ಕಾಪು:ಕಾಪು ವಿಧಾನಸಭಾ ಕ್ಷೇತ್ರದ ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ 65 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ದಿನಾಂಕ 07-01-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಉಪ್ಪಿನಂಗಡಿ ಕಜೆಕ್ಕಾರ್ ವ್ಯಾಪ್ತಿಯಲ್ಲಿ ಟಾರ್ಪಲ್ ಶೀಟಿನ ಗುಡಿಸಲಿನಲ್ಲಿ ಸಂಕಷ್ಟದ ಜೀವನ ನಡೆಸುತ್ತಿದ್ದ ಶ್ರೀಮತಿ ಭಾಗಿರ ಅವರಿಗೆ, ಉಪ್ಪಿನಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಿರ್ಮಿಸಲಾಗುತ್ತಿರುವ ನೂತನ ಮನೆಯ ನಿರ್ಮಾಣ ಕಾರ್ಯಕ್ಕೆ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಹಲವು ವರ್ಷಗಳಿಂದ ಟಾರ್ಪಲ್
ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ನಿರಾಜೆ ಎಂಬಲ್ಲಿ ಪತಿ ಆತ್ಮ ಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟದಲ್ಲಿದ್ದರೆ ಇತ್ತ ಪತ್ನಿ ಮತ್ತು ಮಗ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕೊಹಿಲ ಗ್ರಾಮದ ಜನತ ಕಾಲೋನಿ ನಿವಾಸಿ ಮುನಿರ್ ಎಂಬವರ ಆತ್ಮಹತ್ಯೆಗೆ ಯತ್ನಿಸಿ ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟದಲ್ಲಿದ್ದರೆ ಇತ್ತ ಆತನ ಪತ್ನಿ ನೇಹಾ(೩೬) ಹಾಗೂ ಇವರ ಪುತ್ರ ಮಹಮ್ಮದ್ ನಿಹಾಲ್(೩.೫)
ಸುಬ್ರಹ್ಮಣ್ಯ : ಕನ್ನಡ ಚಲನಚಿತ್ರ ರಂಗದ ಖ್ಯಾತ ನಟಿ ರಕ್ಷಿತಾ ಅವರು ಕುಟುಂಬ ಸಮೇತರಾಗಿ ಇಂದು ಗುರುವಾರ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀ ದೇವಳದಲ್ಲಿ ದೇವರ ದರ್ಶನ ಮಾಡಿ ಮಹಾಪ್ರಸಾದ ಸ್ವೀಕರಿಸಿದರು.ತದನಂತರ ಕ್ಷೇತ್ರದ ದೈವ ಹೊಸಳ್ಳಿಗಮ್ಮ ಗುಡಿಯಲ್ಲಿ ದರ್ಶನ ಮಾಡಿ ಅಲ್ಲಿಂದ ಮುಂದೆ ಶ್ರೀ ದೇವಳದ ಆಡಳಿತ ಕಚೇರಿಗೆ ತೆರಳಿದರು. ಅಲ್ಲಿ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿಯವರು ರಕ್ಷಿತಾ ಅವರನ್ನು ಶಾಲು ಹೊಂದಿಸಿ
ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಮಾನ್ಯ ಉಪಾಧ್ಯಕ್ಷರಾದ ಶ್ರೀ ಡಿ.ಆರ್. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನ ಕುಮಾರ ಪಾರ್ಕ್‌ನ ಗಾಂಧಿ ಭವನದಲ್ಲಿ ಆಯೋಜಿಸಲಾದ “ಗ್ರಾಮಸಭೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಸಂವಿಧಾನ ಮತ್ತು ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಕಾನೂನಿನ ಆಶಯದಂತೆ ಕಾರ್ಯನಿರ್ವಹಿಸಲು ಅನುಕೂಲವಾಗುವ ವಾತಾವರಣ ಸೃಷ್ಟಿಸುವುದು” ಎಂಬ ವಿಷಯದ ಕುರಿತು ನಡೆದ ಮಹತ್ವದ ಸಭೆಯಲ್ಲಿ, ವಿಧಾನ
ಸುಬ್ರಹ್ಮಣ್ಯ : ಕನ್ನಡ ಚಲನಚಿತ್ರ ರಂಗದ ಖ್ಯಾತ ನಟಿ ಶ್ರುತಿ ಅವರು ಕುಟುಂಬ ಸಮೇತರಾಗಿ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿದರು. ಶೃತಿ ಅವರೊಂದಿಗೆ ಅವರ ಅಪ್ಪ, ಅಮ್ಮ, ಚಿಕ್ಕಮ್ಮ ಹಾಗೂ ಕುಟುಂಬಸ್ಥರು ಜೊತೆಗಿದ್ದರು. ಶ್ರೀ ದೇವಳದಲ್ಲಿ ಪಂಚಾಮೃತ ಮಹಾಅಭಿಷೇಕ ಸೇವೆ ಸಲ್ಲಿಸಿದರು. ಸತ್ಯನಾರಾಯಣ ಅಸ್ರನ್ನ ಅವರು ತೀರ್ಥ ಹಾಗೂ ಶ್ರೀ ದೇವರ ಪ್ರಸಾದ ನೀಡಿದರು. ಅಲ್ಲಿಂದ ಹೊ ಸಳಿಗಮ್ಮ ದೈವದ ಗುಡಿಯಲ್ಲಿ ದರ್ಶನ ಮಾಡಿದರು. ತದನಂತರ ಶ್ರೀ
ನಗರದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ – ಡ್ರೋನ್ ಹಾಗೂ ಸಿಸಿ ಕ್ಯಾಮರಾ ಮೂಲಕ ನಿಗಾ ಸುಳ್ಯ: ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಹಿನ್ನಲೆಯಲ್ಲಿ ಸುಳ್ಯ ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಶಾಂತಿಯುತ ಜಾತ್ರೋತ್ಸವ ನಡೆಸುವ ಉದ್ದೇಶದಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.ಸೂಕ್ಷ್ಮ ಕಣ್ಗಾವಲು ವ್ಯವಸ್ಥೆಯ ಭಾಗವಾಗಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಈ ಬಾರಿ
ಕೊಕ್ಕಡ:ಲಾಯಿಲ ಗ್ರಾಮದ ಎಣಿಂಜೆ ನಿವಾಸಿ ಶಾರದ ಹಾಗೂ ಶೇಖರ ಶೆಟ್ಟಿ ದಂಪತಿಗಳ ಪುತ್ರಿ, ವಿಶ್ವದಾಖಲೆ ಸಾಧಕಿ ಕುಮಾರಿ ಶ್ರದ್ದಾ ಶೆಟ್ಟಿಯವರು ಜ.06ರಂದು ಶ್ರೀ ಕ್ಷೇತ್ರ ಸೌತಡ್ಕಕ್ಕೆ ಭೇಟಿ ನೀಡಿ, ತನಗೆ ಲಭಿಸಿದ ಪ್ರಶಸ್ತಿಯೊಂದಿಗೆ ದೇವರಿಗೆ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಪ್ರಸ್ತುತ ಉಜಿರೆಯ ಎಸ್.ಡಿ.ಎಂ.ಕಾಲೇಜಿನಲ್ಲಿ ಬಿ.ಇಡಿ ವಿದ್ಯಾಭ್ಯಾಸ ಮಾಡುತ್ತಿರುವ ಶ್ರದ್ದಾ ಶೆಟ್ಟಿಯವರು, ಹವ್ಯಾಸವಾಗಿ ಹೂವಿನ ರಂಗೋಲಿಗಳನ್ನು ಬಿಡಿಸುವ ಕಲೆಯಲ್ಲಿ
ದರೆಗುಡ್ಡೆಯ ನಾಗಪ್ಪ ಪೂಜಾರಿಯವರಿಗೆ ‘ಅತ್ಯುತ್ತಮ ಕೃಷಿ ಸಾಧಕ ಪುರಸ್ಕಾರ ಹಾಗೂ ಪುತ್ತಿಗೆ ಗ್ರಾಮದ ಪಾದೆಮನೆ ನಿವಾಸಿ ಗಂಗಯ್ಯ ಗೌಡ ಅವರು ‘ಅತ್ಯುತ್ತಮ ಕೃಷಿ ಕಾರ್ಮಿಕ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಬೆಂಗಳೂರು, ಜಿಲ್ಲಾ ಕೃಷಿಕ ಸಮಾಜ ದಕ್ಷಿಣ ಕನ್ನಡ ಹಾಗೂ ಕೃಷಿ ಇಲಾಖೆಯ ಸಹಯೋಗದೊಂದಿಗೆ, ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಗದ್ದೆಯಲ್ಲಿ ಜನವರಿ 10, 11 ಮತ್ತು 12ರಂದು ನಡೆಯಲಿರುವ
ಫೇಸ್‌ಬುಕ್ ಪೋಸ್ಟ್‌ಗೆ ಬಿಜೆಪಿ ತೀವ್ರ ಆಕ್ರೋಶ – ಮಂಡಲ ಬಿಜೆಪಿ ಖಂಡನೆ, ಉಗ್ರ ಪ್ರತಿಭಟನೆ ಎಚ್ಚರಿಕೆ ಸುಳ್ಯ : ಸುಳ್ಯದ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀರಾ ಅವಮಾನಕರ ಹಾಗೂ ಅಸಹ್ಯಕರ ಪೋಸ್ಟ್ ಹಾಕಿರುವ ಪ್ರಕರಣವನ್ನು ಸುಳ್ಯ ಮಂಡಲ ಬಿಜೆಪಿ ಅತ್ಯಂತ ಕಠಿಣ ಪದಗಳಲ್ಲಿ ಖಂಡಿಸಿದೆ. ಬಿಲ್ಲವ ಸಂದೇಶ್ ಎನ್ನುವ ಫೇಸ್‌ಬುಕ್ ಖಾತೆಯಲ್ಲಿ ಶಾಸಕರಿಗೆ ಶ್ರದ್ಧಾಂಜಲಿ ಸಲ್ಲಿಸಿರುವ ರೀತಿಯಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಿರುವುದು




























