Home Posts tagged #v4stream (Page 299)

ಶ್ರೀನಿವಾಸ್ ವಿವಿಯಲ್ಲಿ ಜೂನ್ 26ರಂದು ವರ್ಚುವಲ್ ಸಮ್ಮೇಳನ

ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಸೋಶಿಯಲ್ ಸೈನ್ಸ್ ಆಂಡ್ ಹ್ಯೂಮಾನಿಟಿಯು ವಿಜ್ಞಾನ, ಸಾಮಾಜಿಕ ವಿಜ್ಞಾನ, ನಿರ್ವಹಣೆ, ಮಾಹಿತಿ ವಿಜ್ಞಾನ, ಕಾನೂನು ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ‘ಸುಧಾರಣೆ, ಪ್ರದರ್ಶನ ಮತ್ತು ಪರಿವರ್ತನೆ: ಸವಾಲುಗಳು ಮತ್ತು ಅವಕಾಶಗಳು’ ಎಂಬ ವಿಷಯದ ಕುರಿತು ಆನ್ಲೈನ್ ವೇದಿಕೆ ಮೂಲಕ ಜೂನ್ 26 ರ ಶನಿವಾರದಂದು ವರ್ಚುವಲ್

ಬಿಜೆಪಿ ದಕ್ಷಿಣ ಮಂಡಲದ ವತಿಯಿಂದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ತಿಥಿ

ಜನ ಸಂಘದ ಸಂಸ್ಥಾಪಕರಾದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ತಿಥಿಯ ಕಾರ್ಯಕ್ರಮವು ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ವೈಶ್ಯ ಎಜುಕೇಷನ್ ಸೊಸೈಟಿ ಸಭಾಂಗಣದಲ್ಲಿ ಮಂಡಲದ ಅಧ್ಯಕ್ಷರಾದ ವಿಜಯ ಕುಮಾರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ಶ್ರೀ. ವೇದವ್ಯಾಸ ಕಾಮತ್ ಅವರ ಉಪಸ್ಥಿತಿಯಲ್ಲಿ ಜರಗಿತು. ಮೂಡ ಅಧ್ಯಕ್ಷರಾದ ಶ್ರೀ ರವಿ ಶಂಕರ್ ಮಿಜಾರ್ ಅವರು ಶ್ರೀ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜೀವನ ಚರಿತ್ರೆ ಬಗ್ಗೆ

ಮಂಗಳೂರು : ಬಿಜೆಪಿ ಸರ್ಕಾರ ಲಸಿಕೆ ಮಾರಾಟ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲಾ ಕೋವಿಡ್ ಹೆಲ್ಪ್‌ಲೈನ್‌ನ ವತಿಯಿಂದ ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯ ಹತ್ತಿರ ಬಿಜೆಪಿ ಸರಕಾರದ ಎಲ್ಲರಿಗೂ ಉಚಿತ ಲಸಿಕೆ ಎಂಬ ಜಾಹೀರಾತು ಹಾಕಿದ ಹೋಲ್ಡಿಂಗ್ ನ ಮುಂಭಾಗ, ಬಿಜೆಪಿ ಸರಕಾರ ಲಸಿಕೆ ಮಾರಾಟ ಮಾಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಯಿತು. ನಗರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ

ಬೈಂದೂರಿನ ನಾಡಾ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ

ಬೈಂದೂರು ತಾಲೂಕು ನಾಡ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಪ್ರಾಥಮಿಕ ಶಾಲೆ ಹೆಮ್ಮುಂಜೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಲಸಿಕೆ ಹಾಕಿಸಿಕೊಳ್ಳಲು ದೂರದಿಂದ ಬರಲು ಸಾರಿಗೆ ವ್ಯವಸ್ಥೆ ಇಲ್ಲದೆ ಇರುವ ವ್ಯಕ್ತಿಗಳಿಗೆ ಲಸಿಕೆ ದೊರಕುವಂತೆ ಮಾಡುವಲ್ಲಿ ಪಂಚಾಯತ್ ಸಹಯೋಗದೊಂದಿಗೆ ಸಮೀಪದ ಪ್ರಾಥಮಿಕ ಶಾಲೆಯಲ್ಲಿ ಲಸಿಕಾ ನೀಡುವಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಲಸಿಕೆ ನೀಡುವುದರೊಂದಿಗೆ ಲಸಿಕೆ ಮಹತ್ವವನ್ನು ತಿಳಿಸಿದರು. ನಾಡಾ

ಮಣಿಪಾಲದಲ್ಲಿ ಸಿಲಿಂಡರ್ ಸ್ಪೋಟ

ಅಡುಗೆಗೆ ಬಳಸುವ ಸಿಲಿಂಡರ್ ಸ್ಪೋಟಗೊಂಡ ಘಟನೆ ಮಣಿಪಾಲದ ಸೋನಿಯಾ ಕ್ಲಿನಿಕ್ ಬಳಿ ನಡೆದಿದೆ. ಮನೆಗೆ ಬಳಸುವ ಸಿಲಿಂಡರ್‌ನಲ್ಲಿ ಅಡುಗೆ ಅನಿಲ ಸೋರುತ್ತಿರುವುದು ಮನೆಯವರ ಗಮನಕ್ಕೆ ಬಂದಿದ್ದು, ಅದನ್ನು ತಡೆಯುವ ಪ್ರಯತ್ನ ಮಾಡಿದರೂ ಸಫಲವಾಗದೇ ಸಿಲಿಂಡರ್ ಸ್ಪೋಟಗೊಂಡಿದೆ. ಅದೃಷ್ಟವಶತ್ ಮನೆಯವರು ಹೊರ ಓಡಿದ್ದು ಅಡುಗೆ ಮನೆಯ ಮೇಲ್ಚಾವಣೆಗಳು ಸ್ಪೋಟದ ರಭಸಕ್ಕೆ ಹಾರಿ ಹೋಗಿವೆ. ಅಡುಗೆ ಕೋಣೆಯೊಳಗಡೆಯೂ ಹಾನಿ ಉಂಟಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ತಂಡ ತಕ್ಷಣ ತಲುಪಿ

ವಾಪಸ್ ಬಂದರೆ ಕ್ಷಮೆ ಇದೆ: ಬರಲಿಲ್ಲ ಅಂದ್ರೆ ನೋಟಿಸ್ ಕೊಡ್ತೀವಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ 

ಹಾಸನ: ಅಭಿವೃದ್ಧಿ ವಿಚಾರದಲ್ಲಿ ಹಾಗೂ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ಇದೆ. ಇದರ ಜೊತೆಗೆ ಅರಸೀಕೆರೆಯ ಮಾಜಿ ನಗರಸಭಾ ಅಧ್ಯಕ್ಷ ಸಮೀವುಲ್ಲಾ ತೊಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪ ನೀಡಿ ಆಪರೇಷನ್ ಕಮಲಕ್ಕೆ ಸಿಲುಕಿ ಪಕ್ಷಾಂತರ ಮಾಡಿದ ಏಳು ಮಂದಿಗೆ ಈಗ ಜೆಡಿಎಸ್ ಪಕ್ಷ ವಿರೋಧಿ ಚಟುವಟಿಕೆಯ ಆಧಾರದ ಮೇಲೆ ನೋಟಿಸ್ ಜಾರಿ ಮಾಡಲು ಮುಂದಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದರು.   ಅವರು ಹಾಸನದಲ್ಲಿ ಸುದ್ದಿಗೋಷ್ಠಿ

ಪತ್ರಕರ್ತರಿಗೆ, ಕುಟುಂಬ ಸದಸ್ಯರಿಗೆ ಲಸಿಕಾ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾಡಳಿತದ ವತಿಯಿಂದ ಪತ್ರಕರ್ತರಿಗೆ ಮತ್ತು ಪತ್ರಕರ್ತರ ಕುಟುಂಬ ಸದಸ್ಯರಿಗೆ ಕೋವಿಶಿಲ್ಡ್ ಲಸಿಕೆ ನೀಡುವ ಶಿಬಿರ ಬುಧವಾರ ಉರ್ವದ ಪತ್ರಿಕಾ ಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಲಸಿಕಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಕೋವಿಡ್ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ಸಲುವಾಗಿ ಎಲ್ಲರೂ ಕೋವಿಡ್ ನಿರೋಧಕ ಲಸಿಕೆಯನ್ನು ಪಡೆದುಕೊಳ್ಳಬೇಕು. ಲಸಿಕೆ

ಮಂಗಳೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿಗೆ ಯುಜಿಸಿಯಿಂದ ಹೊಸ ಸ್ವಾಯತ್ತ ಸ್ಥಾನಮಾನ

ಮಂಗಳೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿಗೆ 2021-22ರ ಶೈಕ್ಷಣಿಕ ವರ್ಷದಿಂದ ಅನ್ವಯವಾಗುವಂತೆ ಹೊಸ ಸ್ವಾಯತ್ತ ಸ್ಥಾನಮಾನವನ್ನು ನೀಡಲಾಗಿದೆ. ಕಾಲೇಜಿಗೆ 2018ರ ಸ್ವಾಯತ್ತ ಕಾಲೇಜುಗಳ ಯೋಜನೆಯ ಅಡಿಯಲ್ಲಿ ಯುಜಿಸಿ ನೀಡಿದ ಸ್ವಾಯತ್ತತೆಯನ್ನು 2019ರಲ್ಲಿ ಕಾಲೇಜು ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯೆಯಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅನುಮೋದನೆ ನೀಡಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ರಿಯೋ ಡಿಸೋಜಾ ಹೇಳಿದರು ಕಾಲೇಜಿಗೆ 2018ರ

ಬೈಕಂಪಾಡಿಯಲ್ಲಿ ಮೀನುಗಾರರಿಗೆ ಕೋವಿಡ್ ಲಸಿಕೆ ಕಾರ್ಯಕ್ರಮ

ಬೈಕಂಪಾಡಿ ವಿದ್ಯಾರ್ಥಿ ಸಂಘ, ನಾಡದೋಣಿ ಮೀನುಗಾರರ ಸಂಘ, ರೆಡ್ ಕ್ರಾಸ್ ಸಂಸ್ಥೆ ಇದರ ಜಂಟಿ ಸಹಯೋಗದಲ್ಲಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಬೈಕಂಪಾಡಿ ವಿದ್ಯಾರ್ಥಿ ಸಂಘದ ಕಚೇರಿಯಲ್ಲಿ ಬುಧವಾರ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕಾರ್ಪೋರೇಟರ್ ಸುಮಿತ್ರಾ ಕರಿಯ, ಪಾಲಿಕೆ ನಾಮ ನಿರ್ದೇಶಿತ ಸದಸ್ಯರಾದ ರಾಜೇಶ್ ಬೈಕಂಪಾಡಿ, ರೆಡ್ ಕ್ರಾಸ್ ರಾಜ್ಯ

ಕಲಾವಿದರ ಉಚಿತ ಲಸಿಕಾ ಶಿಬಿರಕ್ಕೆ ಶಾಸಕ ವೇದವ್ಯಾಸ ಕಾಮತ್ ಚಾಲನೆ

ಮಂಗಳೂರು : ಜಿಲ್ಲೆಯ ಜನರು ಗಾಬರಿ ಪಡುವ ಅಗತ್ಯವಿಲ್ಲ.  18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಹಂತ ಹಂತವಾಗಿ ಎರಡು ಮೂರು ತಿಂಗಳ ಒಳಗೆ ಲಸಿಕೆ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮಾತ್ ಹೇಳಿದರು. ಅವರು ತುಳು ನಾಟಕ ಕಲಾವಿದರ ಒಕ್ಕೂಟ (ರಿ), ಮಂಗಳೂರು ಇವರ ಆಶ್ರಯದಲ್ಲಿ ಬುಧವಾರ ಕದ್ರಿ ಗೋಕುಲ್ ಸಭಾಂಗಣದಲ್ಲಿ ಜಿಲ್ಲಾಡಳಿತ ಕಲಾವಿದರಿಗೆ ನೀಡಿರುವ ಉಚಿತ ಲಸಿಕಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕೋವಿಡ್ ಲಾಕ್