Home Posts tagged #vaccine

ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾರತ ಯಶಸ್ವಿ: ಪ್ರಧಾನಿ ಮೋದಿ

ನಮ್ಮ ದೇಶ ಕರ್ತವ್ಯ ಪಾಲಿಸಿದೆ. ದೇಶಾದ್ಯಂತ 100 ಕೋಟಿ ಕೋವಿಡ್-19 ಲಸಿಕೆ ಡೋಸ್ ಮೈಲುಗಲ್ಲು ತಲುಪಲಾಗಿದೆ. ಇದು ಪ್ರತಿಯೊಬ್ಬ ಭಾರತೀಯನ ಯಶಸ್ಸು. ಇದರ ಪರಿಣಾಮ ಭಾರತ ಕೋವಿಡ್ ವಿರುದ್ಧದ ಹೋರಾಟದಲ್ಲಿ ಯಶಸ್ಸು ಪಡೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಹೇಳಿದರು. ದೇಶವನ್ನುದ್ದೇಶಿಸಿ ಮಾತನಾಡಿದ ಅವರು. ದೇಶದಲ್ಲಿ ನೂರು ಕೋಟಿ ಲಸಿಕೆ

ದ.ಕ. ಜಿಲ್ಲೆಯಲ್ಲಿ ಸೆ.17ರಂದು ಮೆಗಾ ಲಸಿಕಾ ಮೇಳ

ದ.ಕ. ಜಿಲ್ಲೆಯು ಕೋವಿಡ್ ವಿರುದ್ಧದ ಲಸಿಕೀಕರಣದಲ್ಲಿ ರಾಜ್ಯದಲ್ಲಿ ಪ್ರಸಕ್ತ 4ನೆ ಸ್ಥಾನದಲ್ಲಿದ್ದು, ಸೆ. 17ರಂದು ಮೆಗಾ ಲಸಿಕಾ ಮೇಳದ ಮೂಲಕ 1.50 ಲಕ್ಷ ಡೋಸ್ ಲಸಿಕೆ ನೀಡಲು ಸಿದ್ಧತೆ ನಡೆಸಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ತಿಳಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಈವರೆಗೆ ಶೇ. 80ರಷ್ಟು ಮಂದಿ ಪ್ರಥಮ ಡೋಸ್ ಪಡೆದಿದ್ದಾರೆ. ಸುಮಾರು 56,000 ಮಂದಿ ಪ್ರಸಕ್ತ ಎರಡನೆ ಡೋಸ್ ಪಡೆಯಲು ಅರ್ಹತೆ

ಕೋವಿಡ್ ನಿಯಂತ್ರಣದಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತೊಡಗಿಸಿಕೊಳ್ಳಬೇಕು -ಡಾ.ಕೆ.ವಿ.ರಾಜೇಂದ್ರ

ಮಂಗಳೂರು: ಕೋವಿಡ್ ನಿಯಂತ್ರಣ ಮಾಡಲು ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ಅವರು ಪಣಂಬೂರು ಕೆಐಒಸಿಎಲ್ ಟೌನ್ ಶಿಫ್ ಆವರಣದಲ್ಲಿಂದು ಕೋವಿಡ್ ನಿಯಂತ್ರಣ ಲಸಿಕೆಯ ವಿತರಣಾ ಕಾರ್ಯ ಕ್ರಮ ವನ್ನುದ್ದೇಶಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಲಸಿಕೆ ವಿತರಣಾ ಕಾರ್ಯಕ್ರಮ ಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ಎರಡು ಡೋಸ್ ಲಸಿಕೆ ಪಡೆದವರ

ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಪಡೆದ ಯುವತಿ ಮೃತ್ಯು

ಕುಂದಾಪುರ ತಾಲೂಕು ಹರ್ಕೂರು ಗ್ರಾಮದ ಗುಡಿಮನೆ ನಿವಾಸಿ ಸುಮಾರು 21ಪ್ರಾಯದ ಅಶ್ವಿನಿ ಎಂಬುವರು ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಗಸ್ಟ್ ೨೩ರಂದು ಕೋವಿಡ್ ಲಸಿಕೆಯ ಪ್ರಥಮ ಡೋಸನ್ನು ಪಡೆದುಕೊಂಡಿದ್ದರು, ಲಸಿಕೆ ಪಡೆದ ಮರುದಿನ ರಾತ್ರಿ ಅತೀಯಾಗಿ ವಾಂತಿಯಾದುದರಿಂದ ಅಸ್ವಸ್ಥತೆಗೊಂಡ ಅಶ್ವಿನಿಯವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ವೈದ್ಯರು ಪರೀಕ್ಷಿಸಿ ಕಡಿಮೆ ರಕ್ತದೊತ್ತಡ ಎಂಬುದಾಗಿ ತಿಳಿಸಿ ಕೂಡಲೇ ಮಣಿಪಾಲ್ ಆಸ್ಪತ್ರೆಗೆ

ಪುತ್ತೂರು : ವ್ಯಾಕ್ಸಿನ್ ವಿಚಾರದಲ್ಲಿ ಮಾತಿನ ಚಕಮಕಿ ನಡೆದು ಘರ್ಷಣೆ

ವ್ಯಾಕ್ಸಿನ್ ವಿಚಾರದಲ್ಲಿ ಮಾತಿನ ಚಕಮಕಿ ನಡೆದ ಘಟನೆ ಕಾಸರಗೋಡಿನ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಮೊಗ್ರಾಲ್ ಪುತ್ತೂರು ಹೈಯರ್ ಸೆಕೆಂಡರಿ ಶಾಲೆಯಲ್ಲಿ ವ್ಯಾಕ್ಸಿನ್ ನೀಡಲಾಗುತ್ತಿತ್ತು ಪಂಚಾಯತ್ ನ ಮೊದಲ ಮತ್ತು ಎರಡನೇ ವಾರ್ಡಿನವರಿಗೆ ಶುಕ್ರವಾರ ವ್ಯಾಕ್ಸಿನ್ ನೀಡಲು ತೀರ್ಮಾನಿಸಲಾಗಿತ್ತು .ಈ ಮಧ್ಯೆ ಹೊರ ವಾರ್ಡಿನವರು ವ್ಯಾಕ್ಸಿನ್ ಪಡೆಯಲು ಬಂದಿದ್ದಾರೆ ಎಂಬ ವಿಚಾರದಲ್ಲಿ ಘರ್ಷಣೆ ನಡೆದಿದೆ.ಹೀಗಾಗಿ ಗಂಟೆಗಳ ಕಾಲ ವ್ಯಾಕ್ಸಿನ್ ನೀಡಿಕೆ ಸ್ಥಗಿತಗೊಂಡಿತ್ತು.

ಮೂರನೇ ಅಲೆ ತಡೆಯಲು ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ : ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆರೋಪ

ಮಂಗಳೂರು: ದೇಶದಾದ್ಯಂತ ಇಲ್ಲಿಯ ತನಕ 2 ಲಸಿಕೆ ಪಡೆದವರು ಕೇವಲ 7.78 ಕೋಟಿ ಜನ ಹಾಗೂ ಮೊದಲ ಲಸಿಕೆ ಪಡೆದವರು 14 ಕೋಟಿ (ಶೇ.10) ಜನರು ಮಾತ್ರ ಇಲ್ಲಿಯ ತನಕ ಕೇವಲ ಶೇ.15 ರಷ್ಟು ಜನರು ಮಾತ್ರ ಲಸಿಕೆ ಪಡೆದಿದ್ದು, ಈಗಾಗಲೇ 3ನೇ ಕೋವಿಡ್ ಅಲೆ ಪ್ರರಂಭವಾಗಿದ್ದು, ಲಸಿಕೆ ಪ್ರಾರಂಭವಾಗಿ 7 ತಿಂಗಳು ಕಳೆದರೂ ಸರ್ಕಾರ 3ನೇ ಅಲೆ ತಡೆಯಲು ಮುಂಜಾಗೃತ ಕ್ರಮ ಕೈಗೊಳ್ಳಲು ಮುಂದಾಗಿಲ್ಲ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಎಂಎಲ್‍ಸಿ ಹರೀಶ್ […]

ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ರೆಡ್‍ಕ್ರಾಸ್ ಸಂಸ್ಥೆಯ ಸಹಕಾರದೊಂದಿಗೆ ಕೋವಿಡ್ ಲಸಿಕಾ ಕಾರ್ಯಕ್ರಮ

ಬೈಕಂಪಾಡಿ ಮಹಿಳಾ ಸಮಾಜದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ರೆಡ್‍ಕ್ರಾಸ್ ಸಂಸ್ಥೆಯ ಸಹಕಾರದೊಂದಿಗೆ ಇಂದಿರಾ ಮಾಧವ ವಿದ್ಯಾರ್ಥಿ ಭವನದಲ್ಲಿ ಕಳೆದ ಮೂರು ದಿನಗಳಿಂದ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮ ನಡೆಯುತ್ತಿದೆ.ಬೈಕಂಪಾಡಿಯ ಎಲ್ಲಾ ವಯೋ ಮಾನದ ಜನರಿಗೆ ಮತ್ತು ಮುಖ್ಯವಾಗಿ ಮೀನುಗಾರಿಕಾ ವೃತ್ತಿಯವರಿಗೆ ಲಸಿಕೆಯನ್ನು ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಬೈಕಂಪಾಡಿ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನವೀನ್ ಸಾಲ್ಯಾನ್ ಅವರು ಮಾತನಾಡಿ,

ಮಂಗಳೂರು ಯುವ ವಕೀಲರಿಗೆ ಆದ್ಯತೆ ಮೇರೆಗೆ ಲಸಿಕೆ ಕಾರ್ಯಕ್ರಮ

ಮಂಗಳೂರು ವಕೀಲರ ಸಂಘದ ವತಿಯಿಂದ ನಗರದ ಯುವ ವಕೀಲರಿಗೆ ಕೋವಿಡ್ ಮುಂಚೂಣಿ ಯೋಧರು ಎಂಬ ನೆಲೆಯಲ್ಲಿ ಲಸಿಕೆ ನೀಡುವ ಕಾರ್ಯಕ್ರಮ ನ್ಯಾಯಾಲಯ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶ್ರೀ ಮುರಳೀಧರ ಪೈ ಅವರ ಮುತುವರ್ಜಿಯಿಂದ ಆರೋಗ್ಯ ಇಲಾಖೆಯ ಅಧಿಕಾರಿಗಳು ಸುಮಾರು 200 ಯುವ ವಕೀಲರಿಗೆ ಲಸಿಕೆ ನೀಡಿದರು. ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎನ್. ನರಸಿಂಹ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಎಚ್.ವಿ. ರಾಘವೇಂದ್ರ, ಉಪಾಧ್ಯಕ್ಷರಾದ