Home Posts tagged #v4newskarnataka (Page 8)

‘ಸತ್ಯ ಒಪ್ಪಿಕೊಂಡ ಸಚಿವ ಚೆಲುವರಾಯಸ್ವಾಮಿಗೆ ನನ್ನ ಅಭಿನಂದನೆ’ : ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಕಾಂಗ್ರೆಸ್ ನ ಉಚಿತ 5 ಗ್ಯಾರಂಟಿಗಳು ಕೇವಲ ಚುನಾವಣೆ ಗೆಲ್ಲಲು ರೂಪಿಸಿರುವ ತಂತ್ರ ಎಂದು ಬಿಜೆಪಿ ಮೊದಲಿನಿಂದಲೂ ಟೀಕಿಸುತ್ತಾ ಬಂದಿತ್ತು. ಇದೀಗ ಬಿಜೆಪಿ ಟೀಕೆಗಳು ಅಕ್ಷರಶಃ ಸತ್ಯವೆಂಬಂತೆ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಅವರ ಹೇಳಿಕೆಯೇ ಸಾಕ್ಷಿ ಎಂಬಾಂತಾಗಿದೆ. ಸಚಿವ ಎನ್ ಚೆಲುವರಾಯಸ್ವಾಮಿ ಮಾಧ್ಯಮದ ಮುಂದೆ ಕಾಂಗ್ರೆಸ್ ನ ಉಚಿತ ಗ್ಯಾರಂಟಿಗಳ ಬಗ್ಗೆ

ಕೊಲ್ಲೂರು ಕ್ಷೇತ್ರದಲ್ಲಿ ಜಿ. ಪರಮೇಶ್ವರ : ಶ್ರೀ ಮೂಕಾಂಬಿಕಾ ದೇವಿ ಅನುಗ್ರಹ ಪಡೆದ ಗೃಹ ಸಚಿವ

ಉಡುಪಿ : ನೆನ್ನೆಯಿಂದ ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ಇಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಳದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಅಡಿಗರ ನೇತ್ರತ್ವದಲ್ಲಿ ನೆಡೆದ ಚಂಡಿಹೋಮ ಹಾಗೂ ಇತರೆ ವಿಶೇಷ ಪೂಜೆಯಲ್ಲಿ ಭಾಗಿಯಾದರು. ಇವರ ಆತ್ಮೀಯರು ಮತ್ತು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಕಯ್ ಅಕ್ಷಯ ಎಂ . ಇವರೊಂದಿಗೆ ಭಾಗಿಯಾಗಿದ್ದರು.

ಮಾಹೆ ಮಣಿಪಾಲದ ಕೆಎಂಸಿ ನಲ್ಲಿ ಮಣಿಪಾಲ ಭ್ರೂಣಶಾಸ್ತ್ರ ಮತ್ತು ಸಂತಾನೋತ್ಪತ್ತಿ ವಿಜ್ಞಾನ ಕೇಂದ್ರ ಉದ್ಘಾಟನೆ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ಇಂದು “ಮಣಿಪಾಲ ಭ್ರೂಣಶಾಸ್ತ್ರ ಮತ್ತು ಸಂತಾನೋತ್ಪತ್ತಿ ವಿಜ್ಞಾನ ಕೇಂದ್ರ (ಮಣಿಪಾಲ್ ಸೆಂಟರ್ ಫಾರ್ ಎಂಬ್ರಿಯಾಲಜಿ & ರಿಪ್ರೊಡಕ್ಟಿವ್ ಸೈನ್ಸ್)” ಇದರ ಉದ್ಘಾಟನೆ ನಡೆಯಿತು. ಆಕಿಮ್ ಬುರ್ಕಾರ್ಟ್, ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಕಾನ್ಸುಲ್ ಜನರಲ್, ಬೆಂಗಳೂರು ಇವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದರು. ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಆಕಿಮ್ ಬುರ್ಕಾರ್ಟ್ ಅವರು, ಮಾಹೆ

ಸ್ಥಗಿತಗೊಂಡಿರುವಲ್ಲಿ ನರ್ಮ್ ಬಸ್ ಸಂಚರಿಸಬೇಕು : ಯಶಪಾಲ್ ಸುವರ್ಣ ಸೂಚನೆ

ಉಡುಪಿ ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಂಗಣದಲ್ಲಿ ಮಳೆಗಾಲದ ಪೂರ್ವ ಸಿದ್ಧತೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಉಡುಪಿ ವಿಧಾನಸಭಾ ಶಾಸಕ ಯಶಪಾಲ್ ಎ. ಸುವರ್ಣ ಅವರು ಮಾತನಾಡಿ, ಮುಂಗಾರು ಪ್ರವೇಶ ಹಾಗೂ 2023-24 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಂಡಿದ್ದು, ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ತೆರಳಲು ಸೂಕ್ತ ಸಾರಿಗೆ ವ್ಯವಸ್ಥೆ ದೃಷ್ಟಿಯಿಂದ ಸ್ಥಗಿತಗೊಂಡಿರುವ ಮಾರ್ಗಗಳಲ್ಲಿ ಕೆಎಸ್‌ಆರ್‌ಟಿಸಿ ನರ್ಮ್

ಪುನಃ ಪಠ್ಯಪುಸ್ತಕ ಪರಿಷ್ಕರಣೆ ವಿವಾದ : ಮಾಜಿ ಸಚಿವ ವಿ. ಸುನಿಲ್ ಕುಮಾರ್ ಎಚ್ಚರಿಕೆ!

ಉಡುಪಿ : ನೂತನ ರಾಜ್ಯ ಸರಕಾರ ಪುನಃ ಪಠ್ಯಪುಸ್ತಕ ಪರಿಷ್ಕರಣೆ ಮಾಡುವುದಾಗಿ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವ ವಿ ಸುನಿಲ್ ಕುಮಾರ್ ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂಡ 1 ತಿಂಗಳ ಅವಧಿಯೊಳಗೆ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡುವುದಾಗಿ ಹೇಳಿರುವುದು ಆಶ್ಚರ್ಯ ಪಡುವಂತಹ ಸಂಗತಿ. ರಾಷ್ಟ್ರೀಯತೆ, ಸಂಸ್ಕೃತಿ, ದೇಶಪ್ರೇಮ ಇವೆಲ್ಲವೂ ಪಠ್ಯ

ಅಪ್ಪಳಿಸಲಿದೆ ‘ಬಿಪರ್ ಜಾಯ್’ : ಉಡುಪಿಗೆ ತಟ್ಟಿದೆ ಚಂಡಮಾರುತ ಭೀತಿ

ಉಡುಪಿ : ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ‘ಬಿಪರ್ ಜಾಯ್’ ಚಂಡಮಾರುತ ಉಂಟಾಗುವ ಸಂಭವವಿದೆ. ರಾಜ್ಯದ ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದರಿಂದ ಮುಂಗಾರು ಮಳೆ ವಿಳಂಬವಾಗುವಂತಹ ಸಾಧ್ಯತೆಗಳು ಕೂಡ ಇವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದ ತೀವ್ರ

‘ವಂದೇ ಭಾರತ್ ಎಕ್ಸ್‌ಪ್ರೆಸ್’ ಮಂಗಳೂರಿಗೂ ವಿಸ್ತರಿಸಬೇಕಿದೆ : ಯಶ್ ಪಾಲ್ ಎ ಸುವರ್ಣ ಕೇಂದ್ರಕ್ಕೆ ಮನವಿ

ಉಡುಪಿ : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ಮಂಗಳೂರಿಗೆ ವಿಸ್ತರಿಸುವಂತೆ ಉಡುಪಿ ವಿಧಾನಸಭಾ ಶಾಸಕ ಯಶಪಾಲ್ ಸುವರ್ಣ ಅವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಅವರ ಮೂಲಕ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ರವರಿಗೆ ಮನವಿ ಸಲ್ಲಿಸಿದರು. ಶೀಘ್ರವೇ ಗೋವಾ – ಮುಂಬೈ ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಆರಂಭಗೊಳ್ಳಲಿದ್ದು ಇದನ್ನು ಮಂಗಳೂರಿನ ತನಕ ವಿಸ್ತರಿಸಿದ್ದಲ್ಲಿ, ಉಡುಪಿ ಹಾಗೂ ಮಂಗಳೂರಿನ ಪ್ರಯಾಣಿಕರಿಗೆ ಇದರ

ಉಡುಪಿಯಲ್ಲಿ ಗೃಹ ಸಚಿವರೊಂದಿಗೆ ಸಭೆ : ‘ಬೆನಿಫಿಟ್ ಆಫ್ ಡೌಟ್ ನ ಲಾಭ ಬಾಡಿಗೆದಾರರಿಗೆ ಸಿಗಬೇಕು’

ಉಡುಪಿ : ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಗೃಹ ಸಚಿವ ಜಿ. ಪರಮೇಶ್ವರ್, ಇಂದು ಸಂಜೆ ಉಡುಪಿ ಎಸ್ಪಿ ಕಚೇರಿಯಲ್ಲಿ ಉಡುಪಿ ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ಚಂದ್ರಗುಪ್ತ, ಉಡುಪಿ ಎಸ್ಪಿ ಅಕ್ಷಯ್, ಎಎನ್ ಎಫ್ ಎಸ್ ಪಿ ಪ್ರಕಾಶ್ ನಿಕ್ಕಂ ನೇತೃತ್ವದದಲ್ಲಿ ಪರಿಶೀಲನಾ ಸಭೆ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಪ್ರದೇಶದಲ್ಲಿ ನಡೆಯುತ್ತಿರುವ ಘಟನೆಗಳ ಮಾಹಿತಿ ಪಡೆದಿದ್ದೇನೆ. ನೈತಿಕ ಪೊಲೀಸ್ ಗಿರಿ ಹತ್ತಿಕ್ಕುವ ಕ್ರಮದ ಬಗ್ಗೆ ಚರ್ಚೆಯಾಗಿದೆ.

ಉಡುಪಿಯಲ್ಲಿ ಕೇವಲ 10 ದಿನ ಕುಡಿಯುವ ನೀರು ಪೂರೈಕೆ ಸಾಧ್ಯ : ಉಡುಪಿ ನಗರಸಭೆ

ಉಡುಪಿ : ಮುಂಗಾರಿನ ಋತು ಪ್ರಾರಂಭವಾದರೂ, ಉಡುಪಿ ಜಿಲ್ಲೆಯ ಕೆಲೆವೆಡೆ ಮಾತ್ರ ಅಲ್ಪ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಆದರೆ ಉಡುಪಿ ನಗರ ಪ್ರದೇಶ ಸೇರಿದಂತೆ ಹಲವೆಡೆ ಕೇವಲ ಮೋಡ ಕವಿದ ವಾತಾವರಣ ಮಾತ್ರ ಭಾಗ್ಯವೆಂಬಂತಿದೆ. ಬಹುತೇಕ ಕಡೆಗಳಲ್ಲಿ ನೀರಿಗೆ ಹಾಹಾಕಾರ ಪಡುವಂತಾಗಿದ್ದು, ಇದೀಗ ನಗರಸಭೆ ವ್ಯಾಪ್ತಿಯಲ್ಲಿ ಇನ್ನು 10 ದಿನ ಮಾತ್ರ ಆಗುವಷ್ಟು ಕುಡಿಯುವ ನೀರು ಪೂರೈಸಲು, ಹಿರಿಯಡಕ ಸ್ವರ್ಣ ನದಿ ಬಜೆ ಡ್ಯಾಂನಲ್ಲಿ ನೀರು ಲಭ್ಯವಿದೆ ಎನ್ನುವ ಮಾಹಿತಿ ಉಡುಪಿ ನಗರಸಭೆ

ಬೆಂಗಳೂರಿನಲ್ಲಿ ನಾಪತ್ತೆಯಾದ ಬಾಲಕ : ಮಗನನ್ನು ಹುಡುಕುತ್ತ ಕಡಲತೀರಕ್ಕೆ ಬಂದ ಹೆತ್ತವರು

ಬೆಂಗಳೂರಿನ ಯಲಹಂಕದ ನ್ಯೂ ಟೌನ್ ನ್ಯಾಶನಲ್ ಪಬ್ಲಿಕ್ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಯಾಗಿರುವ ಆದಿತ್ಯ ಟಿ. (15), ಒಂದು ವಾರದ ಹಿಂದೆ ನಾಪತ್ತೆಯಾಗಿದ್ದಾನೆ. ಮೇ 29, 2023ರ ಸೋಮವಾರದಂದು ತನ್ನ ಪೋಷಕರಾದ ತಂದೆ ತಿಮ್ಮ ರಾಯಪ್ಪ ಮತ್ತು ತಾಯಿ ಅನಿತಾರಲ್ಲಿ ಕೂದಲು ಕಟ್ಟಿಂಗ್ ಮಾಡಿಸಿಕೊಂಡು ಬರುತ್ತೇನೆಂದು ಮಧ್ಯಾಹ್ನದ ಹೊತ್ತಿಗೆ ಹೋದವನು ಮರಳಿ ಮನೆಗೆ ಬಂದಿಲ್ಲ. ಈ ಬಗ್ಗೆ ಹೆತ್ತವರು ಬೆಂಗಳೂರಿನ ಆರ್.ಟಿ. ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ನಂತರ