Home Posts tagged #v4newskarnataka (Page 94)

ಕನ್ನಡದಲ್ಲೇ ವ್ಯವಹರಿಸಲು ಮನವಿ

ಕನ್ನಡ ನೆಲ, ಜಲ ಭಾಷೆ, ಸಂಸ್ಕೃತಿ ಮತ್ತು ಸಂಸ್ಕಾರ ಉಳಿಸುವಲ್ಲಿ ಕಸಾಪ ಬಹುಮುಖ್ಯ ಭೂಮಿಕೆ ವಹಿಸುತ್ತಿದೆ : ಡಾ ಚೂಂತಾರುಕನ್ನಡ ನಾಡಲ್ಲಿ ಎಲ್ಲರೂ ಕನ್ನಡದಲ್ಲಿಯೇ ವ್ಯವಹರಿಸುವಂತಾಗಬೇಕು. ಇತರ ರಾಜ್ಯದ ನೌಕರರು ನಮ್ಮ ರಾಜ್ಯದಲ್ಲಿ ಕೆಲಸ ಮಾಡುವಾಗ ಕನ್ನಡ ಭಾಷೆ ಕಲಿತು ಇಲ್ಲಿನ ಜನರೊಂದಿಗೆ ವ್ಯವಹರಿಸಬೇಕಾಗುತ್ತದೆ. ಕನ್ನಡ ಭಾಷೆಯಲ್ಲಿ ವ್ಯವಹರಿಸಿದರೆ ಇಲ್ಲಿಯ

ಜೆಸಿಐ ಬಂಟ್ವಾಳದ 2023ನೇ ಸಾಲಿನ ನೂತನ ಅಧ್ಯಕ್ಷರಾಗಿ ಛಾಯಾಗ್ರಾಹಕ ರಾಜೇಂದ್ರ ಅವರು ಆಯ್ಕೆ

ಬಂಟ್ವಾಳ: ಜೆಸಿಐ ಬಂಟ್ವಾಳದ 2023ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ.ಸಿ. ರೋಡಿನ ವರ್ಣ ಸ್ಟುಡಿಯೋದ ಮಾಲಕ, ಸೃಜನಶೀಲ ಛಾಯಾಗ್ರಾಹಕ ರಾಜೇಂದ್ರ ಅವರು ಆಯ್ಕೆಯಾಗಿದ್ದಾರೆ. ಜೆಸಿಐ ಬಂಟ್ವಾಳದ ಅಧ್ಯಕ್ಷ ರೋಷನ್‌ರೈ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಮಾಸಿಕ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ನೂತನ ಕಾರ್ಯದರ್ಶಿಯಾಗಿ ರಶ್ಮಿ ವಚನ್ ಶೆಟ್ಟಿ, ಕೋಶಾಧಿಕಾರಿಯಾಗಿ ಶ್ರೀನಿವಾಸ್ ಹಾಗೂ ವಿವಿಧ ವಿಭಾಗಗಳ ಉಪಾಧ್ಯಕ್ಷರಾಗಿ ಗಣೇಶ್ ಕುಲಾಲ್, ಕಿರಣ್, ಮನೋಜ್ ಕನಪಾಡಿ, ವಚನ್

ಉಳ್ಳಾಲ : ಬಸ್ ಕ್ಲೀನರ್ ನಿಂದ ವೈದ್ಯೆಯೊಂದಿಗೆ ಅಸಭ್ಯ ವರ್ತನೆ

ಉಳ್ಳಾಲ: ಬೆಂಗಳೂರು ನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕೆಗೆ ಬಸ್ ಕ್ಲೀನರ್ ವೊಬ್ಬ ಪ್ಯಾಂಟ್ ನ ಜಿಪ್ ಓಪನ್ ಮಾಡಿ ಅಸಭ್ಯವಾಗಿ ವರ್ತಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ. ಘಟನೆ ವಿವರ: ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕರ್ತವ್ಯ ದಲ್ಲಿರುವ ಮಹಿಳಾ ವೈದ್ಯೆಯೊಬ್ಬರು ಬೆಂಗಳೂರಿನಿಂದ ಮಂಗಳೂರಿಗೆ ಐಡಿಯಲ್ (KA51 AB 3649) ಬಸ್‌ನಲ್ಲಿ ಪ್ರಯಾಣ

ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದ ಚಾಲಕ ಕುಸಿದು ಬಿದ್ದು ಗಂಭೀರ

ಸುಳ್ಯ: ಆಟೋ ಚಾಲಕರೊಬ್ಬರು ಇದ್ದಕಿದ್ದಂತೆ ಪಾಶ್ರ್ವವಾಯುಗೆ ತುತ್ತಾಗಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸುಳ್ಯ ನಗರದಲ್ಲಿ ನಡೆದಿದೆ. ಸದ್ಯ ಗಂಭೀರ ಸ್ಥಿತಿಯಲ್ಲಿ ಹೇಮನಾಥ್ ಆರ್.ಬಿ.(32) ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾದ ಚಾಲಕ. ಇವರು ಸುಳ್ಯ ತಾಲೂಕಿನ ದೊಡ್ಡಡ್ಕದ ರಾಜರಾಂಪುರದ ನಿವಾಸಿಯಾಗಿದ್ದಾರೆ. ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬರನ್ನು ಸಂಪಾಜೆಯಿಂದ ಸುಳ್ಯದ ಕೆವಿಜಿ ಆಸ್ಪತ್ರೆಗೆ ತಮ್ಮ ಆಟೋದಲ್ಲಿ ಕರೆದುಕೊಂಡು

ಮಂಗಳೂರು ವಿವಿ ಕಾಲೇಜ್ : ಮಾನವ ಕಳ್ಳ ಸಾಗಾಣಿಕೆ ಕುರಿತು ಕಾರ್ಯಾಗಾರ

ಮಂಗಳೂರು ವಿಶ್ವ ವಿದ್ಯಾಲಯದ ಆ್ಯಂಟಿ ಹ್ಯೂಮನ್ ಟ್ರಾಫಿಕಿಂಗ್ ಕ್ಲಬ್ ವತಿಯಿಂದ ಮಾನವ ಕಳ್ಳ ಸಾಗಾಣಿಕೆ ವಿರೋಧಿ: ಕಾಳಜಿ ಹಾಗೂ ಕಾರ್ಯಯೋಜನೆ ಎಂಬ ಕಾರ್ಯಾಗಾರ ಮಂಗಳೂರು ವಿಶ್ವ ವಿದ್ಯಾಲಯ ಕಾಲೇಜ್‌ನ ರವೀಂದ್ರ ಕಲಾಭವನದಲ್ಲಿ ಬುಧವಾರ ನಡೆಯಿತು. ಮಂಗಳೂರು ಉತ್ತರ ಉಪವಿಭಾಗ ಸಹಾಯಕ ಆಯುಕ್ತರಾದ ಮಹೇಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಭಾರತದಲ್ಲಿ ಇರುವಷ್ಟು ಕಾನೂನು ಬೇರೆಲ್ಲಿಯೂ ಇಲ್ಲ ಆದರೆ ಸರಿಯಾಗಿ ಬಳಸಿಕೊಳ್ಳಲು ಆಗುತ್ತಿಲ್ಲ, ಹೊಸ ಕಾನೂನು

ಮಂಗಳೂರು : ಬುರ್ಖಾ ಧರಿಸಿದ ಮಹಿಳೆ ಸಹಿತ ತಂಡದಿಂದ ವಿದ್ಯಾರ್ಥಿಗೆ ಗಂಭೀರ ಹಲ್ಲೆ

ಮಂಗಳೂರು: ಮಂಗಳವಾರ ಸಂಜೆ ಮಂಗಳೂರು ಹೊರ ವಲಯದ ಅಡ್ಯಾರ್ ನಲ್ಲಿ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಬಸ್ ನಿಲ್ದಾಣದಲ್ಲಿ ಬುರ್ಖಾ ಧರಿಸಿದ ಮಹಿಳೆ ಸಹಿತ ತಂಡವೊಂದು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿ ಬರಕ ಇಂಟರ್ ನ್ಯಾಷನಲ್ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಮುಹಮ್ಮದ್ ಸಭಾನ್ ಎಂದು ತಿಳಿದುಬಂದಿದೆ.ಮಂಗಳೂರು ಖಾಸಗಿ ಆಸ್ಪತ್ರೆಗೆ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಯನ್ನು

ಬೆಂಗಳೂರು : ಅರಮನೆಯಂತೆ ಕಂಗೋಳಿಸುತ್ತಿದೆ ಕೆಂಪೇಗೌಡ ವಿಮಾನ ನಿಲ್ದಾಣ

ದೇಶಿ ಹಾಗೂ ವಿದೇಶಿ ಪ್ರಯಾಣಿಕರಿಗೆ ಐಶಾರಾಮಿ ಸೇವೆಯನ್ನು ಇಲ್ಲಿ ಒದಗಿಸಲಾಗುತ್ತದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನವ ವಿನ್ಯಾಸದ ಹೈಟೆಕ್ ನಿಲ್ದಾಣ ಅನಾವರಣಗೊಂಡಿದೆ ಟರ್ಮಿನಲ್ 2 ಅನ್ನು ಉದ್ಯಾನ ನಗರಿ ಬೆಂಗಳೂರಿನ ಗೌರವಾರ್ಥವಾಗಿ ವಿನ್ಯಾಸಗೊಳಿಸಲಾಗಿದೆ. ಉದ್ಯಾನವನದಲ್ಲಿ ನಡೆದಂತ ಅನುಭವವನ್ನು ಇದು ಪ್ರಯಾಣಿಕರಿಗೆ ನೀಡುತ್ತದೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುಮಾರು 5000 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಹೊಸ

ಪ್ರತಿ ದಿನ ಸೂರ್ಯ ನಮಸ್ಕಾರ ಏಕೆ ಮಾಡಬೇಕು?

ಪ್ರತಿ ದಿನ ಸೂರ್ಯ ನಮಸ್ಕಾರವನ್ನು ನಿಧಾನವಾಗಿ 5-10 ನಿಮಿಷಗಳ ಕಾಲ ಮಾಡುವುದ್ದರಿಂದ ಸುಮಾರು 20 ರಿಂದ 30 ಕ್ಯಾಲೊರಿಗಳನ್ನು ಕಡಿಮೆ ಮಾಡಲು ಸಾಧ್ಯವಿದೆ ಎಂದು ಸಲಹೆ ನೀಡುತ್ತಾರೆ. ಸೂರ್ಯ ನಮಸ್ಕಾರಗಳು ಅನೇಕ ಜನರ ಫಿಟ್‌ನೆಸ್ ದಿನಚರಿಗಳ ಅತ್ಯಗತ್ಯ ಪ್ರಮುಖವಾದುದಾಗಿದೆ. ಇದು ನಿಮ್ಮ ದೇಹದ ಹೆಚ್ಚುವರಿ ತೂಕವನ್ನು ಇಳಿಸಲು ಸಹಾಯಮಾಡುತ್ತದೆ. ಇದು ಒಂದು ಉತ್ತಮ ಅಭ್ಯಾಸದ ವ್ಯಾಯಾಮವಾಗಿದ್ದು, ನಿಮಗೆ ಉತ್ತಮ ಫಲಿತಾಂಶವನ್ನು ನೀಡಲು ಪೂರಕವಾಗಿದೆ.  ಏಕೆ

ವಿಟ್ಲ: ಪೆಟ್ರೋಲ್ ಸುರಿದು ಯುವಕನ ಹತ್ಯೆ

ವಿಟ್ಲ: ಪೆಟ್ರೋಲ್ ಸುರಿದು ಯುವಕನನ್ನು ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ ವ್ಯಕ್ತಿಯೋರ್ವನನ್ನು ವಿಟ್ಲ ಪೋಲೀಸರು ಬಂಧಿಸಿದ್ದು, ವಿಚಾರಣೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೋಳಂತೂರು ನಿವಾಸಿ ಅದ್ದು ಯಾನೆ ಅದ್ರಾಮ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಬಂಟ್ವಾಳ-ವಿಟ್ಲ ಠಾಣಾ ವ್ಯಾಪ್ತಿಯ ಗಡಿ ಭಾಗದ ಸುರಿಬೈಲು ನಿವಾಸಿ ಸಪ್ಪಿ (ಸಮಾದ್) (19) ಮೃತ ಯುವಕ. ಅದ್ರಾಮ ಸಲಿಂಗಕಾಮಿಯಾಗಿದ್ದು, ಮಂಚಿ-ಇರಾ-ಮುಡಿಪು ರಸ್ತೆಯ ನಿರ್ಜನ ಪ್ರದೇಶದ ಗುಡ್ಡದಲ್ಲಿ

ಸಮಾಜಸೇವಕ ವಾಸುದೇವ ಆರ್. ಕೋಟ್ಯಾನ್ ನಿಧನ

ಭಾರತ್ ಕೋಅಪರೇಟಿವ್ ಬ್ಯಾಂಕ್ ಮುಂಬಯಿಯ ಮಾಜಿ ಅಧ್ಯಕ್ಷರಾಗಿ ಮತ್ತು ನಿರ್ದೇಶಕರಾಗಿ ಹೆಜಮಾಡಿ, ಬಿಲ್ಲವರ ಸಂಘ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಹೆಜಮಾಡಿ ಇದರ ಗೌರವಾಧ್ಯಕ್ಷರಾಗಿ, ಮಾರ್ಗದರ್ಶಕರಾಗಿ, ಸಂಘದ ಹಾಗೂ ಗಡಿಯ ಸಮಗ್ರ ಅಭಿವೃದ್ಧಿಗೆ ತಮ್ಮ ಜೀವನವನ್ನೇ ಮುಡುಪಾಗಿಸಿಕೊಂಡ ವಾಸುದೇವ ಆರ್. ಕೋಟ್ಯಾನ್ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯು ಮುಂಬಯಿಯಲ್ಲಿ ಇಂದು ಸಂಜೆ 7 ಗಂಟೆಗೆ ಜರುಗಲಿದೆ.