Home Posts tagged #v4stream (Page 84)

ಉಜಿರೆ ಎಸ್‌ಡಿಎಂನಲ್ಲಿ ಮಾಹಿತಿ ಕಾರ್ಯಗಾರ ಮತ್ತು ವೈದ್ಯಕೀಯ ಕೋಡಿಂಗ್‌ ತರಬೇತಿಗೆ ಚಾಲನೆ

ಉಜಿರೆ: ಶ್ರೀ ಧ.ಮಂ ಕಾಲೇಜಿನ ಮಾನವ ಸಂಪನ್ಮೂಲ ಅಭಿವೃದ್ದಿ ಕೇಂದ್ರ ಹಾಗೂ ಯೂನೈಟೆಡ್‌ ಹೆಲ್ತ್‌ ಗ್ರೂಪ್‌ನ ಅಂಗಸಂಸ್ಥೆ ಒಪ್ಟಮ್‌ನ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಸಲುವಾಗಿ ಅ.8ರಂದು ಮಾಹಿತಿ ಕಾರ್ಯಗಾರ ಮತ್ತು 5 ವಾರಗಳ ವೈದ್ಯಕೀಯ ಕೋಡಿಂಗ್‌ ತರಬೇತಿಗೆ ಚಾಲನೆ ನೀಡಲಾಯಿತು.  ಕಾರ್ಯಕ್ರಮ ಉದ್ಘಾಟಿಸಿದ ಒಪ್ಟಮ್‌ನ ಉಪಾಧ್ಯಕ್ಷ ಒರ್ವಿಲ್‌

ಉದ್ಯಾವರದಲ್ಲಿ ಅಂಡರ್ ಪಾಸ್ ಬೇಡಿಕೆಗಾಗಿ ಪ್ರತಿಭಟನೆ : 11ನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ

ಮಂಜೇಶ್ವರ: ಉದ್ಯಾವರದಲ್ಲಿ ಅಂಡರ್ ಪಾಸ್ ಬೇಡಿಕೆಗಾಗಿ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ 11 ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟ ಸಮಿತಿಯ ನೇತಾರ ಸಂಜೀವ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ 11 ನೇ ದಿನದ ಧರಣಿ ಸತ್ಯಾಗ್ರಹವನ್ನು ಉದ್ಯಾವರ ಶ್ರೀ ಅರಸು ಮಂಜಿಷ್ಟಾರ್ ಕ್ಷೇತ್ರದ ಪಾತ್ರಿ ರಾಜ ಬೆಲ್ಚಾಡ ರವರು ಉದ್ಘಾಟಿಸಿದರು. ಈ ಸಂದರ್ಭ ಮಂಜೇಶ್ವರ ಗ್ರಾ. ಪಂ. ವ್ಯಾಪ್ತಿಯ ಕುಟುಂಬ ಶ್ರೀ ಸದಸ್ಯರು ಧರಣಿಯಲ್ಲಿ

ಮಗುವಿನ ನೆರವಿಗೆ ನಿಂತ ಉಳ್ಳಾಲದ ಟೀಂ ಹನುಮಾನ್

ಉಳ್ಳಾಲ: ಐದು ವರ್ಷದ ಹಿಂದೆ ಸಮಾಜಮುಖಿ ಕಾರ್ಯಗಳಿಗೆ ವೇದಿಕೆಯಾಗಿ ಸ್ಥಾಪನೆಗೊಂಡ ಉಳ್ಳಾಲದ ಟೀಂ ಹನುಮಾನ್ 20 ಮಂದಿ ಯುವಕರ ತಂಡ ಉಳ್ಳಾಲದಲ್ಲಿ ಇತ್ತೀಚೆಗೆ ನಡೆದ ದಸರಾ ಉತ್ಸವದ ವೇಳೆ ವಿವಿಧ ರೀತಿಯ ವೇಷ ಧರಿಸಿ ಜನರಿಂದ ಸಂಗ್ರಹಿಸಿದ ಹಣವನ್ನು ರಕ್ತದ ಕ್ಯಾನ್ಸರಿನಿಂದ ಬಳಲುತ್ತಿರುವ ಒಂದೂವರೆ ವರ್ಷದ ಮಗುವಿನ ಚಿಕಿತ್ಸೆಗೆ ನೀಡಿ ಮಾದರಿಯಾಗಿದ್ದಾರೆ. ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂಡಬಿದ್ರೆಯ ಒಂದೂವರೆ ವರ್ಷದ ಶ್ರೀಯಾ ಹೆಸರಿನ ಮಗುವಿನ

ಎಲ್ ಕೆ ಅಡ್ವಾಣಿ ಭೇಟಿ ಮಾಡಿದ ಪೇಜಾವರ ಶ್ರೀಗಳು

ಶ್ರೀ ಪೇಜಾವರ ಮಠಾಧೀಶಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬುಧವಾರ ದೆಹಲಿಯಲ್ಲಿ ಮಾಜಿ ಉಪಪ್ರಧಾನಿ ಬಿಜೆಪಿ ಹಿರಿಯ ಧುರೀಣ ಎಲ್ ಕೆ ಅಡ್ವಾಣಿಯವರನ್ನು ಅವರ ನಿವಾಸದಲ್ಲಿ ಸೌಹಾರ್ಧ ಭೇಟಿ ಮಾಡಿದರು . ಅಡ್ವಾಣಿಯವರೊಂದಿಗೆ ಉಭಯಕುಶಲೋಪರಿ ನಡೆಸಿ ಅವರಿಗೆ ದೀರ್ಘಾಯುರಾರೋಗ್ಯವನ್ನು ಶ್ರೀಕೃಷ್ಣನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು . ಅಯೋಧ್ಯಾ ರಾಮಜನ್ಮಭೂಮಿ ಆಂದೋಲನದಲ್ಲಿ ಅಡ್ವಾಣಿ ಯವರ ಪಾತ್ರವನ್ನು ಶ್ರೀಗಳು ಬಣ್ಣಿಸಿ ಆ ಹೋರಾಟದ ಫಲವಾಗಿ ಇಂದು

ವಾಮಂಜೂರು : ಶಾರದೋತ್ಸವದ ಫ್ಲೆಕ್ಸ್‍ಗೆ ಹಾನಿ ವಿಚಾರ ಮೂವರು ವಶಕ್ಕೆ

ವಾಮಂಜೂರು ಜಂಕ್ಷನ್ ಆಸುಪಾಸಿನಲ್ಲಿ ಶಾರದೋತ್ಸವ ಬಗ್ಗೆ ವಾಮಂಜೂರು ಫ್ರೆಂಡ್ಸ್ ಎಂಬ ಸಂಘಟನೆಯು ಸಾರ್ವಜನಿಕ ಸ್ಥಳದಲ್ಲಿ ಹಾಕಲಾಗಿದ್ದ ಫ್ಲೆಕ್ಸ್‍ಗಳನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿದ್ದರ ಬಗ್ಗೆ ಮಂಗಳೂರು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿತರಾದ ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ, ಪ್ರವೀಣ್ ಪೂಜಾರಿ ಎಂಬವರುಗಳನ್ನು ವಶಕ್ಕೆ ಪಡೆಯಲಾಗಿದ್ದು, ಕೃತ್ಯಕ್ಕೆ

ಸಂಗೀತ, ನೃತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಕಲಾವಿದರಿಗೆ ಸನ್ಮಾನ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಂಗೀತ ಹಾಗು ನೃತ್ಯಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಕಲಾವಿದರಿಗೆ ಮತ್ತು ವಿಟ್ಲ ಸಮೀಪದ ಪಡೀಬಾಗಿಲು ನಿವಾಸಿಯಾದ ಸ್ಯಾಕ್ಸೋಫೆÇೀನ್‍ವಾದಕ ಡಾ.ಪಿ.ಕೆ. ದಾಮೋದರ ರಿಗೆ ಕರ್ನಾಟಕ ಕಲಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಗಾನ ಕಲಾಭೂಷಣ ವಿದುಷಿ ವಸಂತ ಮಾಧವಿ , ಉಷಾದಾತಾರ್ , ಡಾ ಎಸ್ ಮಂಜುಳಾ , ಶ್ರೀ ಪ್ರಕಾಶ್ , ರಾಜಗೋಪಾಲ್

ಕಡಂದಲೆ ಪಾಲಡ್ಕದಲ್ಲಿ ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ಗ್ರಾಮಸ್ಥರ ವಿರೋಧ

ಮೂಡುಬಿದಿರೆ : ಪಾಲಡ್ಕ ಗ್ರಾ.ಪಂ. ವ್ಯಾಪ್ತಿಯ ಕಡಂದಲೆಯಲ್ಲಿ 400/320 ಕೆ.ವಿ. ವಿದ್ಯುತ್ ಉಪಕೇಂದ್ರಕ್ಕೆ 400 ಕೆ.ವಿ. ಬಹುಮಂಡಲ ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣ ಮೊದಲಾದ ಕಾಮಗಾರಿಗಳಿಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪಾಲಡ್ಕ ಪೂಪಾಡಿಕಲ್ಲು ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಪಾಲಡ್ಕ ಗ್ರಾ.ಪಂ. ವಿಶೇಷ ಗ್ರಾಮಸಭೆಯಲ್ಲಿ ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ಗ್ರಾಮಸ್ಥರ ವಿರೋಧವಿದೆ ಎಂದು ಪಂಚಾಯತ್ ನಿರ್ಣಯ ದಾಖಲಿಸಿದೆ.

ಕೋಟೇಶ್ವರ ಗ್ರಾ.ಪಂ. ಮುಂಭಾಗದ ನಿರುಪಯುಕ್ತ ಬೃಹತ್ ಟ್ಯಾಂಕ್ ತೆರವು

ಕುಂದಾಪುರ : ಕಳೆದ ಹದಿನೈದು ವರ್ಷಗಳಿಂದ ನಿರುಪಯುಕ್ತವಾಗಿದ್ದ ನೀರಿನ ಬೃಹತ್ ಟ್ಯಾಂಕ್ ತೆರವುಗೊಳಿಸುವ ಕಾರ್ಯಾಚರಣೆ ಕೋಟೇಶ್ವರ ಗ್ರಾಪಂ ವತಿಯಿಂದ ವಿವಿಧ ಇಲಾಖೆಗಳ ಸಹಕಾರದಲ್ಲಿ ಮಂಗಳವಾರ ನಡೆಯಿತು. ಸತತ 9 ಗಂಟೆಗಳ ನಿರಂತರ ಕಾರ್ಯಾಚರಣೆಯಿಂದಾಗಿ ಟ್ಯಾಂಕ್ ನೆಲಕ್ಕುರುಳಿದ್ದು ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು.ಈ ಬೃಹತ್ ನೀರಿನ ಟ್ಯಾಂಕ್ ಇದ್ದು, 1986ರಲ್ಲಿ ನಿರ್ಮಾಣವಾದ 2 ಲಕ್ಷ ಲೀಟರ್ ಸಂಗ್ರಹ ಸಾಮರ್ಥ್ಯದ ಹೆಡ್ಟ್ಯಾಂಕ್ನಲ್ಲಿ ಸೋರಿಕೆ

ಬೆಳ್ಳಾರೆ; ಯುವತಿಗೆ ಲೈಂಗಿಕ ಕಿರುಕುಳ ಆರೋಪ; ವ್ಯಕ್ತಿಯ ಬಂಧನ

ಬೆಳ್ಳಾರೆ :ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ನಡೆದಿದೆ.ಕಡಬ ತಾಲೂಕಿನ ಎಡಮಂಗಲ ಗ್ರಾಮದ ಪರಿಶಿಷ್ಟ ಜಾತಿಯ ಯುವತಿಯೊಬ್ಬಳಿಗೆ ನೆರಮನೆಯ ಯುವಕ ಗೋಪಾಲಕೃಷ್ಣ ಎಂಬವನು ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದ್ದು . ಅದರಂತೆ ಬೆಳ್ಳಾರೆ ಠಾಣೆ ಯಲ್ಲಿ ಯುವತಿಯ ಮನೆಯವರು ನೀಡಿರುವ ದೂರಿನ ಅನ್ವಯ ಲೈಂಗಿಕ ದೌರ್ಜನ್ಯ ಅಟ್ರಾಸಿಟಿ ಕೇಸು ನೀಡಿದ್ದು ಪ್ರಕರಣ ದಾಖಲಾಗಿದ್ದು, ಬೆಳ್ಳಾರೆ

ಅಮೃತ ನಗರೋತ್ಥಾನ ಯೋಜನೆ : 15 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಯೋಜನೆಯ ಅಂದಾಜು ಪಟ್ಟಿ

ಪುತ್ತೂರು: ಅಮೃತ ನಗರೋತ್ಥಾನ ಯೋಜನೆಯಲ್ಲಿ ಈಗಾಗಲೇ ರೂ. 15 ಕೋಟಿ ಅಭಿವೃದ್ಧಿ ಯೋಜನೆಗಳ ಅಂದಾಜು ಪಟ್ಟಿ ತಯಾರಿಸಲಾಗಿದೆ. ಉಳಿಕೆ 10 ಕೋಟಿಗೆ ಶೀಘ್ರ ಅಂದಾಜು ಪಟ್ಟಿ ತಯಾರಿಸಲಾಗುವುದು ಎಂದು ಪುತ್ತೂರು ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್ ತಿಳಿಸಿದ್ದಾರೆ. ನಗರಸಭೆ ಸಾಮಾನ್ಯ ಸಭೆಯು ಅಧ್ಯಕ್ಷ ಕೆ. ಜೀವಂಧರ್ ಜೈನ್ ಅಧ್ಯಕ್ಷತೆಯಲ್ಲಿ ನಡೆಯಿತು. ಹಾರಾಡಿ -ರೈಲ್ವೇ ನಿಲ್ದಾಣ ರಸ್ತೆಯನ್ನು 82 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲು ಜಿಲ್ಲಾಧಿಕಾರಿಯವರ