ಕಲ್ಲಡ್ಕ ಶ್ರೀ ರಾಮ ಮಂದಿರದಲ್ಲಿ ವಿದ್ಯಾಗಣಪತಿ ದೇವರ ಪ್ರತಿಷ್ಠೆಯ ಅಂಗವಾಗಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ಅವಧೂತ ವಿನಯ ಗುರೂಜಿ, ಕಲ್ಲಡ್ಕ ಪ್ರಭಾಕರ್ ಭಟ್ ಮತ್ತಿತರರು ಉಪಸ್ಥಿತರಿದ್ದರು.
ವಿಟ್ಲ: ಸಂಸ್ಕಾರ, ಸಂಸ್ಕೃತಿ ಹಳ್ಳಿಯಲ್ಲಿ ದೃಢವಾಗಿದ್ದು, ಗ್ರಾಮೀಣ ಭಾಗದಲ್ಲಿ ಇದು ವ್ಯತ್ಯಾಸವಾಗದಂತೆ ತಡೆಯುವ ಕಾರ್ಯವಾಗಬೇಕು. ಹಳ್ಳಿಯಲ್ಲಿ ಸಂಸ್ಕಾರದಲ್ಲಿ ವ್ಯತ್ಯಾಸವಾದ ಭಾರತ ಹಾಳಾಗುತ್ತದೆ. ಭಾವನೆಯಿಂದ ಕೂಡಿದ ರಥ ಭಾರತವಾಗಿದ್ದು, ಸನಾತನ ಧರ್ಮದ ರಕ್ಷಣೆಯ ಭಾವವನ್ನು ಎಲ್ಲರೂ ಹೊಂದಿದ್ದಾರೆ. ಹಬ್ಬಗಳ ಆಚರಣೆಯಿಂದ ಸಂಘಟನೆ ಬಲವಾಗುತ್ತದೆ ಎಂದು ಗೌರಿಗದ್ದೆ ಸ್ವರ್ಣ ಪೀಠಿಕಾವುರದ ಅವಧೂತ ಶ್ರೀ ವಿನಯ ಗುರೂಜಿ ಹೇಳಿದರು. ಅವರು ಮಾಣಿಲ ಶ್ರೀಧಾಮ ಶ್ರೀ