Home Posts tagged #vitla

ವಿಟ್ಲ: ಅಕ್ರಮ ಗೋ ಸಾಗಾಟ ಪತ್ತೆ

ವಿಟ್ಲ: ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸ್ರು ಕಾರ್ಯಾಚರಣೆ ನಡೆಸಿ ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಬೆಳ್ಳಂಬೆಳಗ್ಗೆ ವಿಟ್ಲ ಸಮೀಪದ ಬೋಳಂತೂರಿನಲ್ಲಿ ನಡೆದಿದೆ. ರೌಂಡ್ಸ್ ಕರ್ತವ್ಯದಲ್ಲಿದ್ದ ವಿಟ್ಲ ಎಸ್‍ಐ ಸಂದೀಪ್ ಕುಮಾರ್ ಶೆಟ್ಟಿ ಮತ್ತು ಸಿಬ್ಬಂದಿಗಳು ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆದು, ಇಬ್ಬರು

ವಿಟ್ಲ :ಶಿಥಿಲಾವಸ್ಥೆಯಲ್ಲಿ ಕುಳಾಲು ಸರ್ಕಾರಿ ಶಾಲೆಯ ಕಟ್ಟಡ-ಕುಸಿಯುವ ಹಂತದಲ್ಲಿರುವ ನಾಲ್ಕು ಕೊಠಡಿಗಳು -ಶಾಸಕರಿಗೆ ಮನವಿ ನೀಡಿದರೂ ಸ್ಪಂದಿಸಿಲ್ಲ

ವಿಟ್ಲ : ಶಿಕ್ಷಣ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ÷್ಯದಿಂದಾಗಿ 92ವರ್ಷಗಳ ಇತಿಹಾಸ ಹೊಂದಿದ ಕುಳಾಲು ಸರಕಾರಿ ಶಾಲೆಯ ಕಟ್ಟಡ ಕುಸಿಯುತ್ತಿದ್ದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 92ವರ್ಷಗಳನ್ನು ಪೂರೈಸಿದ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕುಳಾಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೀಗ ಶತಮಾನದತ್ತ ದಾಪುಗಾಲು ಹಾಕುತ್ತಿದೆ. ಆದರೆ ಕುಸಿಯುವ ಹಂತದಲ್ಲಿರುವ ನಾಲ್ಕು ಕೊಠಡಿಗಳನ್ನು ತೆರವುಗೊಳಿಸಿ ಆರು ಹೊಸ ಕೊಠಡಿಗಳನ್ನು ನೀಡುವಂತೆ

ಅಧಿಕಾರಿಗಳ ಬೇಜಾಬ್ದಾರಿತನದಿಂದ ಭೂದಾಖಲೆಗಳು ನಾಪತ್ತೆ

ಬಂಟ್ವಾಳ ತಾಲೂಕು ಕಚೇರಿಯಲ್ಲಿ ಭೂದಾಖಲೆಗಳು ಕಾಣೆಯಾಗುತ್ತಿವೆ! ಅಧಿಕಾರಿಗಳ ಬೇಜವಾಬ್ದಾರಿ ಇದಕ್ಕೆ ಕಾರಣ ಮತ್ತು ಆ ಮೂಲಕ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಆದುದರಿಂದ ನಾಪತ್ತೆಯಾದ ನಮ್ಮ ಕಡತಗಳನ್ನು ಹುಡುಕಿ ಕೊಡಬೇಕೆಂದು ವಿಟ್ಲದ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಆಗ್ರಹಿಸಿದೆ .ವಿಟ್ಲದ ಪ್ರೆಸ್‌ಕ್ಲಬ್‌ನಲ್ಲಿ ವಿಟ್ಲದ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಬಿ.ಕೆ.ಸೇಸಪ್ಪ ಬೆದ್ರಕಾಡು ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಗ್ಗೆ ತಹಶೀಲ್ದಾರರಿಗೆ, ಸಹಾಯಕ

ವಿಟ್ಲ : ಹೈಟೆಕ್ ಅಕ್ರಮ ಮರಳು ದಂಧೆ : ಲಾರಿಗಳನ್ನು ತಡೆ ಹಿಡಿದು ಪ್ರತಿಭಟನೆ

ವಿಟ್ಲ: ಬರಿಮಾರಿನಲ್ಲಿ ಹೈಟೆಕ್ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ಸಾರ್ವಜನಿಕರು ಲಾರಿಗಳನ್ನು ತಡೆ ಹಿಡಿದು ಪ್ರತಿಭಟಿಸಿದ್ದಾರೆ. ಎಗ್ಗಿಲ್ಲದೆ ಮರಳು ಮಾಫಿಯಾ ನಡೆಯುತ್ತಿದ್ದು ಪಂ.ಅಧ್ಯಕ್ಷೆಯ ನೇತೃತ್ವದಲ್ಲಿ ಸ್ಥಳೀಯರು ಬರಿಮಾರಿನಲ್ಲಿ ಮರಳು ಲಾರಿಗಳನ್ನು ತಡೆದುಹಿಡಿದ್ದಾರೆ. ಈ ವೇಳೆ ಲಾರಿ ತಡೆದ ಕಾರ್ಯಕರ್ತರಿಗೆ ಲಾರಿಗಳನ್ನು ಬಿಡುವಂತೆ ಬಿಜೆಪಿ ಮುಖಂಡರಿಂದಲೂ, ಪೆÇಲೀಸರಿಂದ ಒತ್ತಡ ಹೇರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೋಟು, ಕ್ರೇನ್ ಬಳಸಿ ಹೈಟೆಕ್

ವಿಟ್ಲ: ಗುರುವಂದನಾ – ಕುಟುಂಬ ಸಮ್ಮಿಲನ

ವಿಟ್ಲ: ವಿಟ್ಲ ಅಕ್ಷಯ ಸಭಾಭವನದಲ್ಲಿ ಮೂರ್ಜೆ (ಮೂರ್ಕಜೆ) ನಂದರವoಶ ಒಕ್ಕಲಿಗ ಗೌಡ ತರವಾಡು ಟ್ರಸ್ಟಿನ ವತಿಯಿಂದ ನಡೆದ ಗುರುವಂದನಾ – ಕುಟುಂಬ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರು ಇದೊಂದು ಔಚಿತ್ಯಪೂರ್ಣ ಕಾರ್ಯಕ್ರಮವಾಗಿದೆ. ಶ್ರದ್ದಾ ಭಕ್ತಿಯಿಂದ ಬದುಕಿದರೆ ಜೀವನಪಾವನವಾಗುತ್ತದೆ. ಗುರುವಿನ ಮಾತಿನಲ್ಲಿ ನಂಬಿಕೆ ಇಟ್ಟರೆ ಬದುಕು

ವಿಟ್ಲ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ

ವಿಟ್ಲ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಪಾರಾಗಿದ್ದಾರೆ. ದೇರಳಕಟ್ಟೆ ಮೂಲದ ಕುಟುಂಬ ಮಾಣಿ ಕಡೆಗೆ ಬರುತ್ತಿದ್ದಾಗ ಓಮ್ನಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಗಮನಿಸಿದ ಚಾಲಕ ಮತ್ತು ಪ್ರಯಾಣಿಕರು ವಾಹನ ನಿಲ್ಲಿಸಿ ಹೊರಗಡೆ ಬಂದಿದ್ದಾರೆ. ತಕ್ಷಣವೇ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದರು. ಬಳಿಕ ವಿನಯ ಎಂಬವರ ಸರ್ವೀಸ್ ಸ್ಟೇಷನ್ ನಿಂದ ನೀರು ಹರಿಸಲಾಯಿತು. ಘಟನೆಯಲ್ಲಿ ವಾಹನ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.

ವಿಟ್ಲ: ಸಮಸ್ಯೆಯ ಆಗರವಾಗಿರುವ ವಿಟ್ಲ ಪಟ್ಟಣ ಪಂಚಾಯತ್

ವಿಟ್ಲ: ದಿನದಿಂದ ದಿನಕ್ಕೆ ಬೆಳವಣಿಗೆ ಕಾಣುತ್ತಿರುವ ವಿಟ್ಲ ಪಟ್ಟಣ ಪಂಚಾಯತ್ ಸಮಸ್ಯೆಯ ಆಗರವಾಗಿ ಜನರು ಪರಿತಪಿಸುವಂತ ಸ್ಥಿತಿ ನಿರ್ಮಾಣವಾಗಿದೆ. ಆದರೆ ಈ ಭಾಗದ ಶಾಸಕರು ಮಾತ್ರ ಪಟ್ಟಣ ಪಂಚಾಯತ್ ನಲ್ಲಿ ಸಭೆ ನಡೆಸಿ ಕೇವಲ ಸಲಹೆ ಸೂಚನೆಗಳನ್ನು ಕೊಟ್ಟು ಹೋಗುವ ಮೂಲಕ ಜನರ ಆಕಾಂಕ್ಷೆಗಳಿಗೆ ತಣ್ಣೀರೆರೆಯುವ ಕೆಲಸ ಮಾಡುತ್ತಿದ್ದಾರೆ. ಇಲ್ಲಿರುವ ಸಮಸ್ಯೆಗಳಿಗೊಂದು ಅವರು ಸರಿಯಾದ ಪರಿಹಾರ ಕ್ರಮ ಕೈಗೊಳ್ಳಬೇಕಾಗಿರುವುದು ಅನಿವಾರ್ಯವಾಗಿದೆ. ಇಲ್ಲವಾದಲ್ಲಿ ಮುಂದಿನ

ವಿಟ್ಲ : ರೈಲಿನಡಿಗೆ ಬಿದ್ದು ಯುವಕ ಮೃತ್ಯು

ವಿಟ್ಲ: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಪ್ಯಾಸೆಂಜರ್ ರೈಲಿನಡಿಗೆ ನೇರಳಟ್ಟೆ ಸಮೀಪ ವ್ಯಕ್ತಿಯೊಬ್ಬರು ಬಿದ್ದು ತೀವ್ರ ಗಾಯಗೊಂಡ ಮತ್ತು ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲೆಂದು ಅದೇ ರೈಲಿನಲ್ಲಿ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಕರೆತಂದಾಗ ದಾರಿ ಮಧ್ಯೆ ಮೃತಪಟ್ಟ ಘಟನೆ ಅ.16ರಂದು ರಾತ್ರಿ ನಡೆದಿದೆ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ರೈಲು ನೇರಳಕಟ್ಟೆ ಸಮೀಪ ನಿಧಾನವಾಗಿ ಚಲಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ರೈಲ್ವೇ ಹಳಿಗೆ

ವಿಟ್ಲ: ರೈಲ್ವೆ ಬ್ರಿಡ್ಜ್ ಸೇಫ್ಟಿ ಗಾರ್ಡ್‌ಗೆ ಕಂಟೈನರ್ ಢಿಕ್ಕಿ, ಹಾನಿ

ವಿಟ್ಲ: ರೈಲ್ವೆ ಬ್ರಿಡ್ಜ್ ಸೇಫ್ಟಿ ಗಾರ್ಡ್ ಗೆ ಕಂಟೈನರ್ ಡಿಕ್ಕಿ ಹೊಡೆದ ಘಟನೆ ಮುಂಜಾನೆ ಮಿತ್ತೂರಿನಲ್ಲಿ ನಡೆದಿದೆ. ಮಿತ್ತೂರು ರೈಲ್ವೆ ಬ್ರಿಡ್ಜ್ ಸೇಫ್ಟಿ ಗಾರ್ಡ್ ಗೆ ಕಾರು ಕೊಂಡೊಯ್ಯುವ ಕಂಟೈನರ್ ಡಿಕ್ಕಿ ಹೊಡೆದಿದ್ದು, ಘಟನೆಯಿಂದಾಗಿ ರೈಲ್ವೆ ಬ್ರಿಡ್ಜ್ ಸೇಫ್ಟಿ ಗಾರ್ಡ್ ಹಾನಿಗೊಳಗಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ಕಾರು ಕೊಂಡೊಯ್ಯುತ್ತಿದ್ದ ಕಂಟೈನರ್ ಮಾಣಿ ಬಳಿ ದಾರಿ ತಪ್ಪಿ ಪುತ್ತೂರು ರಸ್ತೆಯಲ್ಲಿ ಬಂದಿದ್ದು, ಈ ವೇಳೆ ಮಿತ್ತೂರಿನಲ್ಲಿ ರೈಲ್ವೆ

ವಿಟ್ಲ ಪಿಎಫ್‍ಐ ಕಾರ್ಯಕರ್ತನ ಮನೆಗೆ ಪೊಲೀಸ್ ದಾಳಿ

ರಾಜ್ಯದ ಲ್ಲಿನ ಪ್ರಮುಖ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ನಿರ್ದೇಶನದಂತೆ ಬಂಟ್ವಾಳ ಹಾಗೂ ವಿಟ್ಲ ಪೊಲೀಸರ ತಂಡ ಮುಂಜಾನೆ ವೇಳೆ ಬೊಳಂತೂರು ವ್ಯಕ್ತಿಯೋರ್ವ ನ ಮನೆಗೆ ದಾಳಿ ನಡೆಸಿ ವಿಚಾರಣೆ ನಡೆಸಿ ಮಾಹಿತಿ ಕಲೆಹಾಕುತ್ತಿದೆ.ಬೊಳಂತೂರು ನಿವಾಸಿ ಮಹಮ್ಮದ್ ಕುಟ್ಟಿ ಎಂಬವರ ಪುತ್ರ ಮಹಮ್ಮದ್ ತಬ್ಸೀರ್ ಎಂಬವರ ಮನಗೆ ಮುಂಜಾನೆ ಮೂರು ಗಂಟೆ ವೇಳೆ ಪೊಲೀಸ್ ದಾಳಿ ನಡೆಸಿದೆ.ಯಾವ ಪ್ರಕರಣಕ್ಕೆ ಎಂಬ ವಿಚಾರವನ್ನು ಇಲ್ಲಿನ ಪೊಲೀಸರು ಮಾಹಿತಿ