Home Posts tagged #v4stream (Page 6)

ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ವಿದ್ಯಾಮಾತಾದ 23 ಅಭ್ಯರ್ಥಿಗಳು ಉತ್ತೀರ್ಣ.

ಪುತ್ತೂರು :ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ವಿದ್ಯಾಮಾತಾದ 23 ಅಭ್ಯರ್ಥಿಗಳು ಉತ್ತೀರ್ಣ. ದಿನಾಂಕ 29/09/2024 ಮತ್ತು 26/10/2024 ರಂದು ನಡೆದ ಕಡ್ಡಾಯ ಕನ್ನಡ ಪರೀಕ್ಷೆ ಹಾಗೂ 27/10/2024 ರಂದು ನಡೆದ ನೇಮಕಾತಿ ಪರೀಕ್ಷೆಗಳಲ್ಲಿ ವಿದ್ಯಾಮಾತಾ ಅಕಾಡೆಮಿಯ 23 ಅಭ್ಯರ್ಥಿಗಳು ಉತ್ತೀರ್ಣರಾಗಿ ಅರ್ಹತಾ ಪಟ್ಟಿಯಲ್ಲಿ ಸ್ಥಾನ ಪಡೆದಿರುತ್ತಾರೆ.

ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡ ಅಯ್ಯಪ್ಪ ಮಾಲೆಧಾರಿ ಯುವಕ

ಕಲ್ಮಕಾರು : ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡ ಅಯ್ಯಪ್ಪ ಮಾಲೆಧಾರಿ ಯುವಕ,ಸ್ನಾನಕ್ಕೆ ತೆರಳಿದ ಅಯ್ಯಪ್ಪ ಮಾಲೆಧಾರಿಯೊಬ್ಬರ ಮೇಲೆ ಇಂದು ಮುಂಜಾನೆ ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕಲ್ಮಕಾರು ಗ್ರಾಮದ ಚರಿತ್ ಎಂಬವರು ಆನೆ ದಾಳಿಗೆ ಒಳಗಾದ ಯುವಕ. ಡಿ.17 ರ ಮುಂಜಾನೆ ಸ್ನಾನದ ಬಳಿಕ ನೀರಿನ ತೋಡಿನಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ಈ ಘಟನೆ ನಡೆದಿದೆ.ಅಯ್ಯಪ್ಪ ವೃತಧಾರಿಗಳು ತಂಗುವ ಟೆಂಟ್

ಬೈಂದೂರು : ಸದನದಲ್ಲಿ ಕಾರ್ಮಿಕರ ಪರ ಧ್ವನಿ ಎತ್ತಿದ ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು: ಪ್ರಸ್ತುತ ರಾಜ್ಯದಲ್ಲಿ ಕೆಂಪು ಕಲ್ಲು ಲಭ್ಯತೆ ಇಲ್ಲದೆ ಅಥವಾ ಪೂರಕ ದಾಸ್ತಾನು ಇಲ್ಲದೇ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ತೊಡಕಾಗುತ್ತಿರುವುದು ಸರಕಾರದ ಗಮನದಲ್ಲಿದೆ. ಸಮರ್ಪಕವಾಗಿ ಜನಸಾಮಾನ್ಯರಿಗೆ ಕೆಂಪು ಕಲ್ಲು ಪೂರೈಕೆಗೆ ಸಹಕಾರಿ ಆಗುವಂತೆ ನಿಯಮದಲ್ಲಿ ಅಗತ್ಯ ತಿದ್ದುಪಡಿ ತರಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅವರು ತಿಳಿಸಿದ್ದಾರೆ.ಉಡುಪಿ‌ ಜಿಲ್ಲೆ ಸಹಿತ ಬೈಂದೂರು ವಿಧಾನಸಭಾ ಕ್ಷೇತ್ರ

ಮಂಗಳೂರು: ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಸಮೀಪದಲ್ಲಿರುವ ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದರು. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಶಿಕ್ಷಕಿ ಶಶಿಕಲಾ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಸಾಂಸ್ಕೃತಿಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಸಂಸ್ಥೆಯ ಪ್ರಾಂಶುಪಾಲೆ ಡಾ. ಅನುಸೂಯಾ ರೈ, ಉಪಪ್ರಾಂಶುಪಾಲರು ವಿದ್ಯಾರ್ಥಿಗಳ ಪೋಷಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಅತ್ತ್ಯುತ್ತಮ ತರಬೇತುದಾರ ಪ್ರಶಸ್ತಿ ಗೆ ಜೆಸಿಐ ರಾಷ್ಟ್ರೀಯ ತರಬೇತುದಾರ ಸುಧಾಕರ್ M ಪೂಜಾರಿ ಕಾರ್ಕಳ ರವರು ಭಾಜನರಾದರು

ಜೆಸಿಐ ಭಾರತದ ವಲಯ 15 ರ 2024 ರ ಸಾಲಿನಲ್ಲಿ ಕೊಡಮಾಡುವ ಈ ವರ್ಷದ ಅತ್ತ್ಯುತ್ತಮ ತರಬೇತುದಾರ ಪ್ರಶಸ್ತಿ ಗೆ ಜೆಸಿಐ ರಾಷ್ಟ್ರೀಯ ತರಬೇತುದಾರ ಸುಧಾಕರ್ M ಪೂಜಾರಿ ಕಾರ್ಕಳ ರವರು ಭಾಜನರಾದರು ಜೇಸಿ ಸುಧಾಕರ್ ಪೂಜಾರಿ ಯವರು 2007 ರಿಂದ ವ್ಯಕ್ತಿತ್ವ ವಿಕಸನ ತರಬೇತುಧಾರರಾಗಿ ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ, ಉದ್ಯಮಿಗಳಿಗೆ ಜೇಸಿ loins ರೋಟರಿ ಸದಸ್ಯರಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ವ್ಯಕ್ತಿತ್ವ ವಿಕಸನ, ಉಧ್ಯಮ ವಿಕಾಸನಕ್ಕೆ ಪೂರಕ ತರಬೇತಿಗಳನ್ನು ನೀಡುತಾ

ಮೂಡುಬಿದಿರೆಯಲ್ಲಿ ಗಾಳಿ ಮಳೆಯ ಅವಾಂತರ

ಮೂಡುಬಿದಿರೆ ತಾಲೂಕಿನ ಪುರಸಭಾ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮರಗಳು ಮತ್ತು ವಿದ್ಯುತ್ ತಂತಿಗಳು ಧರೆಗುರುಳಿದ್ದಲ್ಲದೆ ಹಲವಾರು ಮನೆಗಳಿಗೆ ಹಾನಿಯುಂಟ್ಟಾಗಿ ಲಕ್ಷಾಂತರ ರೂ ನಷ್ಟ ಸಂಭವಿಸಿದ ಘಟನೆ ನಡೆದಿದೆ. ಒಂಟಿಕಟ್ಟೆ, ಸ್ವರಾಜ್ಯಮೈದಾನ ಪರಿಸರ, ಮಾಸ್ತಿಕಟ್ಟೆ ಪ್ರದೇಶಗಳಲ್ಲಿ ಸಂಜೆ ಮಳೆಯೊಂದಿಗೆ ಭಾರೀ ಗಾಳಿ ಬೀಸಿದ್ದು ೧೫ಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗುರಿಳಿವೆ ಹಾಗೂ ಸ್ವರಾಜ್ಯ ಮೈದಾನದ ಬಳಿಯಿರುವ ಪತ್ರಕರ್ತ ಧನಂಜಯ

ವಿಜಯ ಅಮೃತರಾಜ್, ಲಿಯಾಂಡರ್‌ರಿಗೆ ಸಾಧನೆಗೆ ಪುರಸ್ಕಾರ

ಭಾರತದ ಪ್ರಸಿದ್ಧ ಟೆನ್ನಿಸ್ ಆಟಗಾರರಾದ ವಿಜಯ ಅಮೃತರಾಜ್ ಮತ್ತು ಲಿಯಾಂಡರ್ ಪಯಸ್‌ರಿಗೆ ಅಂತರರಾಷ್ಟ್ರೀಯ ಟೆನ್ನಿಸ್ ಹಾಲ್ ಆಫ್ ಫೇಮ್ ಗೌರವ ಸಂದಿದೆ. ಟೆನ್ನಿಸ್ ಆಟಗಾರರಾಗಿ ಲಿಯಾಂಡರ್ ಪಯಸ್ ಮತ್ತು ಟೆನ್ನಿಸ್‌ಗೆ ನೀಡಿರುವ ಕೊಡುಗೆಗಾಗಿ ವಿಜಯ ಅಮೃತ್‌ರಾಜ್ ಅವರುಗಳಿಗೆ ಈ ಗೌರವ ಸಲ್ಲುತ್ತಿದೆ. ಇಲ್ಲಿಗೆ ೨೮ ದೇಶಗಳ ೨೬೭ ಜನರು ಟೆನ್ನಿಸ್ ಹಾಲ್ ಆಫ್ ಫೇಮ್ ಗೌರವ ಪಡೆದಂತಾಯಿತು ಎಂದು ಇಂಟರ್ನ್ಯಾಶನಲ್ ಟೆನ್ನಿಸ್ ಹಾಲ್ ಆಫ್ ಫೇಮ್ ಒಕ್ಕೂಟವು ತಿಳಿಸಿದೆ.ಟೆನ್ನಿಸ್

ಸುರತ್ಕಲ್ ಬಂಟರ ಸಂಘದಲ್ಲಿ ಸಸಿ ವಿತರಣೆ, ಸಾಧಕರಿಗೆ ಸನ್ಮಾನ

ಸುರತ್ಕಲ್: ಬಂಟರ ಸಂಘ ಸುರತ್ಕಲ್, ರೋಟರಿ ಕ್ಲಬ್ ಬೈಕಂಪಾಡಿ ಹಾಗೂ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸುರತ್ಕಲ್ ಇದರ ಸಹಯೋಗದಲ್ಲಿ ಮೇಬೈಲು ಸದಾಶಿವ ಶೆಟ್ಟಿ ನೇತೃತ್ವದಲ್ಲಿ 15ನೇ ವರ್ಷದ ಸಸಿ ವಿತರಣಾ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಗೌರವಾರ್ಪಣೆ ಕಾರ್ಯಕ್ರಮ ಇಲ್ಲಿನ ಬಂಟರ ಭವನದಲ್ಲಿ ಜರುಗಿತು. ಉದ್ಘಾಟನೆಯನ್ನು ನೆರವೇರಿಸಿ ಮಾತಾಡಿದ ವಿ.ಕೆ ಸಮೂಹ ಸಂಸ್ಥೆ ಮುಂಬಯಿ ಇದರ ಸಿಎಂಡಿ ಕರುಣಾಕರ ಎಂ. ಶೆಟ್ಟಿ

ಶಾಸಕರಾದ ಗುರುರಾಜ್ ಗಂಟಿಹೊಳೆ ಗುಜ್ಜಾಡಿ ನಾಯಕವಾಡಿ ಕಡಲ ಕೊರೆತ ವೀಕ್ಷಣೆ

ಬೈಂದೂರು; ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ತ್ರಾಸಿ ಗ್ರಾಮ ಪಂಚಾಯಿತ ವ್ಯಾಪ್ತಿಯ ಗುಜ್ಜಾಡಿ, ನಾಯಕವಾಡಿ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸಮುದ್ರ ಅಲೆಗಳ ಆರ್ಭಟದಿಂದ ಉಂಟಾದ ಕಡಲ ತೀರದ ಹಾನಿಗಳ ಕುರಿತು‌ ಸ್ಥಳೀಯರು ಹಾಗೂ ಊರಿನ ಪ್ರಮುಖರಿಂದ ಮಾಹಿತಿ ಪಡೆದು. ತುರ್ತು ಪರಿಹಾರದ ಕಾರ್ಯ ಬಗ್ಗೆ ಮುಂಜಾಗ್ರತಾ ಕ್ರಮದ ಕುರಿತು ಚರ್ಚೆ ನಡೆಸಿದರು. ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸಂಬಂಧಪಟ್ಟ ಇಲಾಖೆ ಹಾಗೂ ‌ಸರಕಾರದ