ರಾಜ್ಯ ಸರಕಾರದ ಧರ್ಮ ವಿರೋಧಿ ಮತ್ತು ಕೇಂದ್ರ ಸರಕಾರದ ಕೃಷಿ ವಿರೋಧಿ ಹಾಗೂ ಬೆಲೆ ಏರಿಕೆ ಮತ್ತು ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪುವಿನ ಶ್ರೀ ಜನಾರ್ದನ ದೇವಸ್ಥಾನದ ಎದುರಿನಿಂದ ಪೇಟೆಯವರೆಗೆ ಸಂಜೆ ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಮಾಜಿ ಸಚಿವ ವಿನಯ ಕುಮಾರ್
ಬೆಳಪುವಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಉದ್ಘಾಟನೆ ಕಾರ್ಯಕ್ರಮದ ಆಮಂತ್ರಣ ಪತ್ರದಲ್ಲಿ ಮಾಜಿ ಸಚಿವ ವಿಜಯಕುಮಾರ್ ಸೊರಕೆಯವರ ಹೆಸರನ್ನು ಮುದ್ರಿಸದೆ ಸೌಜನ್ಯಕ್ಕಾಗಿಯಾದರೂ ಆಹ್ವಾನ ನೀಡದೆ ಕಡೆಗಣಿಸಿರುವುದನ್ನು ವಿರೋಧಿಸಿ ಕಾಪು ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಕಾಲೇಜು ಮುಂಭಾಗ ಕುಳಿತು ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಪಾಲಿಟೆಕ್ನಿಕ್ ಕಾಲೇಜಿಗೆ ಬರುವ ರಸ್ತೆಯನ್ನೂ
ಕುಂದಾಪುರ: ಸಾಮಾಜಿಕ ಕಾರ್ಯಕರ್ತ ಯಡಮೊಗೆ ಉದಯ್ ಗಾಣಿಗ ಕೊಲೆ ಆರೋಪಿಗಳಿಗೆ ಕೆಲ ಬಿಜೆಪಿ ಮುಖಂಡರು ರಕ್ಷಣೆ ಕೊಡುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿದ್ದು, ಅದು ಯಾರೇ ಆಗಿರಲಿ, ಆರೋಪಿಗಳ ರಕ್ಷಣೆಗೆ ನಿಂತರೆ ನಾವು ಸಹಿಸುವುದಿಲ್ಲ. ಮುಂಬರುವ ಅಧಿವೇಶನದಲ್ಲಿ ನಮ್ಮ ಪಕ್ಷದ ಶಾಸಕರು ನ್ಯಾಯಕ್ಕಾಗಿ ಈ ಬಗ್ಗೆ ಧ್ವನಿ ಎತ್ತುತ್ತಾರೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ವಾಗ್ದಾಳಿ ನಡೆಸಿದರು. ಅವರು ದುಷ್ಕರ್ಮಿಗಳಿಂದ ಹತ್ಯೆಯಾದ ಮೃತ ಯಡಮೊಗೆಯ ಉದಯ್