ವಿಜಯಪುರ ನಗರದ ಹೊರ ವಲಯದಲ್ಲಿರುವ ರಾಜಗುರು ಫುಡ್ಸ್ ಗೋದಾಮು ಕುಸಿದು ಏಳು ಮಂದಿ ಕಾರ್ಮಿಕರು ದುರ್ಮರಣಕ್ಕೆ ಒಳಗಾದರು. ಇದು ಮೆಕ್ಕೆ ಜೋಳ ಸಂಗ್ರಹಣಾ ಮತ್ತು ಆಹಾರ ಸಂಸ್ಕರಣೆಗೆ ಸಂಬಂಧಿಸಿದ ಗೋದಾಮು ಆಗಿದೆ. ಸಾವಿಗೀಡಾದವರೆಲ್ಲರೂ ಬಿಹಾರದಿಂದ ಬಂದ ವಲಸೆ ಕಾರ್ಮಿಕರಾಗಿದ್ದಾರೆ. ಇಲ್ಲಿಯವರೆಗೆ ಏಳು ಶವಗಳನ್ನು ಮಣ್ಣಿನೊಳಗಿನಿಂದ ಹೊರಕ್ಕೆ ತೆಗೆಯಲಾಗಿದೆ. ಇನ್ನೂ
ವಿಜಯಪುರದ ಗೊಲ್ಲಾಳೇಶ್ವರ ರಥೋತ್ಸವದಲ್ಲಿ ರಥದ ಕಲಶ ಕಟ್ಟುತ್ತಿದ್ದಾಗ ಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ. ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಗೊಲ್ಲಾಳೇಶ್ವರ ರಥೋತ್ಸವದ ಹಿನ್ನೆಲೆಯಲ್ಲಿ ಸಾಹೇಬಪಟೇಲ್ ಖಾಜಾಪಟೇಲ್ ಎಂಬವರು ರಥದ ತುತ್ತ ತುದಿಯಲ್ಲಿ ಕಲಶ ಕಟ್ಟುತ್ತಿದ್ದರು. ಈ ವೇಳೆ ಸಾಹೇಬಪಟೇಲ್ ಅವರು ಕಾಲು ಜಾರಿ ರಥದಿಂದ ಬಿದ್ದಿದ್ದಾರೆ ಎನ್ನಲಾಗಿದೆ. ಕಲಶ ಕಟ್ಟುವಾಗ ಕೈಯಲ್ಲಿದ್ದ ಹಗ್ಗ ಜಾರಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಕೂಡಲೇ
ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಖಾನಾಪುರ ಗ್ರಾಮದ ಶ್ರೀ ವೀರಗಂಟಿ ಮಡಿವಾಳೇಶ್ವರ ದೇವಸ್ಥಾನದಲ್ಲಿ 2022-,2023ನೇ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀ ತಿಪ್ಪಣ್ಣ ಹೆಳವರ ನಾಗನೂರ ಇವರಿಗೆ ಖಾನಾಪುರ ಗ್ರಾಮದ ಅಖಿಲ ಕರ್ನಾಟಕ ಹೆಳವ ಸಮಾಜದಿಂದ ಅಭಿನಂದನಾ ಗೌರವದಿಂದ ಸನ್ಮಾನಿಸಿದರು.ಈ ವೇಳೆ ಪೂಜ್ಯ ಶ್ರೀ ಕಲ್ಯಾಣದಯ್ಯ ಸ್ವಾಮೀಜಿಗಳು ಬಸನಗೌಡ ಪಾಟೀಲ. ಸೋಮಶೇಖರಗೌಡ ಚಿರದಿನ್ನಿ, ದೇವೇಂದ್ರ ಹೆಳವರ, ಪರಸು ಹೆಳವರ ಇಸ್ಮೈಲ್ ಹಳೆಮನಿ
ವಿಜಯಪುರ;ತನ್ನೂರಿಗೆ ಪಿಯು ಕಾಲೇಜು ಬೇಕೆಂದು 5 ವರ್ಷಗಳಿಂದ ಹೋರಾಡಿದ್ದ ಯುವಕ ಕೊನೆಗೆ ರಕ್ತದಲ್ಲಿ ಸರಕಾರಕ್ಕೆ ಪತ್ರ ಬರೆದಿದ್ದಾನೆ.ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ನಿವಾಸಿ ವಿಜಯರಂಜನ ಜೋಶಿ ಸ್ವಂತ ಊರಿನಲ್ಲಿ ಸರಕಾರಿ ಪಿಯು ಕಾಲೇಜು ಆರಂಭಿಸುವಂತೆ ಆಗ್ರಹಿಸಿ ಸರ್ಕಾರಿ ಕಚೇರಿಗಳಿಗೆ ಅಲೆದಾಡಿದ್ದರು. ಅಧಿಕಾರಿಗಳಿಗೆ ದುಂಬಾಲು ಬಿದ್ದಿದ್ದರು ಆದರೆ ಯಾವುದೇ ಪ್ರಯೋಜನ ವಾಗಿರಲಿಲ್ಲ. ಹೆಚ್.ಡಿ.ಕುಮಾರಸ್ವಾಮಿ ಅವ್ರು ಸಿಎಂ ಆಗಿದ್ದಾಗಲೂ
ವಿಜಯಪುರ ನಗರದ ಗಾಂಧಿ ಚೌಕ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ಖತರ್ನಾಕ್ ಬೈಕ್ ಕಳ್ಳರನ್ನು ಬಂಧಿಸಿ ಅವರಿಂದ 36 ಬೈಕ್‌ಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ವಿಜಯಪುರ ಪೋಲಿಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ ಅವರು ಒಟ್ಟು 36 ವಿವಿಧ ಕಂಪನಿಯ ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ, ಬೈಕ್ ಕಳ್ಳತನ ನಡೆಸುತ್ತಿದ್ದ ತೌಸೀಫ್ ಮಹಿಬೂಬ ಕಲಾದಗಿ, ಸಮೀರ
ಬಾಲಿವುಡ್ ಖಾನ್‍ಗಳ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಹೇಳಿಕೆ ನೀಡಿರುವ ಯತ್ನಾಳ ಶಾರುಖಾನ್ ಪುತ್ರ ಡ್ರಗ್ಸ್ ಕೇಸ್ ಲ್ಲಿ ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿ ದೇಶ ಸುರಕ್ಷಿತ ಅಲ್ಲ ಎಂದ ಖಾನ್ ಗಳು ದೇಶ ಬಿಡಲಿ ಎಂದರು. ಆ ಮಕ್ಕಳೆಲ್ಲ ನೇರವಾಗಿ ಅಪಘಾನಿಸ್ತಾನಕ್ಕೆ ಹೋಗಲಿ, ಅಲ್ಲಿಯೇ ಸುರಕ್ಷಿತವಾಗಿ ತಾಲಿಬಾನ್ ಕೆಳಗೆ ನಟನೆ ಮಾಡಿಕೊಂಡಲು ಇರಲಿ ಎಂದು ವ್ಯಂಗವಾಡಿದ್ದಾರೆ.
ಬೆಂಗಳೂರು: 2023ರ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸೀಟುಗಳನ್ನು ನೀಡುವುದಾಗಿ ಪ್ರಕಟಿಸಿದ್ದ ಜೆಡಿಎಸ್ ವರಿಷ್ಠ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಅದಕ್ಕೆ ಮುನ್ನುಡಿ ಎಂಬಂತೆ ಸಿಂಧಗಿ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿಯನ್ನಾಗಿ ಶ್ರೀಮತಿ ನಾಜಿಯಾ ಶಕೀಲಾ ಅಂಗಡಿ ಅವರನ್ನು ಆಯ್ಕೆ ಮಾಡಿದ್ದಾರೆ. ಶ್ರೀಮತಿ ನಾಜಿಯಾ ಶಕೀಲಾ ಅಂಗಡಿ ಅವರು MA, B.ed ಪದವೀಧರರಾಗಿದ್ದು, ಜೆಡಿಎಸ್ ಪಕ್ಷದಲ್ಲಿ ಸಕ್ರಿಯರಾಗಿ
ಕುರಿ ಕಳ್ಳತನಕ್ಕೆ ಕುರಿ ಕಳ್ಳರು ವಿಫಲ ಯತ್ನ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ನಡೆದಿದೆ. ಇನ್ನು ಬಳಗಾನೂರ ಗ್ರಾಮದಲ್ಲಿ ಕುರಿ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿಕೊಳ್ಳುವ ಭಯದಲ್ಲಿ ಕಾರು ಬಿಟ್ಟು ಪರಾರಿಯಾಗಿದ್ದಾರೆ. ಆದ್ರೂ, ಕುರಿ ಮಾಲೀಕ ಹಾಗೂ ಸ್ಥಳೀಯರು ಇನ್ನೊಂದು ಕಾರಿನಲ್ಲಿ ಪರಾರಿಯಾಗಿದ್ದ ಕಳ್ಳರಲ್ಲಿ ಇಬ್ಬರನ್ನು ಹಿಡಿದುಕೊಂಡಿದ್ದಾರೆ. ಅಲ್ಲದೆ, ಸ್ಥಳದಲ್ಲಿ ಬಿಟ್ಟು ಹೋಗಿದ್ದ ಕಾರಿ ಮೇಲೆ ಸ್ಥಳೀಯರು
ವಿಜಯಪುರ ಜಿಲ್ಲೆ ಸೇರಿದಂತೆ ಬಾಗಲಕೋಟ ಜಿಲ್ಲೆಯಲ್ಲಿ ಮನೆಗಳ್ಳತನ ಮಾಡಿ ಪರಾರಿಯಾಗುತ್ತಿದ್ದ ಏಳು ಜನ ಮನೆಗಳ್ಳರನ್ನು ಬಂಧಿಸುವಲ್ಲಿ ವಿಜಯಪುರ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ವಿಜಯಪುರ ಪೋಲಿಸ್ ವರಿಷ್ಠಾಧಿಕಾರಿ ಎಚ್. ಡಿ ಆನಂದಕುಮಾರ್ ತಿಳಿಸಿದ್ದಾರೆ. ರಮೇಶ ಕಾಳೆ, ಸುರೇಶ ಚವ್ಹಾಣ, ಪರಶುರಾಮ ಕಾಳೆ, ಕಿರಣ ಬೇಡಕೇರ, ದೇವದಾಸ್ ಚವ್ಹಾಣ , ತನ್ವೀರ್ ಹೊನ್ನುಟಗಿ, ದಶರಥ ಹೊಸಮನಿ ಬಂಧಿತರು. ಇನ್ನೂ ಬಂಧಿತರಿಂದ 16ಲಕ್ಷ ಮೌಲ್ಯದ 360 ಗ್ರಾಂ ಚಿನ್ನ, 200
ವಿಜಯಪುರ ನಗರದಲ್ಲಿ ಶನಿವಾರ ರಾತ್ರಿ 11-47 ಮತ್ತು 11-48ಕ್ಕೆ ಎರಡು ಬಾರಿ ದೊಡ್ಡ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ. ಜಲನಗರ, ಕೀರ್ತಿ ನಗರ, ಟ್ರಜರಿ ಕಾಲೊನಿ, ಗಣೇಶ ನಗರ, ನವಭಾಗ್ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಹಾಗೂ ಜಿಲ್ಲೆಯ ಕೂಡಗಿ, ಮುಳವಾಡ, ಬಬಲೇಶ್ವರ ಇನ್ನು ಹಲವೆಡೆ ಎರಡು ಬಾರಿ ದೊಡ್ಡದಾಗಿ ಶಬ್ಧವಾಗಿದೆ. ಜೊತೆಗೆ ಭೂಮಿಯೂ ಕಂಪಿಸಿದೆ. ಇನ್ನೂ ಕೂಡಗಿ ಗ್ರಾಮದ ಅಬ್ದುಲ್ ಖಾದ್ರೀ ಜಾಗೀರದ್ದಾರ ಎಂಬುವವರು ಮನೆ ಕುಸಿದು ಬಿದ್ದಿದೆ. ಅದೃಷ್ಟವಶಾತ್