ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು, ಚಾಲಕ ಹಾಗು ನಿರ್ವಾಹಕ ಬಸ್ಸನ್ನು ಆಂಬುಲೆನ್ಸ್ ಮಾದರಿಯಲ್ಲಿ ಚಲಾಯಿಸಿ ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. 13ಈ ರೂಟ್ ನಂಬರ್ ಕೃಷ್ಣ ಪ್ರಸಾದ್ ಬಸ್ಸು ಎಂದಿನಂತೆ ಕುಳೂರು ಮಾರ್ಗವಾಗಿ
ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ವ್ಯಾಪಕ ಮಳೆ ಸುರಿಯುತ್ತಿದ್ದು, ಉಡುಪಿ ಜಿಲ್ಲೆಯ ಅಲ್ಲಲ್ಲಿ ಕೃತಕ ನೆರೆ ಉಂಟಾಗಿದೆ. ಜಿಲ್ಲೆಯಲ್ಲಿ ರಾತ್ರಿಯಿಡೀ ಮಳೆ ಸುರಿದಿದ್ದು, ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಉಡುಪಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನೀರು ನುಗ್ಗಿ ಸಮಸ್ಯೆ ಉಂಟಾಗಿದೆ. ಸೂಕ್ತ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಪ್ರತಿ ವರ್ಷವೂ ಇಲ್ಲಿ ನೆರೆಹಾವಳಿಯ ಸಮಸ್ಯೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ರಾತ್ರಿಯೇ ಮನೆಯವರನ್ನ ಸುರಕ್ಷಿತ
ಪುತ್ತೂರು: ಡಾಂಬರ್ ನಲ್ಲಿ ಸಿಲುಕಿದ ನಾಗರಹಾವೊಂದನ್ನು ಪುತ್ತೂರಿನ ಉರಗಪ್ರೇಮಿ ತೇಜಸ್ ಬನ್ನೂರು ರಕ್ಷಿಸಿ ಹಾವಿಗೆ ಜೀವದಾನ ಮಾಡಿದ್ದಾರೆ.ಡಾಂಬರ್ ನಲ್ಲಿ ಸಿಲುಕಿ ಒದ್ದಾಡುತ್ತಿದ್ದ ಹಾವನ್ನು ಎರಡು ದಿನಗಳ ಕಠಿಣ ಪರಿಶ್ರಮದೊಂದಿಗೆ ತೇಜಸ್ ರಕ್ಷಿಸಿದ್ದು, ತೇಜಸ್ ಕಾರ್ಯಕ್ಕೆ ಸಾಮಾಜಿಕ ತಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ತೇಜಸ್ ತಾನು ಹಾವನ್ನು ರಕ್ಷಿಸುವ ಕಾರ್ಯಾಚರಣೆಯ ವಿಡಿಯೋವನ್ನು ತಮ್ಮ ಗೆಳೆಯರೊಂದಿಗೂ ಹಂಚಿಕೊಂಡಿದ್ದಾರೆ. ಉರಿ ಬಿಸಿಲಿನಲ್ಲಿ