಯಿಂದ ಬ್ರಹ್ಮಮೊಗೇರೆರ್ ಯಕ್ಷಗಾನ ಬಯಲಾಟ, ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಮೊಗೇರ ದೈವಗಳ ದರ್ಶನ ಪಾತ್ರಿಗಳ ಸನ್ಮಾನ ಕಾರ್ಯಕ್ರಮ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರಾ ಗದ್ದೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‍ನ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ತುಳು ನಾಡು ಎಂಬುದು ಒಂದು

ಬಳಕೆದಾರರ ಜಾಗೃತಿ ವೇದಿಕೆ-ಅಧ್ಯಕ್ಷರಾಗಿ ಅರುಣ್ ಪ್ರಕಾಶ್ ಶೆಟ್ಟಿ ಆಯ್ಕೆ

ಮೂಡುಬಿದಿರೆ: ಮೂಲ್ಕಿ ತಾಲೂಕು ಹಾಗೂ ಮೂಡುಬಿದಿರೆ ತಾಲೂಕುಗಳನ್ನು ಒಳಗೊಂಡ ಬಳಕೆದಾರರ ಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಮೂಡುಬಿದಿರೆಯ ಅರುಣ್ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಡಾ.ಶಿವರಾಜ್ ಅರಸು ಆಯ್ಕೆಯಾಗಿದ್ದಾರೆ.ಪದಾಧಿಕಾರಿಗಳು: ಯು ಪದ್ಮನಾಭ ಶೆಟ್ಟಿ( ಗೌರವಾಧ್ಯಕ್ಷರು), ಕೆ.ವೇದವ್ಯಾಸ ಉಡುಪ, ಜೈಸನ್ ತಾಕೋಡೆ(ಉಪಾಧ್ಯಕ್ಷರು), ಡಾ.ರವೀಶ್ ಕುಮಾರ್ ಎಂ.( ಸಂಚಾಲಕರು), ದಯಾನಂದ ನಾಯ್ಕ್( ಜೊತೆ ಕಾರ್ಯದರ್ಶಿ), ಅಶೋಕ್ ಕಟೀಲ್( ಕೋಶಾಧಿಕಾರಿ) ಆಯ್ಕೆಯಾಗಿದ್ದಾರೆ.

ಮೂಡುಬಿದರೆ – ಮಾರ್ಕೆಟ್‍ನಲ್ಲಿ ರಾಶಿ ಹಾಕಿರುವ ಗುಜರಿ ವಸ್ತು ತೆರವುಗೊಳಿಸಲು ಕ್ರಮ : ಪುರಸಭಾ ಸದಸ್ಯ ರಾಜೇಶ್ ನಾಯ್ಕ್

ಮೂಡುಬಿದಿರೆ: ಸ್ವರಾಜ್ಯ ಮೈದಾನದ ಮಾರ್ಕೆಟ್ ನಲ್ಲಿ ಗುಜರಿ ಅಂಗಡಿಯಿದ್ದು ಸುತ್ತಮುತ್ತಲಿನ ಪ್ರದೇಶದಲ್ಲಿ ಗುಜರಿ ವಸ್ತುಗಳನ್ನು ರಾಶಿ ಹಾಕಿರುವುದರಿಂದ ಪರಿಸರ ಮಾಲಿನ್ಯವಾಗಿದೆ. ರಾಶಿ ಹಾಕಿರುವ ಗುಜರಿ ವಸ್ತುಗಳನ್ನು ತೆರವುಗೊಳಿಸುವಂತೆ ಸದಸ್ಯ ರಾಜೇಶ್ ನಾಯ್ಕ್ ಪುರಸಭಾ ಸಾಮಾನ್ಯ ಸಭೆಯಲ್ಲಿ ತಿಳಿಸಿದರು. ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ ಪುರಸಭಾ ಕಾರ್ಯಾಲಯದ ಸಭಾಭವನದಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಗಮನ ಸೆಳೆದರು.

ಕೊಡಗು ಜಿಲ್ಲಾ ಬಂಟರ ಅಧ್ಯಕ್ಷರಾಗಿ ವಕೀಲ ರತ್ನಾಕರ್ ಶೆಟ್ಟಿ ಅವಿರೋಧ ಆಯ್ಕೆ

ವಿರಾಜಪೇಟೆ ಸಮೀಪದ ಮಗ್ಗುಲದ ಅಗ್ನೋನಿಮಾ ರೆಸಾರ್ಟ್ ನಲ್ಲಿನ ಜಿಲ್ಲಾ ಬಂಟರ ಸಂಘದ ಮಹಾಸಭೆಯಲ್ಲಿ ವಿರಾಜಪೇಟೆಯ ಹಿರಿಯ ವಕೀಲರು, ಹಲವಾರು ಸಂಘ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಬಿ ಆರ್ ರತ್ನಾಕರ ಶೆಟ್ಟಿ ಅವರನ್ನು ಜಿಲ್ಲಾ ಬಂಟರ ಸಂಘದ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಂಘದ ನಿಕಟಪೂರ್ವ ಅಧ್ಯಕ್ಷ ನಾರಾಯಣ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಗೌರವಾಧ್ಯಕ್ಷರಾಗಿ ಬಾಲಕೃಷ್ಣ ರೈ, ಹಾಗೂ ನಾರಾಯಣ್ ರೈ ಯವರನ್ನು