Home Posts tagged #v4stream (Page 71)

ತೋಕೂರು ಗುತ್ತು ವಾರಿಜಾಕ್ಷಿ ಶೆಟ್ಟಿ ನಿಧನ

ಸುರತ್ಕಲ್ : ತೋಕೂರು ಗುತ್ತು ಮನೆತನದ ಹಿರಿಯ ಚೇತನ ವಾರಿಜಾಕ್ಷಿ ಶೆಟ್ಟಿ. (ದಿ. ಬಂಬ್ರಾಣ ಕೆಳಗಿನಬೈಲು ಶಂಕರ ಶೆಟ್ರ ಧರ್ಮಪತ್ನಿ ) ಯವರು ತಮ್ಮ 90 ನೇ ವಯಸ್ಸಿನಲ್ಲಿ ನವಂಬರ್ 20 ರಂದು ಮುಂಜಾನೆ ಸ್ವಗೃಹದಲ್ಲಿ ಇಹಲೋಕವನ್ನು ತ್ಯಜಿಸಿದ್ದಾರೆ. ಮೃತರು ಪುತ್ರರಾದ ಉದ್ಯಮಿ ತೋಕೂರುಗುತ್ತು ಶರತ್ಚಂದ್ರ ಶೆಟ್ಟಿ ಮತ್ತು ರತ್ನಶೇಖರ ಶೆಟ್ಟಿ ಹಾಗೂ ಇಬ್ಬರು ಪುತ್ರಿಯರು

ರಿಪಬ್ಲಿಕನ್ ಪಾರ್ಟಿ ಅಫ್ ಇಂಡಿಯಾ ಕರ್ನಾಟಕ ಪಕ್ಷದ ಪಧಾಧಿಕಾರಿಗಳ ಆಯ್ಕೆ

ಉಡುಪಿ: ರಿಪಬ್ಲಿಕನ್ ಪಾರ್ಟಿ ಅಫ್ ಇಂಡಿಯಾ ಕರ್ನಾಟಕ ಪಕ್ಷದ ಉಡುಪಿ ಜಿಲ್ಲಾ ಮಟ್ಟದ ಪಧಾಧಿಕಾರಿಗಳ ಅಯ್ಕೆಯು ಬ್ರಹ್ಮಾವರದ ಧರ್ಮವರ ಸಭಾಂಗಣದಲ್ಲಿ ನಡೆಯಿತು.ಪಕ್ಷದ ರಾಜ್ಯಧ್ಯಕ್ಷರಾಗಿರುವ ಡಾ.ಅರ್ ಮೋಹನ್ ರಾಜ್ ನೇತೃತ್ವದಲ್ಲಿ ರಾಜ್ಯ ಕೋರ್ ಕಮಿಟಿ ಸಭೆ ಬಳಿಕ ನಡೆದ ಅಯ್ಕೆ ಪ್ರಕ್ರಿಯೆಯಲ್ಲಿ ಸಾಮಾಜಿಕ ಕಾರ್ಯಕರ್ತ ಅರ್ ಟಿ ಐ ಸಂಘಟನೆಗಳಲ್ಲಿ ಸಕ್ರಿಯಾಗಿರುವ ಸದಶಿವ ಶೆಟ್ಟಿ ಹೇರೂರು ಇವ ರನ್ನು ಉಡುಪಿ ಜಿಲ್ಲಾದ್ಯಕ್ಷರನ್ನಾಗಿ ಅಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ

ಬಾವುಟಗುಡ್ಡೆ : ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ‌ ಪ್ರತಿಮೆ ಲೋಕಾರ್ಪಣೆ

ಮಂಗಳೂರು : ನಗರದ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ‌ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.19ರ ಶನಿವಾರ ಲೋಕಾರ್ಪಣೆ ಮಾಡಿದರು.ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿದ್ಯ ವಹಿಸಿದ್ದರು. ಸಚಿವರಾದ ಎಸ್. ಅಂಗಾರ, ಡಾ. ಅಶ್ವತ್ಥ್ ನಾರಾಯಣ, ಬೆಂಗಳೂರು ಉತ್ತರ ಕ್ಷೇತ್ರದ

ಪೆರುವಾಜೆ : ಗ್ರಾಮವಾಸ್ತವ್ಯ ಕಾರ್ಯಕ್ರಮ

ಸುಳ್ಯ ತಾಲೂಕು ಆಡಳಿತ ವತಿಯಿಂದ ಮತ್ತು ಸುಳ್ಯ ತಾಲೂಕು ವಿವಿಧ ಇಲಾಖಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಪೆರುವಾಜೆಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾಮ ವಾಸ್ತವ್ಯದ ಅಧ್ಯಕ್ಷತೆಯನ್ನು ಜಗನಾಥ ಪೂಜಾರಿ ವಹಿಸಿದ್ದರು. ತಹಸೀಲ್ದಾರ್ ರಾದ ಶ್ರೀ. ಅನಿತಲಕ್ಷ್ಮಿ ದೀಪಬೆಳಗಿಸುವ ಮೂಲಕ ಗ್ರಾಮ ಸಭೆಗೆ ಚಾಲನೆ ನೀಡಿದ್ದರು . ಈ ಸಂಧರ್ಭದಲ್ಲಿ ತಾಲೂಕು ಪಂಚಾಯತ್ ಇಒ ಭಾವನಿಶಂಕರ್ ಕೇತ್ರ ಶಿಕ್ಷಣಧಿಕಾರಿ ಮಹದೇವ್ ತಾಲೂಕು ಹೆಲ್ತ್ ಆಫೀಸರ್ ನಂದಕುಮಾರ್,

ಇಂದಿನ ರಾಷ್ಟ್ರವ್ಯಾಪಿ ಬ್ಯಾಂಕ್ ನೌಕರರ ಮುಷ್ಕರ ರದ್ದು

ಅಖಿಲ ಭಾರತ ಬ್ಯಾಂಕ್ ಸಿಬ್ಬಂದಿಗಳ ಒಕ್ಕೂಟವು ಕೇಂದ್ರ ಸರ್ಕಾರದ ಸಂಧಾನದ ಬಳಿಕ ನವೆಂಬರ್ 19ರ ಇಂದು ರಾಷ್ಟ್ರವ್ಯಾಪಿ ಮುಷ್ಕರವನ್ನು ಹಿಂತೆಗೆದುಕೊಂಡಿದೆ. ಉದ್ಯೋಗ ಕಡಿತ, ಏಕಪಕ್ಷೀಯ ವರ್ಗಾವಣೆ, ಹೊರಗುತ್ತಿಗೆ, ಕಾರ್ಮಿಕ ಕಾನೂನುಗಳ ಉಲ್ಲಂಘನೆ ಮತ್ತು ಬ್ಯಾಂಕಿಂಗ್ ಸಂಘಟನೆಗಳ ಪದಾಧಿಕಾರಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಸೆಂಟ್ರಲ್ ಬ್ಯಾಂಕ್ ಮುಂತಾದ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳ ಸಿಬ್ಬಂದಿ

ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣ ಕಡಬದಿಂದ ಹದಿನೈದು ಸಾವಿರ ಜನ, ನೂರಕ್ಕೂ ಹೆಚ್ಚು ವಾಹನ: ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ತಮ್ಮಯ್ಯ ಗೌಡ ಹೇಳಿಕೆ

ಮಂಗಳೂರಿನ ಭಾವುಟ ಗುಡ್ಡೆಯಲ್ಲಿ ನಿರ್ಮಾಣವಾಗಿರುವ ಸ್ವಾತಂತ್ಯಯ ಹೋರಾಟಗಾರ ಸಮರ ವಿರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಕಡಬ ತಾಲೂಕಿನಿಂದ 15,000 ಮಿಕ್ಕಿಜನ ಸುಮಾರು ನೂರಕ್ಕಿಂತ ಹೆಚ್ಚು ವಾಹನಗಳಲ್ಲಿ ತೆರಳಲಿದ್ದಾರೆ ಎಂದು ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ತಮ್ಮಯ್ಯ ಗೌಡ ಸುಳ್ಯ ಹೇಳಿದರು. ಅವರು ಕಡಬ ಗೌಡ ಸಮುದಾಯ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದರು.

ಉಡವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪ

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಕಡಂಬು ಎಂಬಲ್ಲಿ ಯುವ ಉದ್ಯಮಿ ಶಶಿರಾಜ್ ಶೆಟ್ಟಿ ಅವರ ಮನೆಯ ಹಿಂಭಾಗ ಉಡವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ಸೆರೆ ಹಿಡಿಯಲಾಯಿತು. ಉದ್ಯಮಿ ಶಶಿರಾಜ್ ಶೆಟ್ಟಿ ಯವರ ಮನೆಯ ಹಿಂಭಾಗದಲ್ಲಿ ದೊಡ್ಡ ಗಾತ್ರದ ಉಡವನ್ನು ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಬೇಟೆಯಾಡುವುದನ್ನು ಗಮನಿಸಿ ಸ್ನೇಕ್ ಅಶೋಕ್ ಕುಮಾರ್ ಲಾಯಿಲ ಅವರಿಗೆ ಮಾಹಿತಿ ನೀಡಿದರು. ತಕ್ಷಣ ಆಗಮಿಸಿದ ಸ್ನೇಕ್ ಅಶೋಕ್ ಕುಮಾರ್ ಅವರು

ಮಂಗಳೂರಿನಲ್ಲಿ ‘ಕೆಂಗಣ್ಣು ಸಮಸ್ಯೆ

ಮಂಗಳೂರು : ಅವಿಭಜಿತ ಕರಾವಳಿ ಜಿಲ್ಲೆಯಲ್ಲಿ ಕಣ್ಣು ನೋವು ( ಕೆಂಗಣ್ಣು) ಸಮಸ್ಯೆ ಹೆಚ್ಚಾಗಿದ್ದು, ಕಣ್ಣು ಆಸ್ಪತ್ರೆಗಳಲ್ಲಿ ದಿನದಿಂದ ದಿನಕ್ಕೆ ಇಂತಹ ಸಮಸ್ಯೆಗಳ ಸರತಿ ಸಾಲು ಉದ್ದವಾಗುತ್ತಿದೆ. ಮಕ್ಕಳಾದರೆ ಶಾಲೆಗೆ ಬರಬೇಡಿ ದೊಡ್ಡವರಾದರೆ ಕಚೇರಿಗೆ ಬರಬೇಡಿ ಎಂದು ಬೇಡುವ ಸ್ಥಿತಿ ಉದ್ಭವಾಗಿದೆ. ಎಲ್ಲಕ್ಕೂ ಹವಾಮಾನ ವೈಪರೀತ್ಯವೇ ಕಾರಣ ಎನ್ನುವುದು ಆರೋಗ್ಯ ತಜ್ಞರ ಮಾತು.ಇದು ಕಣ್ಣು ನೋವು (ಮದ್ರಾಸ್‌ ಐ) ಬರುವ ಸಮಯವಲ್ಲ. ಹೆಚ್ಚಾಗಿ ಮಾನ್ಸೂನ್‌ ಸಮಯದಲ್ಲಿ

ಮಧುಮೇಹ ಆರೋಗ್ಯ ಜಾಗೃತಿ ಪ್ರದರ್ಶನ ಮತ್ತು ಉಚಿತ ಮಧುಮೇಹ ತಪಾಸಣಾ ಶಿಬಿರ ಹಾಗೂ ರೋಗಿಗಳ ಮಧುಮೇಹ ಸ್ವಯಂ ನಿರ್ವಹಣಾ ಡೈರಿ ಬಿಡುಗಡೆ

ಮಣಿಪಾಲ, 14 ನವೆಂಬರ್ 2022: ಪ್ರತಿ ವರ್ಷ ನವೆಂಬರ್ 14 ಅನ್ನು ವಿಶ್ವ ಮಧುಮೇಹ ದಿನವನ್ನಾಗಿ ಆಚರಿಸಲಾಗುತ್ತದೆ. ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಅಂತಃಸ್ರಾವಶಾಸ್ತ್ರ ವಿಭಾಗವು 14ನೇ ನವೆಂಬರ್ 2022 ಸೋಮವಾರದಂದು ಬೃಹತ್ ಮಧುಮೇಹ ಆರೋಗ್ಯ ಜಾಗೃತಿ ಪ್ರದರ್ಶನ ಮತ್ತು ಉಚಿತ ಮಧುಮೇಹ ತಪಾಸಣಾ ಶಿಬಿರವನ್ನು ಆಯೋಜಿಸಿತ್ತು. ಈ ವರ್ಷದ ದ್ಯೇಯ ವಾಕ್ಯ “ನಾಳೆಯನ್ನು ರಕ್ಷಿಸಲು ಮದುಮೇಹ ಶಿಕ್ಷಣ”. ವಿಶ್ವ ಮಧುಮೇಹ ದಿನವು ಮಧುಮೇಹವನ್ನು ಜಾಗತಿಕ

ಬಂಟ್ವಾಳ : ಸಿಡಿಲಿನ ಅಘಾತಕ್ಕೆ ಬಾಲಕನೋರ್ವ ಬಲಿ

ಬಂಟ್ವಾಳ : ಸಿಡಿಲಿನ ಅಘಾತಕ್ಕೆ ಬಾಲಕನೋರ್ವ ಬಲಿಯಾದ ಘಟನೆ ಬಂಟ್ವಾಳ ಕರಿಯಂಗಳ ಗ್ರಾಮದಲ್ಲಿ  ನಡೆದಿದೆ. ಸಾಣೂರುಪದವು ಗಣೇಶ್ ಆದಿದ್ರಾವಿಡ ಅವರ ಪುತ್ರ 16 ವರ್ಷದ ಕಾರ್ತಿಕ್ ಸಿಡಿಲು ಬಡಿದು ಮೃತಪಟ್ಟ ದುರ್ದೈವಿ.ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಿನ್ನೆ ರಾತ್ರಿ ಭಾರೀ  ಮಳೆ ಸುರಿದಿದ್ದು ರಾತ್ರಿ ಮನೆಯಲ್ಲಿ ಇರುವ ಎಲ್ಲರೂ 9 ರ ಸುಮಾರಿಗೆ ಊಟ ಮುಗಿಸಿ ಮಲಗಿದ್ದು ಈ ವೇಳೆ  ಸಿಡಿಲು ಸಹಿತ ಮಳೆ ಬಂದು, ಮಲಗಿದ್ದವರಿಗೆ ಕರೆಂಟ್ ಶಾಕ್ ಹೊಡೆದ