Home Posts tagged vitla

ವಿಟ್ಲ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ. ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ವಿಟ್ಲ :ರೈಲಿನಡಿಗೆ ಬಿದ್ದು ವ್ಯಕ್ತಿ ಸಾವು

ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಬಾಯಿಲ ವೀರಕಂಭ ನಿವಾಸಿ ವಿಶ್ವನಾಥ್ ಎಂಬವರು ಸಾವನ್ನಪ್ಪಿದ ವ್ಯಕ್ತಿ ಎಂದು ತಿಳಿದುಬಂದಿದೆ. ಮೇಲ್ನೋಟಕ್ಕೆ ಆತ್ಮ ಹತ್ಯೆ ಎಂದು ತಿಳಿದು ಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ & ಗೈಡ್ಸ್ ವಾರ್ಷಿಕ ಬೇಸಿಗೆ ಶಿಬಿರ

ವಿಟ್ಲ: ಮಾಣಿ , ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ & ಗೈಡ್ಸ್ ವಾರ್ಷಿಕ ಶಿಬಿರವನ್ನು ಕಶೆಕೋಡಿಯ ಶ್ರೀ ಲಕ್ಷ್ಮೀವೆಂಕರಮಣ ದೇವಸ್ಥಾನ ಬಾಳ್ತಿಲ ಗ್ರಾಮದಲ್ಲಿ ಏಪ್ರಿಲ್ 6 ಮತ್ತು 7 ರಂದು ಹಮ್ಮಿಕೊಳ್ಳಲಾಯಿತು. ಶಿಬಿರವನ್ನು ಪೂರ್ವಾಹ್ನ 9.30ಕ್ಕೆ ಸ್ಕೌಟ್ಸ್ & ಗೈಡ್ಸ್ ಸ್ಥಳೀಯ ಸಂಸ್ಥೆ ಮಾಣಿ ಮತ್ತು ಬಾಲವಿಕಾಸ ಟ್ರಸ್ಟ್ ಮಾಣಿಯ ಅಧ್ಯಕ್ಷರೂ ಆಗಿರುವ ಶ್ರೀ ಪ್ರಹ್ಲಾದ ಶೆಟ್ಟಿ .ಜೆ ರವರು ಶಾಲಾ ಆವರಣದಲ್ಲಿ ಹಣ್ಣಿನ

ವಿಟ್ಲ: ಖಾಸಗಿ ಬಸ್ ಹಾಗೂ ಪಿಕಪ್ ವಾಹನ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಖಾಸಗಿ ಬಸ್ಸಿಗೆ ಪಿಕಪ್ ವಾಹನ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ನಡೆದಿದೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿಯಾಗಿದೆ. ಪಿಕಪ್ ನಲ್ಲಿ ಹಲವು ಮಂದಿ ಇದ್ದರೆನ್ನಲಾಗಿದೆ. ಖಾಸಗಿ ಬಸ್‌ನಲ್ಲೂ ಹಲವು ಪ್ರಯಾಣಿಕರಿದ್ದು, ಅಪಘಾತದಿಂದ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಅಡ್ಯನಡ್ಕನಲ್ಲಿ ಬ್ಯಾಂಕ್‌ನಿಂದ ಕಳವು ಪ್ರಕರಣ : ಮೂವರು ಆರೋಪಿಗಳ ಬಂಧನ

ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ವಿಶೇಷ ತಂಡ ಮೂರು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿಬಿ ರಿಷ್ಯಂತ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಫೆಬ್ರವರಿ 7 ರಂದು ರಾತ್ರಿ ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ಕರ್ನಾಟಕ ಬ್ಯಾಂಕಿನ ಕೀಟಕಿಯ ಸರಳಗಳನ್ನು ತುಂಡರಿಸಿ, ಗ್ಯಾಸ್ ಕಟರ್‌ನಿಂದ

ವಿಟ್ಲ: ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ : ಮೂವರ ಬಂಧನ

ವಿಟ್ಲ: ಕರ್ಣಾಟಕ ಬ್ಯಾಂಕ್ ಕಿಟಕಿ ಮೂಲಕ ಒಳ ನುಸುಳಿ ಕೋಟ್ಯಾಂತರ ಮೌಲ್ಯದ ನಗದು ಹಾಗೂ ಚಿನ್ನಾಭರಣ ಕಳ್ಳತನ ಮಾಡಿದ ನಾಲ್ಕು ಮಂದಿ ಆರೋಪಿಗಳ ಪೈಕಿ ಮೂವರನ್ನು ಸೋಮವಾರ ಸ್ಥಳ ಮಹಜರಿಗೆ ಅಡ್ಯನಡ್ಕ ಪೊಲೀಸರು ಕರೆದುಕೊಂಡು ಬಂಧಿಸಿದ್ದಾರೆ. ಕಾಸರಗೋಡು ಮೂಲದ ಖಲಂದರ್, ರಫೀಕ್, ಬಾಯಾರು ಮೂಲದ ದಯಾನಂದ ಕಳ್ಳತನದ ಪ್ರಮುಖ ರುವಾರಿಗಳು ಎನ್ನಲಾಗಿದೆ. ಫೆ.೨೮ ರಂದು ಈ ಆರೋಪಿಗಳನ್ನು ಪೊಲಿಸರು ವಶಕ್ಕೆ ಪಡೆಯುವ ಕಾರ್ಯವನ್ನು ಮಾಡಿದ್ದು, ಮಾ.೧೦ರಂದು ಬಂಧನವನ್ನು

ವಿಟ್ಲ: ಶಾಲಾ ಬಸ್ ಮತ್ತು ಬೈಕ್

ವಿಟ್ಲ: ಶಾಲಾ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಚಂದಳಿಕೆ ಕಡೆಗೆ ಶಾಲಾ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಬಸ್ ಚಂದಳಿಕೆ ಮಾಡತ್ತಡ್ಕ ತಿರುವಿಗೆ ತಿರುಗುತ್ತಿದ್ದಂತೆ ಹಿಂದಿನಿಂದ ಬಂದ ಬೈಕ್ ಬಸ್ ಗೆ ಡಿಕ್ಕಿ ಹೊಡೆದಿದೆ. ಘಟನೆ ಯಿಂದ ಬೈಕ್ ನಲ್ಲಿದ್ದ ಐಟಿಐ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು

ವಿಟ್ಲ: ಜ.13ರಂದು ಕನ್ಯಾನ ದೇಲಂತಬೆಟ್ಟು ಶಾಲೆಯ ಅಮೃತ ಮಹೋತ್ಸವ

ಕನ್ಯಾನ ಗ್ರಾಮದ ದೇಲಂತಬೆಟ್ಟು ದ.ಕ.ಜಿ.ಪಂ.ಉನ್ನತ ಹಿ.ಪ್ರಾ.ಶಾಲೆಯ ಅಮೃತ ಮಹೋತ್ಸವ ಸಮಾರಂಭ ಅಮೃತ ಸಿಂಚನ ಕಾರ್ಯಕ್ರಮ ಜ.13ರಂದು ನಡೆಯಲಿದೆ. 1948 ಜೂ.1ರಂದು ಆರಂಭವಾದ ಈ ಶಾಲೆಗೆ 75 ವರ್ಷ ತುಂಬಿದ್ದು, ಹಳೆ ವಿದ್ಯಾರ್ಥಿಗಳು, ಅಮೃತ ಮಹೋತ್ಸವ ಸಮಿತಿ ಮತ್ತು ಶಾಲಾಭಿವೃದ್ಧಿ ಸಮಿತಿ ಜತೆಗೂಡಿ ಅಮೃತ ಮಹೋತ್ಸವವವನ್ನು ಆಚರಿಸಲಿದೆ ಎಂದು ಅಧ್ಯಕ್ಷ ಡಿ.ಶ್ರೀನಿವಾಸ್ ಹೇಳಿದರು.ಅವರು ವಿಟ್ಲದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜ.13ರಂದು ಬೆಳಗ್ಗೆ 9 ಗಂಟೆಗೆ

ವಿಟ್ಲ:ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಮೃತ್ಯು

ವಿಟ್ಲ: ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಕಬಕ  ಸಮೀಪದ ಮಿತ್ತೂರು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ‌ ಮೃತರನ್ನು ಬಿ.ಸಿ.ರೋಡ್ ಕೈಕಂಬ ನಿವಾಸಿ  ಆಶಿಮ್ ಎಂದು ಗುರುತಿಸಲಾಗಿದೆ. ಬೈಕ್ ಬಸ್ಸಿನಡಿಗೆ ಎಸೆಯಟ್ಟಿದ್ದು, ಸಂಪೂರ್ಣ ಜಖಂಗೊಂಡಿದೆ.  ಕಬಕ ಕಡೆಯಿಂದ ಬಿ.ಸಿ ರೋಡ್ ಗೆ ತೆರಳುತ್ತಿದ್ದಾಗ ಎದುರಿನಿದ ಬಂದ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ ರಸ್ತೆ ಬಿಟ್ಟು ಬದಿಯ ಕಣಿವೆಗೆ ಜಾರಿ

ಕೊಲ್ಲಪದವು: ಗೋಫಾರ್ಮ್ ಕಟ್ಟಡ ನಿರ್ಮಾಣಕ್ಕೆ ಕಾನೂನು ಬದ್ಧ ಪರವಾನಿಗೆ : ರದ್ದುಗೊಳಿಸಲು ಅವಕಾಶ ಇಲ್ಲ: ರಾಮಕೃಷ್ಣ ಮೂಡಂಬೈಲು

ವಿಟ್ಲ: ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಲ್ಲಪದವು ಕೊಡಂಚಡ್ಕ ಎಂಬಲ್ಲಿ ನಿರ್ಮಾಣವಾಗುತ್ತಿರುವ ಗೋಫಾರ್ಮ್ ಕಟ್ಟಡಕ್ಕೆ ಪುಣಚ ಗ್ರಾಮ ಪಂಚಾಯತ್ ಕಾನೂನು ಬದ್ಧ ಪರವಾನಿಗೆಯನ್ನು ನೀಡಲಾಗಿದೆ. ಇದನ್ನು ರದ್ದುಗೊಳಿಸಲು ಅವಕಾಶ ಇಲ್ಲ ಎಂದು ಪುಣಚ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಕೃಷ್ಣ ಮೂಡಂಬೈಲು ತಿಳಿಸಿದ್ದಾರೆ. ಅವರು ವಿಟ್ಲ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿ ಪರವಾನಿಗೆ ನೀಡಿದ ವಿಚಾರವನ್ನು ಸಮರ್ಥಿಸಿ ಕೊಂಡರು. ಇದು ಹಸೈನಾರ್ ಮಾದುಮೂಲೆ ಎಂಬವರಿಗೆ