ಕೇಂದ್ರದಲ್ಲಿ ಹಿಟ್ಲರ್ ಸರ್ಕಾರವಿದೆ. ನರೇಂದ್ರ ಮೋದಿ ಒಬ್ಬ ಹಿಟ್ಲರ್, ಅವರ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಉದ್ದೇಶವಾಗಿದೆ ಎಂದು ಮಾಜಿ ಸಿಎಂ,ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಅವರು ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮೀನುಗಾರರಿಗೆ ಯಾವ ಸೌಕರ್ಯಗಳನ್ನು ಕೂಡ ಬಿಜೆಪಿ ಸರ್ಕಾರ ಕಲ್ಪಿಸಿಲ್ಲ.
ಕಾರ್ಕಳ: ಮಹಿಳೆಯರಿಗೆ ಮೀಸಲಾತಿ ನೀಡುವಲ್ಲಿ ಕರ್ನಾಟಕ ಮೊದಲ ರಾಜ್ಯವಾಗಿದೆ ಎಂದು ಮಾಜಿ ಮುಖ್ಯ ಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿ ಹೇಳಿದರು. ಅವರು ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಕಳ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆದ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಮಾತನಾಡಿದರು. 1993 ರಲ್ಲಿಯೆ ಮಹಿಳೆಯರಿಗೆ ಮೀಸಲಾತಿ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ನಲ್ಲಿ 50% ಮೀಸಲಾತಿ ಯನ್ನು ಕಾಂಗ್ರೆಸ್ ಪಕ್ಷ ಜಾರಿಗೆ ತಂದಿತ್ತು. ಅಂದಿನ