ಮಂಗಳೂರಿನ ಬಂಟ್ಸ್‍ಹಾಸ್ಟೆಲ್‍ನಲ್ಲಿರುವ ಮೆರೈನ್ ಪ್ಯಾರಡೈಸ್ ಪ್ಲಾಜಾದಲ್ಲಿ ಪೂಮಾ ಮಳಿಗೆ ಶುಭಾರಂಭಗೊಂಡಿತು. ಒಂದೇ ಸೂರಿನಡಿಯಲ್ಲಿ ಪೂಮಾ ಕಂಪೆನಿಯ ವಸ್ತ್ರಗಳು ಮತ್ತು ಶೂಷ್, ಆಕ್ಸೆಸಸರೀಸ್‍ಗಳು ಲಭ್ಯವಿದೆ. ನೂತನ ಮಳಿಗೆಯನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ಇದೇ ವೇಳೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ
ಉಡುಪಿ ತಾಲೂಕು ಶಿವಳ್ಳಿಯಲ್ಲಿ ಡಿ.11ರಂದು ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಯನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಆಶ್ರಯ ಬಡಾವಣೆ ನಿವಾಸಿ ಸಾಧಿಕ್ ಉಲ್ಲಾ (35) ಬಂಧಿತ ಆರೋಪಿ. ಉಡುಪಿ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಈತನನ್ನು ಬಂಧಿಸಿದ್ದು ಶಿಕಾರಿಪುರದ ತನ್ನ ಮನೆಯಲ್ಲಿಟ್ಟಿದ್ದ ಕಳವುಮಾಡಿಕೊಂಡು ಹೋದ 4 ಲಕ್ಷ 35 ಸಾವಿರ ಮೌಲ್ಯದ ವಜ್ರದ ಉಂಗುರ, ಚಿನ್ನಾಭರಣ, ಬೆಳ್ಳಿ ಗಟ್ಟಿ, ಬೆಳ್ಳಿ ಆಭರಣ
ವಿಟ್ಲ: ಪುಣಚ ಗ್ರಾಮದ ನೆಲ್ಲಿಗುಡ್ಡೆ ಜರಿಮೂಲೆ ಸಮೀಪ ಹೊಂಡದಲ್ಲಿ ಮೃತದೇಹ ಹಾಗೂ ಮೊಬೈಲ್ ಪತ್ತೆಯಾದ ಘಟನೆ ನಡೆದಿದೆ. ಸೊಪ್ಪು ಸೌದೆ ತರಲು ಗುಡ್ಡಕ್ಕೆ ಹೋದ ಸ್ಥಳೀಯ ನಿವಾಸಿಗಳಿಗೆ ಮೊಬೈಲ್ ಪತ್ತೆಯಾಗಿದೆ. ಇದನ್ನು ಗಮನಿಸಿ ಅಕ್ಕಪಕ್ಕದ ನೋಡಿದಾಗ ಮೃತದೇಹ ಪತ್ತೆಯಾಗಿದ್ದು, ಭಯಗೊಂಡು ಓಡಿಹೋಗಿದ್ದಾರೆನ್ನಲಾಗಿದೆ. ಪಕ್ಕದಲ್ಲಿರುವ ಮರದಲ್ಲಿ ಬಳ್ಳಿಯೊಂದು ನೇತಾಡುತ್ತಿದ್ದು, ಮೃತದೇಹ ನೆಲದಲ್ಲಿ ಬಿದ್ದುಕೊಂಡಿದೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ
ಉಳ್ಳಾಲ: ದೇರಳಕಟ್ಟೆ ಎರಡು ಆಸ್ಪತ್ರೆಗಳ ನಡುವೆ ಇರುವ ಫ್ಲಾಟ್ ಒಂದರಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ಫ್ಲಾಟ್ ನ ಮೆನೇಜರ್ ಸಮಯಪ್ರಜ್ಞೆಯಿಂದ 100ಕ್ಕೂ ಅಧಿಕ ಮಂದಿಯಿರುವ 13 ಮಹಡಿಗಳ ಫ್ಲಾಟ್‍ನಲ್ಲಿ ಅಗ್ನಿ ದುರಂತ ತಪ್ಪಿದೆ. ದೇರಳಕಟ್ಟೆ ಕ್ಷೇಮ ಆಸ್ಪತ್ರೆ ಬಳಿಯಿರುವ ಫ್ಲಾಮ ನೆಸ್ಟ್ ಫ್ಲಾಟ್‍ನಲ್ಲಿ ಅಗ್ನಿ ಅವಘಢ ಸಂಭವಿಸಿರುವುದು.ಫ್ಲಾಟ್‍ನ 202ರ ರೂಮಿನಲ್ಲಿ ದಂತ ವೈದ್ಯಕೀಯ ಕಲಿಯುವ ಇಬ್ಬರು ವಿದ್ಯಾರ್ಥಿನಿಯರಿದ್ದು, ಡಿ.20 ರ
ಮೂಲ್ಕಿ- ಕಳೆದ ಕೆಳ ದಿನಗಳ ಹಿಂದೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆರೆಕಾಡು ಎಂಬಲ್ಲಿ ಆರೋಪಿ ಹಳೆಯಂಗಡಿ ಇಂದಿರಾ ನಗರದ ನಿವಾಸಿ ದಾವುದ್ ಹಕೀಮ್ ಎಂಬಾತ ಅಪ್ರಾಪ್ತ ಬಾಲಕಿಯ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಲ್ಕಿ ಪೆÇಲೀಸರು ಪ್ರಕರಣದ ತನಿಖೆಯಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಕೆರೆಕಾಡು ಗ್ರಾಮಸ್ಥರು ಮುಲ್ಕಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ಮುಲ್ಕಿ
ಮಂಗಳೂರು : ಹಿಂದುತ್ವ ಸಂಘಟನೆಗಳಿಂದ ನಡೆದಿರುವ ಅನೈತಿಕ ಪೊಲೀಸ್ ಗಿರಿ ಗೂಂಡಾವರ್ತನೆ ಆಗಿದ್ದು ಖಂಡನೀಯವಾಗಿದ್ದು, ಕಾನೂನು ಕೈಗೆತ್ತಿಗೊಳ್ಳಲು ಪೊಲೀಸರು ಅವಕಾಶ ನೀಡಬಾರದು ಎಂದು ಆಮ್ ಆದ್ಮಿ ಹೇಳಿದೆ. ಚುನಾವಣೆ ಹತ್ತಿರ ಆಗುತ್ತಿರುವಂತೆ ಕರಾವಳಿಯಲ್ಲಿ ಅನೈತಿಕ ಗೂಂಡಾಗಿರಿ, ಕೋಮು ವೈಷಮ್ಯದ ಘಟನೆಗಳು ನಡೆಯುತ್ತಿದೆ. ಕೋಮು ದ್ವೇಷವನ್ನು ಹರಡುವ ಮೂಲಕ ಮತಗಳಿಸುವ ಕೆಟ್ಟ ರಾಜಕೀಯ ನಡೆಯುತ್ತಿರುವುದು ಶೋಚನೀಯವಾಗಿದೆ. ರಾಜಕೀಯ ಲಾಭಗೊಸ್ಕರ ಧರ್ಮವನ್ನು ಬಳಕೆ
ಉಳ್ಳಾಲ: ಮಂಗಳೂರು ವಿ.ವಿ ವ್ಯಾಪ್ತಿಯ ಪದವಿ ಫಲಿತಾಂಶ ವಿಳಂಬ ಖಂಡಿಸಿ ಕೊಣಾಜೆ ಮಂಗಳೂರು ವಿ.ವಿ ಆಡಳಿತ ಕಚೇರಿಗೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿರುವ ಘಟನೆ ಇಂದು ನಡೆದಿದೆ. ಈ ನಡುವೆ ಆಡಳಿತ ಕಚೇರಿಯಲ್ಲಿ ನಡೆಯುತ್ತಿದ್ದ ಸಿಂಡಿಕೇಟ್ ಸಭೆಗೆ ಎಬಿವಿಪಿ ಕಾರ್ಯಕರ್ತರು ನುಗ್ಗಲು ಯತ್ನಿಸಿದಾಗ ಪೊಲೀಸ್ರು ತಡೆಹಿಡಿದಿದ್ದಾರೆ. ಎಬಿವಿಪಿ ಮಂಗಳೂರು ವಿಭಾಗ ಸಂಚಾಲಕ ಹರ್ಷಿತ್ ಕೊಯ್ಲ ,ಮಾತನಾಡಿ ಮಂಗಳೂರು ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ
ಮಂಗಳೂರು ನಗರದ ಬಂಟ್ಸ್ ಹಾಸ್ಟೆಲ್ ವೃತ್ತದಲ್ಲಿ ಒಂದು ವಾರದಿಂದ ಡ್ರೈನೇಜ್ ನೀರು ಮಳೆಗಾಲದ ರೀತಿ ಉಕ್ಕುತ್ತಾ ರಸ್ತೆಯಲ್ಲಿ ರಾಡಿಯೆಬ್ಬಿಸಿದೆ. ಜನರು ಅದೇ ಟಾಯ್ಲಟ್ ನೀರಿನಲ್ಲಿ ಕೈಕಾಲಿಗೆ ಅಭಿಷೇಕ ಮಾಡಿಕೊಂಡು ಮುಖ ಮುಚ್ಚಿಕೊಂಡು ನಡೆದುಕೊಂಡು ಹೋಗುತ್ತಿದ್ದಾರೆ. ನಾಲ್ಕು ದಿನಗಳ ಹಿಂದೆ ಪಾಲಿಕೆಯ ಕಾರ್ಮಿಕರು ಬಂದು ಅಲ್ಲೇನೋ ಪೈಪ್ ಹಾಕಿ ಏನೋ ಕೆರೆಯುತ್ತಿದ್ದರು. ಡ್ರೈನೇಜ್ ನೀರು ಮಾತ್ರ ನಿಂತಿರಲಿಲ್ಲ. ಅಲ್ಲಿದ್ದ ಪಾಲಿಕೆಯ ಅಧಿಕಾರಿಗಳು ಪೈ ಸೇಲ್ಸ್ ಕಟ್ಟಡದ
ಮಂಗಳೂರು ನಗರದ ಅಂಬೇಡ್ಕರ್ ವೃತ್ತದ ಬಳಿಯಲ್ಲಿ ರಸ್ತೆ ಪಕ್ಕದ ಗುಂಡಿಗೆ ಮಹಿಳೆಯೊಬ್ಬರು ಬಿದ್ದ ಘಟನೆ ನಡೆದಿದೆ. ಪತಿಯೊಂದಿಗೆ ತೆರಳುತ್ತಿದ್ದ ಮಹಿಳೆಯು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದು, ತಕ್ಷಣ ಸ್ಥಳೀಯರು ಅವರನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ಮಹಿಳೆ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ. ಕಾಮಗಾರಿಯ ನಿಮಿತ್ತ ಅಗೆಯಲ್ಪಟ್ಟ ಈ ಗುಂಡಿಯನ್ನು ಮುಚ್ಚದೆ ನಿರ್ಲಕ್ಷ್ಯ ತೋರಿರುವ ಆಡಳಿತ ವ್ಯವಸ್ಥೆಯ ವಿರುದ್ಧ ಜನರು ತೀವ್ರ ಆಕ್ರೋಶ
ಕಾರವಾರ ತಾಲೂಕಿನ ಉಳವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಂದ್ರಾಳಿ ಮೊಳೆ ಊರುಗಳಲ್ಲಿ ಸಾಕು ದನಗಳ ಬೇಟೆ ಆಡುತ್ತಿದ್ದ ಹುಲಿಯನ್ನು ಗುಂದ ಅರಣ್ಯ ಇಲಾಖೆಯ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಕಳೆದ 15 ದಿನಗಳಿಂದ ಹುಲಿಯೊಂದು ರೈತರ ದನದ ಕೊಟ್ಟಿಗೆಗೆ ಬಂದು ರಾತ್ರಿ ವೇಳೆ ದನಗಳನ್ನು ಕೊಂದು ಹೊತ್ತೊಯ್ಯುತ್ತಿತ್ತು. ಇಲ್ಲವೇ ತಿಂದು ಅರೆಜೀವ ಮಾಡಿ ಹೋಗುತ್ತಿತ್ತು. ಇದರಿಂದ ಬಡ ರೈತರು ಕಂಗಾಲಾಗಿ ಹೋಗಿದ್ದರ. ಅರಣ್ಯ ಇಲಾಖೆಯ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದರು.




























