ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಶನಿವಾರ ಮತ್ತು ಭಾನುವಾರ ವಿಟ್ಲ ಪೇಟೆ ಸೇರಿದಂತೆ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿ ಸಂಪೂರ್ಣ ಲಾಕ್ ಡೌನ್ ಮಾಡುವುದಾಗಿ ವಿಟ್ಲ ಪಟ್ಟಣ ಪಂಚಾಯಿತಿ ನಿರ್ಣಯ ಕೈಗೊಂಡಿದೆ. ಈ ಬಗ್ಗೆ ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್
ಪರಿಶಿಷ್ಟ ಜಾತಿ ಘಟಕ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗು ಬ್ಲಾಕ್ ಕಾಂಗ್ರೆಸ್ ಸಮಿತಿ ಪುತ್ತೂರು ವತಿಯಿಂದ ಕೇಂದ್ರ ಸರ್ಕಾರದ ಜನವಿರೋಧಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯಂಗ್ ಬ್ರಿಗೇಡ್ ಸೇವಾದಳ ಅಧ್ಯಕ್ಷರು, ಯುವ ದಲಿತ ನಾಯಕರಾದ ಅಭಿಷೇಕ್ ಬೆಳ್ಳಿಪ್ಪಾಡಿ ಭಾರತದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಪೆಟ್ರೋಲ್ ಬೆಲೆ 100ರ ಗಡಿ ದಾಟಿ
ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ತೈಲ ಬೆಲೆ ಏರಿಕೆಯಿಂದ ಕಂಗೆಟ್ಟಿರುವಾಗಲೇ ವಿದ್ಯುತ್ ಮೀಟರ್ ದರ ಏರಿಕೆ ಮಾಡುವ ಮೂಲಕ ಜನರ ಹಸಿವಿನ ಹೊಟ್ಟೆಗೆ ಹೊಡೆದಂತಾಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ರಾಜ್ಯದಲ್ಲಿ ವಿದ್ಯುತ್ ಬೇಡಿಕೆಗಿಂತ ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತದೆ. ಆದರೆ ಈ ನಡುವೆ ಅದಾನಿ ಕಂಪೆನಿ ಸೇರಿದಂತೆ ನಾನಾ ಕಂಪೆನಿಗಳಿಂದ ಸರಕಾರ ವಿದ್ಯುತ್
ಒಂದೆಡೆ ಕೊರೊನಾ ಎಂಬ ಮಹಾಮಾರಿ ಮನುಷ್ಯನನು ಪಾತಳಕ್ಕೆ ತೊರೆಯುತ್ತಿದ್ದರೆ ಇನ್ನೊಂದು ಕಡೆ ಬೇಕರಿ ಕಾರ್ಮಿಕರ ಬದುಕು ಹೀನಾಯ ಸ್ಥಿತಿ ತಲುಪಿದೆ. ದಿನ ಬೆಳಗಾದರೆ ಬೇಕರಿ ಪದಾರ್ಥಗಳನ್ನು ಮಾರಿ ಬದುಕುವ ಬೇಕರಿ ಕಾರ್ಮಿಕರು ಇಂದು ಬೇಕರಿಗಳನ್ನು ಮುಚ್ಚಿರುವ ಕಾರಣ ಸಾಕಷ್ಟು ನಷ್ಟದಲ್ಲಿ ಸಿಲುಕಿದ್ದಾರೆ. ಹೀಗಿರುವಾಗ ಹಾಸನ ಅಯ್ಯಂಗಾರ್ ಬೇಕರಿ ಸುಟ್ಟು ಕರಕಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಬಂಟಕಲ್‍ನಲ್ಲಿ ವೆಂಕಟೇಶ್ ಎಂಬುವವರಿಗೆ ಸೇರಿದ ಹಾಸನ್ ಅಯ್ಯಂಗಾರ್ ಬೇಕರಿ
ಕರಾವಳಿಯಲ್ಲಿ ಬಿರುಸುಗೊಂಡ ಮಳೆಯಿಂದಾಗಿ ಅಲ್ಲಲ್ಲಿ ವ್ಯಾಪಕವಾಗಿ ಹಾನಿಯಾಗುತ್ತಿದ್ದು, ನಗರದ ಮಂಗಳಾದೇವಿ ಸಮೀಪದ ರಾಮಕೃಷ್ಣ ಮಿಷನ್ ಬಳಿಯಲ್ಲಿ ಗಾಳಿಮಳೆಗೆ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ನಡೆದಿದೆ. ಇಂದು ಬೆಳಗ್ಗೆ ಸುಮಾರು 5.30 ರ ವೇಳೆಗೆ ಈ ಘಟನೆ ನಡೆದಿದ್ದು, ೫ ವಿದ್ಯುತ್ ಕಂಬಗಳು ಧರೆಗುರಳಿದ್ದು, ವಾಹನ ಸಂಚಾರಕ್ಕೆ ತೊಡಕ್ಕುಂಟಾಗಿತ್ತು. ಇನ್ನು ಘಟನೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ
ಕದ್ರಿ ವಾರ್ಡಿನ ಕಾರ್ಪೋರೇಟರ್ ಆದ ಕದ್ರಿ ಮನೋಹರ್ ಶೆಟ್ಟಿ ಇವರ ವಿನಂತಿಯ ಮೇರೆಗೆ ಕದ್ರಿ ದಕ್ಷಿಣ 33ನೇ ವಾರ್ಡಿನಲ್ಲಿ ಕೊರೊನಾ ಸಮಯದಲ್ಲಿ ಸಂಕಷ್ಟದಲ್ಲಿ ಇರುವ ಜನರಿಗೆ ಸಹಾಯವಾಗಲೆಂದು ಆಹಾರದ ಕಿಟ್‍ಗಳನ್ನು ಒದಗಿಸಿದರು. ಉದ್ಯಮಿ ಗಣೇಶ್ ಶಿರ್ವ ದುಬಾಯಿ ಇವರ ಸಹಕಾರದೊಂದಿಗೆ ಜೊತೆಯಾಗಿ ಕದ್ರಿ ವಾರ್ಡಿನ ತರಕಾರಿ ವ್ಯಾಪಾರಸ್ಥರಾದ ಸುದೀರ್ ಕದ್ರಿ ಮಾರ್ಕೆಟ್ ಹಾಗೂ ಸುನಿಲ್ ಕೊಟ್ಟಾರಿ ಇವರು ತರಕಾರಿಯ ಕಿಟ್‍ಗಳನ್ನು ಒದಗಿಸಿದರು. ಈ ಸಂದರ್ಭದಲ್ಲಿ ವಾರ್ಡಿನ
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ ಸಮಾರಂಭ ನಗರದ ಕೊಡಿಯಾಲ್ ಬೈಲ್ ನ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಜರುಗಿತು ಮಂಗಳೂರಿನ ಕೊಡಿಯಾಲ್‍ಬೈಲ್‍ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರಿಗೆ ಆಹಾರದ ಕಿಟ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀ ನಿವಾಸ ಪೂಜಾರಿ ವಿತರಿಸಿದ್ರು. ಈ ವೇಳೆ ಮಾತನಾಡಿದ ಅವರು,ಕೊರೋನಾ ಸಂಕಷ್ಟದ
ಮರುವೂರು ಸೇತುವೆ ಬಿರುಕು ಬಿಟ್ಟಿರುವುದು ಆಘಾತಕಾರಿ ವಿಚಾರವಾಗಿದೆ. ಮರಳು ಮಾಫಿಯಾವೇ ಈ ಅವಘಡಕ್ಕೆ ಕಾರಣ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಆರೋಪಿಸಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಜೆಸಿಬಿ ಮೂಲಕ ಸೇತುವೆ ಸುತ್ತಮುತ್ತ ಹೂಳೆತ್ತುವ ನೆಪದಲ್ಲಿ ಇಲ್ಲಿ ಅವ್ಯಾಹತವಾಗಿ ಮರಳು ಮಾಫಿಯಾ ನಡೆಯುತ್ತಿದೆ. ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಮೌನ ವಹಿಸಿರುವುದು ಈ ದುರಂತಕ್ಕೆ ಕಾರಣ ಎಂದು
ಕೋರೋನ ಮಹಾಮಾರಿಯಿಂದ ಜಗತ್ತೇ ತತ್ತರಿಸಿದ ಸಂದರ್ಭದಲ್ಲಿ ಲಾಕ್ ಡೌನ್ ಘೊಷಿಸಿದಾಗ ಸಂಕಷ್ಟಕ್ಕೀಡಾದವರ ಸಹಾಯಕ್ಕೆ ಸಮರೋಪಾದಿ ಕಾರ್ಯಗಳು ನಡೆದವು. ಹಲವಾರು ಸಂಘಟನೆಗಳು, ಸಹೃದಯಿಗಳು,ಕೊಡುಗೈ ದಾನಿಗಳು ಸಂತ್ರಸ್ತರ ನೆರವಿಗೆ ಬಂದರು. ಆದರೆ ಇದೇ ಸಂದರ್ಭಕ್ಕನುಗುಣವಾಗಿ ಇಲ್ಲೊಬ್ಬರು ದುಬೈ ಉದ್ಯೋಗಿ ತನ್ನ ಮಾಲೀಕತ್ವದಲ್ಲಿರುವ ಊರಿನ ಪೆಟ್ರೊಲ್ ಬಂಕ್ ಮೂಲಕ ರಿಕ್ಷಾ ಚಾಲಕರಿಗೆ ಉಚಿತ ಪೆಟ್ರೊಲ್/ಡಿಸೇಲ್ ವಿತರಿಸುವ ಮೂಲಕ ರಿಕ್ಷಾ ಚಾಲಕರಿಗೆ ತಮ್ಮ ಕೈಲಾದ ಕೊಡುಗೆ
ಮಂಗಳೂರು ನಗರದಿಂದ ಬಜಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ-ಕಟೀಲು ಸಂಪರ್ಕ ಕಲ್ಪಿಸುವ ಮರವೂರು ಸೇತುವೆಯಲ್ಲಿ ಬಿರುಕು ಕಂಡು ಬಂದಿದ್ದು, ಸಂಚಾರ ಸ್ಥಗಿತಗೊಂಡಿದೆ. ಕರಾವಳಿ ಭಾಗದಲ್ಲಿ ಕಳೆದ ಮೂರು ನಾಲ್ಕು ದಿನದಿಂದ ಭಾರೀ ಮಳೆಯಾಗುತ್ತಿದೆ. ನದಿಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ಮರವೂರು ಸೇತುವೆಯ ಮೊದಲ ಪಿಲ್ಲರ್ ಬಳಿ ಸುಮಾರು ಮೂರು ಅಡಿಗಳಷ್ಟು ಸೇತುವೆ ಕುಸಿದಿದೆ. ಮಂಗಳೂರಿನಿಂದ ಬಜಪೆ ವಿಮಾನ ನಿಲ್ದಾಣ, ಕಟೀಲು ದೇವಸ್ಥಾನ, ಕಿನ್ನಿಗೋಳಿ ಮುಂತಾದ ಕಡೆಗಳಿಗೆ


















