Home Posts tagged #v4stream (Page 101)

ತಪ್ಪಿದರೆ ಸುನಿಲ್ ಪೇ ಪೋಸ್ಟರ್ ಬಿಡುಗಡೆ : ಕಾಂಗ್ರೆಸ್ ವಕ್ತಾರ ಶುಭದರಾವ್ ಎಚ್ಚರಿಕೆ

ವಿಪಕ್ಷ ನಾಯಕರಾದ ಸಿದ್ದರಾಮಯ್ಯರನ್ನು ಭ್ರಷ್ಟಾಚಾರದ ಪಿತಾಮಹ ಎಂದು ಕರೆದಿರುವ ಸಚಿವ ಸುನೀಲ್ ಕುಮಾರ್ ಅವರು ಭ್ರಷ್ಟಾಚಾರ ದಾಖಲೆ ಬಹಿರಂಗಪಡಿಸಬೇಕು ಇಲ್ಲವೆ ಕ್ಷಮೆಯಾಚಿಸಬೇಕು ತಪ್ಪಿದ್ದಲ್ಲಿ PAYCM ಮಾದರಿಯಲ್ಲಿ SUNILPAY ಪೋಸ್ಟರ್ ಬಿಡುಗಡೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು,

ನಾಡಹಬ್ಬ ಮೈಸೂರು ದಸರಾ ಸಂಭ್ರಮ : ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ದಸರಾ ಸಂಭ್ರಮ ಆರಂಭವಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಲನೆ ನೀಡಿದರು.ಇದೇ ಮೊದಲ ಬಾರಿಗೆ ದಸರಾ ಉದ್ಘಾಟನೆಗೆ ರಾಷ್ಟ್ರಪತಿ ಆಗಮಿಸಿದ್ದು, ಬೆಳಿಗ್ಗೆ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕ, ವೈಭವಯುತವಾದ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದಂತೆಯೇ ಮೊದಲು ತಾಯಿ ಚಾಮುಂಡೇಶ್ವರಿಯ ದರ್ಶನಕ್ಕೆ ತೆರಳಿದ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲ ಉಚ್ಚಿಲ ದಸರಾ : ಡಾ.ಜಿ.ಶಂಕರ್ ಅವರಿಂದ ಉದ್ಘಾಟನೆ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದಲ್ಲಿ ಈ ಬಾರಿ ಅದ್ದೂರಿಯಾಗಿ ನಡೆಯಲಿರುವ ಉಚ್ಚಿಲ ದಸರಾ ಉತ್ಸವ-2022ರ ಅಂಗವಾಗಿ ದೇವಳದ ಪರಿಸರ ಮತ್ತು ಹೆಜಮಾಡಿಯಿಂದ ಕಾಪು ದೀಪಸ್ಥಂಭದವರೆಗೆ ನಿರ್ಮಿಸಲಾದ ಭವ್ಯವಾದ ವಿದುದ್ದೀಪಾಲಂಕಾರ ವ್ಯವಸ್ಥೆಯನ್ನು ಶ್ರೀ ಕ್ಷೇತ್ರದ ಸ್ವಾಗತ ಗೋಪುರ ಬಳಿ ದೇವಳದ ಗೌರವ ಅಧ್ಯಕ್ಷ ಡಾ.ಜಿ.ಶಂಕರ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ರಾಜ್ಯಕ್ಕೇ ಮಾದರಿಯಾಗಿ ಅತ್ಯಂತ ವೈಭವದಿಂದ ಉಚ್ಚಿಲ ದಸರಾ ನಡೆಯಲಿದ್ದು, ನಾಡಿನೆಲ್ಲೆಡೆಯಿಂದ

ಬೈಂದೂರು ತಾಲೂಕು ಆಡಳಿತದ ವತಿಯಿಂದ ಉಡುಪಿ ಜಿಲ್ಲೆಯ ರಜತ ಮಹೋತ್ಸವ ಕಾರ್ಯಕ್ರಮ

ಜಿಲ್ಲೆಯ ಆಧ್ಯಾತ್ಮಿಕ, ಧಾರ್ಮಿಕ ತಳಗಟ್ಟಿನಲ್ಲಿನ ಸಾಂಸ್ಕøತಿಕ ಶ್ರೀಮಂತಿಕೆಯನ್ನು ಹೊಸ ಪೀಳಿಗೆಗೆ ಪರಿಚಯಿಸಿ ರಾಷ್ಟ್ರಮಟ್ಟಕ್ಕೆ ವಿಸ್ತರಿಸಬೇಕು ಎಂದು ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕøತಿ ಖಾತೆ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಬೈಂದೂರು ತಾಲೂಕು ಆಡಳಿತದ ವತಿಯಿಂದ ಉಡುಪಿ ಜಿಲ್ಲೆಯ ರಜತ ಮಹೋತ್ಸವ ಕಾರ್ಯಕ್ರಮವನ್ನು ನಾಗೂರು ಶ್ರೀಗೋಪಾಲಕೃಷ್ಣ ಕಲಾಮಂದಿರದಲ್ಲಿ ಉದ್ಘಾಟಿಸಿ ಮಾತನಾಡಿದರು. 1997 ರಲ್ಲಿ ಘೋಷಣೆಯಾದ ಹೊಸ ಜಿಲ್ಲೆಗಳ ನಡೆದಿರುವ

ದಸರಾ ದರ್ಶಿನಿಗೆ ಶಾಸಕ ವೇದವ್ಯಾಸ ಕಾಮತ್‍ರಿಂದ ಚಾಲನೆ

ಮಂಗಳೂರು: ದಸರಾ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನದ ವಿಶೇಷ ಪ್ಯಾಕೇಜ್ ಪ್ರವಾಸ ಕಾರ್ಯಚರಣೆಗೆ ಶಾಸಕರಾದ ಡಿ. ವೇದವ್ಯಾಸ ಕಾಮತ್ ಅವರು ನಗರದ ಕೆಎಸ್‍ಆರ್ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಚಾಲನೆ ನೀಡಿದರು. ಮಂಗಳೂರು ಬಸ್ ನಿಲ್ದಾಣದಿಂದ ಬೆಳಿಗ್ಗೆ 8-9ಗಂಟೆಗೆ ಹೊರಟು ಮಂಗಳದೇವಿ ದೇವಸ್ಥಾನ, ಪೆÇಳಲಿ ರಾಜರಾಜೇಶ್ವರಿ ದೇವಸ್ಥಾನ, ಸುಂಕದಕಟ್ಟೆ ಶ್ರೀ ಅಂಬಿಕಾ

ದಸರಾ ದರ್ಶಿನಿಗೆ ಶಾಸಕ ವೇದವ್ಯಾಸ ಕಾಮತ್ ರಿಂದ ಚಾಲನೆ

ದಸರಾ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನದ ವಿಶೇಷ ಪ್ಯಾಕೇಜ್ ಪ್ರವಾಸ ಕಾರ್ಯಚರಣೆಗೆ ಸೆ.26ರ ಸೋಮವಾರ ಶಾಸಕರಾದ ಡಿ. ವೇದವ್ಯಾಸ ಕಾಮತ್ ಅವರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಚಾಲನೆ ನೀಡಿದರು. ಮಂಗಳೂರು ಬಸ್ ನಿಲ್ದಾಣದಿಂದ ಬೆಳಿಗ್ಗೆ 8-9ಗಂಟೆಗೆ ಹೊರಟು ಮಂಗಳದೇವಿ ದೇವಸ್ಥಾನ, ಪೊಳಲಿ ರಾಜರಾಜೇಶ್ವರಿ ದೇವಸ್ಥಾನ, ಸುಂಕದಕಟ್ಟೆ ಶ್ರೀ ಅಂಬಿಕಾ

ಎಸ್‍ಡಿಪಿಐ ನಿಷೇಧಿಸಲು ಗೃಹ ಸಚಿವರು ಮಾಡಿದ ಗೂಡಂಗಡಿಯಲ್ಲ : ಅನ್ವರ್ ಸಾದತ್ ಬಜತ್ತೂರು ಆಕ್ರೋಶ

ತೊಕ್ಕೊಟ್ಟು : ಕೇಂದ್ರ ಹಾಗೂ ರಾಜ್ಯ ಗೃಹ ಸಚಿವರು ಎಸ್ ಡಿಪಿಯನ್ನು ನಿಷೇಧಿಸಲಾಗುವುದು ಎಂದು ಹೇಳುತ್ತಿದ್ದು ನಿಷೇಧಿಸಲು ಇದೇನೂ ಗೂಡಂಗಡಿಯಲ್ಲ. ಇದು ಚುನಾವಣಾ ಆಯೋಗದಲ್ಲಿ ನೋಂದಾಯಿತವಾದ ಒಂದು ರಾಜಕೀಯ ಪಕ್ಷ ಎಂದು ಎಸ್ ಡಿಪಿ ಐ ದ. ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಸ್ ಡಿಪಿ ಐ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯ ಮೇಲೆ ರಾಷ್ಟ್ರೀಯ ತನಿಖಾ ದಳ ನಡೆಸಿದ ಅತಿಕ್ರಮಣದ ದಾಳಿ ಮತ್ತು ಪಾಪ್ಯುಲರ್ ಫ್ರಂಟ್

ನಮ್ಮ ಬಡತನವನ್ನು, ಅಸಹಾಯಕತೆಯನ್ನು ಅವಹೇಳನ ಮಾಡುವ ಸ್ಥಿತಿ ನಿರ್ಮಾಣಗೊಂಡಿದೆ- ಮುನೀರ್ ಕಾಟಿಪಳ್ಳ

ಭಾರತ ದೇಶದ ಜನರನ್ನು ಕಾಡುವ ಹಲವು ಗಂಭೀರ ಸಮಸ್ಯೆಗಳನ್ನು ಈಡೇರಿಸುವ ಭರವಸೆಯನ್ನು ಮುಂದಿಟ್ಟು ಅಧಿಕಾರದ ಗದ್ದುಗೆಯನ್ನೇರಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಯಾವೊಂದು ಭರವಸೆಗಳನ್ನು ಈಡೇರಿಸದೆ ಕನಿಷ್ಟ ನೆಮ್ಮದಿಯಿಂದ ಬದುಕು ನಡೆಸಲಾಗದಂತಹ ಸ್ಥಿತಿಗೆ ಈ ದೇಶದ ಜನರನ್ನು ತಂದು ನಿಲ್ಲಿಸಿದ್ದಾರೆ. ಇವತ್ತು ನಮ್ಮ ಬಡತನವನ್ನು, ಅಸಹಾಯಕತೆಯನ್ನು ಅವಹೇಳನ ಮಾಡುವ ಪರಿಸ್ಥಿತಿ ನಿರ್ಮಾಣಗೊಂಡಿದೆ ಎಂದು ಸಿಪಿಐಎಂ ಪಕ್ಷದ ರಾಜ್ಯ ಸಮಿತಿ ಸದಸ್ಯರಾದ ಕಾಂ ಮುನೀರ್

ಕೆ ಎಸ್‌ ಆರ್‌ ಟಿ ಸಿ ಬಸ್ಸು ಹಾಗೂ ಕಾರಿನ ಮಧ್ಯೆ ಡಿಕ್ಕಿ : ಮಹಿಳೆ ಸೇರಿ ಇಬ್ಬರಿಗೆ ಗಾಯ

ಸೆ.25ರ ಮುಂಜಾನೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಧರ್ಮಸ್ಥಳದಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್ಸು ಹಾಸನದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸೇರಿ ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಪ್ರಯಾಣಿಕರನ್ನು ನೆಲ್ಯಾಡಿ ಅಶ್ವಿನಿ ಆಂಬುಲೆನ್ಸ್ ನಲ್ಲಿ ನೆಲ್ಯಾಡಿಯ ಆಸ್ಪತ್ರೆಗೆ ಸಾಗಿಸಲಾಗಿದೆ ನೆಲ್ಯಾಡಿ

ಬಿಗ್‍ಬಾಸ್ ಸೀಸನ್ 9 ಇಂದಿನಿಂದ ಟಿವಿ ಸೀಸನ್ ಆರಂಭ

ಒಟಿಟಿ ಸೀಸನ್ ಮುಗಿದ ಬೆನ್ನಲ್ಲೆ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್‍ಬಾಸ್‍ನ ಟಿವಿ ಸೀಸನ್ ಇಂದು ಆರಂಭಗೊಳ್ಳುತ್ತಿದ್ದು, ಬಿಗ್‍ಬಾಸ್ ಸೀಸನ್ 9ರ ಮನೆಗೆ ಸದಸ್ಯರನ್ನು ಕಳುಹಿಸಲು ಕಲರ್ಸ್ ಕನ್ನಡ ಚಾನೆಲ್ ಸಜ್ಜಾಗಿದೆ. ಒಟಿಟಿಯಲ್ಲಿ ಸೀಸನ್‍ನಲ್ಲಿ ಟಾಪರ್ ಅಗಿರುವ ರೂಪೇಶ್ ಶೆಟ್ಟಿ ಅವರು ಟಿವಿ ಸೀಸನ್‍ಗೆ ಎಂಟ್ರಿ ಕೊಡಲಿದ್ದಾರೆ. ರೂಪೇಶ್ ಶೆಟ್ಟಿ ಕನ್ನಡ ಮತ್ತು ತುಳು ಚಿತ್ರರಂಗದ ಪ್ರತಿಭಾವಂತ ನಟ, ಇವರು