Home Posts tagged #v4stream (Page 37)

ಜ.20 : ಆಳ್ವಾಸ್ ನಲ್ಲಿ ಯಕ್ಷ ರಂಗಾಯಣದ ಪರಶುರಾಮ ನಾಟಕ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ,ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಇದರ ಆಶ್ರಯದಲ್ಲಿ, ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಾಳೆ (ಜ.20)ಸಂಜೆ 6.45 ಕ್ಕೆ ಯಕ್ಷ ರಂಗಾಯಣ ಕಾರ್ಕಳ ಇದರ ಕಲಾವಿದರು ಅಭಿನಯಿಸುವ ಪರಶುರಾಮ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಶಶಿರಾಜ್ ಕಾವೂರು ರಚಿಸಿದ ಈ ನಾಟಕವನ್ನು ಡಾ||ಜೀವನ್ ರಾಂ ಸುಳ್ಯ

ಭಗವಂತಕೊಟ್ಟ ಶಕ್ತಿಯನ್ನು ಸಮಾಜಕ್ಕೆ, ಈ ದೇಶಕ್ಕೋಸ್ಕರ ವಿನಿಯೋಗಿಸಬೇಕು: ಸಚಿವ ಬಿ.ಸಿ ನಾಗೇಶ್ ಹೇಳಿಕೆ

ಕೇಂದ್ರ ಹಾಗೂ ರಾಜ್ಯ ಸರಕಾರ ಶಿಕ್ಷಣ ಕ್ಷೇತ್ರದಲ್ಲಿನ ಮೂಲಭೂತ ಸೌಕರ್ಯಗಳನು ನೀಡುವುದರೊಂದಿಗೆ ಆಮೂಲಾಗ್ರ ಬದಲವಾಣೆ ತಂದು ಹೊಸ ಶಿಕ್ಷಣ ನೀತಿಯಿಂದ ದೇಶದ ಭವಿಷ್ಯವನ್ನು ಬದಲಾಯಿಸಿ ದೇಶವನ್ನು ದೇಶದ ಗತವೈಭವವನ್ನು ಮರು ನಿರ್ಮಾಣ ಮಾಡಲಾಗುವುದು ಎಂದು ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೆಶ್ ಹೇಳಿದರು. ಅವರು ಕಡಬ ಸರಕಾರಿ ಪ್ರೌಢ ಶಾಲೆಯಲ್ಲಿ ಸಚಿವರ ವಿಶೇಷ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಐದು ಕೊಠಡಿಗಳಿಗೆ ಶಿಲಾನ್ಯಾಸ ನೆರವೇರಿಸಿ ಸಭಾ ಕಾರ್ಯಕ್ರಮವನ್ನು

ಕಲಾ ಸವ್ಯಸಾಚಿ ಪ್ರಶಾಂತ್ ಸಿ.ಕೆ.ಗೆ ಕುಂದೇಶ್ವರ ಸಮ್ಮಾನ್

ಮಂಗಳೂರು: ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಬಹುಮುಖ ಪ್ರತಿಭೆಯ ಯಕ್ಷ ಕಲಾವಿದ ರಂಗದ ಬಿರ್ಸೆ ಪ್ರಶಾಂತ್ ಸಿ.ಕೆ. ಆಯ್ಕೆಯಾಗಿದ್ದಾರೆ. ಜ.21ರಂದು ನಡೆಯುವ ಶ್ರೀ ಕುಂದೇಶ್ವರ ಜಾತ್ರೆಯ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಯಕ್ಷಗಾನ ವೃತ್ತಿಪರ ಮೇಳದಲ್ಲಿ ಹಾಸ್ಯ ಕಲಾವಿದರಾಗಿರುವ ಪ್ರಶಾಂತ್ ಸಿ.ಕೆ. ಅವರು, ಅನೇಕ ಯಕ್ಷಗಾನ ಪ್ರಸಂಗ, ತುಳು ನಾಟಕಗಳನ್ನು ರಚಿಸಿದ್ದಾರೆ. ಸಿನಿಮಾ ರಂಗದಲ್ಲಿ

ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್ ಮುಚ್ಚುವಂತೆ ಪ್ರತಿಭಟನೆ

ಮಂಗಳೂರು ನಗರದಲ್ಲಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್, ಜುಗಾರಿ ಅಡ್ಡೆಗಳನ್ನು ಶಾಶ್ವತವಾಗಿ ಮುಚ್ಚಲು ಒತ್ತಾಯಿಸಿ ಮತ್ತು ಜೂಜುಕೇಂದ್ರಗಳ ಮೇಲೆ ಕ್ರಮ ಕೈಗೊಳ್ಳಲು ವಿಫಲರಾದ ಪೊಲೀಸ್ ನೀತಿಯ ವಿರುದ್ಧ ಡಿವೈಎಫ್‍ಐ ದ.ಕ. ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು. ನಗರದ ಮಿನಿವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದರು.

ಮಾಣಿ : ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಪೂರ್ಣ ಸುಟ್ಟು ಕರಕಲಾದ ಮನೆ

ವಿಟ್ಲ: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಮಾಣಿ ಸಮೀಪ ನಡೆದಿದೆ. ಘಟನೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಮಾಣಿ ಗ್ರಾಮದ ಕಾಪಿಕಾಡು ದೀಪಾ ಎಂಬವರ ಮನೆ ಬೆಂಕಿಗಾಹುತಿಯಾಗಿದೆ. ದೀಪ ಅವರು ಮನೆಯಲ್ಲಿ ಒಬ್ಬರೆ ಇದ್ದಾಗ ಈ ಘಟನೆ ಸಂಭವಿಸಿದ್ದು, ಬೆಂಕಿ ಕಾಣಿಸುತ್ತಿದ್ದಂತೆ ಅವರು ಹೊರಗಡೆ ಓಡಿ ಹೋಗಿದ್ದಾರೆ. ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಇದರ ಶಬ್ದದಿಂದ ಮಾಣಿ ಜನತೆ ಬೆಚ್ಚಿ

ರಸ್ತೆಯುದ್ಧಕ್ಕೂ ಚೆಲ್ಲುತ್ತಿರುವ ಮೀನಿನ ದುರ್ವಾಸನೆಯುಕ್ತ ನೀರು, ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ

ಮಂಜೇಶ್ವರ : ಮೀನುಗಳನ್ನು ಬಾಕ್ಸ್ ಗಳಲ್ಲಿ ತುಂಬಿಕೊಂಡು ಹೆದ್ದಾರಿಯಲ್ಲಿ ಬೇರೆಡೆಗೆ ಸಾಗುವ ಮೀನು ಲಾರಿಗಳು ದುರ್ವಾಸನೆಯನ್ನು ಬೀರಿ ಅವಾಂತರ ಸೃಷ್ಟಿಸಿರುವುದಕ್ಕೆ ಸಾರ್ವಜನಿಕರಿಂದ ವ್ಯಾಪಕ ವ್ಯಕ್ತವಾಗುತ್ತಿದೆ. ಮೀನು ಸಾಗಾಟ ಮಾಡುವ ಲಾರಿಗಳು ಐಸ್ ತುಂಬಿದ ಬಾಕ್ಸ್ ಗಳಲ್ಲಿ ಮೀನುಗಳನ್ನು ಹಾಕಿಕೊಂಡು ಕಾಸರಗೋಡು ಭಾಗದಿಂದ ಕೇರಳದ ವಿವಿಧಡೆಗೆ ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗುತ್ತಿದೆ. ಆದರೆ ಲಾರಿಗಳಲ್ಲಿ ಐಸ್ ಕರಗಿದ ನೀರು ರಸ್ತೆಯ ಮೇಲೆ ಬೀಳದಂತೆ ಸೇಪ್ಟಿ

ಪಡುಬಿದ್ರಿಯಲ್ಲಿ ಸರಣಿ ಕಳ್ಳತನ, ಕಳವು ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಳೆದ ರಾತ್ರಿ ಪಡುಬಿದ್ರಿ ಮುಖ್ಯ ಮಾರುಕಟ್ಟೆಯ ಸೂಪರ್ ಮಾರ್ಕೆಟ್ ಹಾಗೂ ಕಾರ್ಕಳ ರಸ್ತೆಯಲ್ಲಿರುವ ಬಟ್ಟೆಯಂಗಡಿಯಲ್ಲಿ ಕಳ್ಳತನ ನಡೆದಿದ್ದು ಸಹಸ್ರಾರು ರೂಪಾಯಿ ಬೆಲೆಬಾಳುವ ವಸ್ತುಗಳು ಹಾಗೂ ನಗದು ಕಳವಾಗಿದ್ದು ಕಳ್ಳ ಸಿಸಿ ಕ್ಯಾಮಾರದಲ್ಲಿ ಸೆರೆ ಸಿಕ್ಕಿದ್ದಾನೆ.ಮುಖ್ಯ ಮಾರುಕಟ್ಟೆಯಲ್ಲಿರುವ ಕೆ.ಎಸ್. ಬಜಾರ್‍ನ ಬೀಗ ಮುರಿದ ಕಳ್ಳ ಒಳ ಹೊಕ್ಕು ಒಂದು ಲ್ಯಾಪ್‍ಟಾಪ್ ಹಾಗೂ ಒಂದು ಬೊಬೈಲ್ ಕಳವು ನಡೆಸಿದ್ದಾನೆ. ಕಾರ್ಕಳ ರಸ್ತೆಯಲ್ಲಿರುವ ಬಟ್ಟೆಯಂಗಡಿಯ

ಉಪ್ಪಿನಂಗಡಿ : ಟಯರ್ ರಿಸೋಲ್ ಸಂಸ್ಥೆಯಲ್ಲಿ ಬೆಂಕಿ, ಕಾರ್ಮಿಕ ಮೃತ್ಯು

ಪುತ್ತೂರು ತಾಲೂಕಿನ ಉಪ್ಪಿನಂಗಡಿ ಟಯರ್ ರಿಸೋಲ್ ಸಂಸ್ಥೆಯೊಂದರಲ್ಲಿ ಏರ್ ಕಂಪ್ರೈಸರ್ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿಯಲ್ಲಿ ಮಧ್ಯಾಹ್ನದ ವೇಳೆಗೆ ನಡೆದಿದೆ. ಉಪ್ಪಿನಂಗಡಿ ಗಾಂಧಿ ಪಾರ್ಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯನ್ ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಆಲಂಕಾರು ಮೂಲದ ರಾಜೇಶ್ ಪೂಜಾರಿ (43) ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಏರ್ ಕಂಪ್ರೆಸರ್ ಸ್ಫೋಟಗೊಂಡು ಗಂಭೀರ

ಕರಾವಳಿಯ ಸೌಹಾರ್ದತೆ ಸಾರುವ ಪವಿತ್ರ ಪುಣ್ಯ ಕ್ಷೇತ್ರ, ಬಿಕರ್ನಕಟ್ಟೆಯ ಬಾಲ ಯೇಸು ಮಂದಿರ

ಕರಾವಳಿಯಲ್ಲಿರುವ ಆ ಪವಿತ್ರ ಪುಣ್ಯ ಕ್ಷೇತ್ರ ಸೌಹಾರ್ದತೆಯ ಪಾಠ ಮಾಡ್ತಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಅಲ್ಲಿಗೆ ಸರ್ವಧರ್ಮದ ಭಕ್ತರ ದಂಡೇ ಹರಿದು ಬಂದಿದೆ. ಅಷ್ಟಕ್ಕೂ ಕರಾವಳಿಯಲ್ಲಿ ಸೌಹಾರ್ದತೆ ಸಾರ್ತಿರೋ ಆ ಪುಣ್ಯಕ್ಷೇತ್ರ ಯಾವುದು? ಅಲ್ಲಿನ ವಾರ್ಷಿಕ ಜಾತ್ರಾ ಸಂಭ್ರಮ ಹೇಗಿದೆ ಅಂತೀರಾ! ಮಂಗಳೂರಿನ ಬಿಕರ್ನಕಟ್ಟೆಯ ಆ ಬಾಲ ಯೇಸು ಮಂದಿರ ಸೌಹಾರ್ದತೆಯ ಪಾಠ ಮಾಡ್ತಿದೆ. ಇತಿಹಾಸ ಪ್ರಸಿದ್ಧವಾಗಿರೋ ಕ್ರೈಸ್ತರ ಧಾರ್ಮಿಕ ತಾಣ ಬಾಲ ಯೇಸು ಮಂದಿರ ಈ ಭಾಗದ ಸರ್ವಧರ್ಮದ

ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆಂಬ ಆತ್ಮತೃಪ್ತಿ ಇದೆ : ಶಾಸಕ ಉಮಾನಾಥ್ ಕೋಟ್ಯಾನ್

ಪಡುಮಾರ್ನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ ರೂ 9ಕೋ.ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಮೂಡುಬಿದಿರೆ:ಜನಸೇವಕನಾಗಿ ಆರಿಸಿ ಬಂದು ಸಿಕ್ಕಿದ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕೆಲಸಗಳನ್ನು ಯಶಸ್ವಿಯಾಗಿ ಮಾಡಿಕೊಂಡು ಬಂದಿದ್ದೇನೆಂಬ ಆತ್ಮತೃಪ್ತಿ ನನಗಿದೆ ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು.ಅವರು ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರೂ.9ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ