Home Posts tagged #v4stream (Page 284)

ಕುಲಶೇಖರದ ಕೊಂಗೂರಿನಲ್ಲಿ ಗುಡ್ಡ ಕುಸಿತ: ರೈಲ್ವೇ ಹಳಿಯ ಮೇಲೆ ಬಿದ್ದ ಮಣ್ಣು: ರೈಲು ಸಂಚಾರ ಸ್ಥಗಿತ

ಕರಾವಳಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಂಗಳೂರು ನಗರದ ಕುಲಶೇಖರದ ಬಳಿಯ ಕೊಂಗೂರಿನಲ್ಲಿ ಗುಡ್ಡ ಕುಸಿತವಾಗಿದ್ದು, ರೈಲ್ವೆಯ ಹಳಿಯ ಮೇಲೆ ಮಣ್ಣು ಬಿದ್ದಿದೆ. ಇದರಿಂದಾಗಿ  ರೈಲ್ವೆ ಸಂಚಾರ ಸ್ಥಗಿತಗೊಂಡಿದೆ. ಕುಲಶೇಖರದ ಬಳಿಯಲ್ಲಿ ರೈಲ್ವೆ ಇಲಾಖೆ ರೈಲ್ವೆಹಳಿ ಪಕ್ಕದಲ್ಲಿ ತಡೆಗೋಡೆಯನ್ನು ನಿರ್ಮಾಣ ಮಾಡುತ್ತಿದೆ. ಆದ್ರೆ ಭಾರೀ ಮಳೆಯ

ಜುಲೈ 20ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಜುಲೈ 20 ರಂದು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ತಾಣದಲ್ಲಿ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಕೊರೊನಾವೈರಸ್ ಸೋಂಕು ಕಾರಣದಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಪಡಿಸಲಾಗಿತ್ತು. ಪ್ರಥಮ ಪಿಯುಸಿ ಅಂಕ ಆಧರಿಸಿ ದ್ವಿತೀಯ ಪಿಯುಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ ಮಾಡುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದರು.ಈ ಕುರಿತು ಹೇಳಿಕೆ ನೀಡಿರುವ ಪದವಿ

ಉಪ್ಪಳಿಗೆಯಲ್ಲಿ ಮನೆ ತಡೆಗೋಡೆ ಕುಸಿತ-ಲಕ್ಷಾಂತರ ರೂಪಾಯಿ ನಷ್ಟ

ಪುತ್ತೂರು: ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಜು.16ರಂದು ಇರ್ದೆ ಗ್ರಾಮದ ಉಪ್ಪಳಿಗೆ ಎಂಬಲ್ಲಿ ಧನಂಜಯರವರ ಮನೆಯ ತಡೆಗೋಡೆ ಕುಸಿದು ಬಿದ್ದಿದೆ. ಮನೆ ಅಂಗಳದ ಬದಿಯಲ್ಲಿ ನಿರ್ಮಿಸಲಾದ ತಡಗೋಡೆಯು ಮುಂಜಾನೆಯ ವೇಳೆಗೆ ಹೂವಿನ ಗಾರ್ಡನ್ ಸಹಿತ ಕುಸಿದು ಬಿದ್ದಿದೆ. ಅಂಗಳದಲ್ಲಿ ಬಿರುಕು ಬಿಟ್ಟಿದ್ದು ಮತ್ತಷ್ಟು ಕುಸಿಯುವ ಅಪಾಯದಲ್ಲಿದೆ. ಘಟನೆಯಿಂದಾಗಿ ಲಕ್ಷಾಂತರ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.

ಕೊಳ್ನಾಡುವಿನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಅನುದಾನ ಮಂಜೂರು: ಎಂ.ಎಸ್.ಮಹಮ್ಮದ್

ವಿಟ್ಲ : ಕೊಳ್ನಾಡು ಜಿ.ಪಂ. ವ್ಯಾಪ್ತಿಯ ಕನ್ಯಾನ, ಕರೋಪಾಡಿ, ಕೊಳ್ನಾಡು, ಸಾಲೆತ್ತೂರು ಗ್ರಾ.ಪಂ.ಗಳಿಗೆ ಒಟ್ಟು ಜಲಜೀವನ್ ಮಿಷನ್ ಯೋಜನೆಯಡಿ 7.81 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಜಿ.ಪಂ.ಮಾಜಿ ಎಂ.ಎಸ್.ಮಹಮ್ಮದ್ ತಿಳಿಸಿದರು.ಅವರು ವಿಟ್ಲ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಾನು ಪ್ರತಿನಿಧಿಸಿದ ಕೊಳ್ನಾಡು ಜಿ.ಪಂ.ಕ್ಷೇತ್ರವು ದ.ಕ.ಜಿಲ್ಲೆಯಲ್ಲೇ ಅತೀ ಹೆಚ್ಚು ಅನುದಾನ ಪಡೆದಿದೆ. ಗ್ರಾ.ಪಂ.ನ ನೀರು ಮತ್ತು ನೈರ್ಮಲ್ಯ ಸಮಿತಿಯು

ಒಕ್ಕೆತ್ತೂರು ಹೊಳೆಯ ಸುರುಂಬಡ್ಕ ಕಿರು ಸೇತುವೆ ಮುಳುಗಡೆ

ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವಿಟ್ಲ ಕಸಬಾ ಗ್ರಾಮದ ಒಕ್ಕೆತ್ತೂರು ಹೊಳೆಯ ಸುರುಂಬಡ್ಕ ಕಿರು ಸೇತುವೆ ಮುಳುಗಡೆಯಾಗಿದೆ. ಕಳೆದ ಭಾರಿಯ ಮಳೆಗೆ ಎರಡು ಬಾರಿ ಕಿಂಡಿ ಅಣೆಕಟ್ಟು ಮುಳುಗಡೆಯಾಗಿತ್ತು. ಇದರಿಂದ ಸುತ್ತಮುತ್ತಲಿನ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಆಗಿನ ಶಾಸಕಿ ಶಕುಂತಾಳ ಶೆಟ್ಟಿ ಅವರ ಮೂಲಕ ಒಂದು ಕೋಟಿ ರೂ. ಅನುದಾನದಲ್ಲಿ ಈ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಲಾಗಿತ್ತು. ಕಳೆದ ವರ್ಷ ಈ ಹೊಳೆಯಲ್ಲಿ ಕೊಚ್ಚಿಕೊಂಡು

ಸೆಲೂನ್‌ಗೆ ನುಗ್ಗಿ ಮಹಿಳೆಗೆ ಹಲ್ಲೆ : ಸಿಸಿಟಿವಿಯಲ್ಲಿ ದಾಖಲು

ಮಂಗಳೂರಿನ ಕದ್ರಿಯಲ್ಲಿ ಸೆಲೂನ್‌ಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿ, ಹಲ್ಲೆ ನಡೆಸಿ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಮಂಗಳೂರಿನ ಅತ್ತಾವರ ನಿವಾಸಿ ಅಬ್ದುಲ್ ದಾವೂದ್, ಬಂಧಿತ ವ್ಯಕ್ತಿ. ಈತ ಯೂನಿಸೆಕ್ಸ್ ಸೆಲೂನ್‌ಗೆ ನುಗ್ಗಿ ಯುವತಿಗೆ ಕಿರುಕುಳ ನೀಡಿ ಹಲ್ಲೆ ನಡೆಸಿದ್ದಾನೆ. ಕದ್ರಿಯ ಯುನಿಸೆಕ್ಸ್ ಸೆಲೂನ್‌ನಲ್ಲಿ ಜುಲೈ 1 ರಂದು ಈ ಘಟನೆ ನಡೆದಿತ್ತು. ಯುವತಿಯ ಮೈಗೆ ಕೈ ಹಾಕಿ ಕಿರುಕುಳ ನೀಡಿದ್ದ ದಾವೂದ್ ಆಕೆಗೆ ಹಲ್ಲೆ

ಪುತ್ತೂರು ಪಾಣಾಜೆ ರಸ್ತೆಯ ಚೆಲ್ಯಡ್ಕ ಸೇತುವೆ ಮುಳುಗಡೆ

ಪುತ್ತೂರು : ಪುತ್ತೂರು ಪರ್ಲಡ್ಕ ಪಾಣಾಜೆ ರಸ್ತೆಯ ಚೆಲ್ಯಡ್ಕ ಸೇತುವೆ ಈ ಮಳೆಗಾಲದ ಅವಧಿಯಲ್ಲಿ ಮೊದಲ ಬಾರಿಗೆ ಜು.15 ರಂದು ಮಧ್ಯಾಹ್ನ ವೇಳೆ ಮುಳುಗಡೆಯಾಗಿದೆ. ಬೆಳಿಗ್ಗೆಯಿಂದಲೇ ವಿಪರೀತ ಮಳೆ ಸುರಿಯುತ್ತಿದ್ದ ಕಾರಣ ಮುಳುಗು ಸೇತುವೆಯೆಂದು ಹೆಸರಾದ ಈ ಸೇತುವೆ ಮುಳುಗಡೆಯಾಗಿದ್ದು ಆ ರಸ್ತೆಯಲ್ಲಿ ಚಲಿಸ ಬೇಕಾದ ವಾಹನಗಳಿಗೆ ಅಡಚಣೆ ಉಂಟಾಗಿ ಸಮಸ್ಯೆಯಾಯಿತು.ಸುತ್ತುವರಿದು ಚಲಿಸ ಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.

ಬಸ್ರೂರಿನಲ್ಲಿ ಮನೆಯ ಮೇಲೆ ಬಿದ್ದ ಮರ: ಇಬ್ಬರಿಗೆ ಗಾಯ

ಕುಂದಾಪುರ: ಕರಾವಳಿಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭೀಕರ ಗಾಳಿ ಮಳೆಗೆ ಕುಂದಾಪುರ ತಾಲೂಕಿನಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಆರ್ಭಟ ಜೋರಾಗಿದ್ದು ಬುಧವಾರ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಬಸ್ರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗಣಪಯ್ಯ ಗಾಣಿಗ ಎಂಬವರ ಮನೆಯ ಮೇಲೆ ಧೂಪದ ಮರ ಬಿದ್ದು ಮೇಲ್ಛಾವಣಿ ಕುಸಿದಿದೆ. ಪರಿಣಾಮ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೃಹದಾಕಾರದ ಮರ ಬಿದ್ದ ಪರಿಣಾಮ

ಕೋವಿಡ್ ಹಿನ್ನೆಲೆ ತಲಪಾಡಿ ಗಡಿಭಾಗದಲ್ಲಿ ತೀವ್ರಗೊಂಡ ತಪಾಸಣೆ

ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಹಿನ್ನಲೆಯಲ್ಲಿ ಕೊಣಾಜೆ ಮತ್ತು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿಭಾಗದಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕಾಸರಗೋಡಿನಿಂದ ಮಂಗಳೂರು ಪ್ರವೇಶಿಸುವ ಎಲ್ಲರ ನೆಗೆಟಿವ್ ವರದಿ ಕಡ್ಡಾಯ ಮಾಡುತ್ತಿದ್ದು, ಸ್ಥಳದಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆಗೆ ವ್ಯವಸ್ಥೆ ಮಾಡಿದ್ದು ತಲಪಾಡಿ ಗಡಿಭಾಗದಲ್ಲೂ ಕಟ್ಟು ನಿಟ್ಟಿನ ಕ್ರಮ ಕೊಂಡಿದ್ದಾರೆ. ಮಂಗಳೂರು ಕಮಿಷನರೇಟ್ ಒಳಪಡುವ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ

ಉಳ್ಳಾಲ ಮತ್ತು ಸೋಮೇಶ್ವರ ಸಮುದ್ರದಲ್ಲಿ ಹೆಚ್ಚಾದ ಅಬ್ಬರ: ಅಪಾರ ಹಾನಿ

ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ ಉಳ್ಳಾಲ ಮತ್ತು ಸೋಮೇಶ್ವರದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿದ್ದು, ಸೋಮೇಶ್ವರ ಉಚ್ಚಿಲ ಬಟ್ಟಪ್ಪಾಡಿಯಲ್ಲಿ ಒಳರಸ್ತೆ ಸಮುದ್ರದ ಅಲೆಗಳ ಪಾಲಾದರೆ, ಉಳ್ಳಾಲ ಮತ್ತು ಸುತ್ತಮುತ್ತಲಿ ವ್ಯಾಪ್ತಿಯಲ್ಲಿ ಕಂಪೌಂಡ್ ಕುಸಿತ ಸೇರಿದಂತೆ ಸಣ್ಣಪುಟ್ಟ ಅವಘಡಗಳು ಸಂಭವಿಸಿದೆ. ಸೋಮೇಶ್ವರ ಬೀಚ್ ರಸ್ತೆ ಬಟ್ಟಪ್ಪಾಡಿ ಬಳಿ ಹಾನಿಗೀಡಾಗಿದ್ದು ಸಂಚಾರ ಅಸ್ತವ್ಯಸ್ತವಾಗಿದೆ. ಉಚ್ಚಿಲದಲ್ಲಿ ತಗ್ಗು ಪ್ರದೇಶ ಜಲಾವೃತಗೊಂಡಿದ್ದು