Home Posts tagged #v4stream (Page 113)

ವಿಶ್ವ ಕಲಾ ರತ್ನ ಪ್ರಶಸ್ತಿ ಪುರಸ್ಕೃತ ಪಿ. ಟಿ .ಪ್ರಕಾಶ್ ಶೆಟ್ಟಿ ವಿಧಿವಶ

ವಿಶ್ವ ಕಲಾ ರತ್ನ ಪ್ರಶಸ್ತಿ ಪುರಸ್ಕೃತ,'' ಖ್ಯಾತ ನಿರೂಪಕ, ಕ್ರೀಡಾಭಿಮಾನಿ, ಕ್ರೀಡಾ ನಿರೂಪಕ ,ಪ್ರತಿಭಾನ್ವಿತ ಯಕ್ಷಗಾನ ಕಲಾವಿದ, ಆಕಾಶವಾಣಿ ಕಲಾವಿದ, ಉತ್ತಮ ವಾಗ್ಮಿ ಹಾಗೂ ಮೊಳಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪಿ .ಟಿ ಪ್ರಕಾಶ್ ಶೆಟ್ಟಿ ಬೆಳಗೋಡು ಅಸ್ತಂಗತರಾಗಿದ್ದಾರೆ.ಹಲವಾರು ಸಾಧನೆಗಳ ಬೆನ್ನತ್ತಿ ಹಾಗೂ ಕ್ರೀಡಾಭಿಮಾನಿಗಳ

ಕಮರಿಗೆ ಉರುಳಿದ ರಿಕ್ಷಾ : ಚಾಲಕ ಮೃತ್ಯು

ಉಳ್ಳಾಲ: ರಿಕ್ಷಾ ಕಮರಿಗೆ ಉರುಳಿ ಚಾಲಕ ಸಾವನ್ನಪ್ಪಿರುವ ಘಟನೆ ದೇರಳಕಟ್ಟೆ ಸಮೀಪದ ಪಾನೀರು ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಸೋಮೇಶ್ವರ ದೇವಸ್ಥಾನ ಬಳಿಯ ನಿವಾಸಿ ಆನಂದ್ ಸಪಲ್ಯ (70)ಮೃತರು. ಕೋಟೆಕಾರು ರಿಕ್ಷಾ ಪಾಕ್9ನಲ್ಲಿ ರಿಕ್ಷಾ ಚಲಾಯಿಸುತ್ತಿದ್ದ ಅವರು ನಿನ್ನೆ ರಾತ್ರಿ ದೇರಳಕಟ್ಟೆ ಕಡೆಗೆ ಬಾಡಿಗೆಗೆ ತೆರಳಿ ವಾಪಸ್ಸಾಗುತ್ತಿದ್ದಾಗ ಪಾನೀರು ಅಸಿಸ್ಸಿ ಶಾಲೆ ಬಳಿ ಕಮರಿಗೆ ಉರಳಿ ತಲೆಗೆ ಗಾಯಗಳಾಗಿ ಸಾವನ್ನಪ್ಪಿದ್ದಾರೆ.ಮೃತರು ಪತ್ನಿ ಪುತ್ರ

ಸೋಮೇಶ್ವರ : ಸಿ.ಸಿ.ಟಿವಿ ಪುಡಿಗೈದ ಮರಳು ಕಳ್ಳರ ಬಂಧನ

ಉಳ್ಳಾಲ: ಸೋಮೇಶ್ವರ ಸಮುದ್ರ ತೀರದಲ್ಲಿ ಅಕ್ರಮ ಮರಳು ಸಾಗಾಟ ತಡೆಯಲು ಹಾಕಿದ್ದ ಸಿಸಿಟಿವಿ ಮತ್ತು ತಡೆಬೇಲಿಯನ್ನು ಧ್ವಂಸಗೈದ ನಾಲ್ವರು ಆರೋಪಿಗಳನ್ನು ,ಬಳಸಿದ್ದ ಟಿಪ್ಪರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.ಬಂಧಿತರನ್ನು ಮಡ್ಯಾರ್ ಸಾಯಿನಗರ ನಿವಾಸಿ ಸೂರಜ್, ಮುಡಿಪು ಮದ್ಯನಡ್ಕ ನಿವಾಸಿ ಇಕ್ಬಾಲ್, ತಲಪಾಡಿ ನಿವಾಸಿ ಅಖಿಲ್, ಸೋಮೇಶ್ವರ ಮೂಡಾ ನಿವಾಸಿ ಪ್ರಜ್ವಲ್ ಬಂದಿತರಾಗಿದ್ದು, ಕೃತ್ಯಕ್ಕೆ ಬಳಸಿದ್ದ ಟಿಪ್ಪರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸೋಮೇಶ್ವರ

ಪಡುಬಿದ್ರಿ ಕೆಪಿಎಸ್ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ : ಪರಿಶೀಲನೆ

ಮೂಲಸೌಕರ್ಯ ಕೊರತೆ ಎದುರಿಸುತ್ತಿರುವ ಪಡುಬಿದ್ರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರೇಗೌಡ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಪಡುಬಿದ್ರಿಯ ಕೆಪಿಎಸ್ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ಮೂಲಸೌಕರ್ಯಗಳಿಲ್ಲದೆ ನೆಲದಲ್ಲಿ ಕುಳಿತುಕೊಂಡು ಪಾಠ ಕೇಳುವ ಪರಿಸ್ಥಿತಿ ಇದೆ. ಅಲ್ಲದೆ ಈ ಶಾಲೆಯ ಕಟ್ಟಡ ತೀರ ಹಳೆಯದಾಗಿದ್ದು, ನಾದುರಸ್ಥಿಯಲ್ಲಿದೆ. ಕೂಡಲೇ ಸೂಕ್ತ ಹೊಸ ಕಟ್ಟಡವನ್ನು ರಚಿಸುವಂತೆ ಆಗ್ರಹಿಸಿ ಸಾಮಾಜಿಕ

ಸುರತ್ಕಲ್ ಟೋಲ್‍ಗೇಟ್ ತೆರವಿಗೆ ದಿನಾಂಕ ಘೋಷಣೆಗೆ ಆಗ್ರಹಿಸಿ ಸೆ.13ರಂದು ಧರಣಿ

ಟೋಲ್‍ಗೇಟ್ ತೆರವಿನ ದಿನಾಂಕ ಘೋಷಣೆಗೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಸುರತ್ಕಲ್ ಟೋಲ್‍ಗೇಟ್ ವಿರೋಧಿ ಹೋರಾಟ ಸಮಿತಿ ಸೆ.13ರಂದು ಎನ್‍ಐಟಿಕೆ ಸಮೀಪ ಇರುವ ಸುರತ್ಕಲ್ ಟೋಲ್ ಗೇಟ್ ಮುಂಭಾಗದಲ್ಲಿ ಹಮ್ಮಿಕೊಂಡಿರುವ ಒಂದು ದಿನದ ಸಾಮೂಹಿಕ ಧರಣಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಟೋಲ್‍ಗೇಟ್ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದರು.ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಶನ್

ಪುತ್ತೂರು: ರಸ್ತೆ ಬದಿಯಲ್ಲಿದ್ದ ಮರದ ರೆಂಬೆ ಕಡಿದ ಪ್ರಕರಣ : ನಾಲ್ವರ ವಿರುದ್ಧ ಕೇಸ್

ಪುತ್ತೂರು : ಸೆ 12 : ರಸ್ತೆ ಬದಿಯಲ್ಲಿದ್ದ ಮರದ ರೆಂಬೆ ಕೊಂಬೆಗಳನ್ನು ಅಕ್ರಮವಾಗಿ ಕಡಿದಿದ್ದಾರೆ ಎಂದು ಆರೋಫಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಸಿಇಒ ಸಹಿತ ನಾಲ್ವರ ವಿರುದ್ದ ಸೆ 12 ರಂದು ಪ್ರಕರಣ ದಾಖಲಾಗಿದೆ. ಪುತ್ತೂರು ಉಪವಿಭಾಗದ ಪುತ್ತೂರು ಅರಣ್ಯ ವಲಯವು ಪ್ರಕರಣ ದಾಖಲಿಸಿಕೊಂಡಿದೆ.ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯ ನಿರ್ವಹಣಾ ಅಧಿಕಾರಿ ಲಕ್ಷ್ಮಣ ಹಾಗೂ ನಿರ್ದೇಶಕರಾದ ರವೀಂದ್ರ

ಟೋಲ್ ಗೇಟ್ ರದ್ಧತಿಗೆ ಆಗ್ರಹ : ಧರಣಿ ಯಶಸ್ವಿಗೆ ಬಜ್ಪೆಯಲ್ಲಿ ಸಭೆ

ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿನ ದಿನಾಂಕ ಘೋಷಿಸಲು ಆಗ್ರಹಿಸಿ ಸೆಪ್ಟಂಬರ್ 13 ರಂದು ನಡೆಯಲಿರುವ ಸಾಮೂಹಿಕ ಧರಣಿಯ ಯಶಸ್ಸಿಗೆ ಬಜ್ಪೆ ಹೋಬಳಿ ಮಟ್ಟದ ಸಭೆ ಬಜ್ಪೆ ಕರಾವಳಿ ಸಭಾಂಗಣದಲ್ಲಿ ಹಿರಿಯ ದಲಿತ ಮುಖಂಡ ಎಂ ದೇವದಾಸ್ ಅಧ್ಯಕ್ಷತೆಯಲ್ಲಿ ಇಂದು ನಡೆಯಿತು. ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ಡಿವೈಎಫ್ಐ ಮುಖಂಡ ಶ್ರೀನಾಥ್ ಕುಲಾಲ್, ಸಾಮಾಜಿಕ ಕಾರ್ಯಕರ್ತ ನಿಸಾರ್ ಕರಾವಳಿ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ರಘು ಎಕ್ಕಾರು,

ನಟಿ ಪೂಜಾ ಹೆಗ್ಡೆಗೆ ಅತ್ಯುತ್ತಮ ನಟಿ ಪ್ರಶಸ್ತಿ

2022 ರ ಪ್ರತಿಷ್ಠಿತ SIIMA ಪ್ರಶಸ್ತಿ ಸಮಾರಂಭದಲ್ಲಿ 2 ಪ್ರಶಸ್ತಿಗಳನ್ನು ಬಹುಭಾಷಾ ನಟಿ ಪೂಜಾ ಹೆಗ್ಡೆ ಅವರಿಗೆ ಲಭಿಸಿದೆ.ಅವರು ಯೂತ್ ಐಕಾನ್ ಆಫ್ ಸೌತ್ ಇಂಡಿಯಾ ಪ್ರಶಸ್ತಿ ಮತ್ತು ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ನಿವೃತ್ತ ಶಿಕ್ಷಕ ಕೇಶವ ಪ್ರಕಾಶ್ ನಿಧನ

ಮೂಡುಬಿದಿರೆ : ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಕೇಶವ ಪ್ರಕಾಶ್ ( 60ವ) ಅವರು ಇಂದು ಮುಂಜಾನೆ ತನ್ನ ಬೆಳುವಾಯಿಯಲ್ಲಿರುವ ಮನೆಯಲ್ಲಿ ಹೃದಯಾಘಾತವಾಗಿ ನಿಧನ ಹೊಂದಿದರು.ಕಳೆದ 30 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಎರಡು ತಿಂಗಳ ಹಿಂದೆ ಬಾಬು ರಾಜೇಂದ್ರ ಪ್ರೌಢಶಾಲೆಯಲ್ಲಿ ನಿವೃತ್ತಿಯನ್ನು ಹೊಂದಿದ್ದರು.ಹಳೆಯಂಗಡಿ ಸರಕಾರಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು

ದ.ಕ. ಮೊಗರವೀರ ಮಹಾಜನ ಸಂಘದಿಂದ ವಿದ್ಯಾರ್ಥಿ ವೇತನ, ಗುರಿಕಾರರಿಗೆ ಗೌರವಧನ ವಿತರಣೆ

ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವತಿಯಿಂದ ಉಚ್ಚಿಲ ಮೊಗವೀರ ಭವನದಲ್ಲಿ ಆಯೋಜಿಸಲಾಗಿದ್ದ ಉಪ್ಪಳದಿಂದ ಶಿರೂರುವರೆಗಿನ ಮೊಗವೀರ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಗುರಿಕಾರರಿಗೆ ಗೌರವಧನ ವಿತರಣಾ ಕಾರ್ಯಕ್ರಮವನ್ನು ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಾಡೋಜ ಜಿ. ಶಂಕರ್ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಜೀಣೋದ್ಧಾರ ಸಂದರ್ಭ ಸಮಾಜದ