ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬೈರಿಕಟ್ಟೆ ಎಂಬಲ್ಲಿ ರಸ್ತೆ ಸಂಪೂರ್ಣವಾಗಿ ಹೊಂಡ ಗುಂಡಿಗಳಿಂದ ಕೂಡಿದ್ದು, ವಾಹನ ಬಿಡಿ, ಪಾದಚಾರಿಗಳಿಗೆ ನಡೆದಾಡಲು ತೊಂದರೆಯಾಗುತ್ತಿದೆ. ಕೆಲವು ವರ್ಷಗಳ ಹಿಂದೆ ಈ ರಸ್ತೆಯ ಒಂದು ಬದಿಗೆ ಇಂಟರ್ ಲಾಕ್ ಅಳವಡಿಸಿದ್ದು, ಅದೀಗ ಕಿತ್ತು ಹೋಗಿದೆ. ಈ ರಸ್ತೆ ವಿಟ್ಲದಿಂದ ಕನ್ಯಾನ, ಬಾಯಾರು, ಉಪ್ಪಳ, ಆನೆಕಲ್ಲು, ಮಂಜೇಶ್ವರ
ಮೂಡುಬಿದಿರೆ: ಫಾರ್ಮಾಸಿಸ್ಟ್ ಗಳು ಸಮಾಜದ ಆರೋಗ್ಯ ರಕ್ಷಕರು ಹಾಗೂ ವೈದ್ಯಕೀಯ ವ್ಯವಸ್ಥೆಯ ಶ್ರದ್ಧಾವಂತ ಯೋಧರು ಎಂದು ಮಾಹೆ ಮಣಿಪಾಲ ಫಾರ್ಮಸೂಟಿಕಲ್ ಸೈನ್ಸ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀನಿವಾಸ್ ಮುತಾಲಿಕ್ ನುಡಿದರು. ಅವರು ಆಳ್ವಾಸ್ ಫಾರ್ಮಾಸಿ ಕಾಲೇಜಿನ ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಅಭಿವಿನ್ಯಾಸ ಕಾರ‍್ಯಕ್ರಮದಲ್ಲಿ ಮಾತನಾಡಿದರು. ವಿಶ್ವದಲ್ಲಿ ಔಷಧೋದ್ಯಮ ಕ್ಷೇತ್ರವು ವೇಗವಾಗಿ ಬೆಳೆಯುತ್ತಿದೆ. ಔಷಧ ತಯಾರಿಕೆ, ಗುಣಮಟ್ಟದ
ಪುತ್ತೂರು: ಡಿ ಸಿ ಮನ್ನಾ ಉಳಿಕೆ ಜಮೀನನ್ನು ನಿವೇಶನ ರಹಿತ ಪ ಜಾತಿ ಮತ್ತು ಪಪಂಗಡದ ವರಿಗೆ ಮಂಜೂರು ಮಾಡುವಂತೆ ಸರಕಾರಕ್ಕೆ ಆಗ್ರಹಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ದ ಕ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಮನವಿ ಮಾಡಿದರು.ಶಾಸಕರನ್ನು ಭೇಟಿಯಾದ ನಿಯೋಗ ಈ ವಿಚಾರದಲ್ಲಿ ನಾವು ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ ಆದರೆ ಇದುವರೆಗೂ ಯಾವ ಜನಪ್ರತಿನಿಧಿಗಳೂ ನಮ್ಮ ಬೆಂಬಲಕ್ಕೆ ಬಂದಿಲ್ಲ. ಈ ಬಾರಿ ನಿಮ್ಮ ಮೂಲಕ ನಾವು ಮನವಿ ಮಾಡಿ […]
ಮಸ್ಕತ್:ಮಂಗಳೂರು–ಮಸ್ಕತ್ ನೇರ ವಿಮಾನಯಾನ ಸೇವೆಯನ್ನು ಕಳೆದ ಮೂರು ತಿಂಗಳಿಂದ ವಿಮಾನಯಾನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದರಿಂದ ಅನಿವಾಸಿ ಭಾರತೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಮಾರ್ಗದಲ್ಲಿ ಮೊದಲು ವಾರಕ್ಕೆ ನಾಲ್ಕು ವಿಮಾನಗಳು ನಿಯಮಿತವಾಗಿ ಸಂಚಾರ ಮಾಡುತ್ತಿದ್ದವು. ದಶಕಗಳಿಂದ ನಿರಂತರವಾಗಿ ನಡೆದಿದ್ದ ಈ ಸೇವೆ ಅಚಾನಕ್ ಸ್ಥಗಿತಗೊಂಡಿದ್ದು, ಮಸ್ಕತ್‌ನಲ್ಲಿ ನೆಲೆಸಿರುವ ಕರಾವಳಿ ಪ್ರದೇಶದ ಪ್ರಯಾಣಿಕರಿಗೆ ಸಂಕಷ್ಟ ಉಂಟುಮಾಡಿದೆ. ಗಲ್ಫ್‌ನ
ಮಂಗಳೂರು ಧರ್ಮಪ್ರಾಂತ್ಯದ ಸಿಓಡಿಪಿ ಸಂಸ್ಥೆಯು ನಿರ್ವಹಿಸುವ ಮೈಕೆಲ್ ಡಿ’ಸೋಜಾ ಮತ್ತು ಕುಟುಂಬ ಶಿಕ್ಷಣ ದತ್ತಿ ನಿಧಿಯ ಅಡಿಯಲ್ಲಿ ಆಯೋಜಿಸಲಾದ ಪ್ರೇರಣಾ ಕಾರ್ಯಕ್ರಮವು ಅಕ್ಟೋಬರ್ 5 ರ ಭಾನುವಾರದಂದು ಮಂಗಳೂರಿನ ರೊಸಾರಿಯೋ ಚರ್ಚ್ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ. ಪೀಟರ್ ಪೌಲ್ ಸಲ್ಡಾನಾ ಅವರು , ಎಜುಕೇರ್ ಎಂಡೋಮೆಂಟ್ ಫಂಡ್‌ನ ದೃಷ್ಟಿಕೋನ, ಉದ್ದೇಶ ಮತ್ತು ಮಹತ್ವದ ಸಾಧನೆಗಳನ್ನು
ಮಂಗಳೂರು: ಅಕ್ಟೋಬರ್ 5, 2025, ಮಂಗಳೂರಿನ ಬಿಷಪ್ಸ್ ಹೌಸ್‌ನಲ್ಲಿ ಸೆಂಟ್ ವಿನ್ಸೆಂಟ್ ಡಿ ಪಾಲ್ ಸೊಸೈಟಿಯು (SSVP) ತನ್ನ ಶತಮಾನೋತ್ಸವ ಕಾರ್ಯಕ್ರಮಗಳ ಹಾಗೂ ಶತಮಾನೋತ್ಸವ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ವಂದನೀಯ ಫಾ। ಫಾವುಸ್ಟಿನ್ ಲೋಬೋ (ಫ್ರಾ ಮುಲ್ಲರ್ಸ್ ಮೆಡಿಕಲ್ ಕಾಲೇಜ್ ಮತ್ತುಸಂಸ್ಥೆಗಳ ನಿರ್ದೇಶಕರು); ಶ್ರೀ ಲುವಿ ಪಿಂಟೋ (ಮಾಂಡ್ ಸೊಭಾಣ್, ಅಧ್ಯಕ್ಷರು); CA ವಲೇರಿಯನ್ ಅಡಾ (KCO ಅಬುಧಾಬಿ
ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಮತ್ತು 13ನೇ ಎಟಿಎಮ್ ಅನ್ನು ಉಡುಪಿಯ ಕಲ್ಯಾಣಪುರ-ಸಂತೆಕಟ್ಟೆಯಲ್ಲಿ ಭಾನುವಾರ, 5 ನೇ ಅಕ್ಟೋಬರ್ 2025ರಂದು ಜೆಎಸ್ ಸ್ಕೇರ್ನ ನೆಲಮಹಡಿಯಲ್ಲಿ ಉದ್ಘಾಟಿಸಲಾಯಿತು. ನೂತನ ಶಾಖೆಯನ್ನು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಉದ್ಘಾಟಿಸಿದರು. ಸಂತೆಕಟ್ಟೆಯ ಮೌಂಟ್ ರೋಸರಿ ಚರ್ಚ್ನ ಧರ್ಮಗುರು ರೆ.ಡಾ.ರೋಕ್ ಡಿಸೋಜ ನೂತನ ಶಾಖೆಯನ್ನು ಆಶೀರ್ವಚಿಸಿದರು. ಉಡುಪಿ ಧರ್ಮಪ್ರಾಂತ್ಯದ ಪಿಆರ್ಒ ಮತ್ತು ತೊಟ್ಟಂ ಚರ್ಚ್ನ ಧರ್ಮಗುರು
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, v4 ನ್ಯೂಸ್ ಹಾಗೂ ಎಂ.ಬಿ. ಫೌಂಡೇಶನ್ ಸಹಯೋಗದಲ್ಲಿ ಅರೆಭಾಷೆ ಕಾಮಿಡಿ ಇದರ ಮೊದಲ ಆಡಿಷನ್ ನ ಉದ್ಘಾಟನಾ ಕಾರ್ಯಕ್ರಮವು ಸುಳ್ಯದ ಲಯನ್ಸ್ ಕ್ಲಬ್ ನಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಅರೆಭಾಷೆಯ ಸಂಸ್ಕೃತಿ ಆಚಾರ
ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಢಿಕ್ಕಿ ಹೊಡೆದು ಬಳಿಕ ಎಡ ಭಾಗದಿಂದ ಸಾಗುತ್ತಿದ್ದ ಸ್ಕೂಟರ್ ಗೆ ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಆಡಂಕುದ್ರು ಎಂಬಲ್ಲಿ ಘಟನೆ ನಡೆದಿದೆ. ಸ್ಕೂಟರ್ ಸವಾರರಿಬ್ಬರೂ ಗಾಯಗೊಂಡಿದ್ದಾರೆ. ಮಂಗಳೂರು ಕಡೆಯಿಂದ ಕಾಸರಗೋಡು ಕಡೆಗೆ ಚಲಿಸುತ್ತಿದ್ದ ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆ ನಡೆಸಿದ ಜೀಪ್ ಚಾಲಕ ನಿಯಂತ್ರಣ ತಪ್ಪಿ ಢಿಕ್ಕಿ
ಕಡಬ ಸಿ.ಎ.ಕಡಬ, ಜ. 19 ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಮುಂದಿನ 5 ವರ್ಷಗಳ ಅವಧಿಗೆ 12 ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಜಯಭೇರಿ ಬಾರಿಸುವ ಮೂಲಕ ಮತ್ತೆ ಆಡಳಿತದ ಅಧಿಕಾರದ ಉಳಿಸಿಕೊಂಡಿದ್ದಾರೆ. ಸಾಲಗಾರರಲ್ಲದ ಕ್ಷೇತ್ರದಲ್ಲಿ ಸ್ಪರ್ಧಿಸಿದ ಸಂಘದ ನಿಕಟಪೂರ್ವ ಅಧ್ಯಕ್ಷ ರಮೇಶ್ ಕಲ್ಪುರೆ, ಸಾಲಗಾರ ಕ್ಷೇತ್ರದ ಸಾಮಾನ್ಯ ಸ್ಥಾನಕ್ಕೆ ಸ್ಪರ್ಧಿಸಿದ



























