ಉಳ್ಳಾಲ: ಬೈಕ್ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿ ಸಾವನ್ನಪ್ಪಿ , ಸಹಸವಾರ ಗಾಯಗೊಂಡ ಘಟನೆ ಕುತ್ತಾರು ಸಮೀಪದ ಮದಕ ಕ್ವಾಟ್ರಗುತ್ತು ಬಳಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಬೆಂಗಳೂರು ಯಶವಂತಪುರ ನಿವಾಸಿ ನಿಶಾಂತ್ ( 22) ಮೃತರು. ಸಹಸವಾರ ಬೀದರ್ ನಿವಾಸಿ ಶಕೀಬ್ ಗಾಯಗೊಂಡಿದ್ದಾರೆ. ದೇರಳಕಟ್ಟೆಯ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪೂರೈಸಿ ದ್ವಿತೀಯ ವರ್ಷದ
ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಸುವರ್ಣ ಪ್ರಾಶನ ಕಾರ್ಯಕ್ರಮ ಪುಷ್ಯ ನಕ್ಷತ್ರದ ದಿನ 12-12-2023 ರಂದು ಜರುಗಿತು.ಮಠಾಧಿಪತಿಗಳಾದ ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣ ಇವರು ಮಕ್ಕಳ ಸ್ವಾಸ್ಥ್ಯ ರಕ್ಷಣೆಯ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 16 ವರ್ಷದ ವರೆಗಿನ ಮಕ್ಕಳಿಗಾಗಿ ಪ್ರತಿ ತಿಂಗಳ ಪುಷ್ಯ ನಕ್ಷತ್ರದಂದು ಸುವರ್ಣ ಪ್ರಾಶನ ಶಿಬಿರ ಜರುಗಲಿದೆ.. ಇಲ್ಲಿನ ವೈದ್ಯಕೀಯ ಸೇವಾ ವಿಭಾಗದ ಆಯುರ್ವೇದ ತಜ್ಞ ವೈದ್ಯ
ರಿಕ್ಷಾ ಚಾಲಕರು ಸಮಾಜದ ಮುಖ್ಯವಾಹಿನಿಯಲ್ಲಿರುವವರುನಾವು ರಿಕ್ಷಾ ಚಾಲಕರೆಂಬ ಕೀಳರಿಮೆ ಬೇಡ. ಜೀವನದಲ್ಲಿ ಮುಂದೆ ಬರಬೇಕಾದರೆ, ಯಶಸ್ಸು ಕಾಣಬೇಕಾದರೆ ದುಶ್ಚಟಗಳಿಂದ ದೂರವಿರಬೇಕು. ನಾವು ನಮ್ಮ ವೃತ್ತಿಗೆ ನ್ಯಾಯ ಒದಗಿಸುವ ಕೆಲಸ ಮಾಡಿದಾಗ ತನ್ನಿಂದ ತಾನಾಗಿ ಸಮಾಜದ ಗೌರವ ಪ್ರಾಪ್ತಿಯಾಗುತ್ತದೆ. ಗುಣಕ್ಕೆ ಮತ್ತು ವೃತ್ತಿಗೆ ಎಂದೂ ಬಡತನವಿಲ್ಲ ಎಂದು ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ ಚಿಲ್ತಡ್ಕ ಅವರು ಹೇಳಿದರು. ಪುತ್ತೂರಿನ
ಮೂಡುಬಿದಿರೆ : ದೈವರಾಧನೆ ತುಳುನಾಡಿನ ಪರಂಪರೆ, ನಾವು ದೈವ-ದೇವರನ್ನು ಆರಾಧಿಸುತ್ತೇವೆ ಇದು ಇಲ್ಲಿನ ಮೂಲ ನಿವಾಸಿಗಳ ಸಂಸ್ಕೃತಿ’ ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಹೇಳಿದರು. ಅವರು ವಾಲ್ಪಾಡಿ ಮಾಡದಂಗಡಿ ಶಾಲಾ ವಠಾರದಲ್ಲಿ ನಡೆದ ತುಳುನಾಡ ದೈವರಾಧನೆ ರಕ್ಷಣಾ ಚಾವಡಿ ಮೂಡುಬಿದಿರೆ ವಲಯದ 5ನೇ ವಾರ್ಷಿಕೋತ್ಸವದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಕನ್ಯಾನ ಕಣಿಯೂರು, ಶ್ರೀ ಮಹಾಬಲೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿ ಕಮರ್ಷಿಯಲ್ ದೃಷ್ಟಿಕೋನದಿಂದ
ದೇಶದ ಜನರು ಡಿ. 13ರ ಮಧ್ಯರಾತ್ರಿ ಮತ್ತು ಡಿ. 14ರ ಮುಂಜಾನೆ ಆಕಾಶದಲ್ಲಿ ಸ್ಪಷ್ಟವಾಗಿ ಉಲ್ಕಾಪಾತ ನೋಡುಬಹುದಾಗಿದೆ. ಡಿ. 13ರ ಮಧ್ಯರಾತ್ರಿ 2 ಗಂಟೆಯಿಂದ 3 ಗಂಟೆ ಸಮಯಕ್ಕೆ ಉಲ್ಕಾಪಾತ ತನ್ನ ಉತ್ತುಂಗಕ್ಕೆ ತಲುಪಲಿದೆ. ಇದನ್ನು ನೋಡಲು ದೂರದರ್ಶಕದ ಆವಶ್ಯಕತೆ ಇಲ್ಲ. ಬರಿ ಕಣ್ಣಿನಿಂದ ಇದನ್ನು ವೀಕ್ಷಿಸಬಹುದಾಗಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಈ ವರ್ಷ ಡಿ. 13ರ ಮಧ್ಯರಾತ್ರಿ 100 ಕ್ಕೂ ಹೆಚ್ಚು ಉಲ್ಕಾಪಾತಗಳು ಭೂಮಿಯ ಸಮೀಪ ಬರಲಿವೆ. ಮೋಡವಿಲ್ಲದೆ, ವಾತಾವರಣ
ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ, ಮಂಡ್ಯ, ಹಾಸನ, ಕೊಡಗು, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮ್ಯಾಂಡೌಸ್ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧೆಡೆ ಡಿಸೆಂಬರ್ 14ರವರೆಗೆ ಮಳೆ ಮುಂದುವರಿಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ, ಮಂಡ್ಯ, ಹಾಸನ,
ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಈ ವರ್ಷದ ಸೂಪರ ಹಿಟ್ ಕಾಂತಾರ ಚಲನಚಿತ್ರ ಸಿನಿಮಾ ನಿರ್ಮಾಪಕ ವಿಜಯ್ ಕಿರಂದೂರು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಳದ ಅರ್ಚಕ ಹರಿನಾರಾಯಣ ದಾಸ ಅಸ್ರಣ್ಣ ವಿಜಯ್ ಅವರಿಗೆ ದೇವರ ಶೇಷ ವಸ್ತ್ರ ನೀಡಿ ದೇವಳದ ವತಿಯಿಂದ ಕಿರಂದೂರು ಅವರನ್ನು ಗೌರವಿಸಲಾಯಿತು.
ಮೂಡುಬಿದಿರೆ: ಬಸ್ಸಿಗೆ ಢಿಕ್ಕಿ ಹೊಡೆದ ತಾಲೂಕಿನ ನೆಲ್ಲಿಕಾರು ಗ್ರಾ.ಪಂ.ವ್ಯಾಪ್ತಿಯ ಮೈನೇರು ಎಂಬಲ್ಲಿ ಇಂದು ಬೆಳಿಗ್ಗೆ ಕಾರೊಂದು ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಒಂದೂವರೆ ವರ್ಷದ ಮಗು ಸಹಿತ ಮೂರು ಮಂದಿ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರು ಮೂಲದ ದಂಪತಿ ತಮ್ಮ ಒಂದೂವರೆ ವರ್ಷದ ಮಗುವಿನೊಂದಿಗೆ ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದಾಗ ಕಾರ್ಕಳದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ವಿಶಾಲ್ ಬಸ್ಸಿಗೆ ಢಿಕ್ಕಿ ಹೊಡೆದು ಬಸ್ಸಿನ ಅಡಿಭಾಗದಲ್ಲಿ
ರಾಷ್ಟ್ರೀಯ ಹೆದ್ದಾರಿ ಬಳಿಯ ಆರು ಅಂಗಡಿಗಳಿಗೆ ನುಗ್ಗಿದ ಕಳ್ಳರು ಸರಣಿ ಕಳವು ನಡೆಸಿ ಸಾವಿರಾರು ರೂ. ಬೆಲೆಬಾಳುವ ಸೊತ್ತುಗಳನ್ನು ಕಳವು ನಡೆಸಿರುವ ಘಟನೆ ಗಡಿಭಾಗ ತಲಪಾಡಿಯಲ್ಲಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಅಶ್ರಫ್, ಕುಲದೀಪ್, ಶ್ರೀಧರ್ ಹಾಗೂ ಮಹಮ್ಮದ್ , ಶಂಕರ್ ಎಂಬವರಿಗೆ ಸೇರಿದ ಅಂಗಡಿಗಳಿಂದ ಸಾವಿರಾರು ರೂ. ಬೆಲೆಬಾಳುವ ವಸ್ತುಗಳು ಹಾಗೂ ಕ್ಯಾಷ್ ಡ್ರಾವರಿನಲ್ಲಿದ್ದ ನಗದು ಹಾಗೂ ಇನ್ನೋರ್ವ ಅಶ್ರಫ್ ಎಂಬವರಿಗೆ ಸೇರಿದ ಝೆರಾಕ್ಸ್ ಅಂಗಡಿಯಿಂದ ನಗದು,
ಬೆಂಗಳೂರು, ಡಿ, 8; ಕ್ಯಾಬ್ ಸಾಗಾಣೆ ವ್ಯವಸ್ಥೆಯಲ್ಲಿ ಕ್ರಾಂತಿಕಾರ ಹೆಜ್ಜೆ ಇಟ್ಟಿರುವ “ಡ್ರೈಫ್ ಡ್ರೈಫ್ ಆಟೋ “ ಸೇವೆ ಚಾಲಕರಿಗೆ ವರದಾನವಾಗಿ ಪರಿಣಮಿಸಿದ್ದು, ಅವರಿಂದ ಯಾವುದೇ ರೀತಿಯ ಕಮಿಷನ್ ಪಡೆಯುವುದಿಲ್ಲ ಎಂದು ಪ್ರಕಟಿಸಿದೆ. ಬೇರೆ ಕ್ಯಾಬ್ ಸೇವೆಗಳಿಂದ ಬಸವಳಿದಿರುವ ಚಾಲಕರು ಈ ತೀರ್ಮಾನದಿಂದ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಬ್ಲಾಕ್ ಚೈನ್ ತಂತ್ರಜ್ಞಾನ ಆಧಾರಿತ ಆಫ್ ಅನ್ನು ಇದು ಒಳಗೊಂಡಿದ್ದು, ಚಾಲಕರಿಂದ ಚಂದಾ ಹಣವನ್ನು ಮಾತ್ರ ಪಡೆಯುತ್ತೇವೆ.




























