Home Posts tagged #v4stream (Page 76)

ಮೇಲ್ಜಾತಿಯವರು ಕೇಳಿದರೆ ನಿಗಮ ಈಡಿಗ ಬಿಲ್ಲವರಿಗೆ ಕೋಶ ಇದ್ಯಾವ ನ್ಯಾಯ

ಮಂಗಳೂರು: ರಾಜ್ಯ ಸರಕಾರ ಮೇಲ್ಜಾತಿಯವರು ಕೇಳಿದರೆ ನಿಗಮ ಕೊಡುತ್ತಾರೆ. ಹಿಂದುಳಿದ ಈಡಿಗ-ಬಿಲ್ಲವ ಸಮುದಾಯವರು ಕೇಳಿದರೆ ಕೋಶ ಕೊಡುತ್ತಾರೆ. ಇದ್ಯಾವ ನ್ಯಾಯ ಎಂದು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಡಾ.ಪ್ರಣವಾನಂದ ಸ್ವಾಮೀಜಿ ಪ್ರಶ್ನಿಸಿದ್ದಾರೆ.ಸರಕಾರ ನಾರಾಯಣ ಗುರು ಕೋಶ (ಕೋರ್ಪಸ್ ಫಂಡ್) ಘೋಷಿಸಿ ನೀಡಿರುವ ಆದೇಶ ಬೋಗಸ್ ಎಂದು ಸ್ವಾಮೀಜಿಯವರು

ಪ್ರಿಯತಮೆಯಿಂದ ಪಾನೀಯದಲ್ಲಿ ವಿಷ ಬೆರೆಸಿ ಪ್ರಿಯತಮನ ಹತ್ಯೆ

ತಿರುವನಂತಪುರಂ: ಬ್ರೇಕಪ್ ಮಾಡಿಕೊಳ್ಳುವಂತೆ ಹೇಳಿದರೂ ಆತ ಬ್ರೇಕಪ್ ಮಾಡಿಕೊಳ್ಳಲಿಲ್ಲ. ನನ್ನ ಜಾತಕದಲ್ಲಿ ಮೊದಲ ಗಂಡ ಸಾಯುತ್ತಾನೆ ಎಂದು ಬರೆದಿದೆ ಎಂದು ಸುಳ್ಳು ಹೇಳಿ ಅವನ ಮನಸ್ಸು ಬದಲಿಸಲು ಪ್ರಯತ್ನಿಸಿದರೂ ಸಫಲವಾಗಲಿಲ್ಲ. ಆಕೆ ತೆಗೆದುಕೊಂಡ ಕೊನೆಯ ದಾರಿ ಮಾತ್ರ ಅತ್ಯಂತ ಕಠೋರವಾಗಿತ್ತು. ಕೇರಳದ ತಿರುವನಂತಪುರಂ ಮೂಲದ ಶರೋನ್ ರಾಜ್ ಎಂಬ ಯುವಕನ ನಿಗೂಢ ಸಾವು ಹೊಸ ತಿರುವು ಪಡೆದುಕೊಂಡಿದ್ದು, ಪ್ರಿಯತಮೆಯೇ ಆತನನ್ನು ಪಾನೀಯದಲ್ಲಿ ವಿಷ ಬೆರೆಸಿ ಹತ್ಯೆ

ಬಿಜೆಪಿ ಸಂಸದ, ಶಾಸಕರುಗಳ ಬಣ್ಣ ಟೋಲ್ ಗೇಟ್ ಮುಂಭಾಗ ಕರಗುತ್ತಿದೆ. ವೈ ರಾಘವೇಂದ್ರ ರಾವ್

ಸುರತ್ಕಲ್ ಅಕ್ರಮ ಟೋಲ್ ಗೇಟ್ ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ಜನವಿರೋಧಿ ಆಡಳಿತದ ಸಂಕೇತವಾಗಿ ರಾರಾಜಿಸುತ್ತಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರ ಒಕ್ಕೊರಲ ಆಗ್ರಹದ ಹೊರತಾಗಿಯೂ ಟೋಲ್ ಕೇಂದ್ರ ಮುಚ್ಚದಿರುವುದರ ಹಿಂದೆ ಭ್ರಷ್ಟಾಚಾರ, ಕಮೀಷನ್, ಖಾಸಗಿ ಕಂಪೆನಿಗಳ ಹಿತಾಸಕ್ತಿಗಳು ಕೆಲಸ ಮಾಡುತ್ತಿರುವುದು, ಬಿಜೆಪಿ ಸರಕಾರ ಅಂತಹ ನೀತಿಗಳ ಪರ ನಿರ್ಲಜ್ಜವಾಗಿ ನಿಂತಿರುವುದು ಇಂದು ಜನಸಾಮಾನ್ಯರಿಗೂ ಅರ್ಥವಾಗುತ್ತಿದೆ. ಜನಪರ ಕಾರ್ಯಗಳಿಗೆ ಬೆನ್ನು

ಕಂಚಿನಡ್ಕದಲ್ಲಿ ಪ್ರಪ್ರಥಮ ಬಾರಿಗೆ ಸಾಮೂಹಿಕ ಗೋಪೂಜೆ, ಗೌರವಾರ್ಪಣೆ

ದೀಪಾವಳಿಯ ಪ್ರಯುಕ್ತ ಕಂಚಿನಡ್ಕದ ಹಿಂದೂ ಬಾಂಧವರ ನೇತೃತ್ವದಲ್ಲಿ ಸಾಮೂಹಿಕ ಗೋಪೂಜೆ,ಗೋಸಾಕುವ ಕುಟುಂಬಕ್ಕೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಭಾಜಪ ಉಪಾಧ್ಯಕ್ಷ ಶ್ರೀಪ್ರಕಾಶ್ ಶೆಟ್ಟಿಯವರು ಭಾರತಮಾತೆ ಪೂಜೆ ನಡೆಸಿ ಚಾಲನೆ ನೀಡಿದರು. ಮಾತೆಯರಿಂದ ಗೋಪೂಜೆ ನಡೆಸಿ ಪ್ರತಿ ಗೋಸಾಕುವ ಕುಟುಂಬಕ್ಕೆ ಗೌರವಪೂರ್ವಕವಾಗಿ ಸನ್ಮಾನಿಸಿ, ಗೋಆಹಾರವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಕಾಪು ಮಂಡಲ ಭಾಜಪ ಅಧ್ಯಕ್ಷರಾದ ಶ್ರೀಕಾಂತ್

ಸೂಟರ್ ಪೇಟೆ ಶ್ರೀ ಬಬ್ಬುಸ್ವಾಮಿ ಕ್ಷೇತ್ರದಲ್ಲಿ ಪಾರಂಪರಿಕ ಬಲೀಂದ್ರ ಪೂಜೆ

ಅತೀ ಪುರಾತನ ಬಬ್ಬುಸ್ವಾಮಿ ಕ್ಷೇತ್ರಗಳಲ್ಲಿ ಒಂದಾಗಿರುವ ಸೂಟರ್ ಪೇಟೆ ಶ್ರೀ ಕೋರ್ದಬ್ಬು ದೇವಸ್ಥಾನದಲ್ಲಿ ಬಲೀಂದ್ರ ಪೂಜೆಯನ್ನು ವಿಶಿಷ್ಟ ರೀತಿಯಲ್ಲಿ ನಡೆಸಲಾಯಿತು. ಅಂಧಕಾರವನ್ನು ಕಳೆಯುವ ದೀಪಾವಳಿ ಹಬ್ಬದ ಮೂರನೇ ದಿನವೇ ಬಲಿಪಾಡ್ಯಮಿ. ಅಂದು ದಾನಶೂರ ಬಲೀಂದ್ರನ ಪೂಜೆಯನ್ನು ದೈವಸ್ಥಾನಗಳಲ್ಲಿ ಭಕ್ತಿ ಶ್ರದ್ಧೆಯಿಂದ ಆಚರಿಸಲಾಗುತ್ತದೆ. ಸೂಟರ್ ಪೇಟೆ ಶ್ರೀ ಕೋರ್ದಬ್ಬು ದೈವಸ್ದಾನದಲ್ಲಿ ಬಲೀಂದ್ರ ಪೂಜೆಯನ್ನು ಅತ್ಯಂತ ಪಾರಂಪರಿಕ ರೀತಿಯಲ್ಲಿ ಶ್ರದ್ಧಾಭಕ್ತಿಯಿಂದ

ಸುರತ್ಕಲ್ ಜಂಕ್ಷನ್‍ಗೆ ವೀರ ಸಾವರ್ಕರ್ ಹೆಸರಿಡುವ ಬಗ್ಗೆ ಪ್ರಸ್ತಾಪ :ಗದ್ದಲದ ಗೂಡಾದ ಪಾಲಿಕೆ ಸಭೆ

ಸುರತ್ಕಲ್ ಜಂಕ್ಷನ್‍ಗೆ ವೀರ ಸಾವರ್ಕರ್ ಹೆಸರು ಇಡುವ ಬಗ್ಗೆ ಬಿಜೆಪಿ ಸದಸ್ಯರು ಪಾಲಿಕೆ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪ ಮಾಡಿದ್ದು ಇದರಿಂದಾಗಿ ಸಭೆಯಲ್ಲಿ ಗದ್ದಲ ಉಂಟಾಗಿ ಕೆಲ ಕಾಲ ಸಭೆ ಮುಂದೂಡಿಕೆಯಾದ ಘಟನೆ ನಡೆಯಿತು. ಪಾಲಿಕೆಯ ಸಭೆ ಸಾಮಾನ್ಯ ಸಭೆಯಲ್ಲಿ ಸುರತ್ಕಲ್ ಜಂಕ್ಷನ್‍ಗೆ ವೀರ ಸಾವರ್ಕರ್ ಹೆಸರು ಇಡಬೇಕೆಂದು ಪ್ರಸ್ತಾಪ ಮಾಡಿದ್ದರು. ಇದನ್ನು ವಿರೋಧಿಸಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆಗೆ ಇಳಿದಾಗ, ಬಿಜೆಪಿ ಸದಸ್ಯರು ವೀರ ಸಾವರ್ಕರ್ ಕೀ

ಸುರತ್ಕಲ್ ಅಕ್ರಮ ಟೋಲ್‍ಗೇಟ್ ವಿರುದ್ಧ ಹಗಲು-ರಾತ್ರಿ ಧರಣಿ : ಸಾಥ್ ನೀಡಿದ ಅಭಯಚಂದ್ರ ಜೈನ್

ಸುರತ್ಕಲ್ ಟೋಲ್ ಗೇಟ್ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳು ಹಮ್ಮಿಕೊಂಡಿರುವ ಆಹೋರಾತ್ರಿ ಧರಣಿಯ ಪ್ರಥಮ ದಿನದ ರಾತ್ರಿಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ಹೋರಾಟಗಾರರಿಗೆ ಸಾಥ್ ನೀಡಿದರು. ಧರಣಿಯ ಸ್ಥಳಕ್ಕೆ ರಾತ್ರಿ 9 ಗಂಡೆಗೆ ಬಂದ ಜೈನ್ ಅವರು, ಒಂದು ಚಾಪೆ ಹಾಗೂ ಸೊಳ್ಳೆಗಳಿಂದ ರಕ್ಷಣೆಗೆ ಒಂದು ಹೊದಿಕೆಯೊಂದಿಗೆ ಬಂದಿರುವುದು ವಿಶೇಷವಾಗಿತ್ತು. ಈ ವೇಳೆ ಮಾತನಾಡಿದ ಅವರು, ಸಂಸದರು ನೀಡಿರುವ ಗಡುವು ಇಂದಿನಿಂದ 10 ದಿನಗಳ ಕಾಲ ಇದೆ. ಆದ್ದರಿಂದ ಅಷ್ಟು

ಜೈನಕಾಶಿಗೆ ಆಗಮಿಸಿದ ಕೆಂಪೇಗೌಡ ರಥಯಾತ್ರೆ

ಮೂಡುಬಿದಿರೆ: ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಪ್ರಗತಿ ಪ್ರತಿಮೆ ಎಂದು ನಾಮಕರಣ ಮಾಡಲು ರಾಜ್ಯದೆಲ್ಲೆಡೆಯಲ್ಲಿ ಪವಿತ್ರ ಮಣ್ಣು ಮತ್ತು ಜಲ ಸಂಗ್ರಹಣೆ ವಿಶಿಷ್ಟ ಅಭಿಯಾನವನ್ನು “ಬನ್ನಿ ನಾಡ ಕಟ್ಟೋಣ” ಎಂಬ ಘೋಷ ವಾಕ್ಯದೊಂದಿಗೆ 15 ದಿನಗಳ ವರೆಗೆ ಹಮ್ಮಿಕೊಂಡ ರಥಯಾತ್ರೆಯು ಜೈನಕಾಶಿ ಮೂಡುಬಿದಿರೆಗೆ ಆಗಮಿಸಿತು. ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ, ತಾಲೂಕು

ಮೂಡುಬಿದರೆ ಸಾವಿರ ಕಂಬದ ಬಸದಿಯಲ್ಲಿ ಕೋಟಿ ಕಂಠ ಗಾಯನ

ಮೂಡುಬಿದಿರೆ: ದ.ಕ ಜಿಲ್ಲಾಡಳಿತ ವತಿಯಿಂದ ತಾಲೂಕು ಶಿಕ್ಷಣ ಇಲಾಖೆ ಮೂಡುಬಿದಿರೆ,ಮೂಡುಬಿದಿರೆ ಪುರಸಭೆ ಹಾಗೂ ತಾಲೂಕು ತಹಶೀಲ್ದಾರ್ ಇವುಗಳ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೋಟಿಕಂಠ ಗಾಯನವು ಜೈನ್ ಪೇಟೆಯ ಸಾವಿರ ಕಂಬದ ಬಸದಿಯಲ್ಲಿ ನಡೆಯಿತು. ನಂತರ ಆರ್ಶೀವಾಚಿಸಿ ಮಾತನಾಡಿದ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಕನ್ನಡವನ್ನು ಭಾಷವಾರು ಕ್ರಾಂತಿಗಳ ವಿಭಜನೆಯಾಗುವ ಮೊದಲೇ ಉತ್ತಮ ಸಂಕಲ್ಪವನ್ನು ಮಾಡಿ, ಪ್ರಥಮವಾಗಿ ಕನ್ನಡ ಬಾಷೆಗೆ ಆದ್ಯತೆಯನ್ನು

ಮಂಗಳೂರು ವಿಮಾನ ನಿಲ್ದಾಣಕ್ಕೆ KSRTC ಬಸ್‌ ಸಂಚಾರ ಆರಂಭ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಣಿಪಾಲ ಮತ್ತು ಮಂಗಳೂರಿನಿಂದ ಕೆಎಸ್ಸಾರ್ಟಿಸಿ ಬಸ್‌ ಸಂಚಾರ ಅ. 31ರಂದು ಆರಂಭಗೊಳ್ಳಲಿದ್ದು, ತಾತ್ಕಾಲಿಕ ವೇಳಾಪಟ್ಟಿಯನ್ನು ಸಿದ್ಧಗೊಳಿಸಲಾಗಿದೆ. ಈ ಹಿಂದೆ ನಿಗದಿ ಪಡಿಸಿದಂತೆ ಅಕ್ಟೋಬರ್‌ 27ರಂದು ಬಸ್‌ ಸಂಚಾರ ಆರಂಭಗೊಳ್ಳಬೇಕಿತ್ತು. ಕೆಲವು ತಾಂತ್ರಿಕ ಕಾರಣದಿಂದ ವಿಳಂಬವಾಗಿದೆ ಎಂದು ಕೆಎಸ್ಸಾರ್ಟಿಸಿ ಮೂಲಗಳು ತಿಳಿಸಿವೆ. ಮಂಗಳೂರು ರೈಲು ನಿಲ್ದಾಣ ದಿಂದ ವಿಮಾನ ನಿಲ್ದಾಣಕ್ಕೆ ಬಸ್ಸು ಬೆಳಗ್ಗೆ 6.30, 8.45,