Home Posts tagged #v4stream (Page 194)

ಕೇರಳ ಗಡಿ ನಿರ್ಬಂಧ ತೆರವಿಗೆ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ: ಸಿಎಂ ಬಸವರಾಜ ಬೊಮ್ಮಾಯಿ

ಕೋವಿಡ್ 19 ಹಿನ್ನೆಲೆಯಲ್ಲಿ ಕೇರಳ ಗಡಿ ನಿರ್ಬಂಧ ತೆರವಿಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ದ.ಕ. ಮತ್ತು ಉಡುಪಿ ಜಿಲ್ಲೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರು ಸುದ್ದಿಗಾರರೊಂದಿಗೆ

ಹಾನಗಲ್ ಉಪಚುನಾವಣೆಗೆ ಉಸ್ತುವಾರಿಯಾಗಿ ಎಂ ಎಲ್ ಸಿ ಹರೀಶ್ ಕುಮಾರ್ ನೇಮಕ

ಮಂಗಳೂರು : ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಯಾಗಿ ದಕ್ಷಿಣ ಕನ್ನಡ ಜಿಲ್ಲ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಸಚಿವ ಯು.ಟಿ.ಖಾದರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ನೇಮಕ ಮಾಡಿದೆ.ಕೆಪಿಸಿಸಿ ಕಾರ್ಯಾಧ್ಯಕ್ಷ , ಮಾಜಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಹಾನಗಲ್ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಉಸ್ತುವಾರಿಗಳ ತಂಡವನ್ನು ನಿಯೋಜಿಸಲಾಗಿದೆ.

ಭಾರತೀಯ ಜೀವ ವಿಮಾ ನಿಗಮದ ವತಿಯಿಂದ ಲೇಡಿಗೋಷನ್ ಆಸ್ಪತ್ರೆಗೆ ವಾಟರ್ ಪ್ಯೂರಿಫೈಯರ್ -ಕಮ್ -ಹೀಟರ್ನ ನ ಕೊಡುಗೆ

ಮಂಗಳೂರು ಲೇಡಿಗೋಶನ್ ಆಸ್ಪತ್ರೆಗೆ ವಾಟರ್ ಪ್ಯೂರಿಫೈಯರ್ ಕಂ ಹೀಟರ್ ನ್ನು ಭಾರತೀಯ ಜೀವ ವಿಮಾ ನಿಗಮವು ಕೊಡುಗೆಯಾಗಿ ನೀಡಿದೆ. ಈ ಕಾರ್ಯ ಮಾದರಿಯಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ದುರ್ಗಾ ಪ್ರಸಾದ್ ಅವರು ಹೇಳಿದರು. ಭಾರತೀಯ ಜೀವವಿಮಾ ನಿಗಮದ 65ನೇ ವರ್ಷಾಚರಣೆ ಸಂದರ್ಭದಲ್ಲಿ ಆಸ್ಪತ್ರೆಯ ಸುಪರಿಂಟೆಂಡೆಂಟ್ ಅವರು ವಾಟರ್ ಪ್ಯುರಿಫಯ್ಯರ್ ಕಂ ಹೀಟರ್ ಅನ್ನು ಸ್ವೀಕರಿಸಿ ಮಾತನಾಡಿದರು. ನಿಗಮದ ಮಂಗಳೂರು ಶಾಖೆಯ ಹಿರಿಯ ಪ್ರಬಂಧಕರಾದ ಶ್ರೀ ಎಚ್

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ನಡೆಸುತ್ತಿದ್ದೇನೆ : ಶೇಖರಗೌಡ ಮಾಲಿಪಾಟೀಲ

ಕನ್ನಡದ ಗರಿಮೆ, ಹಿರಿಯೆಯ ಪ್ರತೀಕವಾದ ಸಾಹಿತ್ಯ ಪರಿಷತ್ತನ್ನು ಮುನ್ನಡೆಸಲು ಸಮರ್ಥ ನಾಯಕತ್ವ ಅಗತ್ಯವಿದೆ. ಇಂಥ ಪ್ರಾತಿನಿಧಿಕ ಸಂಸ್ಥೆಗೆ ರಾಜ್ಯದ ಅನೇಕ ಹಿರಿಯ ಸಾಹಿತಿಗಳು, ಸಂಘಟಕರು, ಜನಪರ ಸಂಘಟನೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಮತ್ತು ತಾಲೂಕು ಘಟಕಗಳ ಪದಾಧಿಕಾರಿಗಳ ಒತ್ತಾಯದಿಂದ ಬರುವ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ನಡೆಸುತ್ತಿದ್ದೇನೆ ಎಂದು ಶೇಖರಗೌಡ ಮಾಲಿಪಾಟೀಲ ಹೇಳಿದರು. ಮಂಗಳವಾರ ಕನ್ನಡ ಸಾಹಿತ್ಯ

ಕೊಟ್ಟಾರ ಚೌಕಿಯಲ್ಲಿ ಹೊಂಡಾ ಬಿಗ್ ವಿಂಗ್ ಮಳಿಗೆ ಶುಭಾರಂಭ

ಹೊಂಡಾ ಮೋಟಾರ್‍ಸ್‌ನವರ ಅತ್ಯುನ್ನತ ಶ್ರೇಣಿಯ ಬೈಕ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸುವ ಹೊಂಡಾ ಬಿಗ್ ವಿಂಗ್ ಮಳಿಗೆ ಶುಭಾರಂಭಗೊಂಡಿತು. ನಗರದ ಕೊಟ್ಟಾರ ಚೌಕಿಯ ವಿಎಸ್‌ಕೆ ಟವರ್‌ನಲ್ಲಿ ಆರಂಭಗೊಂಡಿತು. ದ್ವಿಚಕ್ರ ವಾಹನ ಪ್ರೀಯರ ನೆಚ್ಚಿನ ಶೋರೋಂ ಆಗಿರುವ ಹೊಂಡಾ ಮೊಟಾರ್‍ಸ್‌ನವರ ಹೊಂಡಾ ಬಿಗ್ ವಿಂಗ್ ನಗರದ ಕೊಟ್ಟಾರ್ ಚೌಕಿಯ ವಿಎಸ್‌ಕೆ ಟವರ್‌ನಲ್ಲಿ ಆರಂಭಗೊಂಡಿತು. ಹೊಂಡಾ ಬಿಗ್ ವಿಂಗ್ ಮಳಿಗೆಯನ್ನು ಇಂಡಿಯನ್ ಐಡಲ್ 12 ರ ಖ್ಯಾತಿಯ ನಿಹಾಲ್ ತಾವ್ರೋ ಮತ್ತು ಸಚಿನ್

ಉಪ್ಪಿನಂಗಡಿ: ಬಸ್ ಹರಿದು ತಾಯಿ, ಮಗು ಸಾವು

ಉಪ್ಪಿನಂಗಡಿ: ಅತೀ ವೇಗದಿಂದ ಬಸ್ ನಿಲ್ದಾಣದೊಳಗೆ ಬಂದ ಕೆಎಸ್ಸಾರ್ಟಿಸಿ ಬಸ್‌ನಡಿಗೆ ಸಿಲುಕಿ ತಾಯಿ ಹಾಗೂ ಆಕೆಯ ಒಂದು ವರ್ಷದ ಪುತ್ರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ.ಮೂಲತಃ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಸಿದ್ದೀಕ್ ಎಂಬವರ ಪತ್ನಿ ಶಾಹಿದಾ (25) ಹಾಗೂ ಆಕೆಯ ಒಂದು ವರ್ಷದ ಪುತ್ರ ಶಾಹೀಲ್ ಮೃತಪಟ್ಟ ದುರ್ದೈವಿಗಳು. ಗೇರುಕಟ್ಟೆಯ ತಾಯಿ ಮನೆಗೆ ಬಂದಿದ್ದ ಶಾಹಿದಾ ಮಂಗಳವಾರ ಬೆಳಗ್ಗೆ ಪುತ್ತೂರಿಗೆ ವೈದ್ಯರ ಬಳಿ ತನ್ನ

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಮತದಾರರ ಸಾಕ್ಷರತಾ ಸಂಘದ ಉದ್ಘಾಟನೆ

ಯುವತಲೆಮಾರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರ್ಥೈಸಿಕೊಂಡು ಮತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದು ಮತದಾರರ ಸಾಕ್ಷರತಾ ಸಂಘದ ಬೆಳ್ತಂಗಡಿ ತಾಲೂಕು ನೋಡಲ್ ಅಧಿಕಾರಿ ಶುಭಾ ಪೌಲ್ ಹೇಳಿದರು. ಉಜಿರೆಯ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಮತದಾರರ ಸಾಕ್ಷರತಾ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನೈತಿಕಪ್ರಜ್ಞೆಯಿಂದ ಮತವನ್ನು ಚಲಾಯಿಸುವ ಮೂಲಕ ಜವಾಬ್ದಾರಿಯುತ ನಾಯಕನನ್ನು ಆಯ್ಕೆ

“ವಿದ್ಯೆಯನ್ನು ಬಳಸಿ – ಬೆಳೆಸಿ” : ಎಸ್.ಡಿ.ಎಂ ಎಜುಕೇಷನಲ್ ಸೊಸೈಟಿಯ ಕಾರ್ಯದರ್ಶಿ ಶ್ರೀ. ಡಿ. ಹರ್ಷೇಂದ್ರ ಕುಮಾರ್

ಉಜಿರೆ : ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಜೀವನದಲ್ಲಿ ಛಲ ಎನ್ನುವುದು ಮುಖ್ಯ. ಛಲ ಇದ್ದರೆ ಎಂತಹ ಕಷ್ಟದ ಕೆಲಸವನ್ನಾದರೂ ಸಾಧಿಸಲು ಸಾಧ್ಯ ಎಂದು ಎಸ್.ಡಿ.ಎಂ ಸೊಸೈಟಿಯ ಕಾರ್ಯದರ್ಶಿ ಶ್ರೀ. ಡಿ. ಹರ್ಷೇಂದ್ರ ಕುಮಾರ್ ಹೇಳಿದರು. ಉಜಿರೆಯ ಎಸ್.ಡಿ.ಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಹಿರಿಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿಗಳು ನಮ್ಮ ವ್ಯಕ್ತಿತ್ವ ವಿಕಸನದ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು.