ಅಬುಧಾಬಿ : ನಾಲ್ಕು ದಶಕಗಳಿಗಿಂತಲೂ ಹೆಚ್ಚಿನ ಶ್ರೀಮಂತ ಇತಿಹಾಸ ಇರುವ ಅಬುಧಾಬಿಯ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕರ್ನಾಟಕ ಸಂಘವು ಇದೀಗ ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ರೂಪುರೇಷೆಗಳನ್ನು ಹಾಕಿಕೊಂಡಿದ್ದು ಕಾರ್ಯಕ್ರಮವು ಇದೆ ನವೆಂಬರ್ ತಿಂಗಳ 6ನೇ ತಾರೀಖಿನಂದು ಅಪರಾಹ್ನ 3:30 ಘಂಟೆಗೆ ಸರಿಯಾಗಿ ಅಬುಧಾಬಿಯ ಇಂಡಿಯನ್
ಚಾಲಕನ ನಿಯಂತ್ರಣ ತಪ್ಪಿದ ಕಾರು ಮಹಿಳೆಗೆ ಡಿಕ್ಕಿಯಾಗಿ, ಮಹಿಳೆ ಸಹಿತ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡ ಘಟನೆ ಕಿನ್ನಿಗೋಳಿ ಮೂಡಬಿದ್ರೆ ರಾಜ್ಯ ಹೆದ್ದಾರಿಯ ಎಂಸಿಸಿ ಬ್ಯಾಂಕ್ ಬಳಿ ನಡೆದಿದೆ. ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಪಕ್ಷಿಕೆರೆ ಕೆಮ್ರಾಲ್ ನಿವಾಸಿ ಜಯಂತಿ ಶೆಟ್ಟಿ (50) ಗಾಯಗೊಂಡ ಮಹಿಳೆ. ಉಳಿದಂತೆ ಕಾರಿನಲ್ಲಿದ್ದ ಚಾಲಕ ತೋಡಾರ್ ಗಳಾದ ನಿವಾಸಿ ಚಾಲಕ ಕೆ ಹೆಚ್ ಅಬ್ದುಲ್ ಖಾದರ್ (65), ರಿದಾ (16), ರಶ್ಮಿ (18), ಕೌಸರ್ (46), ಎಂದು
ತೊಕ್ಕೋಟು ಪೆರ್ಮನ್ನೂರಿನ ಸಂತ ಸೆಬಾಸ್ತಿಯನ್ನರ ಇಗರ್ಜಿ ಬಳಿಯಲ್ಲಿ ಸಂತ ಸೆಬಾಸ್ತಿಯನ್ ಅಡಿಟೋರಿಯಂ ಹೆಸರಿನ ಸುಸಜ್ಜಿತವಾದ ಮದುವೆ ಸಮಾರಂಭಕ್ಕೆ ಯೋಗ್ಯವಾದ ಸಭಾಂಗಣ ವೊಂದು ಉದ್ಘಾಟನೆ ಗೊಂಡಿತು. ಸರ್ವ ಧರ್ಮ ಸಮನ್ವಯತೆಯ ಸಂದೇಶ ಸಾರುವ ರೀತಿಯಲ್ಲಿ ಈ ಸಮಾರಂಭ ಏರ್ಪಟ್ಟಿತ್ತು. ಹಿಂದೂ ಮುಸ್ಲಿಂ ಕ್ರೈಸ್ತ ಸಮುದಾಯದ ಬಾಂಧವರು ವೇದಿಕೆಯಲ್ಲಿ ಆಸನ ಅಲಂಕರಿಸಿದ್ದರು. ಈ ವೇದಿಕೆಯಲ್ಲಿದ್ದವರೆಲ್ಲರೂ ಗಣ್ಯರೇ. ಆ ಪೈಕಿ ಸಭಾಂಗಣವನ್ನು ಉದ್ಘಾಟಿಸಿದ ಡಾ|| ಯು.ಸಿ.
ಗುಂಡ್ಲುಪೇಟೆ ತಾಲೂೀಕಿನ ಬಂಡೀಪುರ ಹುಲಿ ಪ್ರದೇಶದ ಮದ್ದೂರು ವಲಯದ ನೇರಳೆ ಮರದ ಅರಣ್ಯ ಪ್ರದೇಶದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಹೊತ್ತುಕೊಂಡು ಬರುತ್ತಿದ್ದ ವೇಳೆ ಅರಣ್ಯಾಧಿಕಾರಿಗಳಿ ದಾಳಿ ಮಾಡಿ ಓರ್ವನನ್ನು ಬಂಧಿಸಿರುವ ಘಟನೆ ನಡೆದಿದೆ. ಮದ್ದೂರು ಕಾಲೋನಿಯ ಷಣ್ಮುಖ(35) ಬಂಧಿತ ಆರೋಪಿ. ಉಳಿದ ನಾಲ್ಕು ಮಂದಿ ಪರಾರಿಯಾಗಿದ್ದಾರೆ. ಮದ್ದೂರು ವಲಯದ ನೇರಳೆ ಮರದ ಅರಣ್ಯ ಪ್ರದೇಶದ ಉಪ ವಲಯ ಅರಣ್ಯಾಧಿಕಾರಿ ರವಿಕುಮಾರ್ ಸಗೂರು , ಅರಣ್ಯ ರಕ್ಷಕ ನವೀನ ಹಾಗೂ ಸಿಬ್ಬಂದಿ
ಸುರತ್ಕಲ್ ಅಕ್ರಮ ಟೋಲ್‍ಗೇಟ್ ವಿರುದ್ಧ ಅನಿರ್ಧಿಷ್ಟಾವಧಿ ಧರಣಿಯ 5ನೇ ದಿನಕ್ಕೆ ಕಾಲಿಟ್ಟಿದ್ದು, ಟೋಲ್ ತೆರವು ಹೋರಾಟಕ್ಕೆ ದೊಡ್ಡ ಮಟ್ಟದ ಬೆಂಬಲ ವ್ಯಕ್ತವಾಗಿದೆ. ಎರಡು ಜಿಲ್ಲೆಯ ಹಲವು ತಾಲೂಕುಗಳ ವಿವಿಧ ಸಂಘಟನೆಗಳ ಪ್ರಮುಖರು ಇಂದಿನ ಧರಣಿಯಲ್ಲಿ ಬೆಳಗ್ಗಿನಿಂದ ಪಾಲ್ಗೊಂಡಿದ್ದಾರೆ. ಹೋರಾಟ ಸಮಿತಿಗೆ ಇದರಿಂದ ಮತ್ತಷ್ಟು ಹುಮ್ಮಸು ದೊರಕಿದೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕರಾದ ಮುನೀರ್ ಕಾಟಿಪಳ್ಳ ಹೇಳಿದರು. ಮತ್ತೊಂದೆಡೆ ಒಂದು ವಾರದಿಂದ
ನವ ಮಂಗಳೂರು ಬಂದರು ಪ್ರಾಧಿಕಾರವು, ನಮಬ ಕನ್ನಡ ಸಂಘದ ಜೊತೆಗೂಡಿ 66 ನೇ ಕರ್ನಾಟಕ ಸಂಸ್ಥಾಪನಾ ದಿನ ಹಾಗು ಕರ್ನಾಟಕ ರಾಜ್ಯೋತ್ಸವವನ್ನು ಇಂದು ಆಚರಿಸಲಾಯಿತು ಬಂದರು ಪ್ರಾಧಿಕಾರದ ಅಧ್ಯಕ್ಷರು, ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು ಹಾಗು ಕೆನರಾ ಪಿಯು ಕಾಲೇಜಿನ ಪ್ರಾಧ್ಯಾಪಕರಾದ ಶ್ರೀ ರಘು ಇಡ್ಕಿಧು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದರು.ಉಪಾಧ್ಯಕ್ಷರು, ಮುಖ್ಯ ವಿಜಿಲೆನ್ಸ್ ಅಧಿಕಾರಿ ಮತ್ತು ಅಧ್ಯಕ್ಷರು, ಕಾರ್ಯದರ್ಶಿ ಕನ್ನಡ ಸಂಘದ ಗೌರವ
ಮಂಗಳೂರು: ಅ 30: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಸಮ್ರದ್ದ , ಸದ್ರಡ,ಸ್ವಾಭಿಮಾನ ಕರ್ನಾಟಕ ಎಸ್ಡಿಪಿಐ ಸಂಕಲ್ಪ ಎಂಬ ಘೋಷಣೆ ಯೊಂದಿಗೆ ಒಲವಿನ ಕರ್ನಾಟಕ ಎಂಬ ಹೆಸರಿನಲ್ಲಿ ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ ತಿಂಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲಾದ್ಯಂತ ನವೆಂಬರ್ ಒಂದರಂದು ಬೆಳಿಗ್ಗೆ ಪಕ್ಷದ ಗ್ರಾಮ
ಬೆಂಗಳೂರು, ಅ, 31: ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯಲ್ಲಿ ತಮ್ಮನ್ನು ಕಡೆಗಣಿಸಿದ್ದು, ಹೈಕೋರ್ಟ್ ಆದೇಶದಂತೆ ತಮ್ಮ ಹೆಸರನ್ನು ಪರಿಗಣಿಸುವಂತೆ ಹಿರಿಯ ಸಾಹಿತಿ ಬಿ. ವಿ. ಸತ್ಯನಾರಾಯಣ ರಾವ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇಲ್ಲವಾದಲ್ಲಿ ತಾವು ರಚಿಸಿರುವ 108 ಸಾಹಿತ್ಯ ಕೃತಿಗಳನ್ನು ಮುಂದಿಟ್ಟುಕೊಂಡು ನವೆಂಬರ್ 1 ರಂದು ಸಂಜೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುವ ನಗರದ ರವೀಂದ್ರ ಕಲಾಕ್ಷೇತ್ರದ ಮುಂಭಾಗ ಪ್ರತಿಭಟನೆ
ಉಡುಪಿ ಜಿಲ್ಲಾ ಸಮಿತಿಯ ವಿಶೇಷ ಸಭೆಯು ಉಚ್ಚಿಲದ ಏಸ್.ಡಿ.ಪಿ.ಐ. ಕಚೇರಿಯಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ರಾಜ್ಯಾಧ್ಯಕ್ಷರಾದ ಮಜೀದ್ ಮೈಸೂರು ಅವರು ವಹಿಸಿದ್ದರು. ಸಭೆಯಲ್ಲಿ ಮುಂಬರುವ ಚುನಾವಣೆಯನ್ನು ದೂರ ದೃಷ್ಟಿಯಲ್ಲಿ ಇಟ್ಟು ಕೊಂಡು ಪಕ್ಷವನ್ನು ಭೂತ್ ಮಟ್ಟದಿಂದ ಸಂಘಟಿಸುವ ಬಗ್ಗೆ ಚರ್ಚೆ ವಿಮರ್ಶೆಗಳು ನಡೆದವು. ಅದಕ್ಕಾಗಿ ಕಾರ್ಯಕರ್ತರು ಈಗಿಂದಲೇ ಕಾರ್ಯಪ್ರವೃತ್ತರಾಗಿ ಕೆಲಸಗಳನ್ನು ಮಾಡಬೇಕು ಎಂದು ರಾಜ್ಯಾಧ್ಯಕ್ಷರು ಕಿವಿಮಾತು ಹೇಳಿದರು. ಜಿಲ್ಲಾ
ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷೆ, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ತುಳುನಾಡು ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಕಾನೂನು ಸಮರಕ್ಕೆ ಮುಂದಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷಿಗರನ್ನು, ದೈವಾರಾಧನೆ, ತುಳು ಕಲಾವಿದರ ಕುರಿತು ಅಶ್ಲೀಲ ಪದ ಬಳಕೆ ಮಾಡಿರುವ ಕನ್ನಡಿಗ ಶಿವರಾಜ್ ಎಂಬವರ ಮೇಲೆ ಕಾನೂನು ಕ್ರಮ ಜರಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಮನವಿ ಸಲ್ಲಿಸಿರುವ ಸಂಘಟನೆಯ ಪ್ರಮುಖರಿಗೆ ಸಕಾರಾತ್ಮಕವಾಗಿ




























