Home Posts tagged #v4stream (Page 287)

ಮೈದಾನದ ಪ್ರವೇಶ ದಾರಿ ಬಂದ್ ಗ್ರಾಪಂನಿಂದ ಸಾಮರಸ್ಯ ಒಡೆಯುವ ಕೆಲಸ : ಎ.ಜತೀಂದ್ರ ಶೆಟ್ಟಿ ಆರೋಪ

ಪುತ್ತೂರು: 34 ನೆಕ್ಕಿಲಾಡಿ ಗ್ರಾಪಂ ವ್ಯಾಪ್ತಿಯ ಮೈಂದನಡ್ಕದಲ್ಲಿ ಸಾರ್ವಜನಿಕ ಆಟದ ಮೈದಾನದ ಪ್ರವೇಶ ದಾರಿಯನ್ನು ಮುಚ್ಚಿ ಧರ್ಮಾಧಾರಿತ ರಾಜಕಾರಣದ ಮೂಲಕ ಸಮಾಜದ ಸಾಮರಸ್ಯವನ್ನು ಒಡೆಯುವ ಹುನ್ನಾರ ಗ್ರಾಪಂ ನಡೆಸಿದ್ದು, ಇದೊಂದು ಸಂಘರ್ಷದ ವಾತಾವರಣ ಉಂಟುಮಾಡುವ ಕಾರ್ಯವಾಗಿದೆ ಎಂದು ಮೈಂದನಡ್ಕ ಶಾಂತಿ-ಸೌಹಾರ್ದತೆ ಉಳಿಸಿ ಹೋರಾಟ ಸಮಿತಿ ಆರೋಪಿಸಿದೆ.

ಲಾಕ್ ಡೌನ್ ನಿಯಮ ಉಲ್ಲಂಘನೆ : 31 ವಾಹನಗಳ ಜಫ್ತಿ, 70 ಕೇಸು ದಾಖಲು

ಮೂಡುಬಿದಿರೆ : ಕಳೆದ ಮೂರು ದಿನಗಳಿಂದ ಬೆಳಿಗ್ಗೆ 6-10 ಗಂಟೆಯ ನಂತರ ಸುಮ್ಮನೆ ಕಾಲ ಕಳೆಯಲು ಮೂಡುಬಿದಿರೆ ಪೇಟೆಯಲ್ಲಿ ಅಡ್ಡಾದಿಡ್ಡಿ ಓಡಾಟ ಮಾಡಿ ಲಾಕ್ ಡೌನ್ ನಿಯಮವನ್ನು ಉಲ್ಲಂಘನೆ ಮಾಡುತ್ತಿದ್ದ 31 ವಾಹನಗಳನ್ನು ಮೂಡುಬಿದಿರೆ ಪೊಲೀಸರು ಜಫ್ತಿ ಮಾಡಿದ್ದು ಅಲ್ಲದೆ ಮಾಸ್ಕ್ ಧರಿಸದಿದ್ದ 70 ಜನರ ವಿರುದ್ಧ ಕೇಸು ದಾಖಲಿಸುವ ಮೂಲಕ ಕಾರ್ಯಚರಣೆಯನ್ನು ಬಿಗಿಗೊಳಿಸಿದ್ದಾರೆ. ಅಗತ್ಯ ವಸ್ತುಗಳ ಖರೀದಿಯ ಸಂದರ್ಭ ಬೆಳಿಗ್ಗೆ ಮೂಡುಬಿದಿರೆಯ ಪೇಟೆಯಲ್ಲಿ ಮತ್ತು

ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣ : ಆರೋಪಿಗಳ ರಕ್ಷಣೆಗೆ ಯಾರೂ ಮಧ್ಯಪ್ರವೇಶ ಮಾಡಿಲ್ಲ : ಸಚಿವ ಕೋಟ

ಕುಂದಾಪುರ: ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ರಕ್ಷಣೆಗೆ ನಮ್ಮ‌ ಶಾಸಕರಾಗಲಿ, ಸಂಸದರಾಗಲಿ ಮಂತ್ರಿಗಳಾಗಲಿ ಯಾರೂ ಮಧ್ಯಪ್ರವೇಶ ಮಾಡಿಲ್ಲ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು. ಉದಯ್ ಗಾಣಿಗ ಕೊಲೆ ಪ್ರಕರಣದ ಆರೋಪಿಗಳಿಗೆ ಬಿಜೆಪಿ‌ ನಾಯಕರು ರಕ್ಷಣೆ ನೀಡುತ್ತಿದ್ದಾರೆ ಎಂಬ ಆರೋಪಗಳಿಗೆ ಅವರು ಕುಂದಾಪುರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.ಕಾನೂನು ಎಲ್ಲರಿಗೂ ಒಂದೇ.

ಉದಯ್ ಕುಟುಂಬಕ್ಕೆ ನ್ಯಾಯ ಕೊಡಿಸಿ: ಕೆ. ಗೋಪಾಲ ಪೂಜಾರಿ

ಕುಂದಾಪುರ: ಅನ್ಯಾಯಗಳ ವಿರುದ್ದ ಧ್ವನಿ ಎತ್ತುತ್ತಿದ್ದ ಉದಯ್ ಗಾಣಿಗ ಅವರನ್ನು ಕಳೆದ ಕೆಲ ದಿನಗಳಿಂದ ಹೊಂಚು ನಡೆಸಿ ಭೀಕರವಾಗಿ ಕೊಲೆಗೈಯ್ಯಲಾಗಿದೆ. ಉದಯ್ ಕೊಲೆಯಲ್ಲಿ ಭಾಗಿಯಾದ ಎಲ್ಲರಿಗೂ ಶಿಕ್ಷೆಯಾಗಬೇಕು. ಅವರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ಮಾಜಿ ಶಾಸಕ ಕೆ ಗೋಪಾಲ ಪೂಜಾರಿ ಹೇಳಿದರು. ಅವರು ಹೆಮ್ಮಾಡಿ ಸಮೀಪದ ಕಟ್‌ಬೇಲ್ತೂರು ನಿವಾಸದಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೊಳವೆ ಬಾವಿಗೆ ಎನ್‌ಓಸಿ ಕೊಡಲು ನಿರಾಕರಿಸಲಾಗಿದೆ.

ವಿ ವಿ ಸಂಧ್ಯಾ ಕಾಲೇಜಿನಲ್ಲಿ ಕೋವಿಡ್ 2ನೇ ಅಲೆ ನಿರ್ವಹಣೆಯ ಬಗ್ಗೆ ವೆಬಿನಾರ್

ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಮೇ 31, 2021 ರಂದು “ಕೋವಿಡ್ ಎರಡನೇ ಅಲೆ- ವರ್ತನಾತ್ಮಕ ನಿರ್ವಹಣೆ ಮತ್ತು ಮುನ್ನೆಚ್ಚರಿಕೆ” ಎಂಬ ವಿಷಯದಲ್ಲಿ ವೆಬಿನಾರನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿದ್ದ ನ್ಯಾಯವಾದಿಗಳೂ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರೂ ಆಗಿರುವ ಶ್ರೀ ವಿವೇಕಾನಂದ ಪಣಿಯಾಲ ಅವರು ಮಾತನಾಡಿ, ಕೋವಿಡ್ – 19ರ ವಿರುದ್ಧ ನಿರಂತರವಾಗಿ ಹೋರಾಡುತ್ತಿರುವ ವೈದ್ಯಕೀಯ

ಬೆಳ್ತಂಗಡಿಯಲ್ಲಿ ಕೋವಿಡ್ ಸೋಂಕು ಇಳಿಮುಖ-ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿಯಲ್ಲಿ ಕೊರೊನಾ ಜಾಗೃತಿ ಬಗ್ಗೆ ಅಧಿಕಾರಿ ವರ್ಗದ ಸಭೆಯನ್ನು ಬೆಳ್ತಂಗಡಿಯ ಕಿನ್ಯಮ್ಮ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ಈಗಾಗಲೇ ಬೆಳ್ತಂಗಡಿಯಲ್ಲಿ ಕೊರೊನಾ ಸಂಖ್ಯೆ ಕಡಿಮೆಯಾಗಿದ್ದು 4 ಗ್ರಾಮಗಳು ಕೊರೊನಾ ಮುಕ್ತವಾಗಿದೆ. ಇನ್ನೂ ಹೆಚ್ಚಿನ ಕ್ರಮ ವಹಿಸಲು ಸಲುವಾಗಿ ಎಲ್ಲಾ ಇಲಾಖೆಗಳ ಸಭೆ ಕರೆದು ಚರ್ಚಿಸಲಾಗಿದೆ ಎಂದರು. ಸಭೆಯಲ್ಲಿ ತಹಶೀಲ್ದಾರರು ಮಹೇಶ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

50 ಲಕ್ಷ ಅಭಿವೃದ್ಧಿ ಕಾಮಗಾರಿ ಶಾಸಕ ಡಾ.ಭರತ್ ಶೆಟ್ಟಿಯವರಿಂದ ಪರಿಶೀಲನೆ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಂಜತ್ತಬೈಲು ದಕ್ಷಿಣ 15 ನೇ ವಾರ್ಡಿನ ಗಾಂಧಿನಗರ 2 ನೇ ಅಡ್ಡರಸ್ತೆ ಅಗಲಿಕರಣ ಮತ್ತು ಚರಂಡಿ ರಚನೆಯ ಕಾಮಗಾರಿಯ ಪ್ರಗತಿ ಪರಿಶೀಲನೆಯನ್ನು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು  ನಡೆಸಿದರು. ಶಾಸಕ ಡಾ.ಭರತ್ ಶೆಟ್ಟಿಯವರ ವಿಶೇಷ ಶಿಫಾರಸ್ಸಿನ ಮೇರೆಗೆ ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿ ಬಿರುಸಿನಿಂದ ಸಾಗಿದೆ. ಶಾಸಕರೊಂದಿಗೆ ಉಪಮೇಯರ್

ಮಂಗಳೂರು ಯುವ ವಕೀಲರಿಗೆ ಆದ್ಯತೆ ಮೇರೆಗೆ ಲಸಿಕೆ ಕಾರ್ಯಕ್ರಮ

ಮಂಗಳೂರು ವಕೀಲರ ಸಂಘದ ವತಿಯಿಂದ ನಗರದ ಯುವ ವಕೀಲರಿಗೆ ಕೋವಿಡ್ ಮುಂಚೂಣಿ ಯೋಧರು ಎಂಬ ನೆಲೆಯಲ್ಲಿ ಲಸಿಕೆ ನೀಡುವ ಕಾರ್ಯಕ್ರಮ ನ್ಯಾಯಾಲಯ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶ್ರೀ ಮುರಳೀಧರ ಪೈ ಅವರ ಮುತುವರ್ಜಿಯಿಂದ ಆರೋಗ್ಯ ಇಲಾಖೆಯ ಅಧಿಕಾರಿಗಳು ಸುಮಾರು 200 ಯುವ ವಕೀಲರಿಗೆ ಲಸಿಕೆ ನೀಡಿದರು. ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎನ್. ನರಸಿಂಹ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಎಚ್.ವಿ. ರಾಘವೇಂದ್ರ, ಉಪಾಧ್ಯಕ್ಷರಾದ

ವಿವಿಧ ಬೇಡಿಕೆಗಾಗಿ ಆಗ್ರಹಿಸಿ ಸಿಪಿಐ(ಎಂ) ಮತ್ತು ಸಿಪಿಐನಿಂದ ಪ್ರತಿಭಟನೆ

ಕರ್ನಾಟಕ ರಾಜ್ಯವ್ಯಾಪಿ ಮನೆ, ಮನೆ, ಸರ್ಕಾರಿ ಕಛೇರಿ ಮುಂದುಗಡೆ ಪ್ರತಿಭಟನಾ ಪ್ರದರ್ಶನ ನಡೆಸಲು ಏಳು ಎಡ ಮತ್ತು ಪ್ರಜಾಸತ್ತಾತ್ಮಕ ಪಕ್ಷಗಳು ಕರೆ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿ ಪಿ ಐ(ಎಂ)ಮತ್ತು ಸಿ ಪಿ ಐ ಪಕ್ಷಗಳು ಜಂಟಿಯಾಗಿ ನೀಡಿದ ಕರೆಯನ್ವಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಪಕ್ಷಗಳ ಸದಸ್ಯರು ಮನೆ ಮನೆಗಳಲ್ಲಿ ಪ್ರದರ್ಶನ ನಡೆಸಿ ಸರ್ಕಾರಗಳ ನೀತಿಗಳನ್ನು ಬದಲಾಯಿಸಲು ಒತ್ತಾಯಿಸಿದರು.   ಸಿಪಿಐ(ಎಂ)ನ ದ.ಕ.ಜಿಲ್ಲಾ ಸಮಿತಿ ಕಾರ್ಯದರ್ಶಿ